Author: Prajatv Kannada

ಮಂಡ್ಯ :- ಮದ್ದೂರು ತಾಲ್ಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದ ಹೊರವಲಯದಲ್ಲಿ ಕುರಿ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಗುರುವಾರ ನಡೆದಿದೆ. https://youtu.be/mdT_vnnaM9k?si=oTjbJ3krqcWbUP4g ವಡ್ಡರದೊಡ್ಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಗ್ರಾಮದ ಹೊರವಲಯದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಕುರಿಯೊಂದು ಮೇವು ತಿಂದು ಗುಂಡಿಯಲ್ಲಿ ನೀರು ಕುಡಿಯುತ್ತಿದ್ದ ವೇಳೆ ಚಿರತೆಯೊಂದು ದಿಢೀರ್ ದಾಳಿ ಮಾಡಿದೆ ಕುರಿಯ ಚಿರಾಟಕ್ಕೆ ರೈತ ಕೃಷ್ಣಮೂರ್ತಿ ಹಾಗೂ ಇತರರ ಕೂಗಾಟ ಶಬ್ದದಿಂದ ಬೆದರಿ ಚಿರತೆ ಪರಾರಿಯಾಗಿದ್ದು, ಅಷ್ಟರಲ್ಲಿ ಕುರಿ ಸಾವಿಗೀಡಾಗಿದೆಈ ಬಗ್ಗೆ ರೈತ ಕೃಷ್ಣಮೂರ್ತಿ ಮಾತನಾಡಿ, ಕುರಿಗಳನ್ನೆ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಕಳೆದ 3 ತಿಂಗಳಲ್ಲಿ ನಮ್ಮ 8 ಕುರಿಗಳನ್ನು ಚಿರತೆ ಕೊಂದು ಹಾಕಿದೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೇ, ವಡ್ಡರದೊಡ್ಡಿ, ಮಾರದೇವನಹಳ್ಳಿ, ಹೊಸಹಳ್ಳಿ ದೊಡ್ಡಿ ಹಾಗೂ ಕೋಲೂರು ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು…

Read More

ಬೆಂಗಳೂರು: ಕ್ವಿನ್ ಸಿಟಿ  ಮೂಲಕ ಕೇವಲ ಕಟ್ಟಡಗಳನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಲ್ಲ. ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ  ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. https://youtu.be/vuxV4iUrkSc?si=J95mD5P-FeAvsc-N ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ದಿನದಿಂದಲೂ ಬೆಂಗಳೂರು ಬೌದ್ಧಿಕ ನಗರ ಎಂದು ಹೆಸರು ಮಾಡಿದೆ. ಈ ನಗರದ ಅಭಿವೃದ್ಧಿಗೆ ನೆಹರು ಸಾಕಷ್ಟು ಶಕ್ತಿ ಕೊಟ್ಟಿದ್ದಾರೆ. ನಾವೆಲ್ಲರೂ ಸೇರಿ ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ ಎಂದರು. ಕರ್ನಾಟಕದ ಸಾಮರ್ಥ್ಯದ ಬಗ್ಗೆ ಕಿಂಚಿತ್ತೂ ಅನುಮಾನ ಬೇಡ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ಈ ನಗರದ ಅಭಿವೃದ್ಧಿಗೆ ನಾನು ಕಟಿಬದ್ಧನಾಗಿದ್ದೇನೆ. ನೀರು, ವಿದ್ಯುತ್, ರಸ್ತೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯವನ್ನು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಅಗಾಧ ಮಾನವ ಸಂಪನ್ಮೂಲವನ್ನು ಕರ್ನಾಟಕ ಹೊಂದಿದೆ. ಆರೋಗ್ಯ…

Read More

ಕೋಲಾರ: ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ. ಕಿಡ್ನಿ ಸ್ಟೋನ್ ಕಾರಣ ಯುವತಿ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆಯನ್ನು ಗುರುವಾರ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ವೈದ್ಯರು ಸಂಜೆ 5 ಗಂಟೆ ಸುಮಾರಿನಲ್ಲಿ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯ ವೈದ್ಯರ ವಿರುದ್ಧ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣ ಎಂದಿದ್ದಾರೆ. ಜೊತೆಗೆ ವೈದ್ಯರು ನೀಡಿದ್ದ ಅನಸ್ತೇಶಿಯಾ ಡೋಸ್ (Anesthesia dose) ಹೆಚ್ಚಾಗಿ ಮೃತಪಟ್ಟಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು:- ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. https://youtu.be/mdT_vnnaM9k?si=EaXZR-8Y9LvGc35X ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸೇಫ್ ಅಲ್ಲ ಎಂದು ವರದಿ ನೀಡಿದೆ. ಎಲ್ಲಿಯ ತುಪ್ಪ ಸೇಫ್‌ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಿಕೊಳ್ಳಲು ಇಲಾಖೆ ಸೂಚಿಸಿದೆ. ಈ ಬಗ್ಗೆ ಮೈಸೂರಿನ ಲ್ಯಾಬ್‍ನಲ್ಲಿ ಖಚಿತತೆಯ ಪರೀಕ್ಷೆ ನಡೆಯುತ್ತಿದೆ. ದೇಶಾದ್ಯಂತ ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾಗಿದೆ ಎನ್ನಲಾದ ಕಲಬೆರಕೆ ತುಪ್ಪ ವಿವಾದ ಸೃಷ್ಟಿಸಿದೆ. ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿದೆ. ಈ…

Read More

ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ಅವರು ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರು PARAM ರುದ್ರ ಸೂಪರ್‌ ಕಂಪ್ಯೂಟರ್‌’ಗಳಿಗೆ ಚಾಲನೆ ನೀಡಿದ್ದಾರೆ. ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ ಅಡಿಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗಾಗಿ ಅಭಿವೃದ್ಧಿಪಡಿಸಲಾಗಿದೆ. 130 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಸೂಪರ್‌ಕಂಪ್ಯೂಟರ್‌ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ನಿಯೋಜಿಸಲಾಗಿದೆ. ಪುಣೆಯಲ್ಲಿರುವ ದೈತ್ಯ ಮೀಟರ್ ರೇಡಿಯೋ ಟೆಲಿಸ್ಕೋಪ್ (GMRT) Fast Radio Bursts (FRBs) ನಂತಹ ಖಗೋಳ ವಿದ್ಯಮಾನಗಳನ್ನು ಅನ್ವೇಷಿಸಲು ಇದನ್ನು ಬಳಕೆ ಮಾಡಲಿದೆ. ದೆಹಲಿಯ Inter-University Accelerator Centre ನಲ್ಲಿ ವಸ್ತು ವಿಜ್ಞಾನ ಮತ್ತು ಪರಮಾಣು ಭೌತಶಾಸ್ತ್ರದಲ್ಲಿ ಸಂಶೋಧನೆಗೆ ಬಳಕೆಯಾಗಲಿದೆ. ಕೋಲ್ಕತ್ತಾದ ಎಸ್‌ಎನ್‌ ಭೋಸ್‌ ಕೇಂದ್ರದಲ್ಲಿ ಭೌತಶಾಸ್ತ್ರ, ಕಾಸ್ಮೋಲಜಿ, ಭೂ ವಿಜ್ಞಾನದಂತಹ ಕ್ಷೇತ್ರಗಳಲ್ಲಿ ಮುಂದುವರಿದ ಸಂಶೋಧನೆಗೆ ಬಳಸಲಾಗುತ್ತದೆ. ಪುಣೆಯಲ್ಲಿರುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನಿಂದ ವಿನ್ಯಾಸಗೊಳಿಸಲ್ಪಟ್ಟ ಮತ್ತು ಜೋಡಿಸಲಾದ ಭಾರತೀಯ ಸೂಪರ್ ಕಂಪ್ಯೂಟರ್‌ಗಳ ಸರಣಿಯನ್ನು PARAM ಎಂಬ ಹೆಸರಿನಿಂದ ಕರೆಯಲಾಗುತ್ತದೆ.

Read More

ರಾಕಿಂಗ್ ಸ್ಟಾರ್ ಯಶ್ ಸದ್ಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಯಶ್ ಶೂಟಿಂಗ್ ನಲ್ಲಿ ಎಷ್ಟೇ ಬ್ಯುಸಿಯಾಗಿದ್ದರು ಕುಟುಂಬಕ್ಕೆ ಸಾಕಷ್ಟು ಸಮಯ ನೀಡುತ್ತಾರೆ. ಇತ್ತೀಚೆಗೆ ಯಶ್ ಪತ್ನಿ ರಾಧಿಕಾ ಜೊತೆ ಮುಂಬೈನ ರೆಸ್ಟೋರೆಂಟ್ ​ನಲ್ಲಿ ಕಾಣಿಸಿಕೊಂಡಿದ್ದಾರೆ.ರಾತ್ರಿ ಊಟ ಮಾಡಿ ಹೊರ ಬರುವ ವೇಳೆ ಫೋಟೋ ಮತ್ತು ವಿಡಿಯೋ ತೆಗೆಯುವ ಸಲುವಾಗಿ ಪಾಪರಾಜಿಗಳು ಮುಗಿಬಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳ ಯಶಸ್ಸಿನ ಬಳಿಕ ಯಶ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸ್ಟಾರ್​ ಆದರು. ಮುಂಬೈ ಮಂದಿಗೂ ಅವರು ಫೇವರಿಟ್​ ಆಗಿದ್ದಾರೆ. ಯಶ್​ ಎಲ್ಲಿಯೇ ಕಂಡರೂ ಕೂಡ ಅಭಿಮಾನಿಗಳು ರಾಕಿ ಭಾಯ್ ಎಂದು ಕೂಗುತ್ತಾರೆ. ಮುಂಬೈನಲ್ಲಿ ಪಾಪರಾಜಿಗಳು ಕೂಡ ರಾಕಿ ಭಾಯ್​, ಅಣ್ಣ ಎಂದು ಕರೆದಿದ್ದಾರೆ. ಇನ್ನೂ ಯಶ್ ಪತ್ನಿ ರಾಧಿಕಾ ಪಂಡಿತ್ ಸದ್ಯ ನಟನೆಯಿಂದ ದೂರ ಉಳಿದಿದ್ದಾರೆ. ಪತಿಯ ವೃತ್ತಿ ಜೀವನಕ್ಕೆ ಅವರು ಬೆಂಬಲವಾಗಿ ನಿಂತಿದ್ದಾರೆ. ‘ಟಾಕ್ಸಿಕ್​’ ಸಿನಿಮಾದ…

Read More

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನಗಲಿ ಕೆಲ ವರ್ಷಗಳೆ ಕಳೆದಿದೆ. ಆದರೆ ಅವರು ಮಾಡಿದ ಸೇವೆ, ಜನಗಳಿಗೆ ನೀಡುತ್ತಿದ್ದ ಪ್ರೀತಿಯ ಮೂಲಕ ಇಂದಿಗೂ ಪ್ರತಿಯೊಬ್ಬರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಇದೀಗ ಹಾವೇರಿ ಜಿಲ್ಲೆಯ ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿಯೊಬ್ಬರ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದು ಇದನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಸಿದರು. ಯಲಗಚ್ಚ ಗ್ರಾಮದ ಉಡಚ್ಚಮ್ಮ ದೇವಿಯ ದರ್ಶನ ಪಡೆದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಂಬಮೇಳದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು 6 ಅಡಿ ಎತ್ತರದ ಅಪ್ಪು ಮೂರ್ತಿಯನ್ನು ಲೋಕಾರ್ಪಣೆ ಮಾಡಿದರು. ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ದೇವಸ್ಥಾನ ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜಕುಮಾರ್ ಮೂರ್ತಿ ಅನಾವರಣ ಮಾಡಿ, ಪ್ರಕಾಶ ಪುತ್ರಿಗೆ ಅಪೇಕ್ಷಾ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಸೇರೆವಾಸ ಅನುಭವಿಸುತ್ತಿರುವ ದರ್ಶನ್ ಗೆ ಸಂಕಷ್ಟಗಳ ಸರ ಮಾಲೆಯೇ ಎದುರಾಗಿದೆ. ಜಾಮೀನಿಗೆ ಅರ್ಜಿ ಸಲ್ಲಿಸಿ ಜೈಲಿನಿಂದ ಹೊರ ಬರಲು ಎದುರು ನೋಡುತ್ತಿರುವ ದಾಸನಿಗೆ ಐಟಿ ಅಧಿಕಾರಿಗಳು ಸಖತ್ ಡ್ರಿಲ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲೇ ಸುಮಾರು 7 ಗಂಟೆ ಕಾಲ ದರ್ಶನ್ ಗೆ ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಆದ ಬಳಿಕ ಮನೆಯಲ್ಲಿ ಅಷ್ಟೊಂದು ಹಣ ಹೇಗೆ ಬಂತು? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ತಂದುಕೊಟ್ಟಿದ್ಯಾರು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಐಟಿ ಅಧಿಕಾರಿಗಳು ದರ್ಶನ್‌ಗೆ ಕೇಳಿದ್ದಾರೆ. ಐಟಿ ಅಧಿಕಾರಿಗಳು ದರ್ಶನ್‌ ಅವರನ್ನು ವಿಚಾರಣೆ ಒಳಪಡಿಸುತ್ತಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಪರ ಅಡಿಟರ್ ಎಂ ಎಸ್ ರಾವ್ ಮತ್ತು ಅಸಿಸ್ಟೆಂಟ್ ಅರುಣ್…

Read More

ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿ ಇಲ್ಲ. ಐಶ್ವರ್ಯಾ ರೈ ಹಾಗೂ ಅವರ ಮಾವ ಅಮಿತಾಭ್ ಬಚ್ಚನ್ ಮಧ್ಯೆ ಸರಿ ಇಲ್ಲ ಎನ್ನುವ ಮಾತು ಕೇಳಿ ಬಂದಿದೆ. ಐಶ್ವರ್ಯಾ ಹಾಗೂ ಅಮಿತಾಭ್ ಮಧ್ಯೆ ಏನೋ ಕಿರಿಕ್ ಆಗಿದೆ. ಅಮಿತಾಭ್ ಅವರು ಮಗಳು ಶ್ವೇತಾ, ಮಗ ಅಭಿಷೇಕ್, ಮೊಮ್ಮೊಗಳು ನವ್ಯಾ ಬಗ್ಗೆ ಪೋಸ್ಟ್ ಹಾಗು ಕಮೆಂಟ್ ಮಾಡುತ್ತಾರೆ. ಆದರೆ ಐಶ್ವರ್ಯಾ ಅವರನ್ನು ಕಂಡರೆ ಅವರಿಗೆ ಅಷ್ಟಕ್ಕಷ್ಟೆ. ಉದ್ದೇಶ ಪೂರ್ವಕವಾಗಿ ಅವರು ಐಶ್ವರ್ಯಾನ ದೂರವಿಡುತ್ತಿರುವಂತೆ ಕಂಡು ಬರುತ್ತಿದೆ ಎನ್ನಲಾಗುತ್ತಿದೆ. ಐಶ್ವರ್ಯಾ ಹಾಗೂ ಅಮಿತಾಭ್ ಮಧ್ಯೆ ಯಾವುದೂ ಸರಿ ಇಲ್ಲ. ಜೊತೆಗೆ ಜಯ ಬಚ್ಚನ್ ಗೆ ಸೊಸೆಯನ್ನು ಕಂಡರೆ ಅಷ್ಟಕಷ್ಟೇ  ಎನ್ನಲಾಗಿದೆ. ಈ ಎಲ್ಲಾ ಕಾರಣದಿಂದಲೇ ಐಶ್ವರ್ಯಾ ಹಾಗೂ ಪತಿ ಅಭಿಷೇಕ್ ಇಂದ ದೂರ ಆಗುವ ಪ್ರಯತ್ನದಲ್ಲಿ ಇದ್ದಾರೆ. ಇತ್ತೀಚೆಗೆ ‘ಜಾಗರೂಕ್ ಜನತಾ’ ಹೆಸರಿನ ಇನ್ಸ್ಟಾಗ್ರಾಮ್ ಖಾತೆ ಮೂಲಕ ಮಹಿಳೆಯೊಬ್ಬರು ವಿಡಿಯೋ ಪೋಸ್ಟ್ ಮಾಡಿದ್ದರು. ಇದರಲ್ಲಿ ಅವರು ಐಶ್ವರ್ಯಾನ ನಿರ್ಲಕ್ಷಿಸಿದ ಅಮಿತಾಭ್ ಅವರನ್ನು…

Read More