ಬೆಂಗಳೂರು:- ಮೆಟ್ರೋ ನಿರೀಕ್ಷೆಯಲ್ಲಿದ್ದ ವಿಮಾನ ನಿಲ್ದಾಣ ರಸ್ತೆಯ ಜನರಿಗೆ BMRCL ಶಾಕಿಂಗ್ ನ್ಯೂಸ್ ನೀಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಬೇಸರ ಹೊರ ಹಾಕುತ್ತಿದ್ದಾರೆ. ಸಿಲ್ಕ್ ಬೋರ್ಡ್ನಿಂದ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸುವ ನೀಲಿ ಮಾರ್ಗದ ನಮ್ಮ ಮೆಟ್ರೋ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಮಗಾರಿ ಯಾವಾಗ ಮುಗಿಯುತ್ತದೆಯೋ, ಸಂಚಾರ ಯಾವಾಗ ಆರಂಭವಾಗುತ್ತದೆಯೋ ಎಂದು ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆ ಬಿಎಂಆರ್ಸಿಎಲ್ ಇದೀಗ ಚಿಕ್ಕಜಾಲ ಮತ್ತು ಬೆಟ್ಟದ ಹಲಸೂರು ಎರಡು ಮೆಟ್ರೋ ಸ್ಟೇಷನ್ಗಳನ್ನು ಕೈಬಿಡಲು ಮುಂದಾಗಿದೆ. ಚಿಕ್ಕಜಾಲ ಮತ್ತು ಬೆಟ್ಟದ ಹಲಸೂರು ನಿಲ್ದಾಣಗಳಿಗಾಗಿ ಈ ಭಾಗದ ಹಲವು ಕಂಪನಿಗಳು ಹಣ ಕೊಡುತ್ತೇವೆ ಎಂದು ಒಪ್ಪಂದ ಮಾಡಿಕೊಂಡಿದ್ದವು. ಆದರೆ ಈಗ ಕಂಪನಿಗಳು ಹಣ ಕೊಡಲು ಮುಂದೆ ಬರುತ್ತಿಲ್ಲ. ಬಿಎಂಆರ್ಸಿಎಲ್ಗೆ ಈ ಎರಡು ಸ್ಟೇಷನ್ಗಳನ್ನು ನಿರ್ಮಾಣ ಮಾಡಬೇಕಾದರೆ 300 ಕೋಟಿ ರೂಪಾಯಿಯಷ್ಟು ಹಣಕಾಸಿನ ಅವಶ್ಯಕತೆ ಇದೆ ಎನ್ನಲಾಗಿದೆ. ಇದಕ್ಕಾಗಿ ಮತ್ತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ. ಹೀಗಾಗಿ ಸದ್ಯ ಎರಡು ಸ್ಟೇಷನ್ ಕಾಮಗಾರಿಯನ್ನು ಕೈಬಿಡಲಿದ್ದೇವೆ ಎಂದು…
Author: Prajatv Kannada
ಬೆಂಗಳೂರು:- ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಣಿಗೆ ಶರಣಾಗಿದ್ದ ಹಂತಕನ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ.ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ., ಮಹಿಳೆ ಕೊಲೆ ಪ್ರಕರಣದಲ್ಲಿ ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಮಹಾಲಕ್ಷ್ಮಿ ಕೆಲಸ ಮಾಡ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ ಈತನೇ ಈ ಕೃತ್ಯ ಎಸಗಿರೊ ಶಂಕೆ ವ್ಯಕ್ತವಾಗಿತ್ತು. ಆತನಿಗಾಗಿ ಹಲವು ಕಡೆ ಹುಡುಕಾಡಿದ್ದ ಪೊಲೀಸರಿಗೆ ಆತ ಓರಿಸ್ಸಾಗೆ ತೆರಳಿರೊ ಮಾಹಿತಿ ಸಿಕ್ಕಿತ್ತು. ಸಿಕ್ಕ ಮಾಹಿತಿ ಆಧರಿಸಿ ಒರಿಸ್ಸಾಗೆ ತೆರಳಿದ್ದ ಪೊಲೀಸರಿಗೆ ಈಗ ಶಾಕ್ ಆಗಿದ್ದು, ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರೋಪಿ ಬಳಿ ಸಿಕ್ಕಿರುವ ಡೈರಿಯಲ್ಲಿ ಡೆತ್ ನೋಟು ಪತ್ತೆಯಾಗಿದೆ. ರಂಜನ್ ಡೆತ್ ನೋಟ್ ಬರೆದಿಟ್ಟು ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ…
ಬೆಂಗಳೂರು:- ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ. ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ…
ಬೆಂಗಳೂರು: ತುಮಕೂರು- ಯಶವಂತಪುರ (Tumkur-Yeshwanthpur) ಮೆಮು ರೈಲು ಸಂಚಾರಕ್ಕೆ (Memu Train) ಸೆ. 27ರಂದು ಬೆಳಿಗ್ಗೆ 8 ಗಂಟೆಗೆ ನಗರದ ರೈಲು ನಿಲ್ದಾಣದಲ್ಲಿ ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ (V Somana) ಚಾಲನೆ ನೀಡಲಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ (Jyothi Ganesh) ತಿಳಿಸಿದರು. ನಗರದಿಂದ ಬೆಳಿಗ್ಗೆ 8:45ಕ್ಕೆ ಹೊರಟು 10:25 ಗಂಟೆಗೆ ಯಶವಂತಪುರ ತಲುಪಲಿದೆ. ಅಲ್ಲಿಂದ ಸಂಜೆ 5:45ಕ್ಕೆ ಹೊರಡುವ ರೈಲು ರಾತ್ರಿ 7:05 ಗಂಟೆಗೆ ತುಮಕೂರು (Tumakuru) ಪ್ರವೇಶಿಸಲಿದೆ. ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನ ರೈಲು ಪ್ರಯಾಣಿಕರ ಇದರ ಪ್ರಯೋಜನ ಪಡೆಯಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮೆಮು ರೈಲು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಕೊನೆಗೂ ಸಂಚಾರ ಆರಂಭವಾಗುತ್ತಿದೆ. ಸೋಮಣ್ಣ ಕೇಂದ್ರ ಸಚಿವರಾದ ನಂತರ ಜಿಲ್ಲೆಯ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡಿದ್ದಾರೆ. 500 ಕೋಟಿ ರೂ.ಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ರೈಲ್ವೆ ಕೆಳ ಸೇತುವೆ, ಮೇಲ್ಸೇತುವೆ ನಿರ್ಮಾಣ ಕಾರ್ಯವೂ…
ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ತನಿಖಾಧಿಕಾರಿಯನ್ನ ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಗಳು ಆರೋಪಿಗಳಿಂದ ಹಣ ಪಡೆದಿದ್ದ ತನಿಖಾಧಿಕಾರಿ ಎ.ಡಿ ನಾಗರಾಜ್ ರನ್ನ ಸಸ್ಪೆಂಡ್ ಮಾಡಲಾಗಿದ್ದು ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರು ಬಂಧನ ಮಾಡಲಾಗಿದ್ದು ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ತನಿಖೆ ವೇಳೆ ತನಿಖಾಧಿಕಾರಿ ಎ.ಡಿ ನಾಗರಾಜ್ ಭ್ರಷ್ಟಾಚಾರ ಆರೋಪ ಸಾಬೀತು ಆರೋಪಿಗಳಿಂದ ಹಣ ಪಡೆದ ಆರೋಪ ಸಾಬೀತು ಆಗಿದ್ದು ಈ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ ಸಿಐಡಿ ಡಿಜಿ ಸಲೀಂ
ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ನಿಧನರಾಗಿ ನಾಲ್ಕು ವರ್ಷ ಕಳೆದಿದೆ. ಇದೀಗ ಎಸ್ ಪಿಬಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ವಿಶೇಷ ಗೌರವ ನೀಡಿದ್ದಾರೆ. ಎಸ್ ಪಿಬಿ ಅವರ ನಾಲ್ಕನೇ ಪುಣ್ಯತಿಥಿಯಂದು ಚೆನ್ನೈನ ರಸ್ತೆ ಒಂದಕ್ಕೆ ಎಸ್ಪಿಬಿ ಅವರ ಹೆಸರನ್ನು ಇಟ್ಟಿದ್ದಾರೆ. ನಾಲ್ಕನೇ ಪುಣ್ಯತಿಥಿ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸುರವ ಎಸ್ ಪಿಬಿ ಅವರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. 16 ಭಾಷೆಗಳ ಹಾಡಿಗೆ ಅವರು ಧ್ವನಿ ಆಗಿದ್ದಾರೆ. ಅವರ ಧ್ವನಿಗೆ ಮಾರು ಹೋಗದವರೇ ಇಲ್ಲ. ಒಂದೇ ದಿನ ಹಲವು ಹಾಡುಗಳನ್ನು ರೆಕಾರ್ಡ್ ಮಾಡಿ ದಾಖಲೆ ಬರೆದಿದ್ದಾರೆ. ಸೆಪ್ಟೆಂಬರ್ 25ರಂದು ಅವರು ಮೃತಪಟ್ಟು ನಾಲ್ಕು ವರ್ಷ ಕಳೆದಿದೆ. ಹೀಗಾಗಿ ಈ ಘೋಷಣೆ ಮಾಡಲಾಗಿದೆ. ‘ಹಲವು ಭಾಷೆಗಳಲ್ಲಿ ಎಸ್ಪಿಬಿ ಅವರು 40 ಸಾವಿರ ಹಾಡುಗಳನ್ನು ಹಾಡಿದ್ದಾರೆ. ಅರ್ಧ ಶತಮಾನಗಳ…
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಕೃಷ್ಣಂ ಪ್ರಣಯ ಸಖಿ ಸಿನಿಮಾದ ಜೇನ ಧನಿಯೋಳೆ ಮೀನಾ ಕಣ್ಣೋಳೆ ಹಾಡಿಗೆ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿ ಪ್ರಿಯಾಂಕ ಉಪೇಂದ್ರ ಡ್ಯಾನ್ಸ್ ಮಾಡಿದ್ದಾರೆ. ಪ್ರಿಯಾಂಕ ಅವರಿಗೆ ಗಣೇಶ್ ಸ್ಟೆಪ್ ಹೇಳಿಕೊಟ್ಟಿದ್ದು ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಮನೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಟಿ ಹರ್ಷಿಕ ಪೂಣಚ್ಚ ಅವರ ಬೇಬಿ ಶವರ್ ಪಾರ್ಟಿ ಆಯೋಜಿಸಲಾಗಿತ್ತು. ಇದನ್ನು ಸ್ವತಃ ಗಣೇಶ್ ಮತ್ತು ಶಿಲ್ಪಾ ಗಣೇಶ್ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಹಲವು ನಟಿಯರು ಭಾಗಿಯಾಗಿದ್ದರು. ಎಲ್ಲರಿಗೂ ಗೊತ್ತಿರೋ ಹಾಗೆ ಕೃಷ್ಣಂ ಪ್ರಣಯ ಸಖಿ ಚಿತ್ರದ ದ್ವಾಪರ ಹಾಡು ಸೂಪರ್ ಹಿಟ್ ಆಗಿದೆ. ಅಷ್ಟೇ ವೈರಲ್ ಕೂಡ ಆಗಿದೆ. ಇದೇ ಹಾಡನ್ನ ಈಗಲೂ ಅನೇಕರು ರೀಲ್ಸ್ ಮಾಡುತ್ತಾರೆ. ಅಷ್ಟೇ ಎಂಜಾಯ್ ಕೂಡ ಮಾಡುತ್ತಾರೆ. ಹಾಗೆ ಇದೀಗ ಇದೇ ಹಾಡಿಗೆ ಗೋಲ್ಡನ್ ಸ್ಟಾರ್ ಗಣೇಶ್…
ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಇತ್ತೀಚೆಗೆ ಗಿನ್ನೆಸ್ ಪುಸ್ತಕದಲ್ಲಿ ಸೇರಿಕೊಂಡಿದ್ದಾರೆ. ಚಿರಂಜೀವಿ ಅವರನ್ನು ಭಾರತೀಯ ಚಿತ್ರರಂಗದ ಅತ್ಯಂತ ಕ್ರಿಯಾತ್ಮಕ ಚಲನಚಿತ್ರ ತಾರೆ ಎಂಬ ಬಿರುದಿನೊಂದಿಗೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಗೌರವಿಸಿದೆ. ಅಣ್ಣನಿಗೆ ಸಿಕ್ಕ ಈ ಗೌರವದ ಬಗ್ಗೆ ಸಹೋದರ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಂತೋಷ ವ್ಯಕ್ತಪಡಿಸಿದ್ದಾರೆ. ದಾಖಲೆ ಎಂಬುದು ಒಬ್ಬರ ಪ್ರಯಾಣದ ಸಾಕ್ಷಿಯಾಗಿದೆ. ಅವರ ಏನನ್ನು ಸಾಧಿಸಿದ್ದಾರೆ ಎಂಬುದಕ್ಕೆ ಗುರುತಾಗಿದೆ ಎಂದು ತಿಳಿಸಿದ್ದು, ಈ ಸಾಧನೆಗೆ ಸಹೋದರನನ್ನು ನಾನು ಅಭಿನಂದಿಸಿದ್ದೇನೆ ಎಂದು ತಿಳಿಸಿದ್ದಾರೆ. ಮಂಗಳಗಿರಿಯ ಜನಸೇನಾ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಪವನ್ ಕಲ್ಯಾಣ್ ಅವರು ತಮ್ಮ ನಿವಾಸದಲ್ಲಿ ದೊಡ್ಡ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಇದ್ದಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ತಮ್ಮ ಅಣ್ಣನ ಸಾಧನೆ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಬಯಸುವ ಅನೇಕರಿಗೆ ಸ್ಫೂರ್ತಿ ನೀಡುತ್ತದೆ ಹಾಗೂ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದಿದ್ದಾರೆ. ಅವರಿಗೆ ನೀಡಿದ ಪ್ರಶಸ್ತಿಯು ಹೊಸ ಪೀಳಿಗೆಗೆ ಸ್ಫೂರ್ತಿ…
ತೆಲುಗು ಚಿತ್ರರಂಗದ ಹಿರಿಯ ನಟ ಮೋಹನ್ ಬಾಬು ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸ ಮಾಡುವವರೇ ಕಳ್ಳತನ ಮಾಡಿದ್ದಾರೆ ಎನ್ನಲಾಗಿದ್ದು, ಲಕ್ಷ ಲಕ್ಷ ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಹೈದರಾಬಾದ್‌ನ ಉಪನಗರವಾದ ಜಾಲ್ ಪಲ್ಲಿಯಲ್ಲಿರುವ ಮೋಹನ್ ಬಾಬು ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ನಟನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನಾಯಕ್ ಎಂಬುವರು ಹಣ ಕದ್ದಿದ್ದಾರೆ ಎನ್ನಲಾಗ್ತಿದೆ. 10 ಲಕ್ಷ ರೂಪಾಯಿ ಕದ್ದು ಕದೀಮರು ಎಸ್ಕೇಪ್ ಆಗಿದ್ದಾರೆ. ಕಳ್ಳತನವಾಗಿರುವ ಬಗ್ಗೆ ಮೋಹನ್ ಬಾಬು ಪೊಲೀಸರಿಗೆ ದೂರು ನೀಡಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ನಟ ಮೋಹನ್ ಬಾಬು ಸೆಪ್ಟೆಂಬರ್ 25 ರಂದು ಸಿಪಿ ರಾಚಕೊಂಡ ಅವರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ತನಿಖೆ ನಡೆಸಿದ್ದು ಬಳಿಕ ತಿರುಪತಿಯಲ್ಲಿ ತಲೆಮರೆಸಿಕೊಂಡಿದ್ದ ಮನೆ ಕೆಲಸ ಮಾಡ್ತಿದ್ದ ನಾಯಕ್ ರಾಚಕೊಂಡನನ್ನು ಬಂಧಿಸಿದ್ದಾರೆ. ತಿರುಪತಿಯಿಂದ ಆತನನ್ನು ಹೈದರಾಬಾದ್‌ಗೆ ಕರೆದುಕೊಂಡು ಬರಲಾಗಿದೆ. ಮೋಹನ್ ಬಾಬು ಸದ್ಯ ಕಣ್ಣಪ್ಪ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಕೂಡ ಮೋಹನ್ ಬಾಬು ನಿರ್ಮಾಣವಾಗುತ್ತಿದೆ. ಈ…
ತಮಿಳು ಚಿತ್ರರಂಗದ ಖ್ಯಾತ ಜಯಂ ರವಿ ಜೀವನ ಬಿದಿಗೆ ಬಿದ್ದಿದೆ. ಕೆಲವು ದಿನಗಳ ಹಿಂದಷ್ಟೆ ಜಯಂ ರವಿ ಪತ್ನಿ ಆರತಿಯಿದ ದೂರಾಗುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜಯಂ ರವಿ ಪತ್ನಿ ಆರತಿ, ನನ್ನ ಒಪ್ಪಿಗೆ ಇಲ್ಲದೆ ಜಯಂ ರವಿ ವಿಚ್ಛೇದನ ಪ್ರಕಟಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಅದಾದ ಬಳಿಕ ಜಯಂ ರವಿ ಹಾಗೂ ಆರತಿ ನಡುವೆ ಕಾನೂನು ಹೋರಾಟ ಶುರುವಾಗಿದೆ. ಜಯಂ ರವಿಯ ಇನ್ಸ್ಟಾಗ್ರಾಂ ಖಾತೆಯನ್ನು ಆರತಿ ‘ಹೈಜಾಕ್’ ಮಾಡಿದ್ದರು. ಈ ವಿಷಯವನ್ನು ಹೇಳಿಕೊಂಡಿದ್ದ ಜಯಂ ರವಿ ಬಳಿಕ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ತಮ್ಮ ಸುಪರ್ಧಿಗೆ ಪಡೆದು ಮಾಜಿ ಪತ್ನಿಯ ಚಿತ್ರಗಳನ್ನು ಡಿಲೀಟ್ ಮಾಡಿದರು. ಆ ಬಳಿಕ ನೀಡಿದ್ದ ಹೇಳಿಕೆಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ಪಡೆಯಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು. ಎಷ್ಟೇ ವರ್ಷಗಳಾದರೂ ಸಹ ನಾನು ಮಕ್ಕಳಿಗಾಗಿ ಹೋರಾಟ ಮಾಡುತ್ತೇನೆ ಎಂದಿದ್ದರು. ಇದೀಗ ಜಯಂ ರವಿ ತಮ್ಮ ಮಾಜಿ ಪತ್ನಿ…