ಬೆಂಗಳೂರು:- ಪೀಣ್ಯ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಪಿಜಿ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.25 ವರ್ಷದ ಪುಲ್ಕಿತ್ ಬಂಧಿತ ಆರೋಪಿ. ಈತ ಪೀಣ್ಯಾದ ಹೆಚ್‌ಎಂಟಿ ಲೇಔಟ್‌ನ ಪಿಜಿಯೊಂದರ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ. ಸೆ.19ರಂದು ಬೈಕ್‌ನಿಂದಲೇ ಪೆಟ್ರೋಲ್ ತೆಗೆದು ಅದೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇಷ್ಟು ಮಾತ್ರವಲ್ಲದೇ ಬೈಕ್‌ಗೆ ಹೊತ್ತಿಕೊಂಡ ಬೆಂಕಿಯಿಂದಲೇ ಸಿಗರೇಟ್‌ಗೆ ಬೆಂಕಿ ಹಚ್ಚಿ ಧಮ್ ಹೊಡೆದು ಎಸ್ಕೇಪ್ ಆಗಿದ್ದ. ಬುಲೆಟ್ ಬೈಕ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಮೂರು ಬೈಕ್‌ಗಳು ಬೆಂಕಿಗೆ ಆಹುತಿಯಾಗಿತ್ತು. ಬೈಕ್ ಬೆಂಕಿಗಾಹುತಿಯಾದ ಬಳಿಕ ಬುಲೆಟ್ ಬೈಕ್ ಸವಾರ ದೀಪಾಂಶು ಎಂಬವರು ಈ ಬಗ್ಗೆ ಪೀಣ್ಯಾ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ ಪುಲ್ಕಿತ್‌ನನ್ನು ಪೀಣ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಲವು ದಿನಗಳಿಂದ ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್ ಖರೀದಿಸುವ ಆಸೆಯನ್ನು ಪುಲ್ಕಿತ್ ಹೊಂದಿದ್ದ. ಬುಲೆಟ್ ಖರೀದಿಗೆ ಹಣ ಹೊಂದಿಸಲಿಕ್ಕೆ ಆಗದಿದ್ದಾಗ…
Author: Prajatv Kannada
ಶ್ರೀನಗರ: ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 25.78 ಲಕ್ಷ ಮತದಾರರು, 239 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಒಟ್ಟು 3,502 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಇವುಗಳಲ್ಲಿ 1,056 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಮತ್ತು 2,446 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಪಾರದರ್ಶಕ ಚುನಾವಣೆಗಾಗಿ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಬಿಜೆಪಿ (BJP) ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ, ಪ್ರದೇಶ ಕಾಂಗ್ರೆಸ್ (Congress) ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಮೊದಲ ಹಂತ…
ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ16 ಕೇಶವಮೂರ್ತಿ ಹಾಗೂ ಎ17 ನಿಖಿಲ್ ನಾಳೆ ತುಮಕೂರು ಕಾರಾಗೃಹದಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಕೇಸ್ನಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್ ಈ ಮೂವರಿಗೂ ಹೈಕೋರ್ಟ್ ಜಾಮೀನು ನೀಡಿತ್ತು. ಆರೋಪಿಗಳಿಗೆ ಸೆಪ್ಟೆಂಬರ್ 23 ರಂದು ಜಾಮೀನು ನೀಡಿದ್ದರು ಜೈಲಿನಿಂದ ಇನ್ನು ಬಿಡುಗಡೆ ಆಗಿರಲಿಲ್ಲ. ಇದಕ್ಕೆ ಕಾರಣ ನ್ಯಾಯಾಲಯದ ಆದೇಶ ಪ್ರತಿಯು ತುಮಕೂರು ಕಾರಾಗೃಹದ ಜೈಲು ಅಧಿಕಾರಿಗಳನ್ನ ತಲುಪಿರಲಿಲ್ಲ. ಹೀಗಾಗಿ ಮೂವರು ಇನ್ನು ಜೈಲಿನಲ್ಲೇ ಉಳಿದುಕೊಂಡಿದ್ದಾರೆ. ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಆಗಬೇಕಿದೆ. ಸದ್ಯ 17 ಆರೋಪಿಗಳ ಪೈಕಿ ಮೂವರಿಗೆ ಮಾತ್ರ ಜಾಮೀನು ನೀಡಲಾಗಿದೆ. ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ನಿಂದ ಬೇಲ್ ಸಿಕ್ಕರೇ, ಎ15 ಆರೋಪಿ ಕಾರ್ತಿಕ್ ಹಾಗೂ ಎ17 ಆರೋಪಿ ನಿಖಿಲ್ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು…
ತೆಲುಗು ಯೂಟ್ಯೂಬ್ರ್ ಹರ್ಷ ಸಾಯಿ ವಿರುದ್ಧ ಯುವತಿಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ. ಹರ್ಷ ಸಾಯಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಾರೆ. ಜೊತೆಗೆ ನನ್ನ ನಗ್ನ ಫೋಟೋ ಕ್ಲಿಕ್ಕಿಸಿ, ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮುಂಬೈ ಮೂಲದ ಯುವತಿ ನಟಿಯಾಗಿದ್ದು ಕೆಲ ವರ್ಷಗಳ ಹಿಂದೆ ಹೈದರಾಬಾದ್ಗೆ ಸಿನಿಮಾ ಅವಕಾಶಕ್ಕೆ ಬಂದಿದ್ದರು. ಬಳಿಕ ತೆಲುಗು ರಿಯಾಲಿಟಿ ಶೋವೊಂದರಲ್ಲಿ ಭಾಗವಹಿಸಿದ್ದರು. ಖಾಸಗಿ ಪಾರ್ಟಿಯಲ್ಲಿ ಹರ್ಷಸಾಯಿಯನ್ನ ಭೇಟಿಯಾಗಿದ್ದು, ಬಳಿಕ ಇಬ್ಬರ ಮಧ್ಯೆ ಸ್ನೇಹ ಬೆಳೆದು ಸಲುಗೆಯಿಂದ ಇರುತ್ತಿದ್ದರು. ಆದರೆ ಹರ್ಷ ಸಾಯಿ ಮದುವೆ ಆಗುವುದಾಗಿ ಹೇಳಿ, ತನ್ನನ್ನು ಬಳಸಿಕೊಂಡಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾರೆ. ಅಲ್ಲದೇ ಯುವತಿಯ ನಗ್ನ ಫೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡಿ ಕೋಟಿ ಲೆಕ್ಕದಲ್ಲಿ ಹಣ ವಸೂಲಿ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಈ ಬಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ಸ್ಟಾರ್ ಹರ್ಷ ಸಾಯಿ ಹಾಗೂ ಇವರ ತಂದೆ…
ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸಲಾಗುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇರುವುದು ಪತ್ತೆಯಾಗಿದ್ದ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಯಾರೇ ಆಗಲಿ ಶಿಕ್ಷೆಗೆ ಒಳಪಡುತ್ತಾರೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಪವನ್ ಕಲ್ಯಾಣ್, ‘ಸನಾತನ ಧರ್ಮ ರಕ್ಷಣಾ ಬೋರ್ಡ್’ ಅನ್ನು ರಾಷ್ಟ್ರಮಟ್ಟದಲ್ಲಿ ಸ್ಥಾಪನೆ ಮಾಡಬೇಕೆಂದು ಸಹ ಹೇಳಿದ್ದರು. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ ಪ್ರಕಾಶ್ ರೈ, ‘ಆತಂಕವನ್ನು ಹೆಚ್ಚು ಮಾಡಬೇಡಿ, ದೇಶದಲ್ಲಿ ಈಗಿರುವ ಕೋಮು ಗಲಭೆ ಸಾಕು’ ಎಂದಿದ್ದರು. ಪ್ರಕಾಶ್ ರೈ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದ ಪವನ್ ಕಲ್ಯಾಣ್, ‘ಪ್ರಕಾಶ್ ರೈ ಅವರೇ ನೀವು ಪಾಠ ಕಲಿಯಬೇಕಿದೆ. ನಿಮ್ಮ ಬಗ್ಗೆ ಗೌರವ ಇದೆ. ಆದರೆ ಪ್ರಕಾಶ್ ರೈ ಮಾತ್ರವಲ್ಲ ಜಾತ್ಯಾತೀತರು ಎಂದು ಹೇಳಿಕೊಳ್ಳುವ ಎಲ್ಲರೂ ಪಾಠ ಕಲಿಯಬೇಕಿದೆ. ಜಾತ್ಯಾತೀತತೆಯ ಹೆಸರಲ್ಲಿ ನೀವು ಹದ್ದುಗಳನ್ನು ಮೀರುತ್ತಿದ್ದೀರಿ. ನಾವು ತೀವ್ರ…
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾಗಿರುವ ಪ್ರಕರಣ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಇದು ಆಂಧ್ರ ಪ್ರದೇಶದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಆಂಧ್ರ ಡಿಸಿಎಂ ನಟ ಪವನ್ ಕಲ್ಯಾಣ್, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾದ ಬಳಿಕ 11 ದಿನದ ಪ್ರಾಯಶ್ಚಿತ್ತ ದೀಕ್ಷೆ ತೆಗೆದುಕೊಂಡಿದ್ದಾರೆ. ಮಾತ್ರವಲ್ಲದೆ ಕನಕದುರ್ಗ ದೇವಾಲಯದ ಸ್ವಚ್ಛತೆಯಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಲಡ್ಡು ಬಗ್ಗೆ ಮಾತನಾಡಿದವರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಅಂತೆಯೇ ನಟ ಕಾರ್ತಿ ಕಾರ್ಯಕ್ರಮವೊಂದರಲ್ಲಿ ಲಡ್ಡು ಬಗ್ಗೆ ಮಾತನಾಡಿದ್ದಕ್ಕೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದರು. ಇದೀಗ ಕಾರ್ತಿ, ಪವನ್ ಕಲ್ಯಾಣ್ ಬಳಿ ಕ್ಷಮೆ ಕೇಳಿದ್ದಾರೆ. ‘ಪ್ರೀತಿಯ ಪವನ್ ಕಲ್ಯಾಣ್ ಅವರೇ, ನಿಮ್ಮ ಬಗ್ಗೆ ಅಪಾರ ಗೌರವ, ಪ್ರೀತಿ ಇದೆ. ಈಗ ಉಂಟಾಗಿರುವ ಉದ್ದೇಶಪೂರ್ವಕ ತಪ್ಪುಗ್ರಹಿಕೆಗೆ ನಾನು ಕ್ಷಮೆಯಾಚಿಸುತ್ತೇನೆ. ವೆಂಕಟೇಶ್ವರ ಸ್ವಾಮಿಯ ವಿನಮ್ರ ಭಕ್ತನಾಗಿರುವ ನಾನು, ಯಾವಾಗಲೂ ನಮ್ಮ ಸಂಪ್ರದಾಯಗಳ ಬಗ್ಗೆ ಗೌರವ ಇಟ್ಟುಕೊಂಡಿರುವ ವ್ಯಕ್ತಿವಾಗಿದ್ದೇನೆ’ ಎಂದಿದ್ದಾರೆ. ಕಾರ್ತಿ ನಟನೆಯ ‘ಮೆಯಿಳಾಗನ್’ ಸೆಪ್ಟೆಂಬರ್ 27ಕ್ಕೆ ರಿಲೀಸ್ ಆಗುತ್ತಿದೆ. ಈ ಸಿನಿಮಾ…
ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಕೋಲಾಹಲ ಎಬ್ಬಿಸಿದೆ. ಆಂಧ್ರ ಪ್ರದೇಶ ಸರ್ಕಾರ, ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೇವಾಲಯದ ಶುಭ್ರತೆಗೆ ನಿರ್ದೇಶಿಸಿದೆ. ಅಲ್ಲದೆ, ಲಡ್ಡು ಮಾಡಲು ತುಪ್ಪ ಸರಬರಾಜು ಮಾಡುತ್ತಿದ್ದ ಏಜೆನ್ಸಿ ವಿರುದ್ಧ ದೂರು ಸಹ ದಾಖಲಾಗಿದೆ. ಈ ಬಗ್ಗೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡುತ್ತಿದೆ. ಲಡ್ಡು ವಿವಾದದ ಬಗ್ಗೆ ಮಾತನಾಡುತ್ತಿರುವವರಿಗೆ ನಟ ಹಾಗೂ ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ತಿರುಗೇಟು ನೀಡುತ್ತಿದ್ದಾರೆ. ಇದೀಗ ಲಡ್ಡು ಬಗ್ಗೆ ಮಾತನಾಡಿದ ಖ್ಯಾತ ನಟ ಕಾರ್ತಿಗೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ. ಕಾರ್ತಿ ನಟನೆಯ ‘ಮೆಯಿಳಾಗನ್’ ಸೆಪ್ಟೆಂಬರ್ 27ಕ್ಕೆ ರಿಲೀಸ್ ಆಗುತ್ತಿದೆ. ಈ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲಿ ‘ಸತ್ಯಂ-ಸುಂದರಂ’ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಕಾರ್ತಿ ಇತ್ತೀಚೆಗಷ್ಟೆ ಹೈದರಾಬಾದ್ಗೆ ಆಗಮಿಸಿದ್ದರು. ಈ ವೇಳೆ ನಿರೂಪಕಿ, ‘ಲಡ್ಡು ಬೇಕಾ’ ಎಂದು ಜಾಹೀರಾತಿನ ಡೈಲಾಗ್…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್ ದೀಪಾಲಂಕಾರ ಆಯೋಜನೆ ಮಾಡಲಾಗುತ್ತಿದೆ. https://youtu.be/thHxGd_Eq1Y?si=ykA7q_aFncMGXa_G ಮೈಸೂರಿನ ಹಲವು ವೃತ್ತಗಳಲ್ಲಿ ಪ್ರಜಾಪ್ರಭುತ್ವ ಸಾಗಿ ಬಂದ ಹಾದಿ, ತಾಯಿ ಭುವನೇಶ್ವರಿ, ಸೋಮನಾಥೆಶ್ವರ ದೇವಾಲಯ, ಸಂವಿಧಾನ ಪ್ರಸ್ತಾವನೆ, ಮೈಸೂರಿನ ಅರಸರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಣಿ ಕೆಂಪನಂಜಮ್ಮಣಿ, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಪ್ರತಿಕೃತಿಗಳ ನಿರ್ಮಾಣ ಮಾಡಲಾಗಿದೆ. ಕಾರ್ಡ್ ಹಾಗೂ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ ಗಳು ಮಾರಾಟವಾಗಲಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ…
ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಅವರು ಸದ್ಯ ಬಳ್ಳಾರಿ ಶಿಫ್ಟ್ ಆಗಿದ್ದಾರೆ. ಅಲ್ಲಿ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತಿವೆ. ಬೆನ್ನು ನೋವು ಇರುವುದರಿಂದ ದರ್ಶನ್ ತೊಂದರೆ ಅನುಭವಿಸುತ್ತಾ ಇದ್ದಾರೆ.. https://youtu.be/bV_8Ea1cV2o?si=UdLQl4e9GhJUhPZM ಇದರ ಬೆನ್ನಲ್ಲೇ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್‌ರನ್ನು ವಕೀಲ ಸುನೀಲ್ ಇಂದು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿ, ಹೊಸ ಮ್ಯಾನುವಲ್ ಪ್ರಕಾರ ಸೌಲಭ್ಯ ನೀಡಲು ಜೈಲಾಧಿಕಾರಿಗೆ ಮನವಿ ಮಾಡಲಾಗಿದೆ. ಎರಡು ದಿನದಲ್ಲಿ ಮೂಲ ಸೌಲಭ್ಯ ನೀಡದಿದ್ದರೆ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಡುತ್ತೇವೆ. ಹೊಸ ಮ್ಯಾನುವಲ್ ಪ್ರಕಾರ ಮೆಡಿಕಲ್ ಬೆಡ್ ಮತ್ತು ದಿಂಬು ಕೊಡಲು ಅವಕಾಶ ಇದೆ. ನ್ಯಾಯಾಲಯದಿಂದ ಬಂದಿರುವ ಆದೇಶದ ಬಗ್ಗೆ ಜೈಲ್ ಅಧಿಕಾರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೂ ಸೌಲಭ್ಯ ನೀಡದೇ ಇದ್ದರೇ ದೂರು ಕೊಡುತ್ತೇವೆ ಎಂದರು.
ಹುಬ್ಬಳ್ಳಿ: ನ್ಯಾಯಾಲಯ ನೀಡಿರುವ ತೀರ್ಪಿನ ಆದಾರದ ಮೇಲೆ ಸಿಎಂ ಸಿದ್ಧರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ.ಮೂಡಾ ಹಗರಣದ ಬಗ್ಗೆ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿತ್ತು. ಈ ಮೂಲಕ ಪಕ್ಷಕ್ಕೂ ದೊಡ್ಡ ಜಯ ಸಿಕ್ಕಿದೆ. https://youtu.be/C02aQvQlbho?si=nN4ddQD4Kk3Ri_Ue ಕಾನೂನು ಎಲ್ಲರಿಗೂ ಒಂದೇ ಎಂಬುದನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು ಎಂದರು. ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಿ, ತನಿಖೆಯ ನಂತರ ಅವರ ತಪ್ಪು ಇಲ್ಲದೇ ಹೋದರೇ ಮತ್ತೆ ಬೇಕಿದ್ದರೇ ಸಿಎಂ ಆಗಲಿ ಎಂದರು.