ಸಂಗೀತ ಲೋಕದ ಮಾಂತ್ರಿಕ ಎ.ಆರ್ ರೆಹಮಾನ್ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ. 29 ವರ್ಷಗಳ ಕಾಲ ಸಂಸಾರ ಮಾಡಿದ್ದ ರೆಮಹಾನ್ ಹಾಗೂ ಪತ್ನಿ ಸೈರಾ ಬಾನು ದೂರ ದೂರವಾಗಿದ್ದಾರೆ. ಸೈರಾ ವಕೀಲರು ಈ ಬಗ್ಗೆ ಅಧಿಕತ ಘೋಷಣೆ ಮಾಡಿದ್ದಾರೆ. ಎ.ಆರ್ ರೆಹಮಾನ್ ಹಾಗೂ ಸೈರಾ ಅವರ ದಾಂಪತ್ಯ ಬಿರುಕು ಕಾಣಿಸಿಕೊಂಡಿದೆ. ಸೈರಾ ಪರ ವಕೀಲರಾದ ವಂದನಾ ಶಾ ಅವರು ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ರೆಹಮಾನ್ ಹಾಗೂ ಸೈರಾ ದಂಪತಿ ಬೇರೆ, ಬೇರೆಯಾಗಲು ನಿರ್ಧಾರ ಮಾಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ಬಹಳ ವರ್ಷಗಳ ಬಳಿಕ ಸೈರಾ ಅವರು ತಮ್ಮ ಪತಿ ಎ.ಆರ್ ರೆಹಮಾನ್ ಅವರಿಂದ ಬೇರೆಯಾಗುವ ಕಷ್ಟದ ತೀರ್ಮಾನ ತೆಗೆದುಕೊಂಡಿದ್ದಾರೆ. ಬಹಳ ಪ್ರೀತಿಯಿಂದ ಕಾಲ ಕಳೆಯುತ್ತಿದ್ದ ಜೋಡಿ ಹಕ್ಕಿಗಳು ಭಾವನಾತ್ಮಕ ಒತ್ತಡದಲ್ಲಿ ಸಿಲುಕಿದ್ದವು. ಒಬ್ಬರಿಗೊಬ್ಬರ ಗೌರವಪೂರ್ವಕವಾಗಿ ದೂರ ಆಗುತ್ತಾ ಒಬ್ಬರಿಗೊಬ್ಬರು ಗೌರವಿಸಲು ತೀರ್ಮಾನಿಸಿದ್ದಾರೆ. ಬಹಳ ನೋವಿನಿಂದಲೇ ಸೈರಾ ಅವರು ರೆಹಮಾನ್ ಅವರಿಂದ ದೂರವಾಗಲು ನಿರ್ಧಾರ ಮಾಡಿದ್ದಾರೆ. ಖಾಸಗಿ ಬದುಕು…
Author: Prajatv Kannada
ಭಾರತೀಯ ಚಿತ್ರರಂಗದ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಹಾಗೂ ಗಾಯಕ ಎ.ಆರ್.ರೆಹಮಾನ್ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಪತ್ನಿ ಸೈರಾ ಭಾನು ಜೊತೆಗಿನ ದಾಂಪತ್ಯಕ್ಕೆ ರೆಹಮಾನ್ ಅಂತ್ಯ ಹಾಡಿದ್ದಾರೆ. ಈ ಮೂಲ 29 ವರ್ಷಗಳ ಸಾಂಸಾರಿಕ ಜೀವನ ಅಂತ್ಯಗೊಳಿಸಿದ್ದಾರೆ. ವಿಚ್ಛೇದನದ ವಿಚಾರವನ್ನು ಸೈರಾ ಭಾನು ಅವರು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. 1995ರಲ್ಲಿ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಅವರು ವಿವಾಹ ಆಗಿದ್ದರು. ಅವರದ್ದು ಅರೇಂಜ್ ಮ್ಯಾರೇಜ್. ಸಿನಿಮಾದಲ್ಲಿ ಬ್ಯುಸಿ ಆಗಿದ್ದ ರೆಹಮಾನ್ ಅವರಿಗೆ ಹುಡುಗಿ ನೋಡುವಷ್ಟು ಸಮಯ ಇರಲಿಲ್ಲ. ಹಾಗಾಗಿ ತಾಯಿ ನೋಡಿದ ಹುಡುಗಿಯನ್ನು ಅವರು ಮದುವೆ ಆಗಿದ್ದರು. ಆಗ ಅವರಿಗೆ 29 ವರ್ಷ ವಯಸ್ಸಾಗಿತ್ತು. ರೆಹಮಾನ್ ಮತ್ತು ಸೈರಾ ಬಾನು ಜೋಡಿಗೆ ಮೂವರು ಮಕ್ಕಳಿದ್ದಾರೆ. ಬಹುತೇಕ ಮೂರು ದಶಕಗಳ ಕಾಲ ಹೊಂದಾಣಿಕೆಯಿಂದ ಸಂಸಾರ ಮಾಡಿದ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಅವರು ಹೀಗೆ ಏಕಾಏಕಿ ವಿಚ್ಛೇದನ ಘೋಷಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ‘ಸಂಬಂಧದಲ್ಲಿನ ಭಾವನಾತ್ಮಕವಾಗಿ ಸಂಕಟದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಇಬ್ಬರ…
ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಕೊನೆಗೂ ಮದುವೆಯಾಗುತ್ತಿದ್ದಾರೆ. ಈ ಹಿಂದೆ ಹಲವರ ಜೊತೆ ಕೀರ್ತಿ ಸುರೇಶ್ ಹೆಸರು ಕೇಳಿ ಬಂದಿತ್ತು. ಆದರೆ ಇದೀಗ ಬಾಲ್ಯ ಸ್ನೇಹಿತನ ಜೊತೆ ಮದುವೆಯಾಗಲು ಕೀರ್ತಿ ಸುರೇಶ್ ಮುಂದಾಗಿದ್ದಾರೆ. ಈ ಹಿಂದೆ, ಕೀರ್ತಿ ದುಬೈ ಮೂಲದ ಉದ್ಯಮಿ ಮತ್ತು ತಮಿಳು ಚಿತ್ರರಂಗದ ಸ್ಟಾರ್ ಸಂಗೀತ ಸಂಯೋಜಕರೊಂದಿಗೆ ನಟಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ, ಕೀರ್ತಿ ಮತ್ತು ಆಕೆಯ ತಂದೆ ಈ ವದಂತಿಗಳನ್ನು ಅಲ್ಲಗಳೆದಿದ್ದರು. ಕಳೆದೆರಡು ದಿನಗಳಿಂದ ಕೀರ್ತಿ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗುತ್ತಿದೆ. ಈ ಬಾರಿ, ಡಿಸೆಂಬರ್ 11 ರಂದು ಗೋವಾದಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್‌ನಲ್ಲಿ ಕೀರ್ತಿ ತನ್ನ ಬಹುಕಾಲದ ಗೆಳೆಯ ಆಂಥೋನಿ ಥಟ್ಟಿಲ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎಂದು ಕಾಲಿವುಡ್ ವಲಯಗಳಲ್ಲಿ ಚರ್ಚೆ ಆಗುತ್ತಿದೆ. ಕೀರ್ತಿ ಮತ್ತು ಆಂಟನಿ ಕಳೆದ 16 ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. 2015ರಲ್ಲಿ ಮಲಯಾಳಂ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ನಟಿ ಕೀರ್ತಿ ಸುರೇಶ್, ಮಹಾನಟಿ…
‘ಜೋಡಿಹಕ್ಕಿ’ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್ ನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಕ್ಕೆ ಬಂಧನ ಮಾಡಲಾಗಿದೆ. ಘಟನೆ ಕುರಿತು ಕಮಿಷನರ್ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಏರ್‌ಫೈರ್ ಮಾಡಿರೋದು ಗೊತ್ತಾಗಿದೆ ಎಂದಿದ್ದಾರೆ. ನಿನ್ನೆ (ನ.18) ಸಂಜೆ ಈ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ತಾಂಡವ್‌ರನ್ನು ಈಗಾಗಲೇ ಬಂಧಿಸಿದ್ದೇವೆ. ಕೃತ್ಯಕ್ಕೆ ಬಳಸಿದ ಗನ್ ಸೀಜ್ ಮಾಡಲಾಗಿದೆ. ಸಿನಿಮಾಗೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರದಲ್ಲಿ ತಾಂಡವ್ ಮತ್ತು ನಿರ್ದೇಶಕ ಭರತ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎಂಬುದು ಪ್ರಾರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ. ಗುಂಡು ಹಾರಿಸಬೇಕು ಎಂಬ ದೃಷ್ಟಿಕೋನದಲ್ಲಿ ಹೀಗೆ ಮಾಡಿದ್ದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ. ‘ದೇವನಾಂಪ್ರಿಯ’ ಸಿನಿಮಾದಲ್ಲಿ ತಾಂಡವ್ ಹೀರೋ ಆಗಿ ನಟಿಸುತ್ತಿದ್ದರು. ಈ ಚಿತ್ರಕ್ಕೆ ಭರತ್ ನಿರ್ದೇಶನ ಮಾಡುತ್ತಿದ್ದರು. ಕಳೆದ 2 ವರ್ಷಗಳಿಂದ ನಡೆಯುತ್ತಿದ್ದ ಸಿನಿಮಾ ಶೂಟಿಂಗ್, ನಿರ್ಮಾಪಕರು ಸಿಗದ…
ಮಹಾನಟಿ ಖ್ಯಾತಿಯ ನಟಿ ಕೀರ್ತಿ ಸುರೇಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಈ ಬೆನ್ನಲ್ಲೇ ನಟಿ ಹಸೆಮಣೆ ಏರಲು ಸಜ್ಜಾಗಿದ್ದು ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿಂದೆ ಕೀರ್ತಿ ಸುರೇಶ್, ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಂಚಂದ್ರನ್ ಅವರನ್ನು ವಿವಾಹವಾಗಲಿದ್ದಾರೆ ಎನ್ನಲಾಗಿತ್ತು. ಮಾತ್ರವಲ್ಲ ಇನ್ನೂ ಕೆಲವು ನಟ, ಕೆಲ ನಿರ್ದೇಶಕರ ಜೊತೆಗೂ ಸಹ ಕೀರ್ತಿ ಸುರೇಶ್ ಹೆಸರು ಕೇಳಿ ಬಂದಿತ್ತು. ಇದೀಗ ಕೊನೆಗೂ ಕೀರ್ತಿ ಸುರೇಶ್ ಮದುವೆ ಫಿಕ್ಸ್ ಆಗಿದೆ. ಕೀರ್ತಿ ಸುರೇಶ್ ತಮ್ಮ ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಅವರನ್ನು ವಿವಾಹವಾಗಲಿದ್ದಾರೆ. ಆಂಟೊನಿ ಹಾಗೂ ಕೀರ್ತಿ ಸುರೇಶ್ ಸಹಪಾಠಿಗಳಾಗಿದ್ದು, ಒಟ್ಟಿಗೆ ಹೈಸ್ಕೂಲ್ ಶಿಕ್ಷಣವನ್ನು ಮಾಡಿದವರು. ಆಗಿನಿಂದಲೂ ಇವರು ಪ್ರೀತಿಯಲ್ಲಿದ್ದರಂತೆ. ಇದೀಗ ಮನೆಯವರ ಒಪ್ಪಿಗೆ ಪಡೆದು ವಿವಾಹವಾಗುತ್ತಿದ್ದಾರೆ. ಈ ಜೋಡಿಯ ವಿವಾಹ ಡಿಸೆಂಬರ್ 11-12 ರಂದು ಗೋವಾನಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಕುಟುಂಬಸ್ಥರು ಮತ್ತು ಕೆಲವೇ ಆತ್ಮೀಯರ ಸಮ್ಮುಖದಲ್ಲಿ…
‘ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಪೊಲೀಸರು ಬಂದಿಸಿದ್ದಾರೆ. ತಾಂಡವ್ ರಾಮ್ ಕೆಲ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ನಿರ್ದೇಶನ ಮಾಡುತ್ತಿದ್ದ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣ ಸಿಟ್ಟಾಗಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಭರತ್ ನಿರ್ದೇಶನದ ಸಿನಿಮಾದಲ್ಲಿ ನಾಯಕನಾಗಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಭರತ್ ಆ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಬಂಧಿಸಲಾಗಿದೆ. ‘ಮುಗಿಲ್ ಪೇಟೆ’ ಸಿನಿಮಾವನ್ನು ಭರತ್ ನಿರ್ದೇಶನ ಮಾಡಿದ್ದರು. ಇನ್ನು ತಾಂಡವ್ ರಾಮ್, ‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗಳಲ್ಲಿ ನಟಿಸಿದ್ದರು. ಕೆಎಂ…
ಬ್ರೆಜಿಲ್ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದರು. ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜೊತೆ ಮೋದಿ ಮಾತುಕತೆ ನಡೆಸಿದರು. ಜಿ-20 ಶೃಂಗಸಭೆಯಲ್ಲಿ ಭಾಗಿಯಾದ ಮೋದಿ ಅಲ್ಲಿ ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದರು. ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ರಿಯೊ ಡಿ ಜನೈರೊದಲ್ಲಿನ ಮ್ಯೂಸಿಯಂ ಆಫ್ ಮಾಡರ್ನ್ ಆರ್ಟ್‌ನಲ್ಲಿ ಎರಡು ದಿನಗಳ ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್, ಪಿಎಂ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು. ಇದಲ್ಲದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣೆ, ಭದ್ರತೆ ಮತ್ತಿತರ ಸಂಬಂಧಗಳ ಬಲವರ್ಧನೆ…
ನವದೆಹಲಿ: ಚುನಾವಣೆ ಹೊತ್ತಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆಘಾತ ಎದುರಾಗಿದೆ. ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಆಪ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಸಿದ್ದಾರೆ. ತಮ್ಮ ರಾಜೀನಾಮೆಯನ್ನು ದೆಹಲಿಯ ಸರ್ಕಾರದ ಮಂತ್ರಿ ಮಂಡಳಿಗೆ ಸಲ್ಲಿಸಿದ್ದು, ಮುಖ್ಯಮಂತ್ರಿ ಅತಿಶಿ ಗೆಹ್ಲೋಟ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ದೆಹಲಿಯ ಜನರಿಗೆ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಮುನಾ ನದಿ ಶುಚಿಗೊಳಿಸುವಲ್ಲಿ ವಿಫಲವಾಗಿರುವುದರ ಕುರಿತು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ರ ಹೊಸ ಅಧಿಕೃತ ಬಂಗಲೆಯ ಶೀಶ್ ಮಹಲ್ ವಿಚಾರದಲ್ಲಿ ಹಲವಾರು ಮುಜುಗರದ ಅಂಶಗಳಿವೆ. ಇದು ಸಾಮಾನ್ಯ ಜನರ ಪಕ್ಷವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಏನು ಉತ್ತರಿಸುವುದು ಎಂದು ಉಲ್ಲೇಖಿಸಿದ್ದಾರೆ. ಫೆಬ್ರವರಿಯಲ್ಲಿ ದೆಹಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಗೂ ಮುಂಚಿತವಾಗಿ ಗಹ್ಲೋಟ್ ಅವರ ರಾಜೀನಾಮೆ ಆಮ್ ಆದ್ಮಿ ಪಾರ್ಟಿಗೆ ಹಿನ್ನಡೆಯಾಗಿದೆ.
ಅಮರಾವತಿ:- ತಿಮ್ಮಪ್ಪನ ಭಕ್ತಾದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಎರಡರಿಂದ ಮೂರು ಗಂಟೆಯಲ್ಲೇ ದರ್ಶನ ಸಿಗಲಿದೆ ಎನ್ನಲಾಗಿದೆ. ಕೇವಲ 2ರಿಂದ 3 ಗಂಟೆಯೊಳಗೆ ಸಾಮಾನ್ಯ ಭಕ್ತರು ದೇವರ ದರ್ಶನ ಪಡೆಯುವಂತೆ ಬದಲಾವಣೆ ತರಲು ಎಐ ಮತ್ತು ಆಧುನಿಕ ತಂತ್ರಜ್ಞಾನ ಬಳಸಲು ಕ್ರಮಕೈಗೊಳ್ಳಲಾಗಿದೆ. ಕಂಪಾರ್ಟ್‌ಮೆಂಟ್‌ಗಳಲ್ಲಿ ಭಕ್ತರಿಗೆ ತೊಂದರೆ, ಕಿರಿಕಿರಿ ಉಂಟಾಗದಂತೆ ದರ್ಶನ ಲಭ್ಯವಾಗಲು ಈ ಯೋಜನೆ ರೂಪಿಸಲಾಗಿದೆ. ಟಿಟಿಡಿ ಆಡಳಿತ ಮಂಡಳಿ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಶ್ರೀವಾಣಿ ಟ್ರಸ್ಟ್ ಅನ್ನು ವಜಾಗೊಳಿಸಿದೆ. ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನ್ಯಧರ್ಮೀಯ ನೌಕರರನ್ನು ವಿಆರ್‌ಎಸ್ ಅಥವಾ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸಲು ನಿರ್ಧರಿಸಲಾ
ಬೆಂಗಳೂರು:- ನಕ್ಸಲ್ ಕ್ಯಾಪ್ಟನ್ ವಿಕ್ರಂ ಗೌಡ ಎನ್‌ಕೌಂಟರ್ ಕೇಸ್ ಗೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯರಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ…