ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಬೇಡಿ ಎಂದು ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಗಂಭೀರ ಎಚ್ಚರಿಕೆ ನೀಡಿದೆ. ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರು ಬರುತ್ತಿರುವ ಬಗ್ಗೆ ಗಂಭೀರವಾಗಿ ಮತ್ತು ತುರ್ತಾಗಿ ಗಮನ ಹರಿಸುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಇಂಥ ಜನರಿಗೆ ವೀಸಾ ನೀಡದಂತೆ ಹಾಗೂ ಇವರು ಭಿಕ್ಷಾಟನೆಗಾಗಿ ತನ್ನ ದೇಶ ಪ್ರವೇಶಿಸದಂತೆ ತಡೆಯಬೇಕು ಎಂದು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಸೌದಿ ಅರೇಬಿಯಾ ಸೂಚನೆ ನೀಡಿದೆ. ಮುಸ್ಲಿಮರ ಪವಿತ್ರ ಹಜ್ ಯಾತ್ರೆಗೆಂದು ಸೌದಿ ಅರೇಬಿಯಾಗೆ ಬರುವ ಕೆಲ ಪಾಕಿಸ್ತಾನಿಯರು ಅಲ್ಲಿ ಭಿಕ್ಷಾಟನೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ದೇಶದಲ್ಲಿ ಭಿಕ್ಷೆ ಬೇಡುತ್ತಿದ್ದ ಹಲವಾರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಸೌದಿ ಸರ್ಕಾರ ಅವರನ್ನು ಗಡಿಪಾರು ಮಾಡಿದೆ. ಅಲ್ಲದೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಉಮ್ರಾ ವೀಸಾದಲ್ಲಿ ಸೌದಿ ಅರೇಬಿಯಾಕ್ಕೆ ಬರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸೌದಿ ಅರೇಬಿಯಾ ಗಂಭೀರ ಕಳವಳ ವ್ಯಕ್ತಪಡಿಸಿದೆ…
Author: Prajatv Kannada
ಧಾರವಾಡ: ಆಂಧ್ರಪ್ರದೇಶದ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿರೋ ಆರೋಪ ವಿಚಾರವಾಗಿ ನಗರದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಈಗ ಸ್ಥಳ ಸ್ವಚ್ಛತೆ ಮಾಡುತ್ತಿದ್ದಾರೆ. ಸ್ಥಳ ಸ್ವಚ್ಛತೆ ಮಾಡುವುದು ಧರ್ಮಶಾಸ್ತ್ರ, ಆದರೆ ತಿಂದವರ ಹೊಟ್ಟೆ ಏನು ಮಾಡುವವರು ಈಗ? ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು. ಎಲ್ಲ ಕಡೆ ಅನೈತಿಕತೆ ಹೆಚ್ಚಾಗುತ್ತಿದೆ. ಶ್ರೀಗಳ ಉಪಟಳ ಹೆಚ್ಚಾಗುತ್ತದೆ ಅಂತಾ ಹೇಳಿದ್ದೆ, ಈಗ ಅದೇ ನಡೆಯುತ್ತಿದೆ ಎಂದಿದ್ದಾರೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿರೋ ವಿಚಾರ, ನಾನುಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕಟ್ ಮಾಡಿಸುತ್ತಾರೆ ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಅಂತಾ ಹೇಳಿದ್ದೆ ಅದು ಈಗ ಏನಾಗಿದೆ ಅಂತಾ ಸ್ವಾಮೀಜಿ ಪ್ರಶ್ನೆ ಮಾಡಿದ್ದು, ಈ ಭವಿಷ್ಯ ಧಾರವಾಡದಲ್ಲಿಯೇ ಹೇಳಿದ್ದೆಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ ಅಂತಾ.ಇಲ್ಲಿ ಕೃಷ್ಣ ಇಲ್ಲಿ ದುರ್ಯೋಧನ ಗೆದ್ದಅಭಿಮನ್ಯವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆಈಗ ಏನಾಯ್ತು? ಅದು ನಿಜವಾಯಿತು ಎನ್ನುವ ಲೆಕ್ಕದಲ್ಲಿ…
ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. https://youtu.be/G_-foF5vrZE?si=RvBFjw94VA9COiFG ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸೇಫ್ ಅಲ್ಲ ಎಂದು ವರದಿ ನೀಡಿದೆ. ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಿಕೊಳ್ಳಲು ಇಲಾಖೆ ಸೂಚಿಸಿದೆ. ಈ ಬಗ್ಗೆ ಮೈಸೂರಿನ ಲ್ಯಾಬ್‍ನಲ್ಲಿ ಖಚಿತತೆಯ ಪರೀಕ್ಷೆ ನಡೆಯುತ್ತಿದೆ. ದೇಶಾದ್ಯಂತ ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾಗಿದೆ ಎನ್ನಲಾದ ಕಲಬೆರಕೆ ತುಪ್ಪ ವಿವಾದ…
ಲೆಬನಾನ್ ನಲ್ಲಿ ಕದನ ವಿರಾಮ ಘೋಷಿಸುವ ಅಮೇರಿಕಾ ಪ್ರಸ್ತಾವನೆ, ಸಲಹೆಗಳನ್ನು ಇಸ್ರೇಲ್ ತಿರಸ್ಕರಿಸಿದ್ದು ಹಿಜ್ಬುಲ್ಲಾ ಉಗ್ರ ಸಂಘಟನೆ ವಿರುದ್ಧ ಜಯ ಗಳಿಸುವವರೆಗೂ ಹೋರಾಡುವುದಾಗಿ ತಿಳಿಸಿದೆ. ಲೆಬನಾನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೆಜ್ಬೊಲ್ಲಾ ಭದ್ರಕೋಟೆಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಈ ವಾರ ನೂರಾರು ಜನರನ್ನು ಕೊಂದಿದೆ. ಆದರೆ ಉಗ್ರಗಾಮಿ ಗುಂಪು ರಾಕೆಟ್ ಬ್ಯಾರೇಜ್ ಗಳಿಂದ ಪ್ರತೀಕಾರಕ್ಕೆ ಮುಂದಾಗಿದೆ. “ಉತ್ತರದಲ್ಲಿ ಯಾವುದೇ ಕದನ ವಿರಾಮ ಇರುವುದಿಲ್ಲ. ವಿಜಯದವರೆಗೆ ಮತ್ತು ಉತ್ತರದ ನಿವಾಸಿಗಳು ತಮ್ಮ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗುವವರೆಗೆ ನಾವು ನಮ್ಮೆಲ್ಲ ಶಕ್ತಿಯೊಂದಿಗೆ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆಯ ವಿರುದ್ಧ ಹೋರಾಡುವುದನ್ನು ಮುಂದುವರಿಸುತ್ತೇವೆ” ಎಂದು ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಈ ಹಿಂದೆ ಹೇಳಿಕೆಯನ್ನು ನೀಡಿದ್ದು, ಅವರು ಕದನ ವಿರಾಮದ ಪ್ರಸ್ತಾಪಕ್ಕೆ “ಪ್ರತಿಕ್ರಿಯಿಸಿಲ್ಲ” ಮತ್ತು “ಸಂಪೂರ್ಣ ಬಲದೊಂದಿಗೆ ಹೋರಾಟವನ್ನು ಮುಂದುವರಿಸಲು” ಅವರು ಮಿಲಿಟರಿಗೆ ಆದೇಶಿಸಿದ್ದಾರೆ ಎಂದು ವಿದೇಶಾಂಗ ಸಚಿವ ಹೇಳಿದ್ದಾರೆ.…
ಮನಸು ತುಂಬಾ ಚಂಚಲ. ಅದು ಯಾವಾಗ ಹೇಗಿರುತ್ತದೆ, ಯಾವಾಗ ಬದಲಾಗುತ್ತದೆ ಎಂದು ಹೇಳಲಾಗದು. ಎಷ್ಟೇ ದೃಢ ಮನಸಿದ್ದರೂ ಕೆಲವೊಮ್ಮೆ ಬಂದೊದಗುವ ಸಂಕಷ್ಟಗಳು, ಇನ್ನೊಬ್ಬರು ಆಡುವ ಮಾತುಗಳು, ಜೀವನದಲ್ಲಿ ಎದುರಾಗುವ ಪರೀಕ್ಷೆಗಳು, ಕೆಲವೊಂದು ಸನ್ನಿವೇಶಗಳಲ್ಲಿ ಮನದಲ್ಲಿ ಬೇಸರ ಮೂಡಿ ಖಿನ್ನತೆಗೆ ಒಳಗಾಗುವಂತೆ ಮಾಡುತ್ತವೆ. ಈ ಮನಸೇಕೆ ಹೀಗೆ? ಖಿನ್ನತೆ ಕವಿದಾಗ ಎಲ್ಲವೂ ಗೋಜಲು ಗೋಜಲಾಗಿ ಬಿಡಿಸಲಾಗದ ಕಗ್ಗಂಟಿನಂತೆ ಭಾಸವಾಗುತ್ತದೆ. ಏನು ಮಾಡಬೇಕೆಂದೇ ತೋಚುವುದಿಲ್ಲ. ಅತಂತ್ರ ಪರಿಸ್ಥಿತಿ. ಆಗ ಒಂದೆಡೆ ದುಃಖ; ಮತ್ತೊಂದೆಡೆ ಚಿಂತೆ, ನೋವು, ಬೇಸರ, ಗೊಂದಲಗಳ ಮಧ್ಯೆ ಹೆಣಗಾಡಬೇಕಾಗುತ್ತದೆ. ಮನಸು ನಿಂತ ನೀರಾಗಿ ತಟಸ್ಥವಾಗಿ ಬಿಡುತ್ತದೆ. ಖಿನ್ನತೆ ಹೆಚ್ಚಿದಂತೆ ಅದೊಂದು ಚಿಂತೆಯಾಗಿ ಪರಿವರ್ತನೆಯಾಗುತ್ತದೆ. ಖಿನ್ನ ಮನಸ್ಥಿತಿಯನ್ನು ಎದುರಿಸಲು ದೃಢ ಸಂಕಲ್ಪಬೇಕು. ಇಲ್ಲದಿದ್ದರೆ ಅದರಿಂದ ಹೊರಬರಲಾಗದೆ ಜೀವನವೇ ಬೇಡ ಎಂಬಂತೆ ಭಾಸವಾಗುತ್ತದೆ. ಆದ್ದರಿಂದ ಖಿನ್ನತೆಯನ್ನು ಬೆಳೆಯಲು ಬಿಡಬಾರದು. ಚಿಂತೆಗೂ ಚಿತೆಗೂ ಹತ್ತಿರದ ಸಂಬಂಧ. ಮನಸ್ಸನ್ನು ಗಟ್ಟಿಗೊಳಿಸಿಕೊಂಡು ಸಕಾರಾತ್ಮಕ ಚಿಂತನೆಗಳತ್ತ ತೊಡಗಿಸಿಕೊಳ್ಳಬೇಕು. ಖಿನ್ನತೆಯು ರೋಗಿಗಳಲ್ಲಿ ಆತ್ಮಹತ್ಯೆಯ ಅಪಾಯವನ್ನು ಹೆಚ್ಚಿಸುತ್ತದೆ. ಖಿನ್ನತೆಯ ಲಕ್ಷಣಗಳು ಖಿನ್ನತೆಯನ್ನು ತಪ್ಪಿಸಲು,…
ಹಿಂದೂ ಸಂಪ್ರದಾಯವು ಶುಕ್ರವಾರಕ್ಕೆ ಸಂಬಂಧಿಸಿದ ಪೂಜೆ ಮತ್ತು ಆಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ವಿಶೇಷ ನಿಯಮಗಳನ್ನು ಹೊಂದಿದೆ. ಈ ನಿಯಮಗಳನ್ನು ಪಾಲಿಸಿದರೆ ಲಕ್ಷ್ಮಿ ದೇವಿಯು ಭಕ್ತರನ್ನು ಸದಾ ಮೆಚ್ಚಿಸುತ್ತಾಳೆ ಮತ್ತು ಮನೆಯಲ್ಲಿ ಯಾವುದೇ ಕೊರತೆ ಕಾಣಬರುವುದಿಲ್ಲ ಎಂಬ ನಂಬಿಕೆಯಿದೆ. ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಗೆ ವಿಶೇಷ ವಾದ ಮಹತ್ವವಿದೆ. ಸಂಪತ್ತಿನ ದೇವತೆ ಎಂದರೆ ಲಕ್ಷ್ಮಿ ಎನ್ನಲಾಗುತ್ತದೆ. ಲಕ್ಷ್ಮಿ ದೇವಿಯ ಕೃಪೆ ಇದ್ದರೆ ಜೀವನದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಅಲ್ಲದೇ, ದೇವಿಯ ಕೃಪೆಯಿಂದ ಆರ್ಥಿಕವಾಗಿ ಲಾಭ ಸಹ ಆಗುತ್ತದೆ. ಇನ್ನು ನಾವು ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಆರ್ಥಿಕ ಬಿಕ್ಕಟ್ಟು ದೂರವಾಗುವುದಲ್ಲದೆ ಸಂಪತ್ತು ಕೂಡ ಬರುತ್ತದೆ. ಶುಕ್ರವಾರವನ್ನ ಲಕ್ಷ್ಮಿ ದೇವಿಯ ವಾರ ಎನ್ನಲಾಗುತ್ತದೆ. ಆ ದಿನ ದೇವಿಯ ಆರಾಧನೆ ಮಾಡಿದರೆ ನಮ್ಮ ಕನಸು ನನಸಾಗುತ್ತದೆ. ಆದರೆ ದೇವಿಯ ಆರಾಧನೆ ಮಾಡಲು ಸಹ ಒಂದು ವಿಧಾನವಿದೆ. ಹಣಕಾಸಿನ ಸಮಸ್ಯೆಗಳಿಂದ ಸುತ್ತುವರಿದಿರುವವರು, ನಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕೆಂದು ಬಯಸುವವರು ಶುಕ್ರವಾರದ ದಿನದಂದು ಲಕ್ಷ್ಮಿ ದೇವಿಯ ಆರಾಧನೆಯನ್ನು ಮಾಡಬೇಕು. ಶುಕ್ರವಾರದ…
ಅಮೆರಿಕದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ BAPS ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಸ್ಥಾನದ ಹೊರಗಿರುವ ಬೋರ್ಡ್ ಮೇಲೆ ‘ಗೋ ಬ್ಯಾಕ್ ಹಿಂದೂ’ ಎಂದು ಬರೆಯಲಾಗಿದೆ ಎಂದು BAPS ಸಾರ್ವಜನಿಕ ವ್ಯವಹಾರಗಳ ಸಂಘಟನೆ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ BAPS Public Affairs ಸಂಘಟನೆ ನ್ಯೂಯಾರ್ಕ್‌ನಲ್ಲಿರುವ BAPS ಹಿಂದೂ ದೇವಾಲಯವನ್ನು ಅಪವಿತ್ರಗೊಳಿಸಿದ 10 ದಿನಗಳ ನಂತರ, ಸ್ಯಾಕ್ರಮೆಂಟೊದ CA ಪ್ರದೇಶದಲ್ಲಿರುವ ದೇವಾಲಯವನ್ನು ಹಿಂದೂ ವಿರೋಧಿ ದ್ವೇಷದಿಂದ ಅಪವಿತ್ರಗೊಳಿಸಲಾಗಿದೆ. ಹಿಂದೂಗಳೇ ಗೋ ಬ್ಯಾಕ್ ಎಂದು ಬೋರ್ಡ್ ಮೇಲೆ ಬರೆಯಲಾಗಿದೆ. ಶಾಂತಿಯ ಪ್ರಾರ್ಥನೆಯೊಂದಿಗೆ ದ್ವೇಷದ ವಿರುದ್ಧ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಬರೆಯಲಾಗಿದೆ. ಸೆಪ್ಟೆಂಬರ್ 17 ರಂದು ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ BAPS ಸ್ವಾಮಿನಾರಾಯಣ ದೇವಾಲಯವನ್ನು ಅಪವಿತ್ರಗೊಳಿಸಿದ ನಂತರ ಈ ಘಟನೆ ನಡೆದಿದೆ. ದ್ವೇಷದ ನಮ್ಮ ಖಂಡನೆಯು ದೃಢವಾಗಿ ಉಳಿದಿದೆ. ದುಃಖವು ತೀವ್ರವಾಗಿದ್ದು, ದ್ವೇಷ ಹೊಂದಿರುವವರು ಸೇರಿದಂತೆ ಎಲ್ಲರಿಗಾಗಿ…
ಪ್ರಯಾಣ ಅಥವಾ ಪ್ರವಾಸವು ಸಂತಸ, ಸಂಭ್ರಮ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾನಸಿಕ ಆರೋಗ್ಯವನ್ನೂ ನೀಡುತ್ತದೆ. ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಪ್ರವಾಸ ಒತ್ತಡವನ್ನು ನಿವಾರಿಸುವ ಮೂಲಕ ಹೊಸತವನ್ನು ನೀಡುತ್ತದೆ. ಹೀಗಾಗಿ ಒತ್ತಡದ ಜೀವನಶೈಲಿಯಿಂದ ಹೊರಬರಲು ಅನೇಕರು ಆಗಾಗ ಪ್ರವಾಸಕ್ಕೆ ತೆರಳುತ್ತಾರೆ. ವಿಶ್ವಸಂಸ್ಥೆಯ ವಿಶ್ವ ವ್ಯಾಪಾರ ಸಂಸ್ಥೆ ಆರಂಭಿಸಿದ ಈ ದಿನದ ಮಹತ್ವ, ಉದ್ದೇಶ, ಥೀಮ್ ವಿವರಣೆ ಸೇರಿದಂತೆ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ. ವಿಶ್ವಪ್ರವಾಸೋದ್ಯಮದಿನದಇತಿಹಾಸ ವಿಶ್ವಸಂಸ್ಥೆಯ ವರ್ಲ್ಡ್ ಟೂರಿಸಂ ಆರ್ಗನೈಜೇಷನ್(ಯುಎನ್‌ಡಬ್ಲ್ಯುಟಿಒ) 1970 ಸೆಪ್ಟೆಂಬರ್ 27ರಂದು ಮೊದಲ ಬಾರಿಗೆ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲು ಶಾಸನಗಳನ್ನು ರಚಿಸಿತು. ಯುಎನ್‌ಡಬ್ಲ್ಯುಟಿಒ 1980 ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲು ಅಂಗೀಕರಿಸಿತು. ಪ್ರವಾಸೋದ್ಯಮವನ್ನು ಜಾಗತಿಕವಾಗಿ ಪ್ರಚಾರಗೊಳಿಸುವ ಉದ್ದೇಶದಿಂದ ಈ ದಿನವನ್ನು ಆರಂಭಿಸಲಾಗಿದೆ. ಅಂದಿನಿಂದ ಪ್ರತಿ ವರ್ಷ ಆ ದಿನದಂದು ಪ್ರವಾಸೋದ್ಯಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಜನವರಿ ಹದಿನೈದು ಭಾರತದ ರಾಷ್ಟ್ರೀಯ ಪ್ರವಾಸೋದ್ಯಮ ದಿನವಾಗಿದೆ. ವಿಶ್ವಪ್ರವಾಸೋದ್ಯಮದಿನದಮಹತ್ವ ವಿಶ್ವ ಪ್ರವಾಸೋದ್ಯಮ ದಿನದ ಉದ್ದೇಶ ಸಾಮಾಜಿಕ,…
ಸೂರ್ಯೋದಯ: 06:09, ಸೂರ್ಯಾಸ್ತ : 06:04 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ದಸಮಿ ನಕ್ಷತ್ರ: ಪುಷ್ಮ್ಯಾ ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಸಂ.6:28 ನಿಂದ ರಾ .8:11 ತನಕ ಅಭಿಜಿತ್ ಮುಹುರ್ತ: ಬೆ.11:43 ನಿಂದ ಮ.12:30 ತನಕ ಮೇಷ: ಗಂಡ ಹೆಂಡತಿ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ, ರಾಜಕಾರಣಿಗಳು ಸಂಕಷ್ಟದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಅನಿವಾರ್ಯವಾಗಿ ಎದುರಿಸಿ, ರಾಜಕಾರಣಿಗಳಿಗೆ ಮತ್ತು ಅಧಿಕಾರಿ ವರ್ಗದವರಿಗೆ ಶುಭದಾಯಕ,ಸಿರಿಧಾನ್ಯ ವ್ಯಾಪಾರಸ್ಥರಿಗೆ ಅಧಿಕ ಲಾಭ,ಬಾಡಿ ಮಸೇಜ್, ಮೇಕಪ್, ವೃತ್ತಿ ಹೊಂದಿದವರಿಗೆ ಧನ ಲಾಭ, ಅತ್ತೆ ಸೊಸೆ ಭಿನ್ನಾಭಿಪ್ರಾಯ ಶುರು, ಉಪನ್ಯಾಸಕರಿಗೆ ಸಿಹಿಸುದ್ದಿ, ಆಸ್ತಿ ಮಾರಾಟದ ಅಡಚಣೆ ನಿವಾರಣೆ, ಪಾಲುದಾರಿಕೆ ಸಮಸ್ಯೆಗಳ ಪರಿಹಾರ, ಪತಿ-ಪತ್ನಿ ಭಿನ್ನಾಭಿಪ್ರಾಯದಿಂದ ಮುಕ್ತಿ,…
ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ಅವರು ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ