ರಾಮನಗರ: ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರು ಡಿಸಿಗೆ ಧಮ್ಕಿ ಹಾಕುತ್ತಿದ್ದಾರೆ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆದರು. ಚನ್ನಪಟ್ಟಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಡಿಕೆಶಿ, ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಕಳೆದ ಮೂರು ತಿಂಗಳಿನಿಂದ ನಿಮ್ಮ ತಾಲೂಕಿನಲ್ಲಿ ಬದಲಾವಣೆ ಆಗ್ತಿದೆ. ಚನ್ನಪಟ್ಟಣದ ಅಭಿವೃದ್ಧಿಯ ದೀಪ ಹಚ್ಚಿದ್ದೇವೆ. ಕೊಟ್ಟ ಮಾತಿನಂತೆ ಚನ್ನಪಟ್ಟಣ ಅಭಿವೃದ್ಧಿ ಮಾಡ್ತಿದ್ದೇವೆ. ಸಾಕಷ್ಟು ಮಂತ್ರಿಗಳು ಬಂದು ಸಭೆ ಮಾಡ್ತಿದ್ದಾರೆ. ಅಧಿಕಾರಿಗಳನ್ನ ನಿಮ್ಮ ಮನೆ ಬಾಗಿಲಿಗೆ ಕಳಿಸುತ್ತಿದ್ದೇವೆ. ಈ ಹಿಂದಿನ ಶಾಸಕರ ಬಗ್ಗೆ ನಾನು ಮಾತನಾಡಲ್ಲ. ನಮ್ಮ ಜಮೀರ್‌ಗೆ ಹಳೇ ಸ್ನೇಹಿತರು ಹಾಗಾಗಿ ಅವರನ್ನ ನೆನೆಸಿಕೊಂಡಿದ್ದಾರೆ. ಈಗ ಆವರಿಗೂ ಈ ಕ್ಷೇತ್ರಕ್ಕೂ ಸಂಬಂಧ ಇಲ್ಲ ಎಂದು ಹೆಚ್ಡಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಈ ಕ್ಷೇತ್ರಕ್ಕೂ ನಮಗೂ ಸಂಬಂಧ ಇದೆ. ಹಿಂದೆ ಇದೇ ಕ್ಷೇತ್ರದ ಒಂದು ಹೋಬಳಿಯಲ್ಲಿ ನಾನು ಸ್ಪರ್ಧಿಸುತ್ತಿದ್ದೆ. ನನಗೂ…
Author: Prajatv Kannada
ತಿರುಪತಿಯಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು, ಹಂದಿ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದ್ದು ಭಕ್ತರಿಗೆ ತೀವ್ರ ಆತಂಕ ಎದುರಾಗಿದೆ. ತಿರುಪತಿ ಲಡ್ಡು ಮಾಡಲು ಬಳಸುವ ತುಪ್ಪದಲ್ಲಿ ದನದ ಕೊಬ್ಬು ಪತ್ತೆಯಾಗಿರುವ ವಿಷಯ ರಾಷ್ಟ್ರದಾದ್ಯಂತ ದೊಡ್ಡ ಸುದ್ದಿಯಾಗಿದೆ. ಆಂಧ್ರ ಸರ್ಕಾರ ಈಗಾಗಲೇ ತನಿಖೆ ನಡೆಸುತ್ತಿದ್ದು, ದೂರು ದಾಖಲಾಗಿದೆ. ಇದರ ನಡುವೆ ಆಂಧ್ರ ಡಿಸಿಎಂ, ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ತಿರುಪತಿ ವೆಂಕಟೇಶ್ವರ ಸ್ವಾಮಿಯ ಕ್ಷಮೆ ಕೋರಿ 11 ದಿನದ ಪ್ರಾಯಶ್ಚಿತ ದೀಕ್ಷೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಪವನ್ ಕಲ್ಯಾಣ್, ‘ತಿರುಪತಿ ಲಡ್ಡು ಅಂದರೆ, ಅಮೃತ ಸಮವಾಗಿ, ಪರಮ ಪವಿತ್ರವಾಗಿ ಭಾವಿಸಲ್ಪಡುತ್ತದೆ. ಅದು, ಹಿಂದಿನ ಪಾಲಕರ ವಿಕೃತ ಚೇಷ್ಠೆಗಳ ಫಲವಾಗಿ ಅಪವಿತ್ರವಾಗಿದೆ. ಜಂತು ಅವಶೇಷಗಳಿಂದ ಮಲಿನವಾಗಿದೆ. ಮನುಷ್ಯತ್ವವನ್ನು ಕಳೆದುಕೊಂಡವರು ಮಾತ್ರ ಇಂಥಹ ಪಾಪಕಾರ್ಯವನ್ನು ಮಾಡಬಲ್ಲರು. ಈ ಪಾಪವನ್ನು ಮೊದಲೇ ಕಂಡು ಹಿಡಿಯಲಾಗದ್ದು ನಮ್ಮ ದುರಾದೃಷ್ಟವೆಂದು ಹೇಳಬಹುದು. ಲಡ್ಡು ಪ್ರಸಾದದಲ್ಲಿ ಜಂತು ಅವಶೇಷಗಳಿವೆಯೆಂದು ಗೊತ್ತಾದ ತಕ್ಷಣ ನನ್ನ ಮನಸ್ಸು ವ್ಯಾಕುಲಗೊಂಡಿತು.…
ಆರ್ಥಿಕ ಬಿಕಟ್ಟಿನಿಂದ ತತ್ತರಿಸಿ ಹೋಗಿದ್ದ ಶ್ರೀಲಂಕಾ ಇದೀಗ ಕೊಂಚ ಸುಧಾರಿಸಿಕೊಂಡಿದೆ. ಈ ಬೆನ್ನಲ್ಲೇ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಚುನಾವಣೆಯಲ್ಲಿ ಶೇ 75ಕ್ಕೂ ಹೆಚ್ಚು ಮತದಾನವಾಗಿದ್ದು, ಎಣಿಕೆ ಕಾರ್ಯ ಆರಂಭವಾಗಿದೆ. ಮತದಾನ ಪ್ರಕ್ರಿಯೆ ವೇಳೆ ಹಿಂಸಾಚಾರ ಸೇರಿದಂತೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸುಮಾರು 1.7 ಕೋಟಿ ಜನರು ಮತ ಚಲಾಯಿಸಲು ಅರ್ಹತೆ ಹೊಂದಿದ್ದರು. ಒಟ್ಟು 13,400 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಚುನಾವಣೆ ನಡೆಸಲು 2 ಲಕ್ಷಕ್ಕೂ ಹೆಚ್ಚು ಅಧಿಕಾರಿಗಳನ್ನು ಮತ್ತು ಬಂದೋಬಸ್ತ್‌ಗಾಗಿ 63 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 1982ರ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ತೀವ್ರ ಪೈಪೋಟಿ ಎದುರಾಗಿತ್ತಲ್ಲದೇ, 38 ಅಭ್ಯರ್ಥಿಗಳು ಕಣದಲ್ಲಿದ್ದರು. ಬೌದ್ಧ ದೇವಾಲಯದ ಸಭಾಂಗಣಗಳು, ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನೂ ಮತದಾನ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಯವರೆಗೆ ನಡೆಯಿತು. ದ್ವೀಪ ರಾಷ್ಟ್ರದಲ್ಲಿ 2022ರಲ್ಲಿ ನಡೆದ ಜನತಾ ದಂಗೆಯು ಗೋಟಬಯ ರಾಜಪಕ್ಷ ಅವರನ್ನು…
‘ಕ್ವಾಡ್’ ಶೃಂಗ ಸಭೆಯು ಯಾರ ವಿರುದ್ಧವೂ ಅಲ್ಲ. ಅಂತರರಾಷ್ಟ್ರೀಯ ನಿಯಮಾಧಾರಿತ ಆದೇಶಗಳು ಮತ್ತು ಸಾರ್ವಭೌಮತೆಯನ್ನು ಗೌರವಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಯೋಜಿಸಿರುವ ಶೃಂಗ ಸಭೆಯಲ್ಲಿ ಮಾತನಾಡಿದ ಮೋದಿ, ‘ನಮ್ಮ ಸಂದೇಶವು ಸ್ಪಷ್ಟವಾಗಿದೆ. ಕ್ವಾಡ್ ತನ್ನ ಪಾಲುದಾರರಿಗೆ ನೆರವಾಗಲು ಮತ್ತು ಅವರಿಗೆ ಪೂರಕವಾಗಿ ಇರಲಿದೆ’ ಎಂದಿದ್ದಾರೆ. ಯಾವುದೇ ದೇಶದ ಹೆಸರನ್ನು ಉಲ್ಲೇಖಿಸದೆ, ಮುಕ್ತ, ಎಲ್ಲರನ್ನೂ ಒಳಗೊಂಡಂತೆ ಇಂಡೋ-ಪೆಸಿಫಿಕ್ ಸಮೃದ್ಧಿಗೆ ಕ್ವಾಡ್ ಆದ್ಯತೆ ನೀಡಲಿದೆ ಎಂದು ಪ್ರತಿಪಾದಿಸಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹಾಗೂ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಪ್ರದೇಶಗಳಲ್ಲಿ ಪ್ರಾದೇಶಿಕ ವಿವಾದಗಳನ್ನು ಚೀನಾ ಸೃಷ್ಟಿಸಿದೆ. ದಕ್ಷಿಣ ಚೀನಾ ಸಮುದ್ರದ ಮೇಲೆ ಸಾರ್ವಭೌಮತ್ವ ಪ್ರತಿಪಾದಿಸುತ್ತಿರುವ ಚೀನಾ ನಡೆಯನ್ನು ವಿಯೆಟ್ನಾಂ, ಮಲೇಷ್ಯಾ, ಫಿಲಿಪ್ಪೀನ್ಸ್, ಬ್ರೂನೈ ಮತ್ತು ತೈವಾನ್ ತೀವ್ರವಾಗಿ ವಿರೋಧಿಸುತ್ತಿವೆ.
ಆಂಧ್ರ ಪ್ರದೇಶದಲ್ಲಿ ಟಿಡಿಪಿ ಅಧಿಕಾರಕ್ಕೆ ಬಂದಿದ್ದು, ಚಂದ್ರಬಾಬು ನಾಯ್ಡು ಸಿಎಂ ಆಗಿದ್ದಾರೆ. ಸಿಎಂ ಆಗುವ ಮುನ್ನ ಮಾಡಿದ ಎಲ್ಲ ಕಾರ್ಯಕ್ರಮಗಳಿಂದಲೂ ಜೂ ಎನ್ಟಿಆರ್ ಅನ್ನು ದೂರ ಇಡಲಾಗಿತ್ತು. ತಮ್ಮ ಪುತ್ರ ನಾರಾ ಲೋಕೇಶ್ ಅನ್ನು ರಾಜಕೀಯವಾಗಿ ಬೆಳೆಸಲೆಂದೇ ಜೂ ಎನ್ಟಿಆರ್ ಅನ್ನು ಪಕ್ಷದ ಹಾಗೂ ನಂದಮೂರಿ ಕುಟುಂಬದ ಕಾರ್ಯಕ್ರಮಗಳಿಂದ ದೂರ ಇಡಲಾಗಿದೆ. ಇದೀಗ ಜೂ ಎನ್ಟಿಆರ್ ನಟನೆಯ ‘ದೇವರ’ ಸಿನಿಮಾಕ್ಕೆ ಕೆಲವು ರಿಯಾಯಿತಿಗಳನ್ನು ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸರ್ಕಾರ ನೀಡಿದೆ. ‘ದೇವರ’ ಸಿನಿಮಾದ ಟಿಕೆಟ್ ದರವನ್ನು ಹೆಚ್ಚಿಸಿಕೊಳ್ಳಲು ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಟಿಕೆಟ್ ದರ ಹೆಚ್ಚಿಸಲು ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ರಾಜ್ಯ ಸರ್ಕಾರದ ಅನುಮತಿ ಬೇಕಾಗಿದೆ. ಕರ್ನಾಟಕದಲ್ಲಿ ಆ ರೀತಿಯ ಯಾವುದೇ ಅನುಮತಿಯ ಅವಶ್ಯಕತೆ ಇಲ್ಲ. ಇದರ ಜೊತೆಗೆ ಸಿನಿಮಾದ ಮಿಡ್ನೈಟ್ ಶೋ ಹಾಕಿಕೊಳ್ಳಲು, ಫ್ಯಾನ್ಸ್ ಶೋ ಹಾಕಿಕೊಳ್ಳಲು, ಅರ್ಲಿ ಮಾರ್ನಿಂಗ್ ಶೋ ಹಾಕಿಕೊಳ್ಳುವ ಅನುಮತಿಯನ್ನು ಆಂಧ್ರ ಸರ್ಕಾರ ನೀಡಿದೆ. ಈ ಬಗ್ಗೆ ಟ್ವೀಟ್ ವಿತರಕ ನಾಗ…
ಇನ್ನೇನೂ ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭವಾಗಲಿದೆ. ಈ ಭಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ ಅನ್ನೋದು ಕನ್ಪಾರ್ಮ್ ಆಗಿದೆ. ಇದೀಗ ಹೊಸ ಪ್ರೋಮೋವೊಂದು ಬಿಡುಗಡೆ ಆಗಿದ್ದು ಅದರಲ್ಲಿ ಸುದೀಪ್ ಸ್ವರ್ಗ ಮತ್ತು ನರಕದ ಕತೆ ಹೇಳಿದ್ದಾರೆ. ಆ ಮೂಲಕ ಬಿಗ್ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಸಣ್ಣ ಸುಳಿವೊಂದನ್ನು ಕಿಚ್ಚ ಬಿಚ್ಚಿಟ್ಟಿದ್ದಾರೆ. ಪ್ರೋಮೋದ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಅದೇ ವಿಡಿಯೋ ಮುಂದುವರೆದರೆ ನರಕದಂತೆ ಕಾಣುವ ಭೀಕರ ಪ್ರದೇಶದಲ್ಲಿ ತಟ್ಟೆಯಲ್ಲಿ ಗಂಜಿ ಕುಡಿಯುತ್ತಿದ್ದಾರೆ ಬೆಂಕಿಯ ಕುಲುಮೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಗ ಬರುವ ಸುದೀಪ್, ಸ್ವರ್ಗದಲ್ಲಿರುವವರು, ನರಕದಲ್ಲಿರುತ್ತಾರೆ ನರಕದಲ್ಲಿರುವವರು ಸ್ವರ್ಗದಲ್ಲಿರುತ್ತಾರೆ ಎಂದು ಬಿಗ್ಬಾಸ್ ಶೈಲಿಯಲ್ಲಿ ಸ್ವರ್ಗ ನರಕದ ಜೀವನದ ಬಗ್ಗೆ ಹೇಳಿದ್ದಾರೆ. ಯಾರು ಸ್ನೇಹಿತರಾಗುತ್ತಾರೆ ಎಂದು ನಂಬಿರುತ್ತೇವೆಯೋ ಅವರೇ ಬೆನ್ನಿಗೆ ಚೂರಿ ಹಾಕಬಹುದು, ಯಾರು ಚೂರಿ ಹಾಕುತ್ತಾರೆ ಎಂದುಕೊಂಡಿರುತ್ತೇವೆಯೋ ಅವರೇ ಸ್ನೇಹಿತರೂ ಆಗಬಹುದು ಎಂದು ಸುದೀಪ್…
ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಮಂತ್ರಿಮಾಲ್ ನಡೆದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಒಂದು ವೇಳೆ ಈ ಸಿನಿಮಾ ಸಕ್ಸಸ್ ಆಗದೇ ಇದ್ರೆ, ಜನರು ಇದನ್ನು ಒಪ್ಪದೇ ಇದ್ದಲ್ಲಿ ನಾನು ಮುಂದೆ ನಟನೆ ಮಾಡುವುದಿಲ್ಲ ಎಂದು ಭಾವುಕರಾಗಿದ್ದಾರೆ. ನಾಲ್ಕು ವರ್ಷಗಳ ಕಾಲ, ಹಲವು ಅಡೆತಡೆಯ ನಡುವೆ ಕುಟುಂಬ ಸಮೇತರಾಗಿ ಬಂದು ನೋಡುವಂತಹ ಸಿನಿಮಾವನ್ನು ಮಾಡಿದ್ದೇವೆ. ತುಂಬಾ ಕಷ್ಟಪಟ್ಟು ಈ ಸಿನಿಮಾವನ್ನು ಮಾಡಿದ್ದೇವೆ. ಈ ಒಂದು ಚಿತ್ರ ಮಾಡುವಾಗಲೇ ನಾನು ನಿರ್ದೆಶಕರಿಗೆ ಹೇಳಿದ್ದೆ. ಒಂದು ವೇಳೆ ಈ ಸಿನಿಮಾವನ್ನು ಜನರು ಗೆಲ್ಲಿಸದೇ ಹೋದಲ್ಲಿ ನಾನು ಚಿತ್ರರಂಗದಿಂದ ಹಾಗೂ ನಟನೆಯಿಂದ ದೂರ ಉಳಿಯುತ್ತೇನೆ ಅಂತ ಹೇಳಿದ್ದೆ ಎಂದರು. ಸಿನಿಮಾದ ಒಂದು ಹಾಡಿನಲ್ಲಿ ಅಘೋರಿ ಪಾತ್ರ ಮಾಡುವಾಗ ಮೇಕಪ್ನಿಂದಾಗಿ ಕಲಾವಿದರು ಎಷ್ಟು ಕಷ್ಟಪಟ್ಟಿದ್ದಾರೆಂದು ನಾನು ನೋಡಿದ್ದೇನೆ. ತುಂಬಾ ಕಷ್ಟ ಬಿದ್ದು. ನೂರಾರು ಸಮಸ್ಯೆಗಳನ್ನ ಎದುರಿಸಿ ಈ ಸಿನಿಮಾವನ್ನು ಮಾಡಿದ್ದೇವೆ. ಹೀಗಾಗಿ ಒಂದು ವೇಳೆ ಈ ಸಿನಿಮಾ…
ದೇವನಹಳ್ಳಿ:- ಬಿಜೆಪಿ ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ಅಹಿಂದಾ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಗಿದೆ. https://youtu.be/WjgjM1u4wPw?si=DUbSLKewPfi7zf2R ಈ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಶಾಸಕ ಮುನಿರತ್ನ ನಾಯ್ಡು ಪ್ರತಿಕೃತಿ ಧಹನಾ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರ ಜಿಲ್ಲೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಧಿಕ್ಕಾರ ಕೂಗಿ ದಲಿತಪರ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ತಾಲೂಕು ಕಚೇರಿವರೆಗೆ ಬಂದು ತಹಶಿಲ್ದಾರ್ ಅವರಿಗೆ ಅಹಿಂದ ಸಮಿತಿ ಮನವಿ ಸಲ್ಲಿಸಿದೆ.
ಮೈನೆ ಗಾಂಧಿ ಕೊ ನಹಿ ಮಾರಾ’, ‘ಮೈ ನೇಮ್ ಈಸ್ ಖಾನ್’, ‘ಖೋಸ್ಲಾ ಕಾ ಘೋಸ್ಲಾ’ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದ ನಟ ಕಂ ನಿರ್ದೇಶಕ ಪ್ರವೀಣ್ ದಬಾಸ್ ಚಲಾಯಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಪ್ರವೀಣ್ ದಬಾಸ್ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಪ್ರವೀಣ್ ಚಲಾಯಿಸುತ್ತಿದ್ ದಕಾರು ಮುಂಬೈನ ಬಾಂದ್ರಾ ಬಳಿ ಅಪಘಾತಕ್ಕೆ ಒಳಗಾಗಿದೆ. ನಟ ಪ್ರವೀಣ್ ಅನ್ನು ಬಾಂದ್ರಾದ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಪ್ರವೀಣ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರವೀಣ್ಗೆ ತೀವ್ರ ಗಾಯಗಳಾಗಿವೆ ಎನ್ನಲಾಗುತ್ತಿದ್ದು. ಪ್ರವೀಣ್ ಪತ್ನಿ, ನಟಿ ಪ್ರೀತಿ ಜಾಂಗಿಯಾನಿ ಸಹ ಆಸ್ಪತ್ರೆಯಲ್ಲಿಯೇ ಇದ್ದಾರೆ. ಪ್ರವೀಣ್ ಪಂಜಾ ಪ್ರೋ ಲೀಗ್‌ನ ಸಹ ಸಂಸ್ಥಾಪಕರೂ ಸಹ ಆಗಿದ್ದರು. ವೆಬ್ ಸರಣಿಯೊಂದರ ನಿರ್ದೇಶಕರೂ ಆಗಿದ್ದಾರೆ. ಪ್ರವೀಣ್ಗೆ ಕಾರು ಅಪಘಾತವಾದ ಬೆನ್ನಲ್ಲೆ ಹೇಳಿಕೆ ಬಿಡುಗಡೆ ಮಾಡಿದ ಪ್ರೋ ಪಂಜಾ ಲೀಗ್, ‘ಪ್ರೊ ಪಂಜಾ ಲೀಗ್‌ನ ಸಹ-ಸಂಸ್ಥಾಪಕ ಪರ್ವಿನ್ ದಬಾಸ್ ಅವರು ಶನಿವಾರ…