ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. https://youtu.be/dXNHyySr274?si=CVSbJbrr-JYS7zLf ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ನ ಬೆಂಗಳೂರು ನಗರಾಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಮೇಶ್ ಗೌಡ ಮಾತನಾಡಿ, ಸಿಎಂ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಅಂತಾ ಹೇಳ್ತಾ ಇದ್ದಾರೆ. ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆಂದು ಸಿಎಂ ಹೇಳಿದ್ರು. ನ್ಯಾಯಾಲಯ ಅವರ ವಿರುದ್ದ ತೀರ್ಪು ನೀಡಿದೆ. ಬಿಜೆಪಿ ಜೆಡಿಎಸ್‌ಗೆ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಹೇಳ್ತಾ ಇದ್ರಿ. ನಿಮಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಿ ಎಂದು ಸವಾಲು ಹಾಕಿದರು. ರಾಜಭವನ ದುರುಪಯೋಗ ಮಾಡಿಕೊಳ್ತಾ ಇದ್ದಾರೆ ಅಂತ ಹೇಳ್ತಾ ಇದ್ರಿ. ಈಗ ನ್ಯಾಯಾಲಯ ಮುಡಾ ವಿಚಾರವಾಗಿ ತನಿಖೆ ಆಗಬೇಕು ಅಂತ ಹೇಳುತ್ತಿದೆ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ಎಂದು ಒತ್ತಾಯಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ…
Author: Prajatv Kannada
ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. https://youtu.be/eT972AScRK4?si=QPDz-zWIJNi6-ACm ಈ ಬಗ್ಗೆ ಮಾಧ್ಯಮದವರಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡಬೇಕು ಎಂಬ ಮಾತು ಕೇಳಿ ಬರ್ತಿದೆ. ನಾವು ನ್ಯಾಯಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಸಿಎಂ ಪಾತ್ರ ಮುಡಾ ಪ್ರಕರಣದಲ್ಲಿ ಏನೂ ಇಲ್ಲ. ಅವರಿಂದ ಯಾವುದೇ ಅಧಿಕಾರ ದುರುಪಯೋಗ ಆಗಿಲ್ಲ. ಆದರೆ ಕೋರ್ಟಿನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ಮುಂದೆ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಿದೆ. ಡಬಲ್ ಬೆಂಚ್‌ನಲ್ಲಿ ಇದರ ಬಗ್ಗೆ ಪ್ರಶ್ನೆ ಮಾಡುತ್ತೇವೆ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು. ವಿಚಾರಣೆ ವೇಳೆ ಸಿಎಂ ಪಾತ್ರ ಏನು ಎಂದು ನ್ಯಾಯಾಧೀಶರೇ ಕೇಳಿದರು. ಆಗ ಇದರ ವಿಚಾರವಾಗಿ ತೀರ್ಪಿನಲ್ಲಿ ಹೇಳಿಲ್ಲ. ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ. ಸಿಎಂಗೆ 40 ರಿಂದ 45 ವರ್ಷ ರಾಜಕೀಯ ಜೀವನದಲ್ಲಿ ಯಾವುದೇ ಆಪಾದನೆ ಇರಲಿಲ್ಲ. ಇದು ರಾಜಕೀಯ ಪ್ರೇರಿತ ಅನ್ನೋ ನೋವಾಗಿದೆ. ರಾಜ್ಯಪಾಲರು ಕ್ಯಾಬಿನೆಟ್ ನಿರ್ಣಯ…
ಜೂ ಎನ್ಟಿಆರ್ ನಟನೆಯ ‘ದೇವರ’ಸಿನಿಮಾ ಬಿಡುಗಡೆಗೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ದುಬಾರಿ ಬಜೆಟ್ ನಲ್ಲಿ ರೆಡಿಯಾಗಿರುವ ದೇವರ ಈ ಸಿನಿಮಾ ಆಂಧ್ರ, ತೆಲಂಗಾಣ ಮಾತ್ರವೇ ಅಲ್ಲದೆ ಕರ್ನಾಟಕ, ಕೇರಳ, ಉತ್ತರ ಭಾರತದ ರಾಜ್ಯಗಳು, ವಿದೇಶಗಳಲ್ಲಿಯೂ ಒಂದೇ ಬಾರಿಗೆ ತೆರೆಗೆ ಬರುತ್ತಿದೆ. ಆದರೆ ತೆಲಂಗಾಣ ಹಾಗೂ ಆಂಧ್ರದಿಂದ ಬರುವ ಕಲೆಕ್ಷನ್ ಮೇಲೆ ಸಿನಿಮಾ ತಂಡ ಹೆಚ್ಚು ಆಧಾರವಾಗಿದೆ. ಇದೇ ಕಾರಣಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣಗಳಲ್ಲಿ ‘ದೇವರ’ ಸಿನಿಮಾದ ಟಿಕೆಟ್ ದರ ಹೆಚ್ಚಳಕ್ಕೆ ಹಾಗೂ ಹೆಚ್ಚುವರಿ ಶೋ ಹಾಕಲು ಚಿತ್ರತಂಡ ಅನುಮತಿ ಪಡೆದುಕೊಂಡಿತ್ತು. ಆಂಧ್ರ ಸರ್ಕಾರ, ಹೆಚ್ಚುವರಿ ಶೋಗೆ ಅನುಮತಿ ನೀಡುವ ಜೊತೆಗೆ 14 ದಿನಗಳ ಕಾಲ ಟಿಕೆಟ್ ದರ ಹೆಚ್ಚಿಸಿಕೊಳ್ಳುವಂತೆ ಅನುಮತಿ ನೀಡಿತ್ತು. ಅದರ ಜೊತೆಗೆ ಸಿನಿಮಾ ಬಿಡುಗಡೆ ಆದ ದಿನ ಆರು ಶೋ ಮುಂದಿನ ಒಂಬತ್ತು ದಿನಗಳ ಕಾಲ ಐದು ಶೋಗೆ ಅನುಮತಿ ನೀಡಿತ್ತು. ಅದಾದ ಬಳಿಕ ಈ ಹಿಂದಿನ ದರಗಳಿಗೆ ಸಿನಿಮಾ ಟಿಕೆಟ್ ದರವನ್ನು ತಗ್ಗಿಸುವಂತೆ…
ಅನಾರೋಗ್ಯದಿಂದ ಬಳಲುತ್ತಿದ್ದ ಅಮೆರಿಕ ಮೂಲಕ 64 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯಾ ಯಂತ್ರವನ್ನು ಬಳಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಈ ಯಂತ್ರವನ್ನು ಬಳಸಿ ಮೃತಪಟ್ಟ ಮೊದಲ ಮಹಿಳೆ ಈಕೆಯಾಗಿದ್ದು ಆತ್ಮಹತ್ಯೆಗೆ ಪ್ರಚೋಧನೆ ನೀಡಿದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ದಿ ಲಾಸ್ಟ್ ರೆಸಾರ್ಟ್ ಆರ್ಗನೈಸೇಶನ್, ಅಸಿಸ್ಟೆಡ್ ಡೈಯಿಂಗ್ ಗ್ರೂಪ್, ಯುಎಸ್‌ನ 64 ವರ್ಷದ ಮಹಿಳೆಯೊಬ್ಬರು ಸೋಮವಾರ “ಸಾರ್ಕೊ ಸಾಧನವನ್ನು ಬಳಸಿಕೊಂಡು ಸಾವನ್ನಪ್ಪಿದ್ದಾರೆ” ಎಂದು ವರದಿಯಾಗಿದೆ. ಕ್ಯಾಪ್ಸುಲ್ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕಾನೂನು ಮತ್ತು ನೈತಿಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ, ಅಲ್ಲಿ ಸಕ್ರಿಯ ದಯಾಮರಣವನ್ನು ನಿಷೇಧಿಸಲಾಗಿದೆ ಆದರೆ ಸಹಾಯದ ಮರಣವು ದಶಕಗಳಿಂದ ಕಾನೂನುಬದ್ಧವಾಗಿದೆ. 2019 ರಲ್ಲಿ ಮೊದಲು ಅನಾವರಣಗೊಂಡ ಸಾರ್ಕೊ ಕ್ಯಾಪ್ಸುಲ್, ಪೋರ್ಟಬಲ್, ಮಾನವ ಗಾತ್ರದ ಪಾಡ್ ಆಗಿದ್ದು, ಅದರೊಳಗಿನ ಆಮ್ಲಜನಕವನ್ನು ಸಾರಜನಕದಿಂದ ಬದಲಾಯಿಸುತ್ತದೆ, ಇದು ಹೈಪೋಕ್ಸಿಯಾದಿಂದ ಸಾವಿಗೆ ಕಾರಣವಾಗುತ್ತದೆ. ಇದು ಒಳಭಾಗದಲ್ಲಿರುವ ಗುಂಡಿಯಿಂದ ಸ್ವಯಂ-ಚಾಲಿತವಾಗಿದೆ, ವೈದ್ಯಕೀಯ ಮೇಲ್ವಿಚಾರಣೆಯಿಲ್ಲದೆ ಸಾವನ್ನು ಒದಗಿಸುತ್ತದೆ. “ಸಾರ್ಕೊ ಆತ್ಮಹತ್ಯಾ ಕ್ಯಾಪ್ಸುಲ್ ಎರಡು ವಿಷಯಗಳಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿಲ್ಲ” ಎಂದು ಸ್ವಿಟ್ಜರ್ಲೆಂಡ್ನ ಆಂತರಿಕ ಸಚಿವ ಎಲಿಸಬೆತ್ ಬೌಮ್-ಷ್ನೇಯ್ಡರ್ ಸೋಮವಾರ…
ಕಲಘಟಗಿ: ಕಲಘಟಗಿ ತಾಲೂಕಿನಲ್ಲಿ ಬಡ್ಡಿ ದಂಧೆ ಹೆಚ್ಚಾಗಿದ್ದು, ಬಡ್ಡಿ, ಮೀಟರ್ ಬಡ್ಡಿ ಕೊಡೋಕೆ ಆಗದೆ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಸದ್ದಾಂ ಕಟನೂರ್ ಎಂಬ 23 ವಯಸ್ಸಿನ ಯುವಕ ಸಾಲದ ಕಿರುಕುಳ ತಾಳಲಾರದೆ ನಿನ್ನೆ (ಮಂಗಳವಾರ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. https://youtu.be/KKlZ_fSZ9-w?si=geBanDuHd8pn8HSV ಸದ್ದಾಂ ಕಟನೂರ್ ಮನೆ ಕಟ್ಟಲು ಬ್ಯಾಂಕ್ ಹಾಗೂ ಗ್ರಾಮದಲ್ಲಿ ಬಡ್ಡಿ ಸಾಲ ತೆಗೆದುಕೊಂಡಿದ್ದ. ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಮೃತನ ಪತ್ನಿ ತಿಳಿಸಿದ್ದಾರೆ.ಕಲಘಟಗಿ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಸಂಜೆ ಆದ್ರೆ ಸಾಕು ಕೈಯಲ್ಲಿ ಬುಕ್ ಹಾಗೂ ಪೆನ್ನು ಹಿಡಿದು ರಾಜಾರೋಷವಾಗಿ ಹಣ ವಸೂಲಿಗಾಗಿ ಓಡಾಡುವುದು ಸರ್ವೆ ಸಾಮಾನ್ಯವಾಗಿದೆ. ಅಕ್ರಮ ಫೈನಾನ್ಸ್ ಹಾಗೂ ಬಡ್ಡಿ ದಂಧೆ ಹೆಚ್ಚಾಗಿದ್ದು ಸಾಲ ಪಡೆದ ಯುವಕರು ತಮ್ಮ ಆಸ್ತಿ ಪಾಸ್ತಿ ಮಾರಿಕೊಂಡು ಹಾಗೂ ಕುಟುಂಬಗಳನ್ನೇ ತೊರೆದು ಹೋಗಿದ್ದಾರೆ. ಕೂಡಲೆ ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತಕಡೆ ಗಮನ ಹರಿಸಿ ಇಲ್ಲಿ ನಡೆಯುತ್ತಿರುವ ಬಡ್ಡಿ ದಂಧೆ ಹಾಗೂ ಅಕ್ರಮ ಫೈನಾನ್ಸ್‌ಗಳಿಗೆ ಕಡಿವಾಣ ಹಾಕುತ್ತಾರಾ ಎಂದು…
ಮುಂದಿನ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸದೆ. ಕಮಲಾ ಹ್ಯಾರಿಸ್ ಹಾಗೂ ಡೋನಾಲ್ಡ್ ಟ್ರಂಪ್ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅರಿಝೋನಾದಲ್ಲಿನ ಕಮಲಾ ಹ್ಯಾರಿಸ್ ಅವರ ಚುನಾವಣಾ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಕಚೇರಿಗೆ ಹಾನಿಯಾಗಿದೆ. ಆದರೆ, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಅರಿಝೋನಾ ರಾಜ್ಯಕ್ಕೆ ಇನ್ನು ಕೆಲವೇ ದಿನಗಳಲ್ಲಿ ಕಮಲಾ ಹ್ಯಾರಿಸ್ ಭೇಟಿ ನೀಡುವವರಿದ್ದರು. ಅದಕ್ಕೂ ಮುನ್ನವೇ ಈ ದಾಳಿ ನಡೆದಿದೆ. ಘಟನೆಯ ತನಿಖೆಯನ್ನು ಟೆಂಪೆ ಪೊಲೀಸರು ನಡೆಸುತ್ತಿದ್ದಾರೆ. ಗುಂಡಿನ ದಾಳಿ ಸಂದರ್ಭದಲ್ಲಿ ಡೆಮಾಕ್ರಟಿಕ್ ಪಕ್ಷದ ಕಚೇರಿಯಲ್ಲಿ ಯಾವುದೇ ಜೀವಹಾನಿ ಸಂಭವಿಸದೆ ಇರುವುದರಿಂದ ಪೊಲೀಸರು ಆಸ್ತಿಪಾಸ್ತಿ ನಷ್ಟ ಪ್ರಕರಣವನ್ನು ಮಾತ್ರ ದಾಖಲಿಸಿಕೊಂಡಿದ್ದಾರೆ. ಸೆಪ್ಟೆಂಬರ್ 16ರಂದೂ ಕೂಡಾ ಈ ಕಚೇರಿಯ ಮೇಲೆ ಪೆಲೆಟ್ ಅಥವಾ ಬಿಬಿ ಗನ್ ಮೂಲಕ ಹಲವು ಸುತ್ತಿನ ಗುಂಡಿನ ದಾಳಿ ನಡೆದಿತ್ತು ಎಂದು Arizona Republic ಸುದ್ದಿ ಸಂಸ್ಥೆ ವರದಿ ಮಾಡಿದೆ. ಗುಂಡಿನ ದಾಳಿಯಲ್ಲಿ ಡೆಮಾಕ್ರಟಿಕ್ ಪಕ್ಷದ ಬಾಗಿಲಿಗೆ…
ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವು ಮತ್ತಷ್ಟು ಗಟ್ಟಿಯಾಗುತ್ತಿದೆ. ಜೋ ಬೈಡನ್ ಅವಧಿಯಲ್ಲಿ ಭಾರತದೊಂದಿಗಿನ ಸಂಬಂಧ ವೃದ್ಧಿಯಾಗಿರುವುದಕ್ಕೆ ಹೆಮ್ಮೆಯಿದೆ ಎಂದು ಶ್ವೇತಭವನ ತಿಳಿಸಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಅವಧಿಯಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಂವಹನ ಸಲಹೆಗಾರ ಜಾನ್ ಕಿರ್ಬಿ, ‘ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ಉತ್ತಮವಾಗಿದೆ’ ಎಂದರು. ‘ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಬೈಡನ್ ತುಂಬಾ ಪ್ರಯತ್ನ ಮಾಡಿದ್ದಾರೆ. ನಮ್ಮ ನಡುವಿನ ಸಂಬಂಧವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದೇವೆ. ರಕ್ಷಣಾ ಕ್ಷೇತ್ರದಲ್ಲಿನ ನಮ್ಮ ಸಂಬಂಧವು ಭಾರತದ ನಾಗರಿಕರನ್ನು ಅಷ್ಟೇ ಅಲ್ಲದೆ, ಇಂಡೋ-ಫೆಸಿಫಿಕ್ ಭಾಗದ ಜನರಿಗೂ ರಕ್ಷಣೆ ನೀಡಲಿದೆ’ ಎಂದು ತಿಳಿಸಿದ್ದಾರೆ. ‘ಇಂಡೋ-ಪ್ಯಾಸಿಫಿಕ್ ಸುರಕ್ಷತೆ ಬಗ್ಗೆ ಚರ್ಚೆ ನಡೆಸಿದ್ದಕ್ಕಾಗಿ ಮೋದಿ ಅವರನ್ನು ಬೈಡನ್ ಶ್ಲಾಘಿಸಿದ್ದಾರೆ. ವಿಶ್ವದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ನಾಯಕರಾಗಿರುವ ಅವರು ತಮ್ಮ ದೇಶದ ಸುತ್ತ-ಮುತ್ತಲಿನ ಸಮಸ್ಯೆಯನ್ನು…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಕಡೂರು ತಾಲೂಕಿನ ಬೀರೂರು ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕೂರಿಸಲು ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಲೋಕಾ ಬಲೆಗೆ ಬಿದ್ದಿದ್ದಾರೆ.ಪ್ರಿನ್ಸಿಪಾಲ್ ಪ್ರವೀಣ್, ಎಫ್.ಡಿ.ಎ. https://youtu.be/KKlZ_fSZ9-w?si=7uhikG-zXG9OZGpC ಸದಾಶಿವಯ್ಯ ಲೋಕಾ ಬಲೆಗೆ ಬಿದ್ದವರಾಗಿದ್ದು, ಹಾಜರಾತಿ ಕೊರತೆಯಿಂದ ವಿದ್ಯಾರ್ಥಿಗಳಿಂದ ಹಣ ಪಡೆದು ಪರೀಕ್ಷೆಗೆ ಅನುಮತಿ ನೀಡಲು 4000 ಹಣ ಪಡೆಯುವಾಗ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 8 ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕೂರಲು ಹಾಜರಾತಿ ಕೊರತೆಯಾಗಿದೆ. 8 ವಿದ್ಯಾರ್ಥಿಗಳ ಬಳಿಯೂ ಪ್ರಿನ್ಸಿಪಾಲ್ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಎಫ್.ಡಿ.ಎ. ಸದಾಶಿವಯ್ಯಗೆ ಫೋನ್ ಪೇ ನಲ್ಲಿ ವಿದ್ಯಾರ್ಥಿಗಳು 10000 ಸಾವಿರ ಹಾಕಿದ್ದರು. ಇಂದು 4000 ಹಣ ಕ್ಯಾಶ್ ಪಡೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅರಬ್ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, 9 ಯೋಧರು ಗಾಯಗೊಂಡಿದ್ದಾರೆ. ಯುಎಇನ ಸರ್ಕಾರಿ ಸುದ್ದಿ ವಾಹಿನಿ ಡಬ್ಲ್ಯುಎಎಂ ಈ ಬಗ್ಗೆ ವರದಿ ಮಾಡಿದೆ. ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಕರ್ತವ್ಯನಿರತ ನಾಲ್ವರು ಯೋಧರು ಮೃತಪಟ್ಟಿರುವುದಾಗಿ ಸೇನೆಯು ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಅಪಘಾತದ ಬಗ್ಗೆ ಸೇನೆಯು ತಕ್ಷಣಕ್ಕೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ ಎಂದು ತಿಳಿಸಿದೆ. ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಬಲಶಾಲಿ ಸೇನೆಯನ್ನು ಹೊಂದಿರುವ ದೇಶಗಳ ಪೈಕಿ ಯುಎಇ ಒಂದಾಗಿದೆ.
ರಾಯಚೂರು: ಖ್ಯಾತ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಸಂತ್ರಸ್ತೆ ದೂರು ನೀಡಲು ಪೊಲೀಸ್ ಠಾಣೆಗೆ ಅಲೆದಾಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆ ಮತ್ತು ಆಕೆಯ ಮಗಳು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. https://youtu.be/BAUSYfdaeo8?si=Obm014MwwEjZ5CpF ಹೌದು ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯಶ್ರೀ ತಮ್ಮ ಮಠದ ಸೇವೆಗೆ ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೂಲತಃ ಆಂಧ್ರಪ್ರದೇಶ ಮೂಲದವರಾದ ಸಂತ್ರಸ್ತ ಮಹಿಳೆ ಕಳೆದ 6 ತಿಂಗಳಿಂದ ಅಪ್ರಾಪ್ತ ಪುತ್ರಿ ಜೊತೆ ಮಠದಲ್ಲೇ ವಾಸ್ತವ್ಯ ಹೂಡಿದ್ದರು ಅನ್ನೋ ಮಾಹಿತಿ ಸಿಕ್ಕಿದೆ.ದೌಜನ್ಯದ ಬಳಿಕ ಸ್ವಾಮೀಜಿ ವಿರುದ್ಧ ದೂರು ನೀಡಲು ಸಂತ್ರಸ್ತೆ ಠಾಣೆಗಳಿಗೆ ಅಲೆದಾಡಿದ್ದಾರೆ. ಠಾಣೆಯ ವಿಜಿಟರ್ ರಿಜಿಸ್ಟರ್ ಬುಕ್ನಲ್ಲಿ ಸಂತ್ರಸ್ತ ಮಹಿಳೆಯ ಹೆಸರು, ವಿಳಾಸ ದಾಖಲಾಗಿದೆ. ಆದರೆ ಈಗ ಎಲ್ಲೂ ಕಾಣಿಸಿಕೊಳ್ಳದೆ ಮಗಳ ಜೊತೆ ಮಹಿಳೆ ತೆರಳಿದ್ದಾರೆ. ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…