ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸಲಾಗಿದೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಇದನ್ನು ಪ್ರತಿಯೊಬ್ಬರು ಖಂಡಿಸುತ್ತಿದ್ದಾರೆ. ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿರುಪತಿಯ ಲಡ್ಡುಗಳನ್ನು ತಯಾರಿಸಲು ಕಳಪೆ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದರು. ಸರ್ಕಾರದ ನಿರ್ಧಾರಗಳ ಬಗ್ಗೆ ಟೀಕೆ ಮಾಡಿದ ನಟ ಪ್ರಕಾಶ್ ರಾಜ್ಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವಾರ್ನಿಂಗ್ ಕೊಟ್ಟಿದ್ದಾರೆ. ಲಡ್ಡು ವಿವಾದದ ಕುರಿತು ಮಾತನಾಡಿದ್ದ ಪ್ರಕಾಶ್ ರಾಜ್ ಹೇಳಿಕೆಗೆ ಆಂಧ್ರ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ರು. ವಿಜಯವಾಡ ದುರ್ಗಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಪವನ್ ಕಲ್ಯಾಣ್ ನಾನು ಯಾವ ಧರ್ಮವನ್ನು ದೂಷಿಸಿಲ್ಲ ಎಂದಿದ್ದಾರೆ. ಹಿಂದೂ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ರೆ ನಟ ಪ್ರಕಾಶ್ ರಾಜ್ ಆಕ್ಷೇಪ ವ್ಯಕ್ತಪಡಿಸೋದು ಯಾಕೆ? ಇಲ್ಲಿ ನಾನು ಯಾವುದೇ ಧರ್ಮವನ್ನು ದೂಷಿಸಿಲ್ಲ, ದೇವರ ಮೂರ್ತಿಗಳ ಶಿರಚ್ಛೇದ ಮಾಡಿದ್ರೆ…
Author: Prajatv Kannada
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ನೀ ಡಿದ್ದ ಡೆಡ್ ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದರು. ಇದರಿಂದಾಗಿ ಏಕಾಏಕಿ ಅಧಿಕಾರಿಗಳು ಗಡಿಬಿಡಿಗೊಂಡಿದ್ದರು. https://youtu.be/B_xTjB_OLss?si=_Dbz0COVADnu0JnN ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು. ಸಿಲಿಕಾನ್ ಸಿಟಿ, ಟೆಕ್ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ರಸ್ತೆ ಗುಂಡಿಗಳ ಬಗ್ಗೆ ವರದಿಯಾಗುತ್ತಲೇ ಇತ್ತು . ಇದಕ್ಕೆ ಸ್ಪಂದಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು. ಸುಮಾರು ರಾತ್ರಿ 11:30ರ ವೇಳೆಗೆ ಪ್ರದಕ್ಷಿಣೆ ಆರಂಭಿಸಿದ ಡಿಸಿಎಂ ಮಧ್ಯರಾತ್ರಿ 2 ಗಂಟೆವರೆಗೂ ಪ್ರದಕ್ಷಿಣೆ…
ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಭಾಗಿಯಾಗಲು ಅಮೆರಿಕಕ್ಕೆ ತೆರಳಿದ್ದ ಪ್ರಧಾನಿ ಮೋದಿ ನ್ಯೂಯಾರ್ಕ್‌ನಲ್ಲಿ ನೇಪಾಳದ ಪ್ರಧಾನಿ ಕೆ ಪಿ ಶರ್ಮಾ ಒಲಿ ಮತ್ತು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಸೇರಿದಂತೆ ವಿಶ್ವ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಒಲಿ ಹಾಗೂ ಮಹಮೂದ್ ಅಬ್ಬಾಸ್ ಅವರೊಂದಿಗೆ ಬಾಂಧವ್ಯದ ವಿವಿಧ ಅಂಶಗಳನ್ನು ಚರ್ಚಿಸಿದ್ದಾರೆ. ಪ್ಯಾಲೆಸ್ತೀನ್ ಜನರಿಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಛರಿಸಿದರು. ಮೂರು ದಿನಗಳ ಅಮೇರಿಕಾ ಪ್ರವಾಸದ ಎರಡನೇ ದಿನ ಪ್ರಧಾನಿ ಮೋದಿಯವರು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದರು. ನ್ಯೂಯಾರ್ಕ್‌ನಲ್ಲಿ ಪ್ರಧಾನ ಮಂತ್ರಿ ಕೆಪಿ ಓಲಿ ಅವರೊಂದಿಗೆ ಫಲಪ್ರದ ಮಾತುಕತೆ ನಡೆದಿದೆ. ಭಾರತ-ನೇಪಾಳ ಸ್ನೇಹವು ತುಂಬಾ ದೃಢವಾಗಿದೆ. ನಮ್ಮ ಸಂಬಂಧಗಳಿಗೆ ಇನ್ನಷ್ಟು ವೇಗ ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ. ನಮ್ಮ ಮಾತುಕತೆಗಳು ಇಂಧನ, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ ಎಂದು ಹೇಳಿದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79 ನೇ ಅಧಿವೇಶನದಲ್ಲಿ ಪಾಲ್ಗೊಳ್ಳಲು ಒಲಿ ಅವರು…
ಲೆಬನಾನ್‌ನ ರಾಜಧಾನಿ ಬೈರುತ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ನಿನ್ನೆ ದೊಡ್ಡ ಮಟ್ಟದಲ್ಲಿ ವೈಮಾನಿಕ ದಾಳಿ ನಡೆಸಿದ್ದು, ಪರಿಣಾಮ 492 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಮತ್ತು ಪೂರ್ವ ಲೆಬನಾನ್‌ನಲ್ಲಿ 300ಕ್ಕೂ ಹೆಚ್ಚು ಹೆಜ್ಬೊಲ್ಲಾ ಉಗ್ರರ ಕೇಂದ್ರವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹೆಜ್ಬೊಲ್ಲಾ ಸುಮಾರು 200 ರಾಕೆಟ್ಗಳನ್ನು ಉಡಾಯಿಸಿದೆ. ದಕ್ಷಿಣ ಲೆಬನಾನ್ ಮತ್ತು ಬೆಕಾ ಕಣಿವೆಯಲ್ಲಿ ದಾಳಿಗಳು ಕೇಂದ್ರೀಕೃತವಾಗಿವೆ. ಇಲ್ಲಿಯವರೆಗೆ ಮೃತರ ಸಂಖ್ಯೆ ಸುಮಾರು 2006ಕ್ಕೆ ಏರಿಕೆ ಆಗಿದೆ ಎಂದು ವರದಿಯಾಗಿದೆ. ಇಸ್ರೇಲ್ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ವಿರುದ್ಧ ಮಿಲಿಟರಿ ಕ್ರಮ ತೆಗೆದುಕೊಳ್ತಿರುವುದಾಗಿ ಪ್ರಧಾನಿ ನೆತನ್ಯಾಹು ಹೇಳಿದ್ದಾರೆ. ಲೆಬನಾನ್‌ನ ಸಾಮಾನ್ಯ ಜನರು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಕೇಳಿಕೊಂಡಿದ್ದಾರೆ. ಇಸ್ರೇಲ್‌ನ ಹೋರಾಟ ನಿಮ್ಮ ವಿರುದ್ಧ ಅಲ್ಲ, ಅದು ಹೆಜ್ಬೊಲ್ಲಾ ವಿರುದ್ಧ ಎಂದು ನೆತನ್ಯಾಹು ಲೆಬನಾನ್ ಜನರಿಗೆ ತಿಳಿಸಿದ್ದಾರೆ. ಇಸ್ರೇಲ್ ಗುರಿ ಲೆಬನಾನ್‌ನ ರಾಜಧಾನಿಯಾಗಿದೆ. ದಕ್ಷಿಣ ಲೆಬನಾನ್‌ನಿಂದ ಕನಿಷ್ಠ…
ಸೂರ್ಯೋದಯ: 06:09, ಸೂರ್ಯಾಸ್ತ : 06:07 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ಸಪ್ತಮಿ ನಕ್ಷತ್ರ:ಮೃಗಶಿರ ರಾಹು ಕಾಲ: 03:00 ನಿಂದ 04:30 ತನಕ ಯಮಗಂಡ: 07:30 ನಿಂದ 09:00 ತನಕ ಗುಳಿಕ ಕಾಲ: 10:30 ನಿಂದ 12:00 ತನಕ ಅಮೃತಕಾಲ: ಮ.1:11 ನಿಂದ ಮ.2:46 ತನಕ ಅಭಿಜಿತ್ ಮುಹುರ್ತ: ಬೆ.11:44 ನಿಂದ ಮ.12:31 ತನಕ ಮೇಷ ರಾಶಿ ಯಂತ್ರಗಳ ಬಿಡಿ ಭಾಗಗಳ ಉದ್ಯಮದಾರರಿಗೆ ಆರ್ಥಿಕ ನಷ್ಟ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಭಾಗ್ಯ, ಒಳಸಂಚುಗಳ ಬಗ್ಗೆ ಜಾಗೃತಿ ಇರಲಿ,ರಿಯಲ್ ಎಸ್ಟೇಟ್ ಮತ್ತು ಡೆವಲಪರ್ಸ್ ನವರಿಗೆ ಉದ್ಯಮದಲ್ಲಿ ಚೇತರಿಕೆ,ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ…
ಇನ್ನೇನೂ ಕೆಲವೇ ಕೆಲವು ದಿನಗಳಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭವಾಗಲಿದೆ. ಈ ಬಗ್ಗೆ ಕಿಚ್ಚ ಸುದೀಪ್ ನಿನ್ನೆಯಷ್ಟೆ ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ಮಾಹಿತಿ ನೀಡಿದ್ದಾರೆ. ಈ ಬಾರಿ ಬಿಗ್ಬಾಸ್ ಸ್ಪರ್ಧಿಗಳ ಆಯ್ಕೆ ಭಿನ್ನವಾಗಿರಲಿದೆ, ಕಳೆದ ಬಾರಿ ವೋಟಿಂಗ್ ಆಧಾರದಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿತ್ತು. ಇಬ್ಬರು ಸ್ಪರ್ಧಿಗಳನ್ನು ವೇದಿಕೆ ಮೇಲಿಂದಲೇ ವಾಪಸ್ ಕಳಿಸಲಾಗಿತ್ತು. ಕಡಿಮೆ ಮತ ಪಡೆದ ಕೆಲವರನ್ನು ಹೋಲ್ಡ್ನಲ್ಲಿ ಇಡಲಾಗಿತ್ತು. ಈ ಬಾರಿ ವೋಟಿಂಗ್ ಇರಲಿದೆಯಾದರೂ ಕಳೆದ ಬಾರಿಗಿಂತಲೂ ಭಿನ್ನವಾಗಿರಲಿದೆ ಎನ್ನಲಾಗುತ್ತಿದೆ. ಇನ್ನು ಈ ಬಾರಿ ಯಾವ ಸೆಲೆಬ್ರಿಟಿಗಳು ಬಿಗ್ಬಾಸ್ ಮನೆಗೆ ಹೋಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಈಗಾಗಲೇ ಕೆಲವು ಹೆಸರುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿವೆ. ಅದರಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವುದು ನಟ ಸುನಿಲ್ ಹೆಸರು. ‘ಎಕ್ಸ್ಕ್ಯೂಸ್ ಮೀ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಸುನಿಲ್ ಈ ಬಾರಿ ಬಿಗ್ಬಾಸ್ ಮನೆಗೆ ಹೋಗಲಿದ್ದಾರೆ ಎಂಬ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿದೆ. ನಟ ಸುನೀಲ್ ಸಾಕಷ್ಟು ಸಮಯದಿಂದ…
ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನರಸಪ್ಪ (65) ತೋಟದಲ್ಲಿ ಗಾಂಜಾ ಬೆಳೆದಿದ್ದ ಬಂಧಿತ ಆರೋಪಿಯಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಅಪೇಗೌಡನ ಪಾಳ್ಯ ಗ್ರಾಮದ ತೋಟದಲ್ಲೇ ಗಾಂಜಾ ಬೆಳೆದು ಮಾರಾಟ ಮಾಡ್ತಿದ್ದನು. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಬಂಧಿತನಿಂದ ಒಂದು ಲಕ್ಷ 67500 ರು ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾ ವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕಲಬುರಗಿ: ಅಣ್ಣನ ಪ್ರೇಮ ಪ್ರಕರಣಕ್ಕೆ ತಮ್ಮನನ್ನು ಕಲಬುರಗಿಯಲ್ಲಿ ಬರ್ಬರ ಕೊಲೆ ಮಾಡಿರುವ ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಪೊಲೀಸರು ಯುವತಿ ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಲಬುರಗಿ ಹೊರವಲಯದ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಎಂಬ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ವಿಶ್ವವಿದ್ಯಾಲಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಅದೇ ಗ್ರಾಮದ ರಾಜಕುಮಾರ್, ವರುಣ್ ಕುಮಾರ್, ಸಿದ್ದು, ಪ್ರಜ್ವಲ್, ಜಯಮ್ಮ, ಆಕೆಯ ಮಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ರಾಜಕುಮಾರ್, ಜಯಮ್ಮ ದಂಪತಿ ಮಗಳನ್ನು ಕೊಲೆಯಾದ ಸುಮೀತ್ ಸಹೋದರ ಸಚಿನ್ ಲವ್ ಮಾಡುತ್ತಿದ್ದ. ಹೀಗಾಗಿ ಸಚಿನ್‌ಗೆ ಬೆದರಿಕೆ ಹಾಕಲು ಪ್ಲ್ಯಾನ್ ಮಾಡಿ ಸಚಿನ್ ಸಹೋದರ ಸಮೀತ್ ಜೊತೆ ನಾಗನಹಳ್ಳಿ ಗ್ರಾಮದಲ್ಲಿ ಯುವತಿಯ ಕುಟುಂಬಸ್ಥರು ಜಗಳವಾಡಿದ್ದರು. ಈ ವೇಳೆ ಸುಮಿತ್‌ಗೆ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಸದ್ಯ ಎಲ್ಲಾ ಆರೋಪಿಗಳನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ತಿರುಪತಿ ದೇವಸ್ಥಾನದ ಪ್ರಸಾದವಾದ ಲಾಡುಗಳಿಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿ ಜನರು ಆತಂಕಗೊಂಡಿರುವ ಬೆನ್ನಲ್ಲೇತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ಪವಿತ್ರ ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದೆ. ಗೊಲ್ಲಗುಡೆಂ ಪಂಚಾಯತ್‌ನ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ ತೆರಳಿದ್ದರು. ಪ್ರಸಾದ ರೂಪದಲ್ಲಿ ತಂದಿದ್ದ ಲಡ್ಡುವಿನಲ್ಲಿ ಸಣ್ಣ ಪೇಪರ್‌ನಲ್ಲಿ ಕಟ್ಟಿದ್ದ ಗುಟ್ಕಾ ಪತ್ತೆಯಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿರುವುದು ಇದೇ ಮೊದಲಲ್ಲ. 2012ರಲ್ಲೂ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಗಮನಾರ್ಹ. ಈಗಾಗಲೇ ತುಪ್ಪದಲ್ಲಿ ಕಲಬೆರಕೆ ವಿಷಯ ವಿವಾದವಾಗಿದ್ದು, ಈ ಬೆನ್ನಲ್ಲೇ ಗುಟ್ಕಾ…
ವಿಜಯಪುರ:- ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ ಸಂಚಾರ ರದ್ದಾಗಲಿದೆ, ದಿನಾಂಕ ಇಲ್ಲಿದೆ ಮಾಹಿತಿ.ಸೆಪ್ಟೆಂಬರ್ 29 ರಿಂದ ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲ ರೈಲುಗಳ ಸಂಚಾರ ಬಾಗಲಕೋಟೆ-ವಿಜಯಪುರ ನಡುವೆ ರದ್ದಾಗಲಿದೆ. ಕೆಲವು ರೈಲುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ರೈಲು ರದ್ದು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 06919 ಎಸ್‌ಎಸ್‌ಎಸ್ ಹುಬ್ಬಳ್ಳಿ- ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ರೈಲು ಸಂಖ್ಯೆ 06920 ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟೆ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ. ಸೆಪ್ಟೆಂಬರ್ 28…