ಬೆಂಗಳೂರು:- ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಭಾನುವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Author: Prajatv Kannada
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನ ಮೇಲೆ ಆಯಸಿಡ್ ದಾಳಿ ನಡೆದಿದೆ.ನಾಗೇಶ್ ಆಯಸಿಡ್ ದಾಳಿಗೆ ಒಳಗಾದ ಯುವಕ. ನಗರದ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಜರುಗಿದೆ. ದುಷ್ಕರ್ಮಿಗಳು ಆಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಆಯಸಿಡ್ ದಾಳಿಯಲ್ಲಿ ಇದು 2 ದಾಳಿಯಾಗಿದೆ.
ಬೆಂಗಳೂರು:- ನಗರದ ವೈಯಾಲಿಕಾವಲ್ ಮಹಾಲಕ್ಷ್ಮಿ ಕೇಸ್ ಗೆ ಸಂಬಧಪಟ್ಟಂತೆ ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ ಮಾಡಲಾಗಿದೆ.ಮಹಿಳೆಯನ್ನ ಕೊಂದಿರೋ ಹಂತಕ 50ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಮಾಂಸದ ಮುದ್ದೆಯನ್ನ ಇಟ್ಟು ಎಸ್ಕೇಪ್ ಆಗಿದ್ದಾನೆ.ಇದೀಗ ಕೊಲೆಗೈದಿರೋ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೇಹವನ್ನ 50ಕ್ಕೂ ಹೆಚ್ಚು ಪೀಸ್ ಮಾಡಿಟ್ಟು ಎಸ್ಕೇಪ್ ಆಗಿರೋ ಕ್ರೂರಿಯ ಜಾಡು ಹಿಡಿದು ಪೊಲೀಸರು ಬೆನ್ನತ್ತಿದ್ದಾರೆ. ಕೇಂದ್ರ ವಿಭಾಗದ ಐವರು ಇನ್‌ಸ್ಪೆಕ್ಟರ್‌ಗಳ ನೇತೃತ್ವದ ತಂಡಗಳು ಕಾರ್ಯಾಚರಣೆಗೆ ಇಳಿದಿವೆ. ಮಹಾಲಕ್ಷ್ಮೀ ಎಲ್ಲೆಲ್ಲೆ ಕೆಲಸ ಮಾಡ್ತಿದ್ಲು ಅಲ್ಲಿ ವಿಚಾರಣೆ ನಡೆಸೋದು. ಜೊತೆಗೆ ಕಳೆದ ಮೂರು ತಿಂಗಳಿಂದ ಈಕೆಯ ಜೊತೆ ಸಂಪರ್ಕ ಇದ್ದವರ ಮಾಹಿತಿ ಕಲೆ ಹಾಕುವುದು. ನಿತ್ಯ ಯಾರ ಜೊತೆಗೆ ಹೋಗ್ತಿದ್ಲು-ಬರ್ತಿದ್ಲು ಎಂಬ ಮಾಹಿತಿ ಕಲೆ ಹಾಕೋದು ಮೊದಲ ತಂಡದ ಕಾರ್ಯವಾಗಿದೆ. ಕೊಲೆ ನಡೆದ ಏರಿಯಾದ ಸಂಪೂರ್ಣ ಸಿಸಿಟಿವಿ ದೃಶ್ಯಗಳ ಪರಿಶೀಲನೆ ಮಾಡೋದು. ಮಹಾಲಕ್ಷ್ಮೀ ಕೊನೆಯ ಬಾರಿ ಕೆಲಸಕ್ಕೆ ಹೋಗಿದ್ದ ಸಿಸಿಟಿವಿ ಚೆಕ್ ಮಾಡೋದು. ಹೀಗೆ ಸರಿಸುಮಾರು 150 ಕ್ಕೂ ಅಧಿಕ…
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ 26 ದಿನಗಳಿಂದ ಮುದ್ದೆ ಮುರಿಯುತ್ತಿದ್ದಾರೆ. ಜಾಮೀನಿಗೆ ಅರ್ಜಿ ಹಾಕಿರೋ ಆರೋಪಿ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದೆ. ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇನ್ನು ಆರೋಪಿ ದರ್ಶನ್ ಜೈಲಿನಲ್ಲಿ ಟೆನ್ಷನ್‌ಗೆ ಒಳಗಾಗಿದ್ದಾರೆ. ಜಾಮೀನು ಅರ್ಜಿ ವಿಚಾರವಾಗಿ ಜೈಲು ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ವಕೀಲರು ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಒಂದು ವೇಳೆ ಜಾಮೀನು ಸಿಗದೇ ಇದ್ದರೆ ಮುಂದೆ ಜೈಲು ಬದಲಾವಣೆಯ ಬಗ್ಗೆಯೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಬೆನ್ನು ನೋವಿನ…
ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು. ಈಗ ಲೌಕಿಕ ಕಾನೂನುಗಳಿಂದ ಇದೆಲ್ಲಾ ಸರ್ಕಾರದ ವಶದಲ್ಲಿ ಹೋಗಿದೆ. ಸರ್ಕಾರದ ರಾಜಕೀಯ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ ಪ್ರಕರಣದಂತ ತೊಂದರೆಗಳು ಆಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ ಅವರ ಬೇಬಿ ಶವರ್ ಪಾರ್ಟಿ ಇತ್ತೀಚೆಗೆ ಅದ್ದೂರಿಯಾಗಿ ನಡೆದಿದ್ದು ಈ ಪಾರ್ಟಿಯಲ್ಲಿ ಸ್ಯಾಂಡಲ್ ವುಡ್ ನ ಸಾಕಷ್ಟು ಸೆಲೆಬ್ರಿಟಿಗಳು ಭಾಗಿಯಾಗಿ ಶುಭ ಹಾರೈಸಿದ್ದಾರೆ. ತುಂಬು ಗರ್ಭಿಣಿಯಾಗಿರುವ ಹರ್ಷಿಕಾ ಪೂಣಚ್ಚಗೆ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪಾ ಗಣೇಶ್ ಸಪ್ರೈರ್ ಪಾರ್ಟಿ ಆಯೋಜಿಸಿದ್ದರು. ಬೇಬಿ ಶವರ್ ಪಾರ್ಟಿಯಲ್ಲಿ ಹರ್ಷಿಕಾ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಎಂಟು ತಿಂಗಳ ಗರ್ಭಿಣಿಯಾಗಿರುವ ಹರ್ಷಿಕಾ ಪೂಣಚ್ಚಾಗೆ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪಾ ದಂಪತಿಗಳು ಅದ್ಧೂರಿಯಾಗಿ ಬೇಬಿ ಶವರ್ ಪಾರ್ಟಿ ಮಾಡಿದ್ದಾರೆ. ಈ ಕಾರ್ಯಕ್ರಮ ಗಣೇಶ್ ಅವರ ಮನೆಯಲ್ಲಿ ನಡೆದಿದೆ. ಗಣೇಶ್ ಮನೆಯನ್ನು ಅದ್ಧೂರಿಯಾಗಿ ಬಲೂನ್ ಗಳಿಂದ ಸಿಂಗರಿಸಿದ್ದು, ಬೇಬಿ ಶವರ್ ಗೆ ಸರಿ ಹೊಂದುವಂತಹ ನೀಲಿ ಮತ್ತು ಪಿಂಕ್ ಬಣ್ಣದ ಬಲೂನ್ ನಿಂದ ಸಿಂಗರಿಸಿದ್ದು, ಮರದ ಕೊಂಬೆಗೆ ಹಾಕಿದ ಜೋಕಾಲಿ ಮೇಲೆ ಮಗು ಮಲಗಿರುವ ಥೀಮ್ ನಲ್ಲಿ…
ತಮಿಳು ನಟ ಜಯಂ ರವಿ ಹಾಗೂ ಅವರ ಪತ್ನಿ ಆರತಿ ಮಧ್ಯೆ ಡಿವೋರ್ಸ್ ಕಾರಣಕ್ಕೆ ಕಿತ್ತಾಟ ಶುರವಾಗಿದೆ. ಜಯಂ ರವಿಗೆ ಗಾಯಕಿಯ ಜೊತೆ ಅಫೇರ್ ಇರುವ ಕಾರಣದಿಂದ ನನ್ನಿಂದ ಅವರು ದೂರ ಆಗಿದ್ದಾರೆ ಎಂದು ಆರತಿ ಆರೋಪ ಮಾಡಿದ್ದಾರೆ. ಅಲ್ಲದೆ, ಜಯಂ ರವಿ ಅವರು ನನ್ನ ಕೇಳದೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ. ಆರತಿ ಆರೋಪದ ಬಗ್ಗೆ ಜಯಂ ರವಿ ಸ್ಪಷ್ಟನೆ ನೀಡಿದ್ದಾರೆ. ಜಯಂ ರವಿ ಕೆಲ ದಿನಗಳ ಹಿಂದೆ ಆರತಿಗೆ ವಿಚ್ಛೇದನ ನೀಡುತ್ತಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಆರತಿ ಇಂದ ದೂರ ಆಗುತ್ತಿದ್ದೇನೆ ಎಂದು ಜಯಂ ರವಿ ಹೇಳುತ್ತಿದ್ದಂತೆ ಗಾಯಕಿ ಕೆನಿಶಾ ಹೆಸರು ಜಯಂ ರವಿ ಜೊತೆ ಕೇಳಿ ಬಂದಿತ್ತು. ಈ ಕುರಿತು ಜಯಂ ಸ್ಪಷ್ಟನೆ ನೀಡಿದ್ದಾರೆ. ‘ನನಗೆ ವಿಚ್ಛೇದನ ಬೇಕು. ಆರತಿಗೆ ರಾಜಿ ಆಗಬೇಕು ಎನ್ನುವ ಉದ್ದೇಶ ಇದ್ದರೆ ಅವಳು ಏಕೆ ನನ್ನ ಭೇಟಿ ಮಾಡಿಲ್ಲ? ಎರಡು ಲೀಗಲ್ ನೋಟಿಸ್ ಕಳುಹಿಸಿದರೂ ಏಕೆ ಉತ್ತರ ನೀಡಿಲ್ಲ? ಇದು ರಾಜಿ…
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಸೇರಿ ಸಾಕಷ್ಟು ದಿನಗಳೇ ಕಳೆದಿದೆ. ಶನಿವಾರ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಈ ಮೂಲಕ ಇಂದು ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ಕೆಲವರು ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆದರೆ ದರ್ಶನ್ ಮಾತ್ರ ಜಾಮೀನಿಗೆ ಅರ್ಜಿ ಸಲ್ಲಿಸಲು ಸ್ವಲ್ಪ ಹಿಂದೇಟು ಹಾಕಿದ್ರು. ಆದ್ರೆ ಈಗ ಅವರು ಕೂಡ ತಮ್ಮ ವಕೀಲರ ಮೂಲಕ ಕಾನೂನು ಹೋರಾಟ ಶುರು ಮಾಡಿದ್ದು, ಈಗಾಗಲೇ 57ನೇ ಸಿಸಿಹೆಚ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಕೀಲರಾದ ಎಸ್. ಸುನೀಲ್ ದರ್ಶನ್ ಜಾಮೀನು ಅರ್ಜಿಯನ್ನ ಸಲ್ಲಿಸಿದ್ದು, ನ್ಯಾಯಾಧೀಶರಾದ ಜಯಶಂಕರ್ ಅರ್ಜಿ ವಿಚಾರಣೆ ನಡೆಸಿದ್ರು. ಬಳಿಕ ಸರ್ಕಾರದ ಪರ ಎಸ್ಪಿಪಿಗೆ ಆಕ್ಷೇಪಣೆಗೆ ಅವಕಾಶ ಕೊಟ್ಟು ನೋಟಿಸ್ ನೀಡಿದ್ದು, ಇಂದಿಗೆ ವಿಚಾರಣೆ ಮುಂದೂಡಲಾಗಿದೆ. ದರ್ಶನ್ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಸಾಕಷ್ಟು ತೊಂದರೆ ಅನುಭವಿಸ್ತಿದ್ದಾರೆ. ಪರಪ್ಪನ…
ಇತ್ತೀಚೆಗಷ್ಟೇ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ್ದ ನಟ ಮೆಗಾಸ್ಟಾರ್ ಚಿರಂಜೀವಿ ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಗಿನ್ನೆಸ್ ವಿಶ್ವ ದಾಖಲೆ ಪುಟ ಸೇರಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲಿ ಅತ್ಯಂತ ಸಮೃದ್ಧ ಚಲನಚಿತ್ರ ನಟ, ನರ್ತಕನೆಂಬ ಹೆಗ್ಗಳಿಕೆಯನ್ನು ಹೊಂದಿದ್ದು, ಇದೇ ವಿಚಾರವಾಗಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಬಾಲಿವುಡ್ ನಟ ಆಮಿರ್ ಖಾನ್ ಕೂಡ ಭಾಗಿಯಾಗಿದ್ದರು. ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ 46 ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಈವರೆಗಿನ ತಮ್ಮ ವೃತ್ತಿ ಜೀವನದಲ್ಲಿ ಚಿರಂಜೀವಿ ಅವರು 537 ಹಾಡುಗಳಲ್ಲಿ ಡ್ಯಾನ್ಸ್ ಮಾಡಿದ್ದಾರೆ. 24 ಸಾವಿರ ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ. ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ನಲ್ಲಿ ಸೇರಿಕೊಂಡಿದೆ. ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೀರ್ ಖಾನ್ ಅವರಿಂದ ಚಿರಂಜೀವಿಯವರು ವಿಶ್ವ ಗಿನ್ನೆಸ್ ದಾಖಲೆಯ ಪ್ರಶಸ್ತಿ ಪಡೆದರು. ಬಳಿಕ ಮಾತನಾಡಿದ ಅಮೀರ್ ಖಾನ್…
ಅಮೆರಿಕದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನ್ಯೂಯಾರ್ಕ್ ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ಕಳೆದ ವರ್ಷ ಸಿಯಾಟಲ್‌ನಲ್ಲಿ ನಮ್ಮ ಸರ್ಕಾರ ಹೊಸ ಕಾನ್ಸುಲೇಟ್ ತೆರೆಯಲಿದೆ ಎಂದು ನಾನು ಘೋಷಿಸಿದ್ದೆ. ಅದರಂತೆ ಇದೀಗ ಅದನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಅಮೆರಿಕದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲು ನಿರ್ಧರಿಸಿದೆ ಎಂದು ಹೇಳಿದರು, ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಕೋರಿದ್ದೇವೆ. ನಿಮ್ಮ ಸಲಹೆಯ ನಂತರ ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ” ಎಂದು ಮೋದಿ ತಿಳಿಸಿದರು. ಜಗತ್ತಿಗೆ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್. ಇದು ವಿಶ್ವದ ಹೊಸ ‘AI’ ಶಕ್ತಿ….” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.