ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟವಾಗಿ ಕಾಣುವ ತರಕಾರಿಗಳು ಇನ್ನೊಂದು ಕಡೆ. ಈ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಎಲ್ಲರನ್ನೂ ಆಕರ್ಷಿಸುವ ಮತ್ತು ಆರೋಗ್ಯಕ್ಕೆ ಊಹೆಗೂ ಮೀರಿ ಒಳ್ಳೆಯ ಪ್ರಯೋಜನಗಳನ್ನು ಒದಗಿಸುವ ಎಲ್ಲರ ಮನ ಹಾಗೂ ಮನೆ ಮೆಚ್ಚಿನ ತರಕಾರಿ ಎಂದರೆ ಅದು ಕ್ಯಾರೆಟ್. ಇದು ಸವಿಯಲು ರುಚಿಕರವೂ ಹೌದು ಹಾಗೆ ಆರೋಗ್ಯಕರವೂ ಹೌದು. ಕ್ಯಾರೆಟ್ ತಿನ್ನುವುದರಿಂದ ಹಲವಾರು ಆಯಾಮಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಕ್ಯಾರೆಟ್‍ನಲ್ಲಿರುವ ಪೋಷಕಾಂಶಗಳು ಕ್ಯಾರೆಟಿನಲ್ಲಿ ಮಕ್ಕಳ ಬೆಳವಣಿಗೆಗೆ ಅಗತ್ಯ ಪೋಷಕಾಂಶವಾಗಿರುವ ಬೀಟಾ-ಕೆರೋಟಿನ್ ಇದೆ. ಅದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮಾತ್ರವಲ್ಲ ಅದರಲ್ಲಿ ಆಯಂಟಿ ಏಜಿಂಗ್ ಅಂಶಗಳು ಕೂಡ ಇವೆ. ಬೀಟಾ ಕೆರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ ಮತ್ತು ಇರುಳಿನ ದೃಷ್ಟಿ ಸಕ್ರಿಯಗೊಳ್ಳಲು ಅದು ಅತ್ಯಾವಶ್ಯಕ. ಕ್ಯಾರೆಟಿನಲ್ಲಿ ಥೈಮಿನ್, ನಿಯಾಸಿನ್ ಮತ್ತು ವಿಟಮಿನ್ ಬಿ6 ಇದೆ.• ಕ್ಯಾರೆಟ್‍ನಲ್ಲಿರುವ ಡಯೆಟರಿ ಫೈಬರ್, ಸಕ್ಕರೆ ರಕ್ತ ಪ್ರವಾಹಕ್ಕೆ ಹೀರಿಕೊಳ್ಳುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಕ್ಯಾರೆಟ್‍ನಲ್ಲಿ ವಿಟಮಿನ್ ಸಿ,…
Author: Prajatv Kannada
ಸೂರ್ಯೋದಯ: 06:09, ಸೂರ್ಯಾಸ್ತ : 06:05 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ನವಮಿ ನಕ್ಷತ್ರ: ಪುನರ್ವಸು, ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ರಾ .9:02 ನಿಂದ ರಾ .10:43 ತನಕ ಅಭಿಜಿತ್ ಮುಹುರ್ತ: ಬೆ.11:43 ನಿಂದ ಮ.12:31 ತನಕ ಮೇಷ ರಾಶಿ ಅಡುಗೆ ಗುತ್ತಿಗೆದಾರರಿಗೆ ಧನಲಾಭ, ಕುರಿ ಕೋಳಿ ಸಾಕಾಣಿಕೆ ಉದ್ಯಮದವರಿಗೆ ಆರ್ಥಿಕ ಚೇತರಿಕೆ,ಗಂಡು ಸಂತಾನ ಜನನ ಮನೆಯಲ್ಲಿ ಸಂತಸ ವಾತಾವರಣ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ವಾಹನ ಚಾಲನೆ ಜಾಗೃತಿ ವಹಿಸಿ,ಮೊದಲನೇ ಬಾರಿ ಗರ್ಭಿಣಿಯಾದ ಹೆಣ್ಣುಮಕ್ಕಳು ಎಚ್ಚರದಿಂದಿರಬೇಕು, ಇವರಿಗೆ ಕುಟುಂಬ ವರ್ಗದಿಂದ ಕಾಳಜಿ ಮಾಡುವುದು ಉತ್ತಮ, ವಿಶ್ರಾಂತಿ ಅವಶ್ಯಕವಾಗಿದೆ, ವಿಚ್ಛೇದನ ಪಡೆದ ಮತ್ತು ವಿಧವಾ ಎರಡನೇ ಮದುವೆ ಚರ್ಚೆ…
ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ವೃದ್ಧಾಪ್ಯವೇತನಕ್ಕಾಗಿ 70 ವರ್ಷದ ದಿವ್ಯಾಂಗ ಮಹಿಳೆಯೊಬ್ಬರು ತೆವಳುತ್ತಾ 2ಕಿ.ಮೀ ದೂರವಿರುವ ಪಂಚಾಯತ್ ಕಚೇರಿಗೆ ಬಂದ ಘಟನೆ ಜರುಗಿದೆ. ಪಥೂರಿ ದೆಹುರಿ ಎಂಬ ಹಿರಿಯ ಮಹಿಳೆ ಜೀವನೋಪಾಯಕ್ಕಾಗಿ ಪಿಂಚಣಿಯನ್ನೇ ಅವಲಂಬಿಸಿದ್ದಾರೆ ಮತ್ತು ಅವರ ಸಹಾಯಕ್ಕೆ ಯಾರೂ ಇಲ್ಲ. ಪಥೂರಿ ಅವರ ವಯಸ್ಸು ಮತ್ತು ಹಿಂದಿನ ಅಪಘಾತದಿಂದ ನಡೆಯಲು ಸಾಧ್ಯವಿಲ್ಲ. ಸರ್ಕಾರವು ಫಲಾನುಭವಿಗಳ ಬಾಗಿಲಿಗೇ ಕಲ್ಯಾಣ ಪಿಂಚಣಿಗಳನ್ನು ತಲುಪಿಸಬೇಕೆಂಬ ನಿಯಮವಿದ್ದರೂ ಈ ಮಹಿಳೆ ಪಂಚಾಯತ್ ಕಚೇರಿಗೆ ಅಲೆಯುವಂತಾಗಿದೆ ಇದು ಆಕೆಯ ಕೈ ಹಾಗೂ ಕಾಲಿನಲ್ಲಿ ಗುಳ್ಳೆಗಳು ಬರುವಂತೆ ಮಾಡಿದೆ. ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ ಪಿಂಚಣಿ ಪಡೆಯಲು ಕಚೇರಿಗೆ ಬರುವಂತೆ ಹೇಳಿದ್ದರು. ಬೇರೆ ದಾರಿ ಇಲ್ಲದೆ ಸಹಾಯ ಮಾಡುವವರು ಯಾರೂ ಇಲ್ಲದೆ 2 ಕಿ.ಮೀ ದೂರ ತೆವಳುತ್ತಾ ಬಂದಿದ್ದಾರೆ. ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನಿಸಿದಾಗ ಘಟನೆಯನ್ನು ಒಪ್ಪಿಕೊಂಡರೂ ಮಹಿಳೆಯ ಕಷ್ಟದ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳಿದರು. ಈ ಹಿಂದೆ ಪಿಂಚಣಿ ಪಡೆಯಲು ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದರು, ಆದರೆ ಅಪಘಾತದಲ್ಲಿ ಆಕೆಯ ಕಾಲಿಗೆ…
ಪುಣೆ: ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ. https://youtu.be/gHZ_hI-Y63Q?si=R2zQBGqlyGyot31A ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಬೈ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಯಾಣಿಕರು ರಸ್ತೆಗಳಲ್ಲಿ, ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಗಂಟೆಗಟ್ಟಲೆ ಸಿಕ್ಕಿಹಾಕಿಕೊಂಡರು. ಭಾರೀ ಮಳೆಗೆ ಬಲಿಯಾದವರಲ್ಲಿ 45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದ ನುಲ್ಲಾದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಯಾಣ್‌ನ ವರಪ್ ಗ್ರಾಮದಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಖೋಪೋಲಿಯ ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆ ಸುರಿಯುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪುಣೆಯ ಶಿವಾಜಿನಗರದಲ್ಲಿ ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ…
ಬೆಂಗಳೂರು: ಮುಡಾ ಸಂಬಂಧ ಏನೇ ತನಿಖೆ ನಡೆಯಲಿ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಪರ ಸಚಿವ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್ ಮಾಡಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಬಳಿಕ ಪ್ರತಿಕ್ರಿಯಿಸಿದರು https://youtu.be/F74oSWEUsG0?si=L-RuET1JBctedOCx ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಹೈಕೋರ್ಟ್ ಸೂಕ್ಷ್ಮವಾಗಿ ತನಿಖೆಗೆ ಆದೇಶ ಮಾಡಿದೆ. 17ಎ ಅಡಿ ತನಿಖೆಗೆ ಅನುಮತಿ ಕೊಟ್ಡಿದೆ. ಕೋರ್ಟ್ 218 ಬಿಎನ್‌ಎಸ್‌ಎಸ್ಅ ತಿರಸ್ಕಾರ ಮಾಡಿದೆ. ಸಿಎಂ ಕೂಡಾ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ನಾವೇ ಮೊದಲು ನ್ಯಾಯಾಂಗ ರಚನೆ ಮಾಡಿದ್ದೇವೆ. ನಾವು ತನಿಖೆಯಿಂದ ಹಿಂದೆ ಸರಿಯಲ್ಲ. ತನಿಖೆ ಆಗಲಿ ಎಂದು ತಿಳಿಸಿದರು. ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ. ಬಿಜೆಪಿಗೆ ರಾಜ್ಯಪಾಲರು ಸ್ಟೇಷನ್ ಹೌಸ್ ಆಗಿದ್ದಾರೆ. ರಾಜ್ಯಪಾಲರು ಕಾನೂನು ಪ್ರಕಾರ ಆದೇಶ ಕೊಡಬೇಕು. ಆದರೆ ಅದನ್ನು ಮಾಡಿಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಹಾಸನಾಂಬ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆಗೆ ನಿರ್ಧರಿಸಲಾಗಿದೆ ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆಗೆ ನಿರ್ಧರಿಸಲಾಗಿದೆ. https://youtu.be/F74oSWEUsG0?si=QBznyI7TDrs74mT7 ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲು ತಿಂಗಳು ಮಾತ್ರ ಬಾಕಿ ಇದೆ. ಹಾಸನಾಂಬ ಮಹೋತ್ಸವದಲ್ಲಿ ಭಕ್ತರಿಗೆ ನೀಡುವ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದಲೇ ತಯಾರಿಸಲು ನಿರ್ಧರಿಸಲಾಗಿದೆ. ಇದರ ಜವಾಬ್ದಾರಿಯನ್ನು ಬೆಂಗಳೂರಿನ ಇಸ್ಕಾನ್ ಸಂಸ್ಥೆಗೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೆಲವೇ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ನಂದಿನಿ ತುಪ್ಪ, ಹಾಲು ಹಾಗೂ ಹಾಲಿನ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಲ್ಲೂ ಬೇಡಿಕೆ ಹೆಚ್ಚಿದೆ. ತಿರುಪತಿ ಲಡ್ಡು ವಿವಾದದ ನಂತರದಲ್ಲಿ ಹಾಲಿನ ಉತ್ಪನ್ನದ ಬೇಡಿಕೆ ಹೆಚ್ಚಳವಾಗಿದೆ. ಈಗಾಗಲೇ ಧಾರ್ಮಿಕ ಧತ್ತಿ ಇಲಾಖೆಯ ದೇವಸ್ಥಾನಗಳಲ್ಲೂ ನಂದಿನಿ…
ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲು ತಿಂಗಳು ಮಾತ್ರ ಬಾಕಿ ಇದೆ. ಹಾಸನಾಂಬ ಮಹೋತ್ಸವದಲ್ಲಿ ಭಕ್ತರಿಗೆ ನೀಡುವ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದಲೇ ತಯಾರಿಸಲು ನಿರ್ಧರಿಸಲಾಗಿದೆ. ಇದರ ಜವಾಬ್ದಾರಿಯನ್ನು ಬೆಂಗಳೂರಿನ ಇಸ್ಕಾನ್ ಸಂಸ್ಥೆಗೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. https://youtu.be/h06t1Xw3yBs?si=le82PJJCGhakmwAP ಕೆಲವೇ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ನಂದಿನಿ ತುಪ್ಪ, ಹಾಲು ಹಾಗೂ ಹಾಲಿನ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಲ್ಲೂ ಬೇಡಿಕೆ ಹೆಚ್ಚಿದೆ. ತಿರುಪತಿ ಲಡ್ಡು ವಿವಾದದ ನಂತರದಲ್ಲಿ ಹಾಲಿನ ಉತ್ಪನ್ನದ ಬೇಡಿಕೆ ಹೆಚ್ಚಳವಾಗಿದೆ. ಈಗಾಗಲೇ ಧಾರ್ಮಿಕ ಧತ್ತಿ ಇಲಾಖೆಯ ದೇವಸ್ಥಾನಗಳಲ್ಲೂ ನಂದಿನಿ ತುಪ್ಪ ಬಳಕೆಗೆ ಸರ್ಕಾರ ಆದೇಶಿಸಿದೆ. ಹೀಗಾಗಿ ಹೊಸದಾಗಿ ಡೀಲರ್ಸ್ಗಳು ಏಜೆನ್ಸಿಗಾಗಿ ಅರ್ಜಿ ಹಾಕುತ್ತಿದ್ದಾರೆ. ನಂದಿನಿ ಉತ್ಪನ್ನಗಳು ಮಾರಾಟಕ್ಕೆ ಸಾಲುತ್ತಿಲ್ಲ. ಒಟ್ಟಿನಲ್ಲಿ ತಿರುಪತಿ ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಇದೇ ವಿಶ್ವಾಸ ಉಳಿಸಿಕೊಂಡು ಮುಂದೆ…
ಬೆಂಗಳೂರು:- ಮೆಟ್ರೋ ನಿರೀಕ್ಷೆಯಲ್ಲಿದ್ದ ವಿಮಾನ ನಿಲ್ದಾಣ ರಸ್ತೆಯ ಜನರಿಗೆ BMRCL ಶಾಕಿಂಗ್ ನ್ಯೂಸ್ ನೀಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಬೇಸರ ಹೊರ ಹಾಕುತ್ತಿದ್ದಾರೆ. ಸಿಲ್ಕ್ ಬೋರ್ಡ್ನಿಂದ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸುವ ನೀಲಿ ಮಾರ್ಗದ ನಮ್ಮ ಮೆಟ್ರೋ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಮಗಾರಿ ಯಾವಾಗ ಮುಗಿಯುತ್ತದೆಯೋ, ಸಂಚಾರ ಯಾವಾಗ ಆರಂಭವಾಗುತ್ತದೆಯೋ ಎಂದು ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆ ಬಿಎಂಆರ್ಸಿಎಲ್ ಇದೀಗ ಚಿಕ್ಕಜಾಲ ಮತ್ತು ಬೆಟ್ಟದ ಹಲಸೂರು ಎರಡು ಮೆಟ್ರೋ ಸ್ಟೇಷನ್ಗಳನ್ನು ಕೈಬಿಡಲು ಮುಂದಾಗಿದೆ. ಚಿಕ್ಕಜಾಲ ಮತ್ತು ಬೆಟ್ಟದ ಹಲಸೂರು ನಿಲ್ದಾಣಗಳಿಗಾಗಿ ಈ ಭಾಗದ ಹಲವು ಕಂಪನಿಗಳು ಹಣ ಕೊಡುತ್ತೇವೆ ಎಂದು ಒಪ್ಪಂದ ಮಾಡಿಕೊಂಡಿದ್ದವು. ಆದರೆ ಈಗ ಕಂಪನಿಗಳು ಹಣ ಕೊಡಲು ಮುಂದೆ ಬರುತ್ತಿಲ್ಲ. ಬಿಎಂಆರ್ಸಿಎಲ್ಗೆ ಈ ಎರಡು ಸ್ಟೇಷನ್ಗಳನ್ನು ನಿರ್ಮಾಣ ಮಾಡಬೇಕಾದರೆ 300 ಕೋಟಿ ರೂಪಾಯಿಯಷ್ಟು ಹಣಕಾಸಿನ ಅವಶ್ಯಕತೆ ಇದೆ ಎನ್ನಲಾಗಿದೆ. ಇದಕ್ಕಾಗಿ ಮತ್ತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ. ಹೀಗಾಗಿ ಸದ್ಯ ಎರಡು ಸ್ಟೇಷನ್ ಕಾಮಗಾರಿಯನ್ನು ಕೈಬಿಡಲಿದ್ದೇವೆ ಎಂದು…
ಬೆಂಗಳೂರು:- ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಣಿಗೆ ಶರಣಾಗಿದ್ದ ಹಂತಕನ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ.ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ., ಮಹಿಳೆ ಕೊಲೆ ಪ್ರಕರಣದಲ್ಲಿ ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಮಹಾಲಕ್ಷ್ಮಿ ಕೆಲಸ ಮಾಡ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ ಈತನೇ ಈ ಕೃತ್ಯ ಎಸಗಿರೊ ಶಂಕೆ ವ್ಯಕ್ತವಾಗಿತ್ತು. ಆತನಿಗಾಗಿ ಹಲವು ಕಡೆ ಹುಡುಕಾಡಿದ್ದ ಪೊಲೀಸರಿಗೆ ಆತ ಓರಿಸ್ಸಾಗೆ ತೆರಳಿರೊ ಮಾಹಿತಿ ಸಿಕ್ಕಿತ್ತು. ಸಿಕ್ಕ ಮಾಹಿತಿ ಆಧರಿಸಿ ಒರಿಸ್ಸಾಗೆ ತೆರಳಿದ್ದ ಪೊಲೀಸರಿಗೆ ಈಗ ಶಾಕ್ ಆಗಿದ್ದು, ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರೋಪಿ ಬಳಿ ಸಿಕ್ಕಿರುವ ಡೈರಿಯಲ್ಲಿ ಡೆತ್ ನೋಟು ಪತ್ತೆಯಾಗಿದೆ. ರಂಜನ್ ಡೆತ್ ನೋಟ್ ಬರೆದಿಟ್ಟು ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ…
ಬೆಂಗಳೂರು:- ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ. ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ…