Author: Prajatv Kannada

ಬೆಂಗಳೂರು:- ತಿರುಪತಿ ಲಡ್ಡು ವಿವಾದ ಹಿನ್ನೆಲೆ, ಇಂದು ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಶುದ್ದಿಕರಣ ನಡೆಯಲಿದ್ದು, ಇಂದು ಭಕ್ತದಿಗಳಿಗೆ ದೇವರ ದರ್ಶನಕ್ಕೆ ಬ್ರೇಕ್‌ ಹಾಕಲಾಗಿದೆ. ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ವಿವಾದ ಹಿನ್ನೆಲೆ ಸಧ್ಯ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗಿದೆ.‌ ಇದನ್ನ ಕೊಂಚಮಟ್ಟಿಗಾದ್ರು ಸರಿಪಡಿಸುವ ಸಲುವಾಗಿ ನಿನ್ನೆ ತಿರುಪತಿಯಲ್ಲಿ ಶಾಂತಿ ಹೋಮ ಮಾಡಿ ಪಂಚಗವ್ಯ ಸಂಪೋಕ್ಷಣೆ ಮಾಡಲಾಗಿದೆ.‌ ಅದರಂತೆ ಇಂದು ಬೆಂಗಳೂರು ನಗರದ ಟಿಟಿಡಿ ದೇವಸ್ಥಾನದಲ್ಲೂ ಶುದ್ಧೀಕರಣಕ್ಕೆ ಅಣಿ ಮಾಡಿದ್ದು, ಇಂದು ಬೆಳ್ಳಗ್ಗೆಯಿಂದ ಆರಂಭವಾಗಲಿದೆ. ಇನ್ನು ಇಂದು ಶುದ್ದೀಕರಣ ಮಾಡಿ ಇದೇ ಶುಕ್ರವಾರದಿಂದ ಭಾನುವಾರದವರೆಗೂ ಪವಿತ್ರೋತ್ಸವ ಮಾಡಲಾಗುತ್ತಿದೆ. ಈ ಪವಿತ್ರತ್ರೋತ್ಸೋವಕ್ಕೆ ತಿರುಪತಿಯಿಂದಲೇ ಅರ್ಚಕರುಗಳು ಬರಲಿದ್ದು, ಟಿಟಿಡಿ ದೇವಸ್ಥಾನವನ್ನ ಸಂಪೂರ್ಣವಾಗಿ ಶುದ್ದೀಕರಸಿ, ವಿಶೇಷ ಪೂಜೆಗಳು ನೆರೆವೇರಿಸಲಾಗುತ್ತಿದೆ. ಮತ್ತೊಂದೆಡೆ ಮುಜುರಾಯಿ ದೇವಸ್ಥಾನಗಳ ಮೇಲೂ ಈ ಎಫೆಕ್ಟ್ ಬೀರಿದ್ದು,‌ ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಇನ್ಮುಂದೆ ಫುಡ್ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಸಧ್ಯ ಮುಜುರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 30…

Read More

ಬೆಂಗಳೂರು:- ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​ ಗೆ ಸಂಬಧಪಟ್ಟಂತೆ ಓರ್ವ ಅಧಿಕಾರಿನ್ನು ಸಸ್ಪೆಂಡ್ ಮಾಡಲಾಗಿದೆ. ಗೇಟ್‌ನ ಸಾಮರ್ಥ್ಯಕ್ಕೆ ತಕ್ಕಂತೆ ಕೀಲುಗಳನ್ನು ಅಳವಡಿಸದಿರುವುದು, ಸರಿಯಾದ ಸಮಯಕ್ಕೆ ನಿರ್ವಹಣೆ ಮಾಡದ ಆರೋಪದಡಿ ಸಸ್ಪೆಂಡ್ ಮಾಡಿ ಬಿಬಿಎಂಪಿ ಅಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 2022ರಲ್ಲಿ ದತ್ತಾತ್ರೇಯ ವಾರ್ಡ್‌ನ ಎಇ ಆಗಿದ್ದ ಶ್ರೀನಿವಾಸ ರಾಜು, ಪ್ರಸ್ತುತ ರಾಜಾಜಿನಗರ ವಾರ್ಡ್‌ನ ಎಇ ಆಗಿದ್ದರು. ಘಟನೆ ಬಗ್ಗೆ ಮೂರು ದಿನಗಳಲ್ಲಿ ನೋಟಿಸ್‌ಗೆ ಸೂಕ್ತ ಉತ್ತರ ನೀಡುವಂತೆ ಇಇ ವೆಂಕಟೇಶ್‌ಗೆ ಸೂಚಿಸಲಾಗಿದೆ.

Read More

ಬೆಂಗಳೂರು:- ಬೆಂಗಳೂರು ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಸ್ಪೋಟಕ ಮಾಹಿತಿ ಕೊಟ್ಟಿದ್ದಾರೆ.ಕೊಲೆ ಪ್ರಕರಣ ಬೆಳಕಿಗೆ ಬಂದು ಎರಡು ದಿನದಲ್ಲಿ ಹಂತಕನ ಮಾಹಿತಿ ಖಾಕಿಗೆ ಸಿಕ್ಕಿದೆ. ಆದರೆ ಆತ ಯಾರು? ಎಲ್ಲಿಯವನು? ಯಾಕಾಗಿ ಕೊಲೆ ಮಾಡಿದ್ದ ಅನ್ನೋದು ಮಾತ್ರ ಇನ್ನೂ ನಿಗೂಢ. 29 ವರ್ಷದ ಮಹಾಲಕ್ಷ್ಮಿ ಮೃತದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದ್ದ ಕೇಸ್ ತನಿಖೆ ಚುರುಕುಗೊಂಡಿದೆ. ಅನುಮಾನಸ್ಪದ ವ್ಯಕ್ತಿಗಳನ್ನ ಖಾಕಿ ಪಡೆ ಒಬ್ಬಬ್ಬರಾಗಿ ವಿಚಾರಣೆ ಮಾಡ್ತಿದೆ. ಸಿಕ್ಕಿರೋ ಸಾಕ್ಷಿಗಳನ್ನ ಆಧರಿಸಿ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸ್ತಿದ್ದಾರೆ. ಆದರೆ ಕೊಲೆಗಾರ ಯಾರು ಅನ್ನೋದು ದೊಡ್ಡ ಪ್ರಶ್ನೆಯಾಗಿರೋ ಹೊತ್ತಲ್ಲೇ ಹಂತಕನ ಸುಳಿವು ಪತ್ತೆಯಾಗಿದೆ ಅಂತ ಖುದ್ದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ಇಂದೆಂದೂ ಕಂಡರಿಯದ ಘೋರ ಸೃಷ್ಟಿಸಿದ್ದವನ ಸುಳಿವು ಸಿಕ್ಕಿದೆ. ಪೊಲೀಸರು ಹಗಲು ರಾತ್ರಿ ಶ್ರಮಕ್ಕೆ ಫಲ‌ ಸಿಕ್ತಿದೆ. ಆದ್ರೆ ಕಮಿಷನರ್ ಹೇಳಿದಂತೆ ಹೊರರಾಜ್ಯದವನಾಗಿರೋ ಬೆಂಗಳೂರಿನಲ್ಲೇ ವಾಸವಿದ್ದ ಆ ಆರೋಪಿ ಯಾರು ಅನ್ನೊದೇ ಯಕ್ಷ ಪ್ರಶ್ನೆ. ಸದ್ಯ ಈತನ…

Read More

ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗಾವಣೆ ಗೊಂಡಿದೆ. ಬಿಕೆ ಸಿಂಗ್ ನೇತೃತ್ವದ ಎಸ್‌ಐಟಿ, ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಅವರನ್ನು ಬಾಡಿವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಈ ಸಂಬಂಧ ಎಸ್‌ಐಟಿ ಅರ್ಜಿ ಹಾಕಿಕೊಂಡಿದೆ. ಈ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಈ ಮಧ್ಯೆ ಕಗ್ಗಲಿಪುರದಲ್ಲಿ ದಾಖಲಾಗಿರುವ ರೇಪ್ ಕೇಸ್ ಸಂಬಂಧ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ. ಮುನಿರತ್ನ ಪ್ರಕರಣಗಳನ್ನು ಎಸ್‌ಐಟಿಗೆ ವಹಿಸಿರೋದನ್ನು ಗೃಹ ಸಚಿವ ಪರಮೇಶ್ವರ್‌ ಸಮರ್ಥನೆ ಮಾಡಿಕೊಂಡಿದ್ದಾರೆ.

Read More

ಬೆಂಗಳೂರು:- DCM ಡಿಕೆ ಶಿವಕುಮಾರ್ ಅವರು, ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ್ದು, 14,307 ರಸ್ತೆಗುಂಡಿಗಳಿಗೆ ಮುಕ್ತಿ ಸಿಕ್ಕಿದೆ. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು. ಸಿಲಿಕಾನ್ ಸಿಟಿ, ಟೆಕ್‌ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ಹೀಗಾಗಿ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು. ಸುಮಾರು ರಾತ್ರಿ 11:30ರ ವೇಳೆಗೆ ಪ್ರದಕ್ಷಿಣೆ ಆರಂಭಿಸಿದ ಡಿಸಿಎಂ ಮಧ್ಯರಾತ್ರಿ 2 ಗಂಟೆವರೆಗೂ ಪ್ರದಕ್ಷಿಣೆ ನಡೆಸಿದರು. ಖುದ್ದು ರಸ್ತೆಗಿಳಿದ ಡಿಸಿಎಂ, ಜಯಮಹಲ್ ರಸ್ತೆಯ ಪ್ಯಾಚ್ ವರ್ಕ್ ವೀಕ್ಷಣೆ ವೇಳೆ ಆರೆಯಿಂದ ನೆಲಕ್ಕೆ ಗುದ್ದಿ ಪರಿಶೀಲನೆ ನಡೆಸಿದರು. ನಂತರ ಟ್ರಿನಿಟಿ ಜಂಕ್ಷನ್‌ನಲ್ಲಿ ಡಾಂಬರೀಕರಣಕ್ಕೂ ಮುನ್ನ…

Read More

ಕಿರಣ್ ರಾವ್ ನಿರ್ದೇಶನದ, ಆಮಿರ್ ಖಾನ್ ನಿರ್ಮಾಣದ ಲಾಪತಾ ಲೇಡೀಸ್ ಸಿನಿಮಾ ಅಧಿಕೃತವಾಗಿ 2024ರ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಆಯ್ಕೆಯಾಗಿದೆ. ಈ ವರ್ಷ ಮಾರ್ಚ್​ 1ರಂದು ತೆರೆಕಂಡ ಈ ಚಿತ್ರದಲ್ಲಿ ಸ್ಪರ್ಶ್​ ಶ್ರೀವಾಸ್ತವ್, ನಿತಾಂಶಿ ಗೋಯಲ್​, ಪ್ರತಿಭಾ ರಂಟಾ, ರವಿ ಕಿಶನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದಕ್ಕೆ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್​ ರಾವ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನಮ್ಮ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದು ಇಡೀ ತಂಡದ ಪರಿಶ್ರಮ ಮತ್ತು ಪ್ಯಾಷನ್​ಗೆ ಸಾಕ್ಷಿಯಾಗಿದೆ. ಸಿನಿಮಾ ಎಂಬುದು ಯಾವಾಗಲೂ ಹೃದಯಗಳನ್ನು ಬೆಸೆಯುವ, ಅರ್ಥಪೂರ್ಣ ಸಂವಹನ ನಡೆಸುವ ಹಾಗೂ ಗಡಿಗಳನ್ನು ಮೀರುವ ಮಾಧ್ಯಮವಾಗಿದೆ. ಭಾರತೀಯರಿಗೆ ಇಷ್ಟ ಆದ ರೀತಿಯೇ ಜಗತ್ತಿನಾದ್ಯಂತ ಇರುವ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದು ಕಿರಣ್​ ರಾವ್​ ಹೇಳಿದ್ದಾರೆ. ‘ಲಾಪತಾ ಲೇಡೀಸ್​ ಸಿನಿಮಾ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಮತ್ತು ಆಯ್ಕೆ ಸಮಿತಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.…

Read More

ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಭಾಗಿಯಾಗಲು ಅಮೆರಿಕಕ್ಕೆ ತೆರಳಿದ್ದ ಪ್ರಧಾನಿ ಮೋದಿ ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿ ಮಾಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ. ಸದ್ಯ ಶೃಂಗ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಕೂಡ ಉಪಸ್ಥಿತರಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತಿದೆ. ಇದೇ ವೇಳೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿ‌ರ್ ಝಲೆನ್‌ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿಯ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್‌ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ…

Read More

ಕೊನೆಗೂ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭವಾಗಲಿದೆ. ಇದೇ ಸೆ.28ರಂದು ಸಂಜೆ 6 ಗಂಟೆಗೆ ಗ್ರ್ಯಾಂಡ್ ಓಪನಿಂಗ್ ಇರಲಿದೆ. ಅಂದ ಹಾಗೆ ಈ ಬಾರಿ ಬಿಗ್ ಬಾಸ್ ಕಾರ್ಯಕ್ರಮವನ್ನು ಸುದೀಪ್ ನಿರೂಪಣೆ ಮಾಡುತ್ತಾರಾ? ಇಲ್ವಾ? ಎಂಬ ಪ್ರಶ್ನೆ ಚರ್ಚೆಗೆ ಗ್ರಾಸವಾಗಿತ್ತು. ಆ ನಂತರ ಬಿಗ್ ಬಾಸ್ ಪ್ರೋಮೋ ಮೂಲಕ ಎಲ್ಲಾ ವದಂತಿಗಳಿಗೂ ಉತ್ತರ ಸಿಕ್ಕಿತ್ತು. ಆದರೆ ಅಸಲಿಗೆ ಏನಾಗಿತ್ತು ಎಂದು ಸುದೀಪ್‌ ತಿಳಿಸಿದ್ದಾರೆ. ಈ ಸೀಸನ್ ನಿರೂಪಣೆ ಮಾಡೋದು ಬೇಡ ಅಂತ ಯೋಚನೆ ಮಾಡಿದ್ದು ನಿಜ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಕಳೆದ 10 ವರ್ಷಗಳಿಂದ `ಬಿಗ್ ಬಾಸ್’ ಶೋ ನಿರೂಪಣೆ ಮಾಡುತ್ತಲೇ ಬಂದಿದ್ದೇನೆ. ಈ ಬಾರಿ ಬೇರೆಯವರು ನಿರೂಪಣೆ ಮಾಡಲಿ ಎಂದೇ ನಿರ್ಧರಿಸಿದ್ದೆ. ಹಾಗಂತ ವಾಹಿನಿಯ ಜೊತೆ ಒಡನಾಟ ಚೆನ್ನಾಗಿರಲಿಲ್ಲ ಅಂತ ಅಲ್ಲ. ತಂಡ ನನ್ನನ್ನು ತಂಬಾ ಚೆನ್ನಾಗಿ ನೋಡಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಪ್ರತಿ ಬಾರಿ ಬಿಗ್ ಬಾಸ್ ಶುರು ಆಗ್ತಿದ್ದಂತೆ ನನ್ನ ಲೈಫ್…

Read More

ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ನಟನೆಯ ಜೊತೆಗೆ ನಿರೂಪಣೆಯಲ್ಲಿಯೂ ಸೈ ಎನಿಸಿಕೊಂಡಿದ್ದಾರೆ. ಬಿಗ್ ಬಾಸ್ ಆರಂಭವಾದಾಗಿನಿಂದಲೂ ನಿರೂಪಣೆ ಮಾಡಿಕೊಂಡು ಬರುತ್ತಿರುವ ಸುದೀಪ್ ಗೆ ದೊಡ್ಡ ಅಭಿಮಾನಿಗಳ ಬಳಗವಿದೆ. ಈ ಭಾರಿ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿಲ್ಲ ಎಂಬ ಸುದ್ದಿ ಹರಿದಾಡಿದಾಗ ಸಾಕಷ್ಟು ಮಂದಿ ವಿರೋಧಿಸಿದ್ದರು. ಈ ಮಧ್ಯೆ ಇಂಟರೆಸ್ಟಿಂಗ್‌ ವಿಚಾರವೊಂದನ್ನು ರಿವೀಲ್‌ ಮಾಡಿದ್ದಾರೆ. ಬಿಗ್ ಬಾಸ್ 10 ಸೀಸನ್ ಮುಗಿಸಿ 11ನೇ ಸೀಸನ್‌ಗೆ ಕಾಲಿಡುತ್ತಿರುವ ಕಾರ್ಯಕ್ರಮಕ್ಕೆ ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಎಂಬುದರ ಬಗ್ಗೆ ನಟ ತಿಳಿಸಿದ್ದಾರೆ. ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಈ ಶೋಗೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ನಟನಿಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ನಟ ಪ್ರತಿಕ್ರಿಯಿಸಿ, ನನ್ನ ತಟ್ಟೆ ಎಷ್ಟು ಅಗಲ ಇದೆಯೋ ನಾನಷ್ಟು ಊಟ ಮಾಡುತ್ತೇನೆ. ನನಗೆ ಯೋಗ್ಯತೆ ಎಷ್ಟು ಇದೆಯೋ ನಾನಷ್ಟೇ ದುಡಿಯೋದು ಎಂದಿದ್ದಾರೆ. ಇದು ನನ್ನ ಹೊಸ ಅಧ್ಯಾಯ ಎಂದು ಹೇಳಿ ಸುದೀಪ್ ನಕ್ಕಿದ್ದಾರೆ. ಈ ಸೀಸನ್ ನಾನು ಮಾಡಲ್ಲ ಅಂತ…

Read More

ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆ.29ರಂದು ಗ್ರ್ಯಾಂಡ್ ಓಪನಿಂಗ್ ಆಗಲಿದ್ದು ಈ ಮಧ್ಯೆ ಬಿಗ್ ಬಾಸ್ ಟೀಂ ಪ್ರೇಕ್ಷಕರಿಗೆ ಸಿಹಿಸುದ್ದಿಯೊಂದು ನೀಡಿದೆ. ದೊಡ್ಮನೆ ಆಟ ಶುರುವಾಗುವ ಮೊದಲೇ ಬಿಗ್ ಬಾಸ್ ಗೆ ಕಾಲಿಡುವ ಸ್ಪರ್ಧಿಯ ಹೆಸರನ್ನು ರಿವೀಲ್ ಮಾಡಲು ವಾಹಿನಿ ನಿರ್ಧರಿಸಿದೆ. ಬಿಗ್ ಬಾಸ್ ಲಾಂಚ್ ಗೂ ಮೊದಲೇ‌ ಕಂಟೆಸ್ಟೆಂಟ್ ಗಳ ಹೆಸರನ್ನು ರಿವೀಲ್ ಮಾಡುವ ಪ್ಲ್ಯಾನ್ ಇದೆ ಎಂದು ಕಲರ್ಸ್ ವಾಹಿನಿಯ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ತಿಳಿಸಿದ್ದಾರೆ. ಸೆ.28ರಂದು ಸಂಜೆ 6ಕ್ಕೆ ‘ರಾಜಾ ರಾಣಿ ರೀಲೋಡ್’ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದ್ದು, ಇದರಲ್ಲಿ ಕೆಲ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡೋದಾಗಿ ತಿಳಿಸಿದ್ದಾರೆ. ಬಿಗ್ ಬಾಸ್ ಲಾಂಚ್ ಗಿಂತ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್ ಆಗುತ್ತಿರೋದು ಈ ಸೀಸನ್ ಸ್ಪೆಷಾಲಿಟಿ ಎಂದಿದ್ದಾರೆ. ಕಳೆದ ಸೀಸನ್ ಗಿಂತ ಭಿನ್ನವಾಗಿರುವ ಸ್ಪರ್ಧಿಗಳೇ ಬರಲಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನೂ ಸೆ.29ರಂದು ಸಂಜೆ 6ಕ್ಕೆ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದ್ದು,…

Read More