ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದ ಮಸಣವ್ವ ದೇವಸ್ಥಾನದ ಹಿಂಭಾಗದಲ್ಲಿ ಇರುವ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರ ಜೊತೆ ಮಸಣವ್ವ ದೇವಸ್ಥಾನದಲ್ಲಿ ಬೆಳ್ಳಿ ಆಭರಣಗಳೂ ಸಹ ಕಳ್ಳತನವಾಗಿದ್ದು, ದೇವಸ್ಥಾನದಲ್ಲಿ ಆಭರಣ ಕಳ್ಳತನ ಮಾಡಿದ ಕಳ್ಳರೇ ಮಹಿಳೆಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾರೆಂದು ಮಹಿಳೆಯ ಪೋಷಕರು ಆರೋಪ ಮಾಡಿದ್ದಾರೆ. https://youtu.be/jVnSn759oI8?si=IqJUrEGGcrQgQp9d ಶಿಂದೊಳ್ಳಿ ಗ್ರಾಮದ 48 ವರ್ಷದ ಭಾರತಿ ಪೂಜಾರಿ ಮೃತ ಮಹಿಳೆಯಾಗಿದ್ದು ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತನ್ನ ಮನೆಯ ದನಕರಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಮಹಿಳೆ ತೆರಳಿದ್ದಳಂತೆ. ಈ ವೇಳೆ ಮನೆಯ ಪಕ್ಕದಲ್ಲಿಯೇ ಇದ್ದ ಮಸಣವ್ವ ದೇಗುಲದಲ್ಲಿನ ಬೆಳ್ಳಿಯ ಆಭರಣ ಕಳ್ಳತನ ಮಾಡುತ್ತಿದ್ದರಂತೆ. ಸಗಣಿ ಎಸೆದು ಮನೆಗೆ ಬರುವಾಗ ದೇಗುಲ ಕಳ್ಳತನ ಮಾಡ್ತಿದ್ದ ಕಳ್ಳರನ್ನು ಭಾರತಿ ನೋಡಿದ್ದು, ಆಗ ಭಾರತಿಯನ್ನು ಹೊತ್ತೊಯ್ದು ದೇಗಲದ ಹಿಂದಿದ್ದ ಬಾವಿಗೆ ಕಳ್ಳರು ಎಸೆದು ಪರಾರಿಯಾಗಿದ್ದಾರೆ ಎಂದು ಮೃತ ಭಾರತಿ ಪೋಷಕರು ಆರೋಪಿಸಿದ್ದಾರೆ. ಇಂದು ಬೆಳಗಿನ ಜಾವ ಭಾರತಿ ಮನೆಗೆ…
Author: Prajatv Kannada
ವಿಶ್ವದಲ್ಲೇ ಅತ್ಯಂತ ಭಯಂಕರವಾದ “ಕಾಯಿಲೆ” ಯಾವುದು..? ಟೈಪಾಯ್ಡ್ ಏಡ್ಸ್ ಕ್ಯಾನ್ಸರ್ ರಿಕೆಟ್ಸ್
ಯೂಟ್ಯೂಬರ್ ಹರ್ಷ ಸಾಯಿ ಹಣ ಪಡೆದು ವಂಚಿಸಿದ್ದಾರೆ ಎಂಬ ಬಿಗ್ ಬಾಸ್ ಸ್ಪರ್ಧಿಯ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣದ ಸುದ್ದಿ ತಿಳಿದ ತಕ್ಷಣ ಹರ್ಷಸಾಯಿ ಮತ್ತು ಅವರ ಕುಟುಂಬಸ್ಥರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ https://youtu.be/sb-_C_R1USA?si=ynPs8TMiZUNbE0P_ ಬಡವರಿಗೆ ಹಣ ಹಂಚುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ನೆಟ್ಟಿಗರ ಮನಸೆಳೆದಿರುವ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಯುವತಿಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಆದರೆ ಹರ್ಷಾ ಯುವತಿಯ ಆರೋಪಗಳನ್ನು ನಿರಾಕರಿಸಿದ್ದಾರೆ. ಆ ಯುವತಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೆಲ್ಲವೂ ಆಧಾರ ರಹಿತ ಆರೋಪವನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆಬಿಗ್ ಬಾಸ್ ಖ್ಯಾತಿಯ ಮಿತ್ರ ಶರ್ಮಾ ಅವರು ಹರ್ಷಸಾಯಿ ಮದುವೆಯಾಗುವುದಾಗಿ ನಂಬಿಸಿ 2 ಕೋಟಿ ರೂ. ವಂಚಿಸಿದ್ದಾರೆ ಎಂದು ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದಲ್ಲಿರುವ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹರ್ಷಾ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು…
ಮೈಸೂರು: ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು ವಾಹನ ನಿಲುಗಡೆ ಸ್ಥಳದಲ್ಲಿ ನಡೆಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು. https://youtu.be/EeD3ISvvtc0?si=miRdGy3fVNxcn8Yf ಮೈಸೂರು ದಸರಾದ ಆಕರ್ಷಣೆಯ ವಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತುಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು. ಮೈಸೂರು ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳಿಗೆ ಸ್ವಾಗತವನ್ನು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಮಾಡಲಾಯಿತು.
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ https://youtu.be/Er_TuuzjseI?si=r1Icqjxi1xs0rttn ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ ಮಾಡಬೇಕು ಎಂದರು. ಪ್ರಿಯಾಂಕ ಖರ್ಗೆ ಅವರು ಬಿಜೆಪಿಯವರು ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಂವಿಧಾನ ಎನ್ನುವುದು ಪ್ರಿಯಾಂಕ ಖರ್ಗೆ ಅವರಿಗೆ ಒಬ್ಬರಿಗೆ ಮಾತ್ರವಲ್ಲ. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿದ್ದಾರೆ. ಹೀಗಾಗಿ ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ಅವರ ಸಂವಿಧಾನದ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು. ಸಿದ್ದರಾಮಯ್ಯ ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರ ಜೊತೆಗೆ ಕೆಲಸ ಮಾಡಿದ್ದೇನೆ. ಅವರ ವಿರುದ್ಧ ಚುನಾವಣೆ ಎದುರಿಸಿದ್ದೇನೆ. ಹೀಗಾಗಿ ಅವರ ಬಗ್ಗೆ ಬಲ್ಲವನಾಗಿದ್ದೇನೆ. ಸಿದ್ದರಾಮಯ್ಯ ಅವರು ಕಾನೂನನ್ನು ಗೌರವಿಸುತ್ತಾರೆ. ಅವರೇ ಪದೇ ಪದೇ ತಮ್ಮ…
ಬಾಗಲಕೋಟೆ: ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ವಿರುದ್ಧಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು. https://youtu.be/Er_TuuzjseI?si=RsHSi5mqsK2WXK7E ಕೇಂದ್ರ ಬಿಜೆಪಿ, ರಾಜ್ಯ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಅಧ್ಯಕ್ಷ ಎಸ್ ಜಿ ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ಆರೋಪಿಗಳಿಂದ ಅಂದಾಜು 85 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಈಗ ವಿಚಾರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬೆಂಗಳೂರಿನಿಂದ ಬಂದ ದರ್ಶನ್ ಪರ ಆಡಿಟರ್ ಆಗಮಿಸಿದ್ದಾರೆ. https://youtu.be/a1wFITgchwA?si=wWqjTAAQDdtbKI1p ಐಟಿ ಅಧಿಕಾರಿಗಳಿಗಾಗಿ ಕಾಯುತ್ತಿರುವ ದರ್ಶನ್ ಪರ ಆಡಿಟರ್, ಐಟಿ ಅಧಿಕಾರಿಗಳಿಗೆ ಬೇಕಾದ ದಾಖಲಾತಿ ಮತ್ತು ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಆರೋಪಿ ವ್ಯವಹಾರದ ಸಂಪೂರ್ಣ ಮಾಹಿತಿ ಸಮೇತ ಆಗಮಿಸಿರುವ ಆಡಿಟರ್ ಬಳ್ಳಾರಿ ಸೆಂಟ್ರಲ್ ಜೈಲ್ ನಲ್ಲಿ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. https://youtu.be/EeD3ISvvtc0?si=xKFaSbWGZKv8FP0t ಇನ್ನೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್‌ಐಆರ್ ದಾಖಲಾಗಬೇಕು. ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು. ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಹಿ ಕೃಷ್ಣ ಮೈಸೂರಿನಲ್ಲಿ ಹೇಳಿದ್ದಾರೆ. ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹೀಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಇವತ್ತು ಅಥವಾ ನಾಳೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ. ಸಿಎಂ ಮೇಲಿನ ಮುಡಾ ಕೇಸ್‌ನಲ್ಲಿ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ, ವಿಚಾರಣೆ ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕುವುದಾಗಿ ತಿಳಿಸಿದ್ದಾರೆ
ಹುಬ್ಬಳ್ಳಿ: ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರಿಗೆ ತಮ್ಮದೇ ಆದ ಮಹತ್ವ ಹೆಜ್ಜೆ ಗುರುತು ಇದ್ದು ಅವರಿಗೆ ಒಂದು ಒಳ್ಳೆಯ ನೈತಿಕತೆ ಸಹ ಇದೆ ಆದ್ದರಿಂದ ಆ ನೈತಿಕತೆ ಇದ್ದರೆ ಕೂಡಲೇ ಅವರು ಮೈಸೂರು ನಗರಾಭಿವೃದ್ಧಿ ಇಲಾಖೆ( ಮುಡಾ) ದಲ್ಲಿ ಸೈಟ್ ಹಂಚಿಕೆಯಲ್ಲಿ ಆದ ಹಗರಣದಲ್ಲಿ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. https://youtu.be/KXuR60xTbo0?si=MikBcelMiMeYY6kv ನಗರದಲ್ಲಿಂದು ಅವರು ಸುದ್ದಿಗಾರರ ಮಾತನಾಡಿದರು. ಅವರು ರಾಜೀನಾಮೆ ಕೊಟ್ಟಿಲ್ಲ ಇವರು ಕೊಟ್ಟಿಲ್ಲ ಅಂತಾ ಹೇಳಿದರೆ ಅವರ ಸಾಲಿಗೆ ಇವರು ಸಹ ಸೇರಬೇಕಾಗುತ್ತದೆ ಎಂದ ಅವರು ಯಾವತ್ತು ಅವರ ಮೇಲೆ ಆರೋಪ ಬಂತು ದೂರು ಕೊಡಲಾಯಿತು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲಾಯಿತು ಸೇಷೇನ್ ಕೋರ್ಟ್ ಹಾಗೂ ಹೈಕೋರ್ಟ್ ಅನುಮತಿ ಕೊಟ್ಟಿತು ಇದು ಇನ್ನಷ್ಟು ಬಿಗಿಗೊಳಿತು ಏನಾದರೂ ಬೆಳವಣಿಗೆ ಆಗುವ ಮುನ್ನ ಅಥವಾ ಅವರು ಹೋರಾಟ ಮಾಡುವುದಾದರೆ ಮೊದಲು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ತನಿಖೆ ಎದರುಸಬೇಕು ಎಂದು…