ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಈಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/YJZ5M4DLWdw?si=-kuelmFJjdW37TKR ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್‌ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ. ಯಾವೆಲ್ಲಾ ಸೆಕ್ಷನ್ ದಾಖಲು? ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್‌ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.…
Author: Prajatv Kannada
ಲೆಬನಾನ್ ನಲ್ಲಿ ಕದನ ವಿರಾಮ ಘೋಷಿಸುವ ಅಮೇರಿಕಾ ಪ್ರಸ್ತಾವನೆ, ಸಲಹೆಗಳನ್ನು ಇಸ್ರೇಲ್ ತಿರಸ್ಕರಿಸಿದ್ದು ಹಿಜ್ಬುಲ್ಲಾ ಉಗ್ರ ಸಂಘಟನೆ ವಿರುದ್ಧ ಜಯ ಗಳಿಸುವವರೆಗೂ ಹೋರಾಡುವುದಾಗಿ ತಿಳಿಸಿದೆ https://youtu.be/f3Mia-4bcrs?si=LsHQ-dn3l1iQMxZv ಲೆಬನಾನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೆಜ್ಬೊಲ್ಲಾ ಭದ್ರಕೋಟೆಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಈ ವಾರ ನೂರಾರು ಜನರನ್ನು ಕೊಂದಿದೆ. ಆದರೆ ಉಗ್ರಗಾಮಿ ಗುಂಪು ರಾಕೆಟ್ ಬ್ಯಾರೇಜ್ ಗಳಿಂದ ಪ್ರತೀಕಾರಕ್ಕೆ ಮುಂದಾಗಿದೆ. “ಉತ್ತರದಲ್ಲಿ ಯಾವುದೇ ಕದನ ವಿರಾಮ ಇರುವುದಿಲ್ಲ. ವಿಜಯದವರೆಗೆ ಮತ್ತು ಉತ್ತರದ ನಿವಾಸಿಗಳು ತಮ್ಮ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗುವವರೆಗೆ ನಾವು ನಮ್ಮೆಲ್ಲ ಶಕ್ತಿಯೊಂದಿಗೆ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆಯ ವಿರುದ್ಧ ಹೋರಾಡುವುದನ್ನು ಮುಂದುವರಿಸುತ್ತೇವೆ” ಎಂದು ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಈ ಹಿಂದೆ ಹೇಳಿಕೆಯನ್ನು ನೀಡಿದ್ದು, ಅವರು ಕದನ ವಿರಾಮದ ಪ್ರಸ್ತಾಪಕ್ಕೆ “ಪ್ರತಿಕ್ರಿಯಿಸಿಲ್ಲ” ಮತ್ತು “ಸಂಪೂರ್ಣ ಬಲದೊಂದಿಗೆ ಹೋರಾಟವನ್ನು ಮುಂದುವರಿಸಲು” ಅವರು ಮಿಲಿಟರಿಗೆ ಆದೇಶಿಸಿದ್ದಾರೆ ಎಂದು ವಿದೇಶಾಂಗ ಸಚಿವ…
ನಾವು ಎಂದಿಗೂ ‘ಇಂಡಿಯಾ ಔಟ್’ ಅಜೆಂಡಾವನ್ನು ಅನುಸರಿಸಿಲ್ಲ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝು ಹೇಳಿದ್ದಾರೆ. ಆದರೆ ತನ್ನ ನೆಲದಲ್ಲಿ ವಿದೇಶಿ ಸೇನೆಯ ಉಪಸ್ಥಿತಿಯು ಗಂಭೀರ ಸಮಸ್ಯೆಯಾಗಿತ್ತು ಎಂದು ಅವರು ಪ್ರತಿಪಾದಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79 ನೇ ಅಧಿವೇಶನದಲ್ಲಿ ಭಾಗವಹಿಸಲು ಯುಎಸ್ನಲ್ಲಿರುವ ಮುಯಿಝು, ಪ್ರಿನ್ಸ್ ಟನ್ ವಿಶ್ವವಿದ್ಯಾಲಯದ ಡೀನ್ಸ್ ಲೀಡರ್ ಶಿಪ್ ಸರಣಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ಮೇಲಿನ ಹೇಳಿಕೆ ನೀಡಿದ್ದಾರೆ. “ನಾವು ಯಾವುದೇ ಸಮಯದಲ್ಲಿಯೂ ಯಾವುದೇ ಒಂದು ದೇಶದ ವಿರುದ್ಧವಾಗಿಲ್ಲ. ಅದು ಇಂಡಿಯಾ ಔಟ್ ಆಗಿರಲಿಲ್ಲ. ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿಯ ಉಪಸ್ಥಿತಿಯು ಗಂಭೀರ ಸಮಸ್ಯೆಯಾಗಿತ್ತು. ತಮ್ಮ ದೇಶದಲ್ಲಿ ಒಬ್ಬನೇ ಒಬ್ಬ ವಿದೇಶಿ ಸೈನಿಕ ಇರುವುದನ್ನು ಮಾಲ್ಡೀವ್ಸ್ ಜನತೆ ಸಹಿಸುವುದಿಲ್ಲ” ಎಂದು ಹೇಳಿದ್ದಾರೆ. ಚೀನಾ ಪರ ಒಲವುಗಳಿಗೆ ಹೆಸರುವಾಸಿಯಾದ ಮುಯಿಝು ಕಳೆದ ವರ್ಷ ನವೆಂಬರ್ನಲ್ಲಿ ಮಾಲ್ಡೀವ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಬಂಧಗಳು ತೀವ್ರ ಬಿಗಡಾಯಿಸಿದೆ. ದೇಶವು ಉಡುಗೊರೆಯಾಗಿ ನೀಡಿದ ಮೂರು ವಾಯುಯಾನ…
ಅಮೆರಿಕದಲ್ಲಿ ಇತ್ತೀಚೆಗೆ ಅಪರಾಧಿಗಳಿಗೆ ನೈಟ್ರೋಜನ್ ಗ್ಯಾಸ್ ಮೂಲಕ ಮರಣದಂಡನೆ ವಿಧಿಸಲಾಗುತ್ತಿದೆ. ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ಎರಡನೇ ಬಾರಿಗೆ ಇಂಥದ್ದೇ ಘೋರ ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಮೂವರನ್ನು ಹತ್ಯೆಗೈದ ಮಿಲ್ಲರ್ ಎಂಬ ಅಪರಾಧಿಯನ್ನು ಗುರುವಾರ ಅಮೆರಿಕ ಕಾಲಮಾನ ಪ್ರಕಾರ ಅಲಬಾಮಾದಲ್ಲಿ ನೈಟ್ರೋಜನ್ ಗ್ಯಾಸ್ ಬಳಸಿ ಹತ್ಯೆ ಮಾಡಲಾಗಿದೆ. ದಕ್ಷಿಣ ಅಲಬಾಮಾ ಜೈಲಿನಲ್ಲಿದ್ದ 59 ವರ್ಷದ ಅಪರಾಧಿ ಅಲನ್ ಯುಜೀನ್ ಮಿಲ್ಲರ್ ಮುಖಕ್ಕೆ ಅಧಿಕಾರಿಗಳು ಮುಖವಾಡ ಹಾಕಿ ಸಾರಜನಕ ಅನಿಲ ಕಳುಹಿಸಲು ಪ್ರಾರಂಭಿಸಿದರು. ವಿಷಾನಿಲ ಸೇವಿಸಿದ ಆತ ಎರಡೇ ನಿಮಿಷದಲ್ಲಿ ಕೆಳಗೆ ಬಿದ್ದಿದ್ದು, ಮುಂದಿನ ಆರು ನಿಮಿಷದಲ್ಲಿ ಸಾವನ್ನಪ್ಪಿದ್ದಾನೆ. ಇದರೊಂದಿಗೆ 8 ನಿಮಿಷಗಳಲ್ಲಿ ಮರಣದಂಡನೆ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲಬಾಮಾದಲ್ಲಿ ನೈಟ್ರೋಜನ್ ಅನಿಲದ ಮೂಲಕ ಮರಣದಂಡನೆ ವಿಧಿಸಿರುವ ಎರಡನೇ ಪ್ರಕರಣ ಇದಾಗಿದೆ. ಈ ವರ್ಷದ ಜನವರಿಯಲ್ಲಿ ಕೊಲೆ ಪ್ರಕರಣದ ಅಪರಾದಿ ಕೆನೆತ್ ಸ್ಮಿತ್ (58) ಎಂಬಾತನಿಗೆ ಇದೇ ಶಿಕ್ಷೆ ವಿಧಿಸಿ ಕೊಲ್ಲಲಾಗಿತ್ತು.
ಸೌತ್ ಸುಂದರಿ ನಟಿ ಸಮಂತಾ ರುತ್ ಪ್ರಭು ಸದ್ಯ ಪ್ಯಾನ್ ಇಂಡಿಯಾ ನಟಿಯಾಗಿಯೇ ಗುರುತಿಸಿಕೊಂಡಿದ್ದಾರೆ. ಫ್ಯಾಮಿಲಿ ಮ್ಯಾನ್ 2 ವೆಬ್ ಸಿರೀಸ್ನಲ್ಲಿ ನಟಿಸಿದ ನಂತರ ಸಮಂತಾ ಖ್ಯಾತಿ ಮತ್ತಷ್ಟು ಹೆಚ್ಚಾಗಿದೆ. ಸದ್ಯ ಸಮಂತ ಲಂಡನ್ಗೆ ಭೇಟಿ ನೀಡಿದ್ದು ಅವುಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಡಾರ್ಕ್ ಬ್ಲೂ ಆಫ್ ಶೋಲ್ಡರ್ ಗೌನ್ ಧರಿಸಿದ್ದ ಸಮಂತ ಇದಕ್ಕೆ ಸಿಲ್ವರ್ ನೆಕ್ಲೆಸ್ ಧರಿಸಿದ್ದರು. ಸಿಂಪಲ್ ಆಗಿ ಮೇಕಪ್ ಮಾಡಿಕೊಂಡಿದ್ದ ಸಮಂತಾ ತುಂಬಾ ಆಕರ್ಷಣೀಯವಾಗಿ ಕಾಣಿಸಿಕೊಂಡಿದ್ದಾರೆ. ನಟಿ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ. ಸಮಂತ ತಮ್ಮ ವೆಬ್ ಸರಣಿಯ ಪ್ರೀಮಿಯರ್ ನಲ್ಲಿ ಭಾಗಿಯಾಗಲು ಲಂಡನ್ ಗೆ ತೆರಳಿದ್ದರು.ಈ ವೇಳೆ ನಟಿ ಧರಿಸಿದ್ದ ದುಭಾರಿ ವಸ್ತ್ರ ಕಾರ್ಯಕ್ರಮದಲ್ಲಿ ಹಾಜರಿದ್ದ ಪ್ರತಿಯೊಬ್ಬರ ಮನ ಸೆಳೆದಿತ್ತು. ಸಮಂತಾ ಧರಿಸಿದ್ದ ವಸ್ತ್ರವನ್ನು ಖ್ಯಾತ ವಿನ್ಯಾಸಕಿ ಡಿಸೈನ್ ಮಾಡಿದ್ದಾರೆ. ಅಂದ ಹಾಗೆ ಈಕೆ ಧರಿಸಿದ್ದು ಟಸ್ಸೆಲ್ ಪ್ಯಾಂಡ್ ಹಾಗೂ ಟಾಪ್. ನಟಿ ಧರಿಸಿದ್ದು ಗೌನ್ನಂತೆ ಕಂಡರೂ ಇದು ಗೌನ್ ಅಲ್ವಂತೆ. ಬದಲಾಗಿ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಲಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 30ಕ್ಕೆ ನಡೆಯಲಿದೆ. ಇದೇ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯೂ ಸಹ ಸೆಪ್ಟೆಂಬರ್ 30ರಂದೇ ನಡೆಯಲಿದೆ. ಇಂದು ಪವಿತ್ರಾ ಗೌಡ ಪರ ವಕೀಲರಾದ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದರು. ಪವಿತ್ರಾ ಅವರಿಗೆ ಕೊಲ್ಲುವ ಉದ್ದೇಶವೇ ಇರಲಿಲ್ಲ, ಆಕೆ ಈ ಪ್ರಕರಣದಲ್ಲಿ ಷಡ್ಯಂತ್ರವನ್ನೂ ಮಾಡಿರಲಿಲ್ಲ ಎಂದು ವಾದಿಸಿದರು. ಪವಿತ್ರಾ ಅವರ ಜಾಮೀನು ಅರ್ಜಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ ಬಳಿಕ ವಾದ ಮಂಡನೆ ಮಾಡಿದ ಟಾಮಿ ಸೆಬಾಸ್ಟಿಯನ್, ಮೊದಲಿಗೆ ಆಕ್ಷೇಪಣೆಯಲ್ಲಿನ ಅಂಶಗಳನ್ನು ಓದಿದರು. ರೇಣುಕಾ ಸ್ವಾಮಿಯನ್ನು ಷೆಡ್ಗೆ ಕರೆದೊಯ್ದು ಇತರರೊಂದಿಗೆ ಸೇರಿ ಹಲ್ಲೆ ನಡೆಸಿದ ಆರೋಪವಿದೆ, ಹಲ್ಲೆಯಿಂದಾಗಿ ರೇಣುಕಾಸ್ವಾಮಿ ಮೃತಪಟ್ಟಿದ್ದಾರೆಂದು ಹೇಳಲಾಗಿದೆ. ತುಂಬಾ ಕ್ರೂರವಾಗಿ ಹಲ್ಲೆ ನಡೆಸಿದ್ದರೆಂದು ಆರೋಪಿಸಲಾಗಿದೆ. ನಾಲ್ಕು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ 4 ತಿಂಗಳಾಗಿದೆ. ನಿತ್ಯವು ದಾಸ ಹೊರಗೆ ಬರುವ ದಾರಿ ಹುಡುಕುತ್ತಿದ್ದಾರೆ. ಇದಕ್ಕಾಗಿ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ನಡೆದ ಜಾಮೀನು ಅರ್ಜಿ ವಿಚಾರಣೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು ಕೇಳಿದ ಕಾರಣದಿಂದಾಗಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ಈಗ ವಿಚಾರಣೆಯನ್ನು ಮುಂದೂಡಿದ್ದಾರೆ. ಪ್ರಕರಣದಲ್ಲಿ ಖುದ್ದು ಹಿರಿಯ ವಕೀಲರು ಸಿವಿ ನಾಗೇಶ್ ಅವರು ಬರಬೇಕಾಗಿದ್ದು, ಅವರು ಬರದೇ ಇರುವ ಕಾರಣಕ್ಕೆ ಅವರ ಸಹಾಯಕ ವಕೀಲರು ಪ್ರಕರಣದಲ್ಲಿ ಇನ್ನಷ್ಟು ದಿನದ ಕಾಲಾವಕಾಶವನ್ನು ಕೇಳಿದ್ದಾರೆ. ವಾದ ಮಂಡನೆಗೆ ದರ್ಶನ್ ಪರ ವಕೀಲರು ಕಾಲಾವಕಾಶ ಕೇಳಿದ ಬೆನ್ನಲ್ಲೆ,…
ಬೆಂಗಳೂರು: ಸಿಬಿಐ ರಾಜ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರದಿಂದ ನಿರ್ಬಂಧ ಮಾಡಿರೋ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/uQNFASJxVzE?si=ejLXUKiKYP2ZV5Ug ಟ್ವೀಟ್‌ನಲ್ಲಿ ಏನಿದೆ? ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ. ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ…
ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ದಕ್ಷ ಅಧಿಕಾರಿ ಬಿ.ಜಿ.ಕೊಕಟನೂರ್ (79) ಇವರು ಧಾರವಾಡದ ತಮ್ಮ ಸ್ವಗೃಹದಲ್ಲಿ ಕೊನೆ ಉಸಿರು ಎಳೆದಿದ್ದಾರೆ.1998-99 ರಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಅವರು ತಮ್ಮ ಸೇವಾ ಅವಧಿಯಲ್ಲಿ ದಕ್ಷ ಅಧಿಕಾರಿ ಎಂಬ ಬಿರುದು ಪಡೆದುಕೊಂಡಿದ್ದರು. https://youtu.be/uQNFASJxVzE?si=mDytVWB9KrgKjQC3 ಮೃತರ ಅಂತ್ಯಕ್ರಿಯೆಯು ಅವರ ತವರೂರಾದ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ನಾಳೆ 27 ರಂದು ಮಧ್ಯಾಹ್ನ ನಡೆಯಲಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಹಲವು ರಾಜಕೀಯ ಮುಖಂಡರು ಹಾಗೂ ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ಮೃತರ ಅಂತಿಮ ದರ್ಶನ ಪಡೆಯುವ ಸಾಧ್ಯತೆಯಿದ್ದು, ಹು- ಧಾ ಕಮೀಷನರೇಟ್ ಸಂತಾಪ ಸೂಚಿಸಿದೆ..
ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋತಂಗಲ್ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. https://youtu.be/8Y_FPlGZW2A?si=pwzhb2ZWiwu9xKoB ಪಾಂಡಪ್ಪ ಕೋರ್ವನ್ (45) ಮೃತ ದುರ್ಧೈವಿಯಾಗಿದ್ದು, ಬೆಳೆ ಬೆಳೆಯಲು ಬ್ಯಾಂಕ್ ಹಾಗೂ ಖಾಸಗಿ ಆಗಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದರುಅದಲ್ಲದೆ ನಿರಂತರವಾಗಿ ಸುರಿದ ಮಳೆಯಿಂದ ಜಮೀನಿನಲ್ಲಿದ್ದ ತೊಗರಿ ಸಂಪೂರ್ಣ ನಾಶವಾಗಿತ್ತು. ಇತ್ತ ಬ್ಯಾಂಕ್ ಅಧಿಕಾರಿಗಳ ಸಾಲದ ಕಿರುಕುಳ ತಾಳಲಾರದೇ ಮನೆಯಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.