ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಎರಡನೇ ಸುತ್ತಿನ ಮತ ಎಣಿಕೆಯ ನಂತರ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ಡಿಸಾನಾಯಕೆ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಏರುವ ಕನಸು ಕಂಡಿದ್ದ ಹಾಲಿ ಅಧ್ಯಕ್ಷರಾಗಿದ್ದ ರನಿಲಾ ವಿಕ್ಸಮಸಿಂಘೆ ಕನಸು ಭಗ್ನವಾಗಿದೆ. ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ ನಾಯಕ 56 ವರ್ಷದ ಅನುರಾ ಡಿಸ್ಸಾನಾಯಕೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJBಯ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು. ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಮೊದಲ ಸುತ್ತಿನಲ್ಲೇ ಮತಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಿಸುವಲ್ಲಿ ವಿಫಲರಾದರು. ದಿಸಾನಾಯಕ ಅವರು ಇಂದು ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅನುರಾ ಗೆಲುವು, ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾದ ರಾಜಕೀಯ ವ್ಯವಸ್ಥೆಯ ನಿರಾಕರಣೆಯನ್ನು ಸೂಚಿಸುತ್ತದೆ. 2019 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಕೇವಲ 3 ಪ್ರತಿಶತದಷ್ಟು ಮತಗಳನ್ನು ಪಡೆದಿದ್ದ ಜೆವಿಪಿಗೆ ಈ ಗೆಲುವು ಪ್ರಮುಖ…
Author: Prajatv Kannada
ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ ವಿದ್ಯಾಪತಿ ಶೂಟಿಂಗ್ ಕಂಪ್ಲೀಟ್ ಆಗಿದೆ. ಈ ಹಿಂದೆ ಡಾಲಿ ಪಿಕ್ಷರ್ಸ್ ಬ್ಯಾನರ್ ಅಡಿಯಲ್ಲಿ ತೆರೆಕಂಡಿದ್ದ ಟಗರು ಪಲ್ಯ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ನಟ ನಾಗಭೂಷಣ್ ವಿದ್ಯಾಪತಿ ಸಿನಿಮಾದಲ್ಲಿ ಹೀರೋ ಆಗಿ ಮಿಂಚಿದ್ದಾರೆ. ನಾಗಭೂಷಣ್ ಗೆ ಜೋಡಿಯಾಗಿ ಬೆಡಗಿ ಮಲೈಕಾ ವಸೂಪಾಲ್ ಸಾಥ್ ನೀಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದು, ಅವರಿಗೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಡಾಲಿ ಧನಂಜಯ್ ವಿದ್ಯಾಪತಿ ಚಿತ್ರಕ್ಕೂ ದುಡ್ಡುಹಾಕುತ್ತಿದ್ದಾರೆ. ಟಗರು ಪಲ್ಯ ಸಿನಿಮಾ ಬಳಿಕ ಈ ಸಿನಿಮಾ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಸಾಕಷ್ಟು ದಿನಗಳೇ ಕಳೆದು ಹೋಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ನಾಗನ ಕಾರಣದಿಂದ ಆರಾಮಾಗಿದ್ದ ದರ್ಶನ್ ಗೆ ಬಳ್ಳಾರಿ ಜೈಲು ನರಕವಾಗಿದೆ. ಹೊರಗಿದ್ದ ವೇಳೆ ಸಾಕಷ್ಟು ಜನರೊಂದಿಗೆ ಅರಾಮಾಗಿದ್ದ ಪಾರ್ಟಿ ಪಬ್ಬು ಅಂತಿದ್ದ ದರ್ಶನ್ ಬಳ್ಳಾರಿ ಜೈಲಿನ ಒಂಟಿತನಕ್ಕೆ ಸೊರಗಿ ಹೋಗಿದ್ದಾರೆ. ಮಾತನಾಡಲು ಯಾರು ಇಲ್ಲದೆ, ಊಟ ತಿಂಡಿ ಸೇರದೆ ನಿದ್ದೆ ಬರದೆ ದರ್ಶನ್ ಸಂಪೂರ್ಣ ಸಪ್ಪಗಾಗಿದ್ದಾರೆ. ಇತ್ತೀಚೆಗೆ ದರ್ಶನ್ ತಾಯಿ ಮೀನಾ ತೂಗುದೀಪ್ ಬಳ್ಳಾರ ಜೈಲಿಗೆ ಆಗಮಿಸಿ ಮಗನನ್ನು ನೋಡಿ ಧೈರ್ಯ ತುಂಬಿ ಹೋಗಿದ್ದಾರೆ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಗಲೂ ಒಮ್ಮೆ ಮೀನಾ ಅವರು ಜೈಲಿಗೆ ಆಗಮಿಸಿದ್ದರು. ಇದೀಗ ಬಳ್ಳಾರಿಗೆ ಬಂದು ದರ್ಶನ್ ಅನ್ನು ನೋಡಿ ಹೋಗಿದ್ದಾರೆ. ತಾಯಿ ಬಂದು ಹೋದಮೇಲೆ ದರ್ಶನ್ ವರ್ತನೆ ಹಾಗೂ ಮಾತುಗಳಲ್ಲಿ ಬದಲಾವಣೆ ಆಗಿದೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ ಮಾಧ್ಯಮಗಳಿಗೆ ಅಸಹ್ಯಕರವಾಗಿ ಸಂಜ್ಞೆ ಮಾಡಿದ್ದ ದರ್ಶನ್, ಈಗ ಜೈಲು ಸಿಬ್ಬಂದಿಯ ಮುಂದೆ ಕಣ್ಣೀರು…
ತುಳಸಿ ಗಿಡವನ್ನು ಗಿಡಮೂಲಿಕೆಗಳ ರಾಣಿ ಎಂದು ಸಹ ಕರೆಯಲಾಗುತ್ತದೆ. ತುಳಸಿ ಸಸ್ಯವು ಸೋಂಕುಗಳಿಂದ ರಕ್ಷಿಸುವಲ್ಲಿ ಉತ್ತಮ ಗುಣಗಳನ್ನು ಹೊಂದಿದೆ. ಅದಕ್ಕಾಗಿಯೇ ಜನರು ತಮ್ಮ ಮನೆಗಳಲ್ಲಿ ತುಳಸಿ ಗಿಡವನ್ನು ಬೆಳೆಸಲು ಇಷ್ಟಪಡುತ್ತಾರೆ. ಆದರೆ ಸಾಕಷ್ಟು ನೀರು ಹಾಕಿದರೂ ತುಳಸಿ ಗಿಡಗಳು ಬೆಳೆಯುತ್ತಿಲ್ಲ ಎಂದು ಹಲವರು ದೂರುತ್ತಾರೆ. ಇದಲ್ಲದೇ ಕೆಲವೊಮ್ಮೆ ಎಲೆಗಳು ಉದುರುತ್ತವೆ, ಹಳದಿ ಬಣ್ಣಕ್ಕೆ ತಿರುಗುತ್ತಿವೆ ಎಂಬ ದೂರುಗಳೂ ಕೇಳಿ ಬರುತ್ತಿವೆ. ಆದರೆ ಕೆಲವು ಸರಳ ಸಲಹೆಗಳ ಮೂಲಕ ನಿಮ್ಮ ಮನೆಯಲ್ಲಿ ನಿಮ್ಮ ತುಳಸಿ ಗಿಡಗಳನ್ನು ಉತ್ತಮವಾಗಿ ಬೆಳೆಸಬಹುದು. ತುಳಸಿ ಗಿಡ ಬೆಳೆಯಲು ಕನಿಷ್ಠ ಆರು ಗಂಟೆಗಳ ಕಾಲ ಸೂರ್ಯನ ಬೆಳಕು ಬೇಕು. ಅದಕ್ಕಾಗಿಯೇ ನೀವು ತುಳಸಿ ಸಸ್ಯದ ಬೆಳವಣಿಗೆಗೆ ಬಿಸಿಲಿನ ಸ್ಥಳವನ್ನು ಮಾತ್ರ ಆರಿಸಬೇಕು. ಇದಲ್ಲದೆ, ತುಳಸಿ ಮರದ ಕುಂಡದ ಗಾತ್ರವನ್ನು ಆಧರಿಸಿ ಸಸ್ಯಗಳು ಅಥವಾ ಬೀಜಗಳನ್ನು ಆಯ್ಕೆ ಮಾಡಬೇಕು. ತುಳಸಿ ಗಿಡಕ್ಕೆ ನಿಯಮಿತವಾಗಿ ನೀರುಣಿಸಬೇಕು. ಆಗ ಮಾತ್ರ ನೀರು ಕಾಂಡವನ್ನು ತಲುಪುತ್ತದೆ ಮತ್ತು ಸಸ್ಯವು ಚೆನ್ನಾಗಿ ಬೆಳೆಯುತ್ತದೆ ಎಂದು ಹೇಳಲಾಗುತ್ತದೆ.…
ವಿಜಯಪುರ: ಜಗನ್ ಮೋಹನ್ ರೆಡ್ಡಿ ಅವರು ಸಿಎಂ ಆದ ಸಂದರ್ಭದಲ್ಲಿ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ. ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿಜಯಪುರದಲ್ಲಿ ಹೇಳಿದರು. ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ ಈ ತರಹ ನಡೆದಿದೆ. ಹಿಂದುತ್ವ ಪ್ರತಿಪಾದಕರಿಗೆ, ಹಿಂದೂಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈಗಲೂ ನಾವು ಮಾಡಿಲ್ಲ ಎಂದು ಹೇಳುತ್ತಾರೆ. ಲ್ಯಾಬ್ ರಿಪೋರ್ಟ್ ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು. ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ಇದು ಅಂತ್ಯವಾಗಬೇಕು. ಇದರಲ್ಲಿ ವಿದೇಶಿ ಸಂಚಿದೆ, ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು. ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಹೇಳಿದ್ದಾರೆ. ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ಪಕ್ಷ ನನ್ನ…
ಚೆನ್ನೈ: ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರ ಆಲ್‌ರೌಂಡರ್ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಚೆನ್ನೈ: ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರ ಆಲ್‌ರೌಂಡರ್ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ ಭಾರತದ ಸ್ಪಿನ್ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿದರು. 158 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡ 357 ರನ್‌ಗಳ ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿತು. 200 ರನ್ ದಾಟುತ್ತಿದ್ದಂತೆ ಪೆವಿಲಿಯನ್ ಪರೇಡ್ ನಡೆಸಿತು. ಪರಿಣಾಮ 234…
ಬ್ರೆಜಿಲ್, ದಕ್ಷಿಣ ಅಮೇರಿಕಾ ಸೇರಿ ಇನ್ನೂ ಹಲವು ಕಡೆ ಭೀಕರ ಬರಗಾಲ ಎದುರಾಗಿದೆ. ಇದರಿಂದ ಜನ ತುತ್ತಿನ ಕೂಳಿಗೂ ಪರದಾಡುತ್ತಿದ್ದಾರೆ. ಮತ್ತೊಂದಡೆ ಜಲ ಮೂಲಗಳು ಬತ್ತಿ ಹೋಗುತ್ತವೆ. ಇದರಿಂದ ಜನ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿಶ್ವದ ಅತಿದೊಡ್ಡ ನದಿ ಅನ್ನೋ ಹೆಗ್ಗಳಿಕೆ ಪಡೆದಿರುವ ಅಮೆಜಾನ್ ನದಿ ಬರಿದಾಗ್ತಿದೆ. ಅಮೆಜಾನ್ ನದಿಯ ಜಲಾನಯನ ಪ್ರದೇಶವು ಅತ್ಯಂತ ಕೆಟ್ಟ ಬರವನ್ನು ಅನುಭವಿಸುತ್ತಿದ್ದು, ಎಂದೂ ಕಂಡು ಕೇಳರಿಯದ ರೀತಿಯಲ್ಲಿ ನೀರಿನ ಮಟ್ಟವು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿದೆ. ಈ ಪರಿಸರದ ಬಿಕ್ಕಟ್ಟು ವನ್ಯಜೀವಿಗಳು ಮತ್ತು ಸ್ಥಳೀಯ ಸಮುದಾಯಗಳ ಮೇಲೆ ವ್ಯಾಪಕವಾದ ಪರಿಣಾಮ ಬೀರುತ್ತಿದೆ ಮತ್ತು ಹವಾಮಾನ ಬದಲಾವಣೆಯ ವೇಗವರ್ಧಿತ ಪರಿಣಾಮಗಳ ಬಗ್ಗೆ ವಿಶ್ವಕ್ಕೆ ಎಚ್ಚರಿಕೆ ನೀಡುತ್ತಿದೆ. ಪೆರುವಿನ ಆಂಡಿಸ್ ಪರ್ವತಗಳಿಂದ ಪೂರ್ವಕ್ಕೆ ದಕ್ಷಿಣ ಅಮೇರಿಕಾದಾದ್ಯಂತ ಅಟ್ಲಾಂಟಿಕ್ ಸಾಗರದವರೆಗೆ ಹರಿಯುವ ಅಮೆಜಾನ್ ನದಿಯು ಸಮುದ್ರ ಮಟ್ಟದಿಂದ 5,598 ಮೀಟರ್‌ಗಳಷ್ಟು ಎತ್ತರದಲ್ಲಿದೆ. ಋತುಮಾನದೊಂದಿಗೆ ನದಿಯ ಗಾತ್ರವು ಬದಲಾಗುತ್ತದೆ. ಉದಾಹರಣೆಗೆ ಶುಷ್ಕ ಋತುವಿನಲ್ಲಿ, ನದಿಯು 4 ರಿಂದ 5…
ಉತ್ತರ ಗಾಜಾದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ. ಹತ್ಯೆಗೀಡಾದವರಲ್ಲಿ 13 ಮಕ್ಕಳು, ಆರು ಮಹಿಳೆಯರು ಮತ್ತು ಮೂರು ತಿಂಗಳ ಮಗು ಸೇರಿದ್ದಾರೆ ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ದಾಳಿಯನ್ನು “ಭಯಾನಕ ಹತ್ಯಾಕಾಂಡ” ಎಂದು ಗಾಜಾ ಟೀಕಿಸಿದೆ. ದಾಳಿಯಲ್ಲಿ ಕನಿಷ್ಠ 30 ಜನ ಗಾಯಗೊಂಡಿದ್ದಾರೆ, ಹಲವಾರು ಜನ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ. ಅಲ್ಲದೆ ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ. ಆದರೆ ಹಮಾಸ್‌ನ “ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಸೇನೆ ಹೇಳಿದೆ. ಇದು ಹಿಂದೆ ಶಾಲೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಪೌಂಡ್‌ನೊಳಗೆ ಯುದ್ಧಸಾಮಗ್ರಿಗಳ ಬಳಕೆ ಮತ್ತು ವೈಮಾನಿಕ ಕಣ್ಗಾವಲು ನಡೆಸಲಾಗುತ್ತಿತ್ತು. ಹಮಾಸ್ ಭಯೋತ್ಪಾದಕ ಸಂಘಟನೆಯು ಶಾಲೆಯಲ್ಲಿ ಕಲ್ಪಿಸಲಾಗಿರುವ ಮೂಲಸೌಕರ್ಯಗಳನ್ನು ಮಿಲಿಟರಿ ಉದ್ದೇಶಕ್ಕೆ ಬಳಸುವುದನ್ನು ಮುಂದುವರಿಸಿತ್ತು ಎಂದು…
ತಮಿಳಿನ ಖ್ಯಾತ ನಟ ಜಯಂ ರವಿ ಪತ್ನಿ ಆರತಿಗೆ ವಿಚ್ಛೇದನ ಘೋಷಿಸಿದ್ದಾರೆ. 15 ವರ್ಷಗಳ ವೈವಾಹಿಕ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟ ಜಯಂ ರವಿ ಹೆಸರು ಬೆಂಗಳೂರು ಮೂಲದ ಗಾಯಕಿ ಕೆನಿಶಾ ಫ್ರಾನ್ಸಿಸ್ ಅವರೊಂದಿಗಿನ ಕೇಳಿ ಬಂದಿದೆ. ಇದೀಗ ವದಂತಿಗಳಿಗೆ ಜಯಂ ರವಿ ಪ್ರತಿಕ್ರಿಯಿಸಿದ್ದಾರೆ. ಚೆನ್ನೈನ ಸತ್ಯಂ ಥಿಯೇಟರ್‌ನ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಜಯಂ ರವಿ, ಗಾಸಿಪ್‌ಗಳ ನಡುವೆ ಕೆನಿಶಾ ಅವರ ಖ್ಯಾತಿಯನ್ನು ಹಾಳು ಮಾಡಬೇಡಿ ಎಂದು ಜನರನ್ನು ಒತ್ತಾಯಿಸಿದರು. “ಬದುಕಿ ಮತ್ತು ಬದುಕಲು ಬಿಡಿ. ಇಲ್ಲಿ ಯಾರ ಹೆಸರನ್ನೂ ಎಳೆಯಬೇಡಿ. ಜನರು ರ್ಯಾಂಡಮ್ ಆಗಿ ಮಾತನಾಡುತ್ತಿದ್ದಾರೆ. ಅಂತಹ ಕೆಲಸದಲ್ಲಿ ತೊಡಗಬೇಡಿ. ನಿಮ್ಮ ವೈಯಕ್ತಿಕ ಜೀವನವು ವೈಯಕ್ತಿಕವಾಗಿರಲಿ” ಎಂದಿದ್ದಾರೆ. ಈ ವೇಳೆ, ಗಾಯಕಿ ಕೆನಿಶಾ ಫ್ರಾನ್ಸಿಸ್ ಸಾಧನೆಗಳನ್ನು ಒತ್ತಿ ಹೇಳಿದರು. “ಅವರು 600 ಸ್ಟೇಜ್ ಶೋಗಳಲ್ಲಿ ಹಾಡಿರುವ ಜನಪ್ರಿಯ ಗಾಯಕಿ. ಅವರು ತಮ್ಮ ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನಕ್ಕೇರಿದವರು. ಅವರು ಅನೇಕ ಜೀವಗಳನ್ನು ಗುಣಪಡಿಸಿದವರು. ಅವರು ಪರವಾನಗಿ ಪಡೆದ ಮನಶ್ಶಾಸ್ತ್ರಜ್ಞರು. ದಯವಿಟ್ಟು…
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇತ್ತ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.