ಬೆಂಗಳೂರು/ಮೈಸೂರು: ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿ ರಾಜ್ಯಪಾಲರು ನೀಡಿರುವ ಆದೇಶ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠದದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಏಕಸದಸ್ಯ ಪೀಠ ಆದೇಶ ನೀಡಿದ ಬರೋಬ್ಬರಿ 1 ತಿಂಗಳ ನಂತರ, ಸಾಕಷ್ಟು ಅಳೆದುತೂಗಿ ಸಿದ್ದರಾಮಯ್ಯ ಕಾನೂನಾತ್ಮಕವಾಗಿ ಮುಂದಡಿ ಇಟ್ಟಿದ್ದಾರೆ. ಈ ಅರ್ಜಿ ವಿಚಾರಣೆ ದಿನಾಂಕ ಇನ್ನಷ್ಟೇ ನಿಗದಿ ಆಗಬೇಕಿದೆ. ಇದೇ ವೇಳೆ, ಮುಡಾ ಕೇಸ್ ತನಿಖೆ ಜೋರಾಗಿದೆ. ಇತ್ತೀಚೆಗಷ್ಟೇ ಮುಡಾ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದ ಇಡಿ ಈಗ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ತಹಸೀಲ್ದಾರ್ ರಾಜಶೇಖರ್ ಸೇರಿ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ಕೊಟ್ಟಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇತ್ತ, ಲೋಕಾಯುಕ್ತ ತನಿಖೆಯೂ ಚುರುಕಾಗಿದೆ. 2004ರಲ್ಲಿ ಮೈಸೂರಿನ ಹೆಚ್ಚುವರಿ ಡಿಸಿ ಆಗಿದ್ದ ಪಾಲಯ್ಯರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. 2003ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಹಾಗೂ ಅಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದ ಸುಬ್ರಹ್ಮಣ್ಯರಾವ್‌ರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ. ಕಳೆದ ವಾರ ಲೋಕಾಯುಕ್ತ ವಿಚಾರಣೆ…
Author: Prajatv Kannada
ಬೆಂಗಳೂರು: ನಗರದ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದು ದೊಡ್ಡ ದುರಂತವೇ ಸಂಭವಿಸಿತ್ತು. ಇದುವರೆಗೂ 8 ಜನ ಕಾರ್ಮಿಕರು ಸಾವನ್ನಪ್ಪಿದ್ದರೆ, 8 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ಬೀಳುವ ಹಂತದಲ್ಲಿದ್ದ ಮತ್ತೊಂದು ಅನಧಿಕೃತ ಕಟ್ಟಡದ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮಹಾದೇವಪುರ ವಲಯದ ಹೊರಮಾವಿನ ನಂಜಪ್ಪ ಗಾರ್ಡನ್‌ನಲ್ಲಿ ಪುಟ್ಟಪ್ಪ ಎಂಬವರು 10*25 ಅಡಿಯಲ್ಲಿ ಜಾಗದಲ್ಲಿ 6 ಅಂತಸ್ತಿನ ಕಟ್ಟಡವನ್ನು ನಿರ್ಮಿಸಿದ್ದರು. ವಾಲಿಕೊಂಡಿರುವ ಕಟ್ಟಡವನ್ನು ತೆರವುಗೊಳಿಸಲು ಬಿಬಿಎಂಪಿ ಸೂಚನೆ ನೀಡುತ್ತಿದ್ದಂತೆ ಸ್ವಯಂಪ್ರೇರಿತವಾಗಿ ಮಾಲೀಕರೇ ಈಗ ಕಟ್ಟಡ ತೆರವು ಮಾಡಲು ಮುಂದಾಗಿದ್ದಾರೆ. ಕಟ್ಟಡ ತೆರವು ಮಾಡದಿದ್ದರೆ ಕ್ರಿಮಿನಲ್ ಕೇಸ್ ಹಾಕುವ ಎಚ್ಚರಿಕೆಯನ್ನು ಪಾಲಿಕೆ ನೀಡಿತ್ತು. ಈ ಬೆನ್ನಲ್ಲೇ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ಮಾಲೀಕರೇ ಈ ಕಟ್ಟಡವನ್ನು ತೆರವು ಮಾಡಲು ಮುಂದಾಗಿದ್ದಾರೆ. ಅಕ್ಕಪಕ್ಕದಲ್ಲಿ ಮನೆಗಳು ಇರುವ ಕಾರಣ ಈಗ ಕೆಲಸಗಾರರು ಸುತ್ತಿಗೆಯಿಂದ ಬಡಿದು ಕಟ್ಟಡವನ್ನು ಒಡೆಯುತ್ತಿದ್ದಾರೆ. ಮೇಲ್ಭಾಗ ಕಟ್ಟಡ ತೆರವು ಮುಗಿದ ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ಮಾಡಲಾಗುತ್ತದೆ.
ದೇವನಹಳ್ಳಿ: ಖಾಸಗಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು ‘ ಲೋಕಾಯುಕ್ತ ಬಲೆಗೆ ಬೆಸ್ಕಾಂ ಜೆಇ ನಾಗೇಶ್ ಬಿದಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯ ಬೆಸ್ಕಾಂ ಎಇಇ ರಮೇಶ್ ಬಾಬು ಮತ್ತು ಜೆಇ ನಾಗೇಶ್ರಿಂದ ಬೊಮ್ಮನಹಳ್ಳಿ ಗ್ರಾಮದ ಜಮೀನಿನ ಲೇಔಟ್ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ವಿಜಯಕುಮಾರ್ ಎಂಬುವವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅದೇ ರೀತಿ ಇಂದು ಬೊಮ್ಮನಹಳ್ಳಿಯ ಮಾರ್ಟ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾ ಬಲೆಗೆ ನಾಗೇಶ್ ಬಿದಿದ್ದಾರೆ. ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಬಿದಿದ್ದಾರೆ. ಲೋಕಾಯುಕ್ತ ಅಧಿಕಾರಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.
ಅಲ್ಲು ಅರ್ಜುನ್ ಹಾಗೂ ಪವನ್ ಕಲ್ಯಾಣ್ ಒಂದೇ ಕುಟುಂಬಕ್ಕೆ ಸೇರಿದವರಾದರೂ ಇಬ್ಬರ ನಡುವೆ ಮುನಿಸು ಆರಂಭವಾಗಿದೆ. ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಲ್ಲುಅರ್ಜುನ್, ಪವನ್ ಕಲ್ಯಾಣ್ ಎದುರಾಳಿ ಪಕ್ಷವಾದ ವೈಸಿಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದು ಇಬ್ಬರ ನಡುವಿನ ಮುನಿಸಿಗೆ ಕಾರಣವಾಗಿದೆ. ಆ ಘಟನೆ ನಡೆದ ಬಳಿಕವೂ ಸಹ ಇಬ್ಬರೂ ಪರಸ್ಪರರ ಬಗ್ಗೆ ಬೇರೆ ಬೇರೆ ವೇದಿಕೆಗಳಲ್ಲಿ ಪರೋಕ್ಷವಾಗಿ ಋಣಾತ್ಮಕವಾಗಿ ಮಾತನಾಡಿರುವುದು ಬಿರುಕು ಇನ್ನಷ್ಟು ಹೆಚ್ಚಾಗಲು ಕಾರಣವಾಗಿದೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಪವನ್ ಹಾಗೂ ಅಲ್ಲು ಅರ್ಜುನ್ ನಡುವಿನ ಮುನಿಸು ‘ಪುಷ್ಪ 2’ ಸಿನಿಮಾ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರದ ನಿರ್ಮಾಪಕ ನವೀನ್ ಯೆರಿನೇನಿ ಸ್ಪಷ್ಟನೆ ನೀಡಿದ್ದಾರೆ ‘ಚುನಾವಣೆ ಸಮಯದಲ್ಲಿ ಕೆಲವು ಸಣ್ಣ ಪುಟ್ಟ ಘಟನೆಗಳು ನಡೆದಿದ್ದವು. ಆದರೆ ಅದೆಲ್ಲವೂ ನಡೆದು ಹೋದ ಸಂಗತಿಗಳು, ಈಗ ಅವಕ್ಕೆ ಪ್ರಾಮುಖ್ಯತೆ ಇಲ್ಲ. ಮೆಗಾ ಕುಟುಂಬದ…
ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಪುಟ್ಟಕ್ಕನ್ನ ಮಕ್ಕಳು ಧಾರವಾಹಿ ಆರಂಭದಿಂದಲೂ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದೆ. ಅದರಲ್ಲೂ ಡಿಸಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸ್ನೇಹಾ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇದೀಗ ಪುಟ್ಟಕ್ಕನ ಮಕ್ಕಳು ಧಾರವಾಹಿಯಲ್ಲಿ ಸ್ನೇಹಾ ಪಾತ್ರಧಾರಿ ನಿಧನರಾಗಿದ್ದು ಧಾರವಾಹಿ ಪ್ರೇಕ್ಷಕರು ಬೇಸರಗೊಂಡಿದ್ದಾರೆ. ಸ್ನೇಹಾ ಅಲಿಯಾಸ್ ಸಂಜನಾ ಬುರ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಿಂದ ಹೊರ ಬರುತ್ತಿದ್ದಾರೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಇದಕ್ಕೆ ಆಕೆ ಮಾಡಿದ್ದ ಪೋಸ್ಟ್ ಕೂಡ ಕಾರಣವಾಗಿತ್ತು. ‘ಕೆಲವೊಂದಕ್ಕೆ ವಿದಾಯ ಹೇಳುವುದು ತುಂಬಾ ಕಷ್ಟ. ಆದರೆ ಕೆಲವೊಂದು ಬೆಳವಣಿಗೆಗೆ ಇದು ಬಹಳ ಅವಶ್ಯಕ ಆಗಿದೆ’ ಎಂದು ಬರೆದುಕೊಂಡಿದ್ದರು. ಈಗ ‘ಪುಟ್ಟಕ್ಕ ಮಕ್ಕಳು’ ಧಾರಾವಾಹಿಯಲ್ಲಿ ಬಂದ ತಿರುವು ನೋಡಿ ಪಾತ್ರ ಕೊನೆ ಆಗೋದು ಖಚಿತ ಎಂದು ವೀಕ್ಷಕರು ಅಂದುಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸಂಜನಾ ಅವರು ಡಿಸಿ ಸ್ನೇಹಾ ಹೆಸರಿನ ಪಾತ್ರ ಮಾಡುತ್ತಿದ್ದರು. ಅವರು ಬಂಗಾರಮ್ಮನ ಜೊತೆ ಅಮ್ಮ ಪುಟ್ಟಕ್ಕನ ಬರ್ತ್ಡೇ ಆಚರಿಸಿಕೊಳ್ಳಲು ಹೊರಟಿದ್ದರು. ಆಗ ಟ್ರಕ್ ಒಂದು ಬಂದು ಇವರು ಚಲಿಸುತ್ತಿದ್ದ ಕಾರಿಗೆ…
ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಡ್ರೋನ್ ಪ್ರತಾಪ್ ಮೇಲಿನ ಅಭಿಪ್ರಾಯವೇ ಬದಲಾಗಿದೆ. ಈ ಹಿಂದೆ ಆತನನ್ನು ಆಡಿಕೊಂಡ ನಕ್ಕವರು ಬಳಿಕ ಆತನ ವರ್ತನೆ ನೋಡಿ ಶಹಭಾಷ್ ಎಂದಿದ್ದರು. ಬಿಗ್ ಬಾಸ್ ಮನೆಯಲ್ಲಿ ತನಗೆ ಸಿಕ್ಕ ಬಹುಮಾನವನ್ನು ದಾನ ಮಾಡಿ ನೋಡುಗರ ಕಣ್ಣಲ್ಲಿ ಹೀರೋ ಆಗಿದ್ದ. ಇದೀಗ ಪ್ರತಾಪ್ ಆಡಿಕೊಂಡವರ ಬಾಯಿ ಮುಚ್ಚಿಸಿದ್ದಾರೆ.ಕೊನೆಗೂ ಡ್ರೋನ್ ಹಾರಿಸಿ ಸೈ ಎನಿಸಿಕೊಂಡಿದ್ದಾರೆ. ಇಂಥಾ ಡ್ರೋನ್ ಪ್ರತಾಪ್ ಕಳೆದ ವರ್ಷ ಇದೇ ಸಮಯದಲ್ಲಿ ಬಿಗ್ ಬಾಸ್ ಮನೆಗೆ ತೆರಳಿದ್ದರು. ಆಗ ಡ್ರೋನ್ ಪ್ರತಾಪ್ ಅವರನ್ನು ತುಕಾಲಿ ಸಂತೋಷ್, ವರ್ತೂರ್ ಪ್ರಕಾಶ್ ಸೇರಿ ಅನೇಕರು ಗೇಲಿ ಮಾಡಿದ್ದರು. ಡ್ರೋನ್ ಹೆಸರಿನಲ್ಲಿ ಎಲ್ಲರ ಕಣ್ಣಿಗೆ ಮಣ್ಣೆರಚಿದ್ದೇ ನಿನ್ನ ಬದುಕಿನ ಸಾಧನೆ ಎಂಬಂರ್ಥದಲ್ಲಿ ಕಾಲೆಳೆದಿದ್ದರು. ಡ್ರೋನ್ ಪ್ರತಾಪ ಅವರ ಮನಸನ್ನು ನೋಯಿಸಿದ್ದರು. ಈಗ ಒಂದು ವರ್ಷದ ಬಳಿಕ ತನ್ನನ್ನೂ ಆಡಿಕೊಂಡವರಿಗೆ ಡ್ರೋನ್ ಪ್ರತಾಪ್ ತಮ್ಮ ಕೆಲಸದ ಮೂಲಕ ಉತ್ತರ ನೀಡಿದ್ದಾರೆ. ಹೌದು, ಅಸಲಿಗೆ ಬಿಗ್ ಬಾಸ್ ಮನೆಯಲ್ಲಿದ್ದಾಗ ಡ್ರೋನ್…
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ. ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಿದೆ. ಇನ್ನೂ ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಸಿಪಿವೈ ಬರೋಬ್ಬರಿ 70 ಕೋಟಿ ಮೌಲ್ಯದ ಆಸ್ತಿ ಒಡೆಯ. ಹೆಸರಿನಲ್ಲಿ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಹಾಗೂ 7,25,20,470 ಮೌಲ್ಯದ ಚರಾಸ್ತಿಯನ್ನು ಸಿಪಿವೈ ಹೊಂದಿದ್ದಾರೆ. ಪತ್ನಿ ಶೀಲಾ ಹೆಸರಲ್ಲಿ 25,35,37,740 ಮೌಲ್ಯದ ಸ್ಥಿರಾಸ್ತಿ, 7,10,80,556 ರೂ. ಮೌಲ್ಯದ ಚರಾಸ್ತಿ ಇದೆ. ಯೋಗೇಶ್ವರ್ ಹೆಸರಲ್ಲಿ 22,02,47,157 ರೂ. ಮೌಲ್ಯದ ಮತ್ತು ಪತ್ನಿ ಶೀಲಾ ಹೆಸರಿನಲ್ಲಿ 2,14,52,740 ರೂ. ಮೌಲ್ಯದ ಕೃಷಿ ಭೂಮಿ ಇದೆ. ಪತ್ನಿ ಹೆಸರಿನಲ್ಲಿ 6.65 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ 2,37,62,000 ಕೋಟಿ ಮೌಲ್ಯದ ಮತ್ತು ಶೀಲಾ ಹೆಸರಿನಲ್ಲಿ 15.45 ಕೋಟಿ ಮೌಲ್ಯದ ಮನೆಗಳಿವೆ. ‘ಸೈನಿಕ’ 25,86,31,284 ಸಾಲ ಮಾಡಿದ್ದಾರೆ. ಪತ್ನಿ ಹೆಸರಲ್ಲಿ 3,41,42,184…
ತಮಿಳು ಚಿತ್ರರಂಗದ ಸ್ಟಾರ್ ನಟರಲ್ಲಿ ಸೂರ್ಯ ಕೂಡ ಒಬ್ಬರು. ಇಂದಿಗೂ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ಸೂರ್ಯ ಆಕಸ್ಮಿಕವಾಗಿ ಚಿತ್ರರಂಗ್ಕಕೆ ಎಂಟ್ರಿಕೊಟ್ಟವರು. ಸೂರ್ಯ ತಂದೆ ಶಿವಕುಮಾರ್ ನಟನಾಗಿದ್ದರು ತಾನು ನಟನಾಗಬೇಕು ಎಂದು ಯಾವತ್ತು ಕನಸು ಕಂಡಿರಲಿಲ್ಲ. ತಿಂಗಳಿಗೆ 1200 ರೂಪಾಯಿ ಸಂಬಳದಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯ ಆರ್ಥಿಕ ಪರಿಸ್ಥಿತಿಯಿಂದಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. “ಇದೊಂದು ದೊಡ್ಡ ಕಥೆ. ನನ್ನ ಅಭಿಮಾನಿಗಳಿಗೆ ನನ್ನ ಜೀವನದ ಕಥೆ ಹೇಳಲು ನಾನು ಬಯಸುತ್ತೇನೆ” ಎಂದು ಸೂರ್ಯ ಅವರು ಗಾರ್ಮೆಂಟ್ ಫ್ಯಾಕ್ಟರಿಯಲ್ಲಿನ ಆರಂಭಿಕ ದಿನಗಳ ಬಗ್ಗೆ ಹೇಳಿದ್ದಾರೆ. ತರಬೇತಿ ಪಡೆಯುತ್ತಿದ್ದಾಗ ಮೊದಲ 15 ದಿನಕ್ಕೆ ಕೇವಲ 750 ರೂ. ಮೂರು ವರ್ಷಗಳ ನಂತರ ಸೂರ್ಯ ತಿಂಗಳಿಗೆ 8,000 ರೂ. ಸಂಪಾದಿಸುತ್ತಿದ್ದರಂತೆ.. ಕುಟುಂಬದ ಆರ್ಥಿಕ ಸಂಕಷ್ಟದ ಬಗ್ಗೆ ತಾಯಿ, 25 ಸಾವಿರ ಸಾಲ ಮಾಡಿದ್ದೇನೆ, ನಿಮ್ಮ ತಂದೆಗೆ ಗೊತ್ತಿಲ್ಲ ಎಂದರು. ಆಶ್ಚರ್ಯಗೊಂಡ ಸೂರ್ಯ ಅವರ ಉಳಿತಾಯದ ಬಗ್ಗೆ ವಿಚಾರಿಸಿದಾಗ ಬ್ಯಾಂಕ್ ಬ್ಯಾಲೆನ್ಸ್ ಒಂದು ಲಕ್ಷ ದಾಟಿಲ್ಲ ಎಂದು ತಿಳಿಸಿದರು.…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಜೈಲಿನಲ್ಲಿ ದರ್ಶನ್ ಮೊಬೈಲ್ ಬಳಸಿದ್ದು ಗೊತ್ತಾದ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ಜಾಡು ಹಿಡಿದಿರುವ ಪೊಲೀಸರು ಕೊನೆಗೂ ಮೊಬೈಲ್ ಹಾಗೂ ಸಿಮ್ ನೀಡಿದವರನ್ನು ಪತ್ತೆ ಹಚ್ಚಿದ್ದಾರೆ. ಜೊತೆಗೆ ರಹಸ್ಯವಾಗಿ ದರ್ಶನ್ಗೆ ಸಿಮ್ ಕೊಟ್ಟಿದ್ದು ಹೇಗೆ ಎಂಬುದನ್ನೂ ಬಯಲಿಗೆಳೆದಿದ್ದಾರೆ. ಜೈಲಲ್ಲಿ ದರ್ಶನ್ ವಿಡಿಯೋ ಕಾಲ್ ಮಾಡಿದ್ದ ಕೇಸ್ನಲ್ಲಿ ಆತನಿಗೆ ಮೊಬೈಲ್ ಮತ್ತು ಸಿಮ್ ಕಾರ್ಡ್ ಕೊಟ್ಟಿದ್ದು ಯಾರು ಎಂಬುದೇ ಗೊತ್ತಿರಲಿಲ್ಲ. ಆ ಬಗ್ಗೆ ತನಿಖೆ ಮಾಡುತ್ತಿರುವ ಪರಪ್ಪನ ಅಗ್ರಹಾರ ಪೊಲೀಸರು ಈಗ ಸಿಮ್ ಕೊಟ್ಟ ವ್ಯಕ್ತಿಯನ್ನು ಪತ್ತೆ ಮಾಡಿದ್ದಾರೆ. ದರ್ಶನ್ ರೌಡಿಶೀಟರ್ ಧರ್ಮನ ಮೊಬೈಲ್ನಿಂದ ಬ್ಯಾಡರಹಳ್ಳಿ ರೌಡಿ ಶೀಟರ್ ಸತ್ಯನಿಗೆ ವಿಡಿಯೋ ಕಾಲ್ ಮಾಡಿದ್ದ. ಈ ಮೊಬೈಲ್ ಧರ್ಮನಿಗೆ ಸೇರಿತ್ತು ಎಂಬುದು ಗೊತ್ತಾಗಿದೆ. ಬಾಣಸವಾಡಿ ರೌಡಿ ಶೀಟರ್ ಧರ್ಮನಿಗೆ ಬಾಣಸವಾಡಿಯ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕ…
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ಸ್ವಪಕ್ಷ ಸದಸ್ಯರೆ ತಿರುಗಿ ಬಿದಿದ್ದಾರೆ. ಟ್ರುಡೊ ವಿರುದ್ಧ ಅಸಮಾಧಾನ ಭುಗಿಲೆದಿದ್ದು ಲಿಬರಲ್ ನ 24 ಸದಸ್ಯರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ರಾಜಕೀಯವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬುಧವಾರ ಲಿಬರಲ್ ಪಕ್ಷವು ಸಭೆ ನಡೆಸಿದ್ದು ಈ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ತೀವ್ರ ಹಾನಿಯಾಗಲು ಪ್ರಧಾನಿ ಟ್ರುಡೊ ಅವರ ಧೋರಣೆಯೇ ಕಾರಣ ಎಂದು ಸಭೆಯಲ್ಲಿ ಸದಸ್ಯರು ಅತೃಪ್ತಿ ವ್ಯಕ್ತಪಡಿಸಿದರು. ಈ ವೇಳೆ ಸಂಸದರ ಸಭೆಯಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. 24 ಸಂಸದರು ಟ್ರುಡೋ ಅವರು ಅ.28ರ ಒಳಗಡೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಾಡದ ಮಾಧ್ಯಮಗಳು ವರದಿ ಮಾಡಿವೆ. ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಂಸದರಿಗೆ ಮಾತನಾಡಲು ಅವಕಾಶ ನೀಡಲಾಗಿತ್ತು. ಕ್ಯಾಬಿನೆಟ್ ಮಂತ್ರಿ ಸ್ಥಾನ…