ಸೂಪರ್‌ಸ್ಟಾರ್ ರಜನಿಕಾಂತ್ ಸದ್ಯ ಕೂಲಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಸಿನಿಮಾದ ಸಿನಿಮಾದ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ರಜನಿಕಾಂತ್ ವಿಮಾನ ನಿಲ್ದಾಣದಲ್ಲಿ ಆಗಮಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದರಲ್ಲಿ ನಟನಿಗೆ ರಾಜಕೀಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಮಾಧ್ಯಮದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ವೈರಲ್ ವಿಡಿಯೋದಲ್ಲಿ, ರಜನಿಕಾಂತ್ ಹಗಲು ಹೊತ್ತಿನಲ್ಲಿ ಚೆನ್ನೈ ವಿಮಾನ ನಿಲ್ದಾಣದಿಂದ ಹೊರಬರುವುದನ್ನು ಕಂಡುಬಂದಿದೆ. ಇವತ್ತು ರಾತ್ರಿ ನಡೆಯುವ ವೆಟ್ಟೈಯಾನ್ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಯಾರು ಬರುತ್ತಾರೆ ಎಂದು ಪತ್ರಕರ್ತರೊಬ್ಬರು ಕೇಳಿದರು. ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನನಗೆ ಖಚಿತವಿಲ್ಲ ಸಾರ್’ ಎಂದರು. ಮತ್ತೊಂದೆಡೆ, ಉಪಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕರಿಸುವ ವರದಿಗಳ ಬಗ್ಗೆ ರಜನಿಕಾಂತ್ ಅವರ ಅಭಿಪ್ರಾಯಗಳನ್ನು ಮತ್ತೊಬ್ಬ ವರದಿಗಾರ ಕೇಳಿದರು. ಈ ಪ್ರಶ್ನೆಯನ್ನು ಕೇಳಿದ ತಲೈವಾ ವರದಿಗಾರನ ಮೇಲೆ ಕೋಪಗೊಂಡು, “ರಾಜಕೀಯ ಪ್ರಶ್ನೆಗಳನ್ನು ಕೇಳಬೇಡಿ ಎಂದಿಲ್ವಾ ಎಂದು ಗರಂ ಆದರು. ಅದೇನೇ…
Author: Prajatv Kannada
ಸೂರ್ಯೋದಯ: 06:08, ಸೂರ್ಯಾಸ್ತ : 06:09 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ಚೌತಿ ನಕ್ಷತ್ರ: ಭರಣಿ ರಾಹು ಕಾಲ: 09:00 ನಿಂದ 10:30 ತನಕ ಯಮಗಂಡ: 01:30 ನಿಂದ 03:00 ತನಕ ಗುಳಿಕ ಕಾಲ: 06:00 ನಿಂದ 07:30 ತನಕ ಅಮೃತಕಾಲ: ರಾ .8:13 ನಿಂದ ರಾ.9:41 ತನಕ ಅಭಿಜಿತ್ ಮುಹುರ್ತ: ಬೆ.11:45 ನಿಂದ ಮ.12:33 ತನಕ ಮೇಷ ರಾಶಿ: ಗಂಡ ಹೆಂಡತಿ ಲವಲವಿಕೆಯ ದಿನ,ಉದ್ಯಮ ಉತ್ಪನ್ನಗಳ ಮಾರಾಟ ಜಾಲದಲ್ಲಿ ಮೋಸ ಸಂಭವ, ಗೃಹಿಣಿಯರ ಸ್ವಂತ ವ್ಯಾಪಾರಗಳಿಂದ ಧನ ಲಾಭ ಹಾಗೂ ಮುನ್ನಡೆ ಸಾಧಿಸಲಿದ್ದೀರಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆ ಉದ್ಯಮದಾರರ ಮನಸ್ಸಿನಲ್ಲಿ ಒಂದು ಕೆಲಸ ತುಂಬಾ ದಿನದಿಂದ ಕಾಡುತ್ತಿದ್ದು ಇಂದು ಸಕಾಲ ಗೊಳ್ಳಲಿದೆ, ಪ್ರೇಮಿಗಳ ಬಾಂಧವ್ಯ ಉತ್ತಮಗೊಳ್ಳಲಿದೆ, ಆರೋಗ್ಯದಲ್ಲಿ ಸುಧಾರಣೆ, ಆಸ್ತಿ ಲೋಪ ದೋಷ ನಿವಾರಣೆ, ಕುಟುಂಬದ ಜವಾಬ್ದಾರಿ ನಿಮ್ಮ…
ತಿರುಪತಿ: ತಿಮ್ಮಪ್ಪನ ಮಹಾಪ್ರಸಾದ ಲಡ್ಡುನಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಆರೋಪಕ್ಕೆ ಪೂರಕವಾಗಿ ಟಿಟಿಡಿ ಇಓ ಶ್ಯಾಮಲರಾವ್ ಹೇಳಿಕೆ ನೀಡಿದ್ದಾರೆ. ತಮಿಳುನಾಡು ಮೂಲದ ಎಆರ್ ಫುಡ್ಸ್ ಸರಬರಾಜು ಮಾಡಿದ ತುಪ್ಪ ಕಲಬೆರಕೆಯಿಂದ ಕೂಡಿತ್ತು. ತಕ್ಷಣವೇ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ ಇದೇ ವೇಳೆ, ಲಡ್ಡುಗೆ ಬಳಸುವ ತುಪ್ಪದ ಗುಣಮಟ್ಟ ಪರೀಕ್ಷೆಗೆ ಟಿಟಿಡಿ ಸ್ವಂತ ಲ್ಯಾಬ್ ಹೊಂದಿಲ್ಲ. ಅಧಿಕಾರಿಗಳು ಈ ಹಿಂದೆ ಪರೀಕ್ಷೆ ಮಾಡಿರಲಿಲ್ಲ. ಬರೀ 411 ರೂಪಾಯಿಗೆ ಕೆಜಿ ತುಪ್ಪ ಸರಬರಾಜು ಮಾಡಿದ್ದಾರೆ. ಈ ದರಕ್ಕೆ ಉತ್ತಮ ಗುಣಮಟ್ಟದ ತುಪ್ಪ ಪೂರೈಕೆ ಸಾಧ್ಯನಾ ಎಂದು ಎಂದು ಶ್ಯಾಮಲರಾವ್ ಪ್ರಶ್ನಿಸಿದ್ದಾರೆ. ದೇಗುಲದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತಲು ಅವರಂತೂ, ಕಳೆದ ಐದು ವರ್ಷದಿಂದ ಈ ಮಹಾ ಪಾಪ ನಡೆಯುತ್ತಿತ್ತು ಎಂದು ಆಪಾದಿಸಿದ್ದಾರೆ. ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೇಂದ್ರವನ್ನು ಡಿಸಿಎಂ ಪವನ್ ಕಲ್ಯಾಣ್ ಆಗ್ರಹಿಸಿದ್ದಾರೆ. ಆಡಳಿತಾರೂಢ ಟಿಡಿಪಿ ನಾಯಕರೆಲ್ಲಾ ಜಗನ್ ವಿರುದ್ಧ…
ಖ್ಯಾತ ನಟ ಶಶಿಕುಮಾರ್ ಪುತ್ರ ಆದಿತ್ಯ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದು ಈಗಾಗಲೇ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಆದಿತ್ಯ ನಟನೆಯ ಮೂರನೇ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ರಾಶಿ ಎಂದು ಟೈಟಲ್ ಇಡಲಾಗಿದೆ. ಧುವನ್ ಫಿಲ್ಮ್ಸ್ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದ್ದು ಆದಿತ್ಯಗೆ ಜೋಡಿಯಾಗಿ ಸಮೀಕ್ಷಾ ಕಾಣಿಸಿಕೊಳ್ತಿದ್ದಾರೆ. ನಟ ಶಶಿಕುಮಾರ್, ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ಬೆಂಗಳೂರು ಪೊಲೀಸ್ ಉಪ ಆಯುಕ್ತ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್. ಚಿದಂಬರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಆದಿತ್ಯ ಶಶಿಕುಮಾರ್ ಅವರು ಹೀರೋ ಆಗಿ ನಟಿಸುತ್ತಿರುವ ಮೂರನೇ ಸಿನಿಮಾ ಇದು. ಈ ಚಿತ್ರದ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 100 ದಿನ ಕಳೆದಿದೆ. ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಜೈಲಾಧಿಕಾರಿಗಳ ಬಳಿ ದಿನಕ್ಕೊಂದು ಬೇಡಿಕೆ ಇಡುತ್ತಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈಗ ಅವರಿಗೆ ನಿರಂತರವಾಗಿ ಬೆನ್ನನೋವು ಬರುತ್ತಿದೆ. ಹೀಗಾಗಿ ಅವರು ಕುಳಿತುಕೊಳ್ಳಲು ಚೇರ್‌ಗೆ ಮನವಿ ಮಾಡಿದ್ದರು. ಚೇರ್ ಗೆ ಮನವಿ ಮಾಡಿ ವಾರಗಳೇ ಕಳೆದಿವೆ. ಆದಾಗ್ಯೂ ಜೈಲಾಧಿಕಾರಿಗಳು ಕುರ್ಚಿಯನ್ನು ನೀಡಿಲ್ಲ. ಇದರಿಂದ ದರ್ಶನ್ ಗರಂ ಆಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಹಾಯಾಗಿ ಇದ್ದರು. ವಿಲ್ಸನ್ ಗಾರ್ಡನ್ ನಾಗ ಅವರಿಗೆ ಸಾಕಷ್ಟು ವ್ಯವಸ್ಥೆ ಮಾಡಿಕೊಟ್ಟಿದ್ದರು. ಈ ವ್ಯವಸ್ಥೆಯಿಂದ ಅವರಿಗೆ ಯಾವುದೇ ತೊಂದರೆ ಆಗಿರಲಿಲ್ಲ. ಈ ವಿಚಾರ ಹೊರ ಬಂದ ನಂತರ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ದರ್ಶನ್ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರಂತೆ. ದರ್ಶನ್ ಚೇರ್‌ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್ ಅವರು…
ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್‌ಗಢದ ಬಿಜೆಪಿ ವಕ್ತಾರ ಅಮರ್‌ಜೀತ್ ಸಿಂಗ್ ಛಾಬ್ರಾ, ರಾಹುಲ್ ಹೇಳಿಕೆಯೂ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ರಾಯ್ಪುರದಲ್ಲಿ ದೂರು ದಾಖಲಿಸಿದ್ದಾರೆ. ಭಾರತದಲ್ಲಿ ಸಿಬ್ಬರಿಗೆ ಪಗಡಿ ಅಥವಾ ಕಡಾ ಧರಿಸಲು ಹಾಗೂ ಗುರುದ್ವಾರಕ್ಕೆ ಹೋಗಲು ಅನುಮತಿ ನೀಡುತ್ತಾರೆಯೇ? ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ಹೇಳಿಕೆ ನೀಡಿರುವುದಾಗಿ ವಿವರಿಸಿದ್ದಾರೆ. ಭಾರತ ಸೇರಿದಂತೆ…
ಹುಬ್ಬಳ್ಳಿ: ರಾಜ್ಯದಲ್ಲಿ ಆಗುವ ಎಲ್ಲ ಕೋಮು ಗಲಭೆಗಳಿಗೆ ಬಿಜೆಪಿಯೇ ನೇರ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಕೋಮು ಗಲಭೆ ಅವರೇ ಮಾಡುವಂಥದ್ದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು. https://youtu.be/n29quAtxQD0?si=BmVFNbure5O4lwca ಹುಬ್ಬಳ್ಳಿಯಲ್ಲಿರುವ ಸರ್ ಸಿದ್ದಪ್ಪ ಕಂಬಳಿ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಶನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಭಾವನೆ ಹೇಗೆ ಕೆರಳಿಸಬೇಕು ಎಂಬುದು ಅವರಿಗೆ ಗೊತ್ತಿದೆ. ಜನರ ಬಳಿ ಹೋಗಲು ಅವರಲ್ಲಿ ಯಾವುದೇ ಸಾಧನೆ ಇಲ್ಲ. ರಾಜ್ಯ ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಆಗದೇ ಹೊಟ್ಟೆಕಿಚ್ಚಿನಿಂದ ಜಾತಿ ಜಾತಿ, ಧರ್ಮ ಧರ್ಮ ಗಳ ನಡುವೆ ವೈಷಮ್ಯ, ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದರು. ರಾಜಭವನದ ಗೌಪ್ಯ ಮಾಹಿತಿಗಳು ಸೋರಿಕೆಯಾಗಿರುವ ಬಗ್ಗೆ ರಾಜ್ಯಪಾಲರೇ ಉತ್ತರ ಕೊಡಬೇಕು. ರಾಜಭವನದ ಅಧಿಕಾರಿಗಳು ರಾಜ್ಯಪಾಲರ ನಿಯಂತ್ರಣದಲ್ಲಿ ಇರುತ್ತಾರೆ. ಅಲ್ಲಿ ಯಾರ ಇರಬೇಕು, ಅಧಿಕಾರಿಗಳು ಯಾರು ಬೇಕು ಎಂಬುದನ್ನು ಅವರೇ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಅರಣ್ಯ ಅತಿಕ್ರಮಣವನ್ನು ತೆರವುಗೊಳಿಸಲು ಕ್ರಮ…
ಇತ್ತೀಚಿಗೆ ಮಕ್ಕಳಲ್ಲಿ ಹೃದಯಾಘಾತವಾಗುತ್ತಿರುವ ವಿದ್ರಾವಕ ಘಟನೆಗಳು ನಡೆಯುತ್ತಲೇ ಇವೆ. ದಿನಕಳೆದಂತೆ ಹೃದಯಾಘಾತಗಳು ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ಮಕ್ಕಳು ಸಾವನ್ನಪ್ಪಿರುವ ಕೆಲವು ಘಟನೆಗಳ ಕುರಿತು ಮಾಹಿತಿ ಇಲ್ಲಿದೆ https://youtu.be/EvHHmK3mIe4?si=0zN7HVkL5Ys-NUWw ಹಾಸನ: 11 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಕಾವ್ಯಶ್ರೀ ಎಂಬುವವರ ಮಗ ಸಚಿನ್ ಎಂದು ತಿಳಿಯಲಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಶುಕ್ರವಾರ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿರುವರಿಂದ ಶಾಲೆಗೆ ಹೋಗದೇ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದ. ಅದೇ ವೇಳೆ ಏಕಾಏಕಿ ಮತ್ತೇ ನೋವು ಕಾಣಿಸಿಕೊಂಡಿದೆ. ಇದ್ದ ಜಾಗದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾನೆ. ರಾಯಚೂರು: 9 ವರ್ಷದ ಬಾಲಕ ಕಡಿಮೆ ರಕ್ತದೊತ್ತಡದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ನಿವಾಸಿ ಶಿವಪ್ರಸಾದ್ ಎಂದು ಗುರುತಿಸಲಾಗಿದೆ.…
ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ. https://youtu.be/PbyDtPXwRWM?si=Z33-pOJvrYDQ0Uj5 ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮುಜರಾಯಿ ವ್ಯಾಪ್ತಿಯ ದೇಗುಲಗಳ ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಇರಬಾರದು. ಹೀಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಹೊರಡಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ…
ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ದೇವಸ್ಥಾನಗಳು ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ. https://youtu.be/uuH3BGovAzs?si=llFUiXwzIHhpRX4w ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದೆ.