ರಾಮನಗರ:- ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. https://youtu.be/lOJQAmeULSo?si=O0XaZYJqae3xO_0P ಹೆಚ್ ಡಿ ಕುಮಾರಸ್ವಾಮಿ ಹೇಳುವಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವನ ಮೇಲೆ ಹೊರೆಸಿದ್ದಾರೆ. ಚನ್ನಪಟ್ಟಣವು ಕುಮಾರಸ್ವಾಮಿ ಪ್ರತಿನಿಧಿಸಿದ ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯಂತೆ. ಹಾಗಂತ, ತಾನು ದುಡುಕಿನ ನಿರ್ಧಾರವನ್ನೇನೂ ತೆಗೆದುಕೊಳ್ಳಲ್ಲ, ರಾಜ್ಯ ರಾಜಕೀಯಕ್ಕೆ ಒಳಿತಾಗುವ ತೀರ್ಮಾನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Author: Prajatv Kannada
ಭಾರತ ಮತ್ತು ಪಾಕಿಸ್ತಾನ ಹಿಂದಿನದನ್ನು ಬಿಟ್ಟು ಭವಿಷ್ಯದ ಬಗ್ಗೆ ಯೋಚಿಸುತ್ತವೆ ಎನ್ನುವ ನಂಬಿಕೆ ಇದೆ. ಪ್ರಧಾನಿ ಮೋದಿ ಇಲ್ಲಿಗೆ ಬರಬೇಕೆಂದು ಬಯಸಿದ್ದೆ, ವಿದೇಶಾಂಗ ಸಚಿವ ಜೈಶಂಕರ್ ಇಲ್ಲಿಗೆ ಬಂದಿದ್ದು ಹೊಸ ಆರಂಭಕ್ಕೆ ನಾಂದಿ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ತೆರಳಿದ್ದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿಯ ನಂತರ ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಷರೀಫ್ ಪ್ರತಿಕ್ರಿಯಿಸಿ, ಎರಡೂ ಕಡೆಯಿಂದ ಕೊರತೆಗಳಿವೆ ಆದರೆ ಮತ್ತೆ ಸ್ನೇಹಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲ ಎಂದಿದ್ದಾರೆ. ಇದು ಆರಂಭವಷ್ಟೇ. ಭಾರತ ಮತ್ತು ಪಾಕಿಸ್ತಾನ ಹಿಂದಿನದನ್ನು ಬಿಟ್ಟು ಭವಿಷ್ಯದ ಬಗ್ಗೆ ಯೋಚಿಸುತ್ತವೆ ಎನ್ನುವ ನಂಬಿಕೆ ಇದೆ. ಪ್ರಧಾನಿ ಮೋದಿ ಇಲ್ಲಿಗೆ ಬರಬೇಕೆಂದು ಬಯಸಿದ್ದೆ, ವಿದೇಶಾಂಗ ಸಚಿವ ಜೈಶಂಕರ್ ಇಲ್ಲಿಗೆ ಬಂದಿದ್ದು ಹೊಸ ಆರಂಭಕ್ಕೆ ನಾಂದಿ ಹಾಡಿರುವುದು ಸಂತಸ ತಂದಿದೆ ಎಂದು ನವಾಜ್ ಷರೀಫ್ ಹೇಳಿದ್ದಾರೆ. ಸದ್ಯಕ್ಕೆ ಯಾವುದೇ ರೀತಿಯ ವಿವಾದವನ್ನು ಬದಿಗಿಟ್ಟು ಸಕಾರಾತ್ಮಕ ಅಂಶಗಳನ್ನು ಮಾತ್ರ…
ಬೆಂಗಳೂರು:- ಬಿಜೆಪಿ ಟಿಕೆಟ್ ಹೆಸರಲ್ಲಿ 2 ಕೋಟಿ ರೂ. ವಂಚನೆ ಮಾಡಿದ ಆರೋಪದಡಿ ಸಚಿವ ಪ್ರಹ್ಲಾದ್ ಜೋಶಿ ಸಹೋದರರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. https://youtu.be/vh0uinNyDQc?si=TlDx9Js4BR6xCAXb ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ಸುಲಿಗೆ ಮಾಡಿದ್ದ ಆರೋಪದ ಅಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ, ಸಹೋದರಿ ಸೇರಿದಂತೆ ಮೂವರ ವಿರುದ್ಧ ಬಸವೇಶ್ವನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗೋಪಾಲ ಜೋಶಿ, ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸುನಿತಾ ಚವ್ಹಾಣ್ ಅವರು ದೂರು ನೀಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯ ಮೂಲಕ ಸಾವಿರಾರು ಅಮಾಯಕರ ಸಾವಿಗೆ ನ್ಯಾಯ ಸಿಕ್ಕಿದೆ ಎಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗಿರುವ ಯುದ್ಧದಲ್ಲಿ ಹಮಾಸ್ ಸಾಕಷ್ಟು ಮಂದಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಹಲವರನ್ನು ಒತ್ತೆಯಾಳಾಗಿರಿಸಿಕೊಂಡು ಹತ್ಯೆ ಮಾಡಲಾಗಿದೆ. ಇದೀಗ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯಿಂದ ಅವರೆಲ್ಲರ ಸಾವಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ಕಮಲಾ ತಿಳಿಸಿದ್ದಾರೆ. ಯಾಹ್ಯಾ ಸಿನ್ವಾರ್ ಸಾವಿನಿಂದ ಅಮೆರಿಕ, ಇಸ್ರೇಲ್ ಮತ್ತು ಇಡೀ ಜಗತ್ತು ಖುಷಿಯಾಗಿದೆ. ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಅವಕಾಶವಾಗಿದೆ ಎಂದು ಕಮಲಾ ಹ್ಯಾರಿಸ್ ತಿಳಿಸಿದ್ದಾರೆ. ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಗಾಜಾದಲ್ಲಿ ತಮ್ಮ ಕಾರ್ಯಾಚರಣೆಯೊಂದರಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ನನ್ನ ರಾಷ್ಟ್ರೀಯ ಭದ್ರತಾ ತಂಡಕ್ಕೆ ತಿಳಿಸಿದ್ದಾರೆ. ಡಿನ್‌ಎ ಪರೀಕ್ಷೆ ಕೂಡ ಹಮಾಸ್ ನಾಯಕನ ಸಾವನ್ನು ದೃಢಪಡಿಸಿದೆ. ಇಸ್ರೇಲ್, ಅಮೆರಿಕ ಮತ್ತು ಇಡೀ ಜಗತ್ತಿಗೆ ಇದು ಒಳ್ಳೆಯ ದಿನ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್…
ಬೆಂಗಳೂರು:- ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ನಿರ್ಮಾಪಕರೋರ್ವರು ದೂರು ಕೊಟ್ಟಿದ್ದಾರೆ. ಹೀಗಾಗಲೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸಂಕಷ್ಟ ತಪ್ಪುತ್ತಿಲ್ಲ. https://youtu.be/L7phtfT3OGU?si=Jd3u9Vyhdy5w3mCx ನಟ ದರ್ಶನ್ ವಿರುದ್ಧ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಎನ್ ಸಿಆರ್ ದಾಖಲಾಗಿದೆ. ನಿರ್ಮಾಪಕ ಭರತ್ ಗೆ ಬೆದರಿಕೆ ಹಾಕಿದ್ದ ಆರೋಪ ದರ್ಶನ್ ವಿರುದ್ಧ ಕೇಳಿ ಬಂದಿದೆ. ಈ ಹಿನ್ನೆಲೆ, ದರ್ಶನ್ ಮತ್ತು ಮ್ಯಾನೇಜರ್ ವಿರುದ್ಧ ಎನ್ ಸಿಆರ್ ದಾಖಲಾಗಿದೆ. ಅಕ್ಟೋಬರ್ 18ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಭಗವಾನ್ ಶ್ರೀ ಕೃಷ್ಣ ಚಿತ್ರದ ನಿರ್ಮಾಪಕ ಭರತ್ ಅವರು ಈ ಹಿಂದೆಯೇ ದೂರು ನೀಡಿದ್ದರು.2022 ರಲ್ಲಿ ಚಿತ್ರದ ನಾಯಕ ದೃವನ್ ವಿರುದ್ಧ ದೂರು ದಾಖಲಾಗಿದೆ. ನಟ ದರ್ಶನ್ ಕೈಯಲ್ಲಿ ಪೋನ್ ಮೂಲಕ ಬೆದರಿಕೆ ಹಾಕಿಸಿದ ಆರೋಪವೂ ಕೇಳಿ ಬಂದಿದೆ. ದೂರು ಸ್ವೀಕರಿಸಿ ಪೊಲೀಸರು ಸುಮ್ಮನಾಗಿದ್ದರು. ಹೀಗಾಗಿ ಬೆದರಿಕೆ ಆರೋಪದಲ್ಲಿ ಭರತ್ ಮತ್ತೆ ನಿನ್ನೆ…
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲಿಯೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ ಐದು ಜನರಿಗೆ ಜಾಮೀನು ನೀಡಲಾಗಿದೆ. ಆದ್ರೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವರಿಗೆ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಈ ಮಧ್ಯೆ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ನಡೆದ ಸಂದರ್ಭದಲ್ಲಿ ಸಹನಾ ಗರ್ಭೀಣಿಯಾಗಿದ್ದರು. ರೇಣುಕಾಸ್ವಾಮಿ ಕಮೃತಪಟ್ಟ ನಾಲ್ಕು ತಿಂಗಳ ಬಳಿಕ ಸಹನಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗನನ್ನು ಕಳೆದುಕೊಂಡಿರೋ ರೇಣುಕಾಸ್ವಾಮಿ ಪೋಷಕರಿಗೆ ಮೊಮ್ಮಗನ ಆಗಮನ ಖುಷಿ ನೀಡಿದೆ. ಅಕ್ಟೋಬರ್ 16ರಂದು ಬೆಳಗ್ಗೆ ಜಾವ 7ಗಂಟೆ 1 ನಿಮಿಷಕ್ಕೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನವಾಗಿದೆ ಎನ್ನಲಾಗಿದೆ. ಮಗುವನ್ನು ಅಬ್ಜರ್ವೇಶನ್ ನಲ್ಲಿ ಇಡಲಾಗಿದೆ. ರೇಣುಕಾಸ್ವಾಮಿಗೆ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 4 ತಿಂಗಳಿನಿಂದ ಜೈಲಿನಲ್ಲಿರುವ ದರ್ಶನ್ ಗೆ ಸದ್ಯಕ್ಕೆ ಸಂಕಷ್ಟಗಳ ಮುಗಿಯುವ ಲಕ್ಷಣಗಳು ಕಾಣುತ್ತಿವೆ. ಅವರ ವಿರುದ್ಧ ಒಂದರ ಮೇಲೊಂದರಂತೆ ಪ್ರಕರಣಗಳು ದಾಖಲಾಗುತ್ತಲೆ ಇದೆ. ಇದೀಗ ದರ್ಶನ್ ವಿರುದ್ಧದ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ. ಕಳೆದ ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ.. 2022 ರಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್ಸಿಆರ್ ದಾಖಲಾಗಿದೆ. ಯುವ ನಿರ್ಮಾಪಕ ಭರತ್ ಎಂಬುವರು ತಮಗೆ ಕರೆ ಮಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 2022 ರಲ್ಲಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಎನ್ಸಿಆರ್ ದಾಖಲಾಗಿದ್ದು,…
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ. ಐದು ಕೋಟಿ ರೂಪಾಯಿ ಹಣ ನೀಡದಿದ್ರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ. ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ನೀಡಬೇಕು. ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೂನ್ 1 ರಂದು ಪನ್ವೇಲ್‌ನಲ್ಲಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ನಾಲ್ವರನ್ನು ನವಿ ಮುಂಬೈ…
ಸೌತ್ ಬ್ಯೂಟಿ ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೆಚ್ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಅವರ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ನಟಿಯನ್ನು ವಿಚಾರಣೆ ನಡೆಸಿದ್ದಾರೆ. ಹೆಚ್ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾರನ್ನು ಆರೋಪಿಯಾಗಿ ವಿಚಾರಣೆ ನಡೆಸಿಲ್ಲ. ಬದಲಿಗೆ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ತನಿಖೆ ಎದುರಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಜಾರಿಯಲ್ಲಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರಾಗಲು ತಮನ್ನಾ ಭಾಟಿಯಾ ಅವರು ತಾಯಿಯ ಜೊತೆ ಗುಹವಾಟಿಗೆ ಆಗಮಿಸಿದ್ದಾರೆ. ಈ ಹಿಂದೆಯೂ ಮಹದೇವ್ ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಏಪ್ರಿಲ್ ತಿಂಗಳಲ್ಲಿ ನಟಿ ವಿಚಾರಣೆ ಎದುರಿಸಿದ್ದರು. ಇದೀಗ ಹೆಚ್ಪಿಝಡ್ ಆ್ಯಪ್ ಹಗರಣದಲ್ಲಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೆಚ್ಪಿಝಡ್ ಆ್ಯಪ್ ಮೂಲಕ ದೊಡ್ಡ ಹಗರಣ ನಡೆದಿದೆ. ಪ್ರತಿ ದಿನ 4 ಸಾವಿರ ರೂಪಾಯಿ ಲಾಭ ನೀಡುವುದಾಗಿ ನಂಬಿಸಿ ಪ್ರತಿಯೊಬ್ಬರಿಂದ 57 ಸಾವಿರ…
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದಿನೇ ದಿನೇ ಜೀವ ಬೆದರಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಅವರಿಗೆ ನೀಡಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಆಪ್ತ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಸಲ್ಮಾನ್ ಖಾನ್ ಮತ್ತಷ್ಟು ಎಚ್ಚೆತ್ತುಕೊಂಡಿದ್ದಾರೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ‘ಏನಾಗಬೇಕೋ ಅದು ಆಗೇ ಆಗುತ್ತದೆ’ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಈ ಹಿಂದೆ ‘ಆಪ್ ಕಿ ಅದಾಲತ್’ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ನಟ ಸಲ್ಮಾನ್ ಖಾನ್ ಅವರಿಗೆ ರಜತ್ ಶರ್ಮಾ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸಲ್ಲು ಉತ್ತರ ಕೊಟ್ಟಿದ್ದರು. ಅವರು ಸಾವಿಗೆ ಭಯಪಟ್ಟು ಕುಳಿತುಕೊಂಡಿಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದರು. ‘ಸಲ್ಮಾನ್ ನಿಮಗೆ ದೇಶ, ವಿದೇಶದಲ್ಲೂ ಬೆದರಿಕೆ ಇದೆ. ನಿಮಗೆ ಸಾಕಷ್ಟು ಭದ್ರತೆ ನೀಡಲಾಗಿದೆ. ಆದರೆ, ನೀವು ಇದನ್ನು ಗಂಭೀರವಾಗಿ ಸ್ವೀಕರಿಸಿಲ್ಲವಲ್ಲ’ ಎಂದು ರಜತ್ ಶರ್ಮಾ…