ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ಧಿಕಿಯನ್ನು ಹತ್ಯೆಯ ಹೊಣೆಯನ್ನು ಹೊತ್ತ ಬಳಿಕ ನಟ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಾಗಿದೆ. ಸಲ್ಮಾನ್ ಖಾನ್ ಜೊತೆಗಿನ ಹಳೇಯ ವೈಷಮ್ಯ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದು ಕೂಡ ಬೆಳಕಿಗೆ ಬಂದಿದೆ. ಹೌದು ಸದ್ಯ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವುದು ಲಾರೆನ್ಸ್ ಬಿಷ್ಣೋಯ್ ಎನ್ನುವ ಖತರ್ನಾಕ್ ಯುವಕನ ಹೆಸರು. ಭದ್ರತಾ ದೃಷ್ಟಿಯಿಂದ ಈತನನ್ನು ಮೂರು ಬಾರಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಭರತಪುರ್ ಜೈಲು, ತಿಹಾರ್ ಜೈಲಿನ ನಂತರ ಈಗ ಬಿಷ್ಣೋಯ್ ಅನ್ನು ಸಬರಮತಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅತ್ಯಾಧುನಿಕ ಟೆಕ್ನಾಲಜಿ ಮೂಲಕ, ತಮ್ಮ ಸಹಚರರನ್ನು ಸಂಪರ್ಕಿಸುವ ಈತ ಬಾಲ್ಯದಿಂದಲೇ ಕ್ರಿಮಿನಲ್ ಏನೂ ಅಲ್ಲ. ಮುಂಬೈನ ಬಾಂದ್ರಾದಲ್ಲಿ ಎನ್ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು ಗುಂಡೇಟಿನಿಂದ ಹತ್ಯೆಗೈಯ್ಯಲಾಗಿತ್ತು. ಈ ಸಂಬಂಧ, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಕೊಲೆಯ ಹೊಣೆಯನ್ನು ಇದೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದೆ. ನಟ ಸಲ್ಮಾನ್ ಖಾನ್ ಜೊತೆ ಈತ…
Author: Prajatv Kannada
ಚೆನ್ನೈ: ಹಿಂದಿನ ಕಾಲದಲ್ಲಿ ಹಿರಿಯರು ನವ ದಂಪತಿಗಳಿಗೆ 16 ರೂಪದ ಸಂಪತ್ತನ್ನು ಹೊಂದುವಂತೆ ಆಶೀರ್ವದಿಸುತ್ತಿದ್ದರು. ಬಹುಶಃ ಈಗ 16 ರೂಪದ ಸಂಪತ್ತಿನ ಬದಲು 16 ಮಕ್ಕಳನ್ನು ಹೊಂದುವಂತೆ ಆಶೀರ್ವಾದ ನೀಡುವ ಸಮಯ ಬಂದಿದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಕರೆ ನೀಡಿದ್ದರು. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಹ ಜೇಳಿದ್ದರು. ಈ ಬೆನ್ನಲ್ಲೇ ತಮಿಳುನಾಡು ಸಿಎಂ ದಂಪತಿಗಳು ಹಚ್ಚೆಚ್ಚು ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದಾರೆ. ಚೆನ್ನೈನಲ್ಲಿ ರಾಜ್ಯದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಆಯೋಜಿಸಿದ್ದ ಕಾರ್ಯಕ್ರಮದಲಿ 31 ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿಸಿ ಅವರು ಮಾತನಾಡಿದರು. ತಮಿಳುನಾಡಿನಲ್ಲಿ ಹಿಂದಿನ ಕಾಲದಿಂದಲೂ ಚಾಲ್ತಿಯಲ್ಲಿ ಇರುವ ನಾಣ್ಣುಡಿ ಒಂದಿದೆ. ಹಿಂದೆ ನಮ್ಮ ಹಿರಿಯರೆಲ್ಲ…
ಗದಗ: ರಾತ್ರಿಯಿಡಿ ಗುಡುಗು, ಗಾಳಿ ಸಹಿತ ಸುರಿದ ಭಾರಿ ಮಳೆಗೆ ಗದಗ ಜಿಲ್ಲೆಯ ರೈತರ ಬದುಕು ಮತ್ತೆ ಸರ್ವನಾಶವಾಗಿದೆ. ಮೊದಲೇ ಸಾಲದ ಸುಳಿಯಲಿ ಸಿಲುಕಿ ಒದ್ದಾಡುತ್ತಿದ್ದವರಿಗೆ ನೆಲಕಚ್ಚಿದ ಈರುಳ್ಳಿ ಬೆಳೆ ನೋಡಿ ಕಂಗಾಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ನೂರಾರು ಎಕರೆಯಲ್ಲಿ ಬೆಳೆದ ಈರುಳ್ಳಿ ನೀರು ಪಾಲಾಗಿದೆ. ಆರಂಭದಲ್ಲಿ ಚೆನ್ನಾಗಿ ಮಳೆಯಾಗಿದ್ರಿಂದ ಭರ್ಜರಿಯಾಗಿ ಈರುಳ್ಳಿ ಬೆಳೆದಿದ್ದರುಈ ಬಾರಿ ಕ್ವಿಂಟಾಲ್ ಈರುಳ್ಳಿಗೆ 4-5 ಸಾವಿರ ರೇಟ್ ಆಗಿದ್ದರಿಂದ ಫುಲ್ ಖುಷಿಯಾಗಿದ್ದ ರೈತರಿಗೆ ಮಳೆ ಬರೆ ಎಳೆದಿದೆ. ಈರುಳ್ಳಿ ಮಾರಾಟ ಮಾಡಿದ್ರೆ ಲಕ್ಷಾಂತರ ರೂಪಾಯಿ ಹಣ ಬರುತ್ತೆ ಅಂತ ನಿರೀಕ್ಷೆಯಲ್ಲಿದ್ದ ರೈತರು ಮತ್ತೆ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಇಷ್ಟೆಲ್ಲಾ ಆಗಿದ್ದರೂ ಕೂಡ ಬೆಳೆ ಹಾನಿಯಾದ ಜಮೀನುಗಳಿಗೆ ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡದ ನಿರ್ಲಕ್ಷ್ಯ ಮಾಡಿದ್ದಾರೆ. ಬೆಳೆ ಹಾನಿಯಿಂದ ಕಣ್ಣೀರು ಹಾಕುತ್ತಿರುವ ರೈತರು ಕೃಷಿ ಇಲಾಖೆ ಅಧಿಕಾರಿಗಳ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮುಡಾ ಟೆನ್ಷನ್ ನಡುವೆಯೂ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದಾರೆ. ಅಲ್ಲದೇ ವರುಣಾ ಕ್ಷೇತ್ರದಲ್ಲಿ 313 ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂ.ಹಣವನ್ನು ಸಿಎಂ ಘೋಷಣೆ ಮಾಡಿದ್ದಾರೆ. https://youtu.be/torl-dgkeEs?si=1r6Qk7_4gVCfWIRQ ವರುಣಾ ಕ್ಷೇತ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರ. ಹೀಗಾಗಿ ಸ್ವ ಕ್ಷೇತ್ರದ ಅಭಿವೃದ್ಧಿಗೆ ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ. ಟಿ.ನರಸೀಪುರ- ನಂಜನಗೂಡು ರಸ್ತೆಯ ತಾಯೂರು ಗೇಟ್ ಬಳಿ ಇಂದು ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಮುಡಾ ಟೆನ್ಷನ್ ನಡುವೆಯೆ ಸಿಎಂ ಸ್ವಕ್ಷೇತ್ರದ ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಿರುವುದು ಸ್ವಕ್ಷೇತ್ರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಒಂದು ಕಡೆ ಲೋಕಾಯುಕ್ತ ತನಿಖೆ, ಮತ್ತೊಂದು ಕಡೆ ಮುಡಾ ತನಿಖೆಗೆ ಇಡಿ ಎಂಟ್ರಿ ಕೊಟ್ಟಿದೆ. ಇದರ ಜೊತೆಗೆ ಈಗ ಸಿಎಂ ಪತ್ನಿ ಮೇಲೆ ಇನ್ನೊಂದು ಭೂ ಹಗರಣದ ಸುಳಿ ತಿರುಗುತ್ತಿದೆ. ಇಂತಹ ಭೂ ಟೆನ್ಷನ್ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ತವರೂರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ವರುಣಾ…
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ವರುಣನ ಆರ್ಭಟಕ್ಕೆ ಬೆಂಗಳೂರಿನ ಬೀದಿಬೀದಿಗಳಲ್ಲಿ ವರುಣನ ಎಂಟ್ರಿಯಿಂದ ನೀರು ಉಕ್ಕಿ ಹರಿಯುತ್ತಿವೆ. https://youtu.be/s0prbbB9jFs?si=_JCwDGPgRElKQnSb ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಹೌದು ಆಟವಾಡಲು ಹೋಗಿದ್ದ ಅಣ್ಣ-ತಂಗಿ ಕೆಂಗೇರಿ ಕೆರೆ ಬಳಿ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ.= ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರಾಗಿದ್ದು, ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆದಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮರ ಆಕ್ರಂದನ ಮುಗಿಲು ಮುಟ್ಟಿದೆ
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ವರುಣನ ಆರ್ಭಟಕ್ಕೆ ಬೆಂಗಳೂರಿನ ಬೀದಿಬೀದಿಗಳಲ್ಲಿ ವರುಣನ ಎಂಟ್ರಿಯಿಂದ ನೀರು ಉಕ್ಕಿ ಹರಿಯುತ್ತಿವೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್ಪಾಸ್ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ. ಕೊಡಿಗೆಹಳ್ಳಿ ಅಂಡರ್ಪಾಸ್ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ.ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ. ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.
ಉತ್ತರ ಗಾಝಾದ ಪ್ರದೇಶಗಳಿಗೆ ಔಷಧ ಮತ್ತು ಆಹಾರ ನೆರವನ್ನು ತಲುಪಿಸಲು ಇಸ್ರೇಲ್ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಫೆಲೆಸ್ತೀನ್ ನಿರಾಶ್ರಿತರಿಗೆ ಸಂಬಂಧಿಸಿದ ವಿಶ್ವಸಂಸ್ಥೆಯ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ. ದಾಳಿಗೆ ಒಳಗಾದ ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಇದರಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಉತ್ತರ ಗಾಝಾದಲ್ಲಿ ಯುಎನ್‌ಆರ್ಡಬ್ಲ್ಯೂಎ ನಿರ್ವಹಿಸುತ್ತಿರುವ ಆಶ್ರಯ ತಾಣಗಳು ಕಿಕ್ಕಿರಿದು ತುಂಬಿದ್ದು ಕೆಲವು ಸ್ಥಳಾಂತರಿತ ಜನರು ಶೌಚಾಲಯದಲ್ಲಿ ಬದುಕುವ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಕುಸಿದು ಬಿದ್ದ ಕಟ್ಟಡಗಳ ಅವಶೇಷಗಳಡಿಯಿಂದ ಜನರ ರಕ್ಷಣಾ ಕಾರ್ಯಾಚರಣೆಗೂ ಅವಕಾಶ ನೀಡುತ್ತಿಲ್ಲ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯುಎನ್‌ಆರ್ಡಬ್ಲ್ಯೂ ಸೇರಿದಂತೆ ಮಾನವೀಯ ಏಜೆನ್ಸಿಗಳು ಉತ್ತರ ಗಾಝಾ ಪ್ರವೇಶಿಸಲು ಅವಕಾಶವಿರಬೇಕು. ಮಿಲಿಟರಿ ಉದ್ದೇಶ ಸಾಧಿಸಲು ಮಾನವೀಯ ನೆರವಿನ ನಿರಾಕರಣೆ ಮತ್ತು ಮಾನವೀಯ ನೆರವನ್ನು ಆಯುಧವನ್ನಾಗಿಸುವುದು ನೈತಿಕ ದಿಕ್ಸೂಚಿ ಕನಿಷ್ಟ ಮಟ್ಟಕ್ಕೆ ಇಳಿದಿರುವುದರ ದ್ಯೋತಕವಾಗಿದೆ. ಫೆಲೆಸ್ತೀನ್ ಪ್ರದೇಶದಲ್ಲಿ ಇರುವ ಪ್ರತಿಯೊಬ್ಬರಿಗೂ ಮಾನವೀಯ ನೆರವು ತಲುಪುವಂತಾಗಬೇಕು. ಕದನ ವಿರಾಮವು ಈ ಅಂತ್ಯವಿಲ್ಲದ ದುಃಸ್ವಪ್ನವನ್ನು ಕೊನೆಗೊಳಿಸುವ ಪ್ರಾರಂಭವಾಗಿದೆ’…
ಇಸ್ರೇಲ್ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕರು ಒಬ್ಬರ ಹಿಂದೊಬ್ಬರಂತೆ ಹತ್ಯೆ ಗೀಡಾಗುತ್ತಿದ್ದಾರೆ. ಇದರಿಂದ ಹೆಜ್ಬುಲ್ಲಾ ನಾಯಕರಿಗೆ ಜೀವ ಭಯ ಶುರುವಾಗಿದೆ. ಇದೀಗ ಉಗ್ರಗಾಮಿ ಗುಂಪಿನ ಉಪ ಕಾರ್ಯದರ್ಶಿ ನಯಿಮ್ ಖಾಸಿಮ್ ಲೆಬನಾನ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಪ್ರಾಣಾಪಾಯದಿಂದ ಪಾರಾಗಲು ಈತ ಲೆಬನಾನ್ ಬಿಟ್ಟು ಇರಾನ್‌ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇರಾನ್ ನಾಯಕರ ಆದೇಶದ ಮೇರೆಗೆ ಖಾಸಿಮ್ ಇರಾನ್ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇಸ್ರೇಲ್ ದಾಳಿಯಲ್ಲಿ ಹಸನ್ ನಸ್ರಲ್ಲಾ ಮತ್ತು ಹಶೆಮ್ ಸಫಿದೀನ್ ಸೇರಿದಂತೆ ಹಿಜ್ಬುಲ್ಲಾದ ಉನ್ನತ ನಾಯಕರು ಹತರಾಗಿದ್ದಾರೆ. ಇದೀಗ ನಯಿಮ್ ಖಾಸಿಮ್ ಇಸ್ರೇಲ್ ಸೇನೆಯ ಮುಂದಿನ ಗುರಿಯಾಗಿರಬಹುದು ಎನ್ನುವ ಕಾರಣಕ್ಕೆ ಆತ ಇರಾನ್ ನಲ್ಲಿ ತಲೆ ಮರೆಸಿಕೊಂಡಿದ್ದಾನೆ. ಇರಾನ್ ಮೂಲಗಳನ್ನು ಉಲ್ಲೇಖಿಸಿ ದುಬೈ ಮೂಲದ ಮಾಧ್ಯಮ ಸಂಸ್ಥೆ ಎರಾಮ್ ನ್ಯೂಸ್ ತನ್ನ ವರದಿಯಲ್ಲಿ ಖಾಸಿಮ್ ಅಕ್ಟೋಬರ್ 5ರಂದು ಬೈರುತ್ ತೊರೆದಿದ್ದಾರೆ ಎಂದು ವರದಿ ಮಾಡಿದೆ. ಇರಾನ್‌ನ ವಿದೇಶಾಂಗ ಸಚಿವರ ವಿಮಾನದಲ್ಲಿ ಅವರನ್ನು ಕರೆದೊಯ್ಯಲಾಯಿತು. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್…
ಇಸ್ರೇಲ್ ನ 401 ನೇ ಶಸ್ತ್ರಸಜ್ಜಿತ ಬ್ರಿಗೇಡ್ ನ ಕಮಾಂಡರ್ ಎಹ್ಸಾನ್ ದಕ್ಸಾ ಉತ್ತರ ಗಾಝಾದಲ್ಲಿ ಜಬಲಿಯಾ ಪ್ರದೇಶದ ಮೇಲಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಪಡೆ ತಿಳಿಸಿದೆ. ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ನಡೆದ ಸೇನಾ ಕಾರ್ಯಾಚರಣೆಯ ವೇಳೆ, ಕರ್ನಲ್ ಎಹ್ಸಾನ್ ದಕ್ಸಾ (41) ಅವರಿದ್ದ ಟ್ಯಾಂಕ್ ಗುರಿಯಾಗಿಸಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಸೇನೆ ದೃಡಪಡಿಸಿದೆ. ಇದೇ ವೇಳೆ ಮತ್ತೊಬ್ಬ ಇಸ್ರೇಲಿ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿಸಿದೆ. ಕಳೆದ ಒಂದು ವರ್ಷದಿಂದ ಗಾಝಾದ ಮೇಲಿನ ಯುದ್ಧವು ಪ್ರಾರಂಭವಾದಾಗಿನಿಂದ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಇಸ್ರೇಲಿ ಅಧಿಕಾರಿಗಳಲ್ಲಿ ಎಹ್ಸಾನ್ ದಕ್ಸಾ ಒಬ್ಬರು ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಮೃತ ದಕ್ಸಾ ಅವರು ಜೂನ್ ನಲ್ಲಿ 401 ನೇ ಬ್ರಿಗೇಡ್ ನ ಕಮಾಂಡರ್ ಆಗಿ ನೇಮಕಗೊಂಡಿದ್ದರು.
ಇಂದಿನಿಂದ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನೇತೃತ್ವದಲ್ಲಿ ರಷ್ಯಾದ ಕಜಾನ ನಗರದಲ್ಲಿ ‘ಬ್ರಿಕ್ಸ್’ ಶೃಂಗಸಭೆ ನಡೆಯಲಿದೆ. ಈ ಸಮಾವೇಶದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್, ಇರಾನ್‌ನ ಅಧ್ಯಕ್ಷ ಡಾ.ಮಸೂದ್ ಪೆಜೆಶ್ಕಿಯಾನ್ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ. ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಪುಟಿನ್ ವಿರುದ್ಧ ಅಂತರರಾಷ್ಟ್ರೀಯ ಬಂಧನ ವಾರಂಟ್ ಜಾರಿಯಾಗಿದೆ. ಈ ಸಂದರ್ಭದಲ್ಲಿ ತಮ್ಮ ಬೆಂಬಲ ಹೆಚ್ಚಿಸಿಕೊಳ್ಳಲು ಪುಟಿನ್ ಶೃಂಗಸಭೆ ಆಯೋಜಿಸಿದ್ದಾರೆ ಎನ್ನಲಾಗುತ್ತಿದೆ. ಪಾಶ್ಚಿಮಾತ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಪರ್ಯಾಯವಾಗಿ ಈ ಮಿತ್ರಕೂಟ ರಚನೆಯಾಗಿದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳು ಮಾತ್ರ ಸದಸ್ಯತ್ವ ಹೊಂದಿದ್ದವು. ಈ ವರ್ಷ ಇರಾನ್, ಈಜಿಪ್ಟ್, ಇಥಿಯೋಪಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಸೌದಿ ಅರೇಬಿಯಾ ರಾಷ್ಟ್ರಗಳು ಸೇರ್ಪಡೆಯಾಗಿದ್ದು, ಟರ್ಕಿ, ಅಜರ್‌ಬೈಜಾನ್, ಮಲೇಷ್ಯಾ ಕೂಡ ಔಪಚಾರಿಕವಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದು, ಇನ್ನಷ್ಟು ರಾಷ್ಟ್ರಗಳು ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿವೆ. ‘ಶೃಂಗಸಭೆಯಲ್ಲಿ 32…