ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಪ್ರತಿಕ್ರಿಯೆ ನೀಡಿದ್ದಾರೆ https://youtu.be/Z_d3qhnfw6c?si=ntq5sPmrXepvsI7J ಬೆಂಗಳೂರಲ್ಲಿ ಮಾತನಾಡಿದ ಅವರು, ಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷದಲ್ಲೇ ಒತ್ತಡ ಕಳಂಕ ರಹಿತ ವ್ಯಕ್ತಿತ್ವ ಇದ್ರೂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಹಾಗೆ ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸ್ಪೀಕರ್ ಕೋಳಿವಾಡ ಆಗ್ರಹ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ತನಿಖೆ ಎದುರಿಸಿ ನಿಷ್ಕಳಂಕವಾಗಿ ಹೊರಬರಲಿ ತನಿಖೆ ಬಳಿಕ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲಿ ಹಾಗೆ ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಷ್ಟೇ ಕಳಂಕ ರಹಿತವಾದ್ರೂ ಪಕ್ಷದ ದೃಷ್ಟಿಯಿಂದ ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ಪಕ್ಷದ 135 ಶಾಸಕರೂ ಇದ್ದಾರೆ ಪಕ್ಷದ ದೃಷ್ಟಿಯಿಂದ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ ಬೇರೆ ಬೇರೆ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ ಬಿಜೆಪಿಯವರು ಕಾಂಗ್ರೆಸ್ಸಿಗೆ ಮುಜುಗರ ಉಂಟು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷಕ್ಕೆ…
Author: Prajatv Kannada
ಸಾಮಾಜಿಕ ಮಾಧ್ಯಮದಲ್ಲಿ ಸರಕಾರವನ್ನು ಟೀಕಿಸಿದ ನಿವೃತ್ತ ಶಿಕ್ಷಕನಿಗೆ ಸೌದಿ ಅರೆಬಿಯಾದ ನ್ಯಾಯಾಲಯ 30 ವರ್ಷ ಜೈಲುಶಿಕ್ಷೆ ವಿಧಿಸಿದೆ. ಆರೋಪಿ ಮುಹಮ್ಮದ್ ಅಲ್-ಘಮ್ಡಿಯನ್ನು 2022ರ ಜೂನ್‍ನಲ್ಲಿ ಬಂಧಿಸಲಾಗಿದ್ದು ಸೌದಿ ನಾಯಕತ್ವದ ವಿರುದ್ಧ ಪಿತೂರಿ, ಸರಕಾರಿ ಸಂಸ್ಥೆಗಳನ್ನು ದುರ್ಬಲಗೊಳಿಸುವುದು ಮತ್ತು ಭಯೋತ್ಪಾದಕ ಸಿದ್ಧಾಂತಕ್ಕೆ ಬೆಂಬಲ ಇತ್ಯಾದಿ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. 2023ರ ಜುಲೈಯಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದ್ದು ಶಿಕ್ಷೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. 2023ರ ಸೆಪ್ಟಂಬರ್‍ನಲ್ಲಿ ಮಾಧ್ಯಮದವರ ಜತೆ ಮಾತನಾಡಿದ್ದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್, ನ್ಯಾಯಾಲಯ ಶಿಕ್ಷೆಯನ್ನು ಬದಲಾಯಿಸುವ ನಿರೀಕ್ಷೆಯಿದೆ ಎಂದಿದ್ದರು. ಬಳಿಕ ಆರೋಪಿ ಮರಣದಂಡನೆ ಶಿಕ್ಷೆಯ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಆಗಸ್ಟ್‍ನಲ್ಲಿ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿ 30 ವರ್ಷದ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಎಂದು ಆರೋಪಿಯ ಸಹೋದರನನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬೆಂಗಳೂರು: ತುಮಕೂರು- ಯಶವಂತಪುರ ಮೆಮು ರೈಲು ಸಂಚಾರಕ್ಕೆ ಸೆ. 27ರಂದು ಬೆಳಿಗ್ಗೆ 8 ಗಂಟೆಗೆ ನಗರದ ರೈಲು ನಿಲ್ದಾಣದಲ್ಲಿ ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. https://youtu.be/UXpb52NF6NY?si=ZUunjPdtEUJJefOF ನಗರದಿಂದ ಬೆಳಿಗ್ಗೆ 8:45ಕ್ಕೆ ಹೊರಟು 10:25 ಗಂಟೆಗೆ ಯಶವಂತಪುರ ತಲುಪಲಿದೆ. ಅಲ್ಲಿಂದ ಸಂಜೆ 5:45ಕ್ಕೆ ಹೊರಡುವ ರೈಲು ರಾತ್ರಿ 7:05 ಗಂಟೆಗೆ ತುಮಕೂರು ಪ್ರವೇಶಿಸಲಿದೆ. ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನ ರೈಲು ಪ್ರಯಾಣಿಕರ ಇದರ ಪ್ರಯೋಜನ ಪಡೆಯಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮೆಮು ರೈಲು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಕೊನೆಗೂ ಸಂಚಾರ ಆರಂಭವಾಗುತ್ತಿದೆ. ಸೋಮಣ್ಣ ಕೇಂದ್ರ ಸಚಿವರಾದ ನಂತರ ಜಿಲ್ಲೆಯ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡಿದ್ದಾರೆ. 500 ಕೋಟಿ ರೂ.ಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ರೈಲ್ವೆ ಕೆಳ ಸೇತುವೆ, ಮೇಲ್ಸೇತುವೆ ನಿರ್ಮಾಣ ಕಾರ್ಯವೂ ಶುರುವಾಗಿದೆ ಎಂದು ಮಾಹಿತಿ ನೀಡಿದರು.
ಥಾಯ್ಲೆಂಡ್‌ನಲ್ಲಿ ವಿವಾಹ ಸಮಾನತೆಯ ಮಸೂದೆಗೆ ಅಂಗೀಕಾರ ನೀಡಲಾಗಿದೆ. ಈ ಮೂಲಕ ಸಲಿಂಗ ವಿವಾಹ ಕಾನೂನುಬದ್ಧಗೊಂಡಿದೆ. ಇಲ್ಲಿನ ದೊರೆ ಮಹಾ ವಾಜಿರಾಲೊಂಗ್‌ಕೊರ್ನ್ ಅನುಮೋದನೆ ಬಳಿಕ ಈ ಕಾನೂನನ್ನು ರಾಯಲ್ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದ್ದು, ಮುಂದಿನ 120 ದಿನಗಳಲ್ಲಿ ಇದು ಜಾರಿಗೆ ಬರಲಿದೆ. ಮುಂದಿನ ಜನವರಿಯಿಂದ ಸಲಿಂಗ ದಂಪತಿ ತಮ್ಮ ವಿವಾಹ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು: ಮುಡಾ ಪ್ರಕರಣ ಬಗ್ಗೆ ಇಡೀ ದೇಶ ಮಾತನಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಕೊಡ್ತೀವಿ ಅಂತ ಅಧಿಕಾರಕ್ಕೆ ಬಂದು, ಒಂದೇ ವರ್ಷದಲ್ಲಿ ಇಷ್ಟೆಲ್ಲ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ಸಿಎಂ ಅಧಿಕಾರದಲ್ಲಿರುವಾಗ ಲೋಕಾಯುಕ್ತ ಪ್ರಾಮಾಣಿಕ ತನಿಖೆ ನಡೆಸಲು ಸಾಧ್ಯವೇ? https://youtu.be/KXuR60xTbo0?si=qNxEekn7gSdeysTJ ಆದ್ದರಿಂದ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಂದ ತನಿಖೆಗೆ ಆದೇಶ ನೀಡಿತು. ಈ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ. ಹೈಕೋರ್ಟ್‌ನಿಂದ ತೀರ್ಪು ಹೊರಬಂದಿದ್ದರೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ ಅಂದಿದ್ದಾರೆ. ಆರೋಪಗಳು ಬಂದಿದ್ದರೂ ಏಕೆ ರಾಜೀನಾಮೆ ಕೊಡಬೇಕು ಅಂದಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರ ಮೇಲೆ…
ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‍ನಲ್ಲಿ ತುಂಬಿ ಹೋಗಿದೆ. ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ ಎಂದು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗ್ಗೇಶ್, ಸಿದ್ದರಾಮಯ್ಯ ಮಾಡಿದ್ದು ತಪ್ಪು ಎಂದು ನ್ಯಾಯಾಲಯ ಕೂಡ ಹೇಳಿದೆ. ಆದರೂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮುಡಾ ಹಗರಣ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಘನವಾದ ಹೆಸರು ತಂದುಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾವು ಹಿಡಿದಿದ್ದ ಸಂವಿಧಾನಕ್ಕೆ ಎಷ್ಟು ಪುಟ ಇದೆ ಎಂದು ಹೇಳಲು ಆಗಲಿಲ್ಲ. ಅಂತಹವರನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ. ಅಂತಹ ನಾಯಕನ ಕೆಳಗೆ ಇರುವ ಸಿದ್ದರಾಮಯ್ಯ ಘನವಾದ ಕೆಲಸ ಮಾಡಿದ್ದಾರೆ. ರಾಜ್ಯದ ಮಾನ ಮರ್ಯಾದೆ ಈಗಾಗಲೆ ಹರಾಜಾಗಿದೆ. ರಾಜೀನಾಮೆ ಕೊಡಿ, ನಿರ್ದೋಷಿಯಾಗಿ ಹೊರಗೆ ಬನ್ನಿ ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಪಟ್ಟಿದ್ದ ತಮಿಳುನಾಡು ಮಾಜಿ ಸಚಿವ ವಿ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾ.ಎಎಸ್ ಓಕಾ ಮತ್ತು ಎಜಿ ಮಸಿಹ್ ಅವರನ್ನೊಳಗೊಂಡ ಪೀಠವು ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 28 ರಂದು ಮದ್ರಾಸ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ನಂತರ ಸೆಂಥಿಲ್ ಬಾಲಾಜಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇ.ಡಿ ಪರವಾಗಿ ಮತ್ತು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಿದ್ಧಾರ್ಥ್ ಲೂತ್ರಾ ಸೆಂಥಿಲ್ ಬಾಲಾಜೀ ಪರ ವಾದ ಮಂಡಿಸಿದ್ದರು. ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಆಗಸ್ಟ್ 12ರಂದು ಕಾಯ್ದಿರಿಸಿತ್ತು. ಬಾಲಾಜಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್, ಈ ರೀತಿಯ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ತಪ್ಪು ಸಂಕೇತವನ್ನು ನೀಡುತ್ತದೆ. ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿರುತ್ತದೆ. ಅರ್ಜಿದಾರರು ಎಂಟು ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿರುವುದರಿಂದ ಕಾಲಮಿತಿಯೊಳಗೆ ಪ್ರಕರಣವನ್ನು ವಿಲೇವಾರಿ…
ಬೆಂಗಳೂರು: ಮೂಡಾ ಹಗರಣದಿಂದಾಗಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಒದಗಿದ್ದು ಸಿದ್ದರಾಮಯ್ಯ ಮುಂದಿನ ನಡೆ ಏನು ಇಂದು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿರುವ ಸಿಎಂ ಸಿದ್ದರಾಮಯ್ಯ. ಹೌದು .. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಿದ್ದತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ. ಹೈಕೋರ್ಟ್ ತಡೆಯಾಜ್ಞೆ ನೀಡಿದರ ಸಿದ್ಧರಾಮಯ್ಯಗೆ ತನಿಖೆಯಿಂದ ರಿಲೀಫ್ ಸಿಕ್ಕಂತಾಗಲಿದೆ.ಇನ್ನು ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಎತ್ತಿ ಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಇದನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ಧತೆ ರಾಜ್ಯಪಾಲರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದರೂ ಸಿದ್ದರಾಮಯ್ಯಗೆ ರಿಲೀಫ್ ಒಂದು ವೇಳೆ ರಿಲೀಫ್ ಸಿಗದಿದ್ದರೆ ತಕ್ಷಣ ಸುಪ್ರೀಂಕೋರ್ಟ್ ಮೆಟ್ಟಿಲೇರಲೂ ಸಿಎಂ ಪರ ವಕೀಲರು ಸಿದ್ಧತೆ ಸಿದ್ದರಾಮಯ್ಯ ಹಾಗೂ ಅವರ…
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಆರೋಪ ಕೇಳಿ ಬಂದಿದ್ದು ಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ದೂರು ದಾಖಲಾಗಿದೆ. ಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರು ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಭಾಸ್ಕರ್ ಪ್ರಸಾದ್ ಅವರು ದೂರು ದಾಖಲಿಸಿದ್ದಾರೆ. 2 ವರ್ಷಗಳ ಹಿಂದೆ ಹೋರಾಟ, ಪ್ರತಿಭಟನೆಗಳಲ್ಲಿ ಪರಿಚಯವಾದ ಪವಿತ್ರಾ ಹಾಗೂ ಸಂಧ್ಯಾ ಎಂಬ ಇಬ್ಬರು ಯುವತಿಯರು ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಭಾಸ್ಕರ್ ಅವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಳೆದ ಆಗಸ್ಟ್ 8 ರಂದು ವಾಟ್ಸಾಪ್ ನಲ್ಲಿ ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಲಾಗಿತ್ತುನಂತರ ಆ ವಾಟ್ಸಾಪ್ ಹಾಗೂ ವಿಡಿಯೋಗಳನ್ನ ಇಟ್ಕೊಂಡು ಮಾನಹರಣ ಮಾಡೋದಾಗಿ ಬೆದರಿಕೆ ಆರೋಪ.ನಂತರ ಸಾಮಾಜಿಕ ಜಾಲತಾಣದಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಭರದಿಂದ ಸಿದ್ದತೆ ಮಾಡಿಕೊಳ್ಳುತ್ತಿದೆ. ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುವ ಶರನ್ನವರಾತ್ರಿ ಹಬ್ಬಗಳಿಗೆ ಕ್ಷಣಗಣನೆ ಆರಂಭವಾಗಿದೆ. ಒಂಬತ್ತು ದಿನಗಳ ಕಾಲ ನಡೆಯುವ ಈ ಉತ್ಸವಗಳಲ್ಲಿ ಜಗನ್ಮಾತೆಯನ್ನು ಒಂಬತ್ತು ಅವತಾರಗಳಲ್ಲಿ ಪೂಜಿಸಲಾಗುತ್ತದೆ.ಈ ಒಂಬತ್ತು ದಿನಗಳಲ್ಲಿ, ತಾಯಿಯ ಒಂಬತ್ತು ವಿವಿಧ ರೂಪಗಳನ್ನು ಪೂಜಿಸಲಾಗುತ್ತದೆ. ಈ ಸಮಯದಲ್ಲಿ, ಜನರು ಉಪವಾಸ ಮಾಡುತ್ತಾರೆ, ಪೂಜೆ ಮಾಡುತ್ತಾರೆ. ಇದರಿಂದ ಅವರ ಜೀವನದ ಎಲ್ಲಾ ದುಃಖಗಳು ದೂರವಾಗುತ್ತವೆ. ಇದರೊಂದಿಗೆ, ಸಂತೋಷ ಮತ್ತು ಸಮೃದ್ಧಿಯು ಮನೆಯಲ್ಲಿ ಉಳಿಯುತ್ತದೆ. ಈ ಒಂಬತ್ತು ದಿನಗಳಲ್ಲಿ, ತಾಯಿ ತನ್ನ ಭಕ್ತರ ದುಃಖವನ್ನು ಹೋಗಲಾಡಿಸಲು ಭೂಮಿಗೆ ಬರುತ್ತಾಳೆ ಎಂದು ಹೇಳಲಾಗಿದೆ. ಆದ್ದರಿಂದ, ಈ ಒಂಬತ್ತು ದಿನಗಳಲ್ಲಿ, ತಾಯಿಯ ಪ್ರಕಾರ ಪೂಜೆಯನ್ನು ಮಾಡಲಾಗುತ್ತದೆ. ತುಳಸಿ ಗಿಡ ಕೆಲವು ಸಸ್ಯಗಳನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಅವುಗಳಲ್ಲಿ ತುಳಸಿ ಗಿಡವೂ ಒಂದು. ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ. ತುಳಸಿ ಗಿಡವನ್ನು ಪ್ರತೀ ಮನೆಯಲ್ಲೂ ಪೂಜಿಸಲಾಗುತ್ತದೆ. ಬದಲಾಗಿ, ತುಳಸಿ ಗಿಡವನ್ನು…