Author: Prajatv Kannada

ದಕ್ಷಿಣ ವಜೀರಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಆರು ಯೋಧರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಕಳೆದ ಜೂನ್ ತಿಂಗಳಿನಿಂದ ಪ್ರತಿ ತಿಂಗಳು ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾರೆ. ಪ್ರತಿ ದಾಳಿಯಲ್ಲಿ ಅನೇಕ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು ಹಲವರು ಗಾಯಗೊಂಡಿದ್ದಾರೆ. ಇದೀಗ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್ 22ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರು ಪೊಲೀಸರ ಮೇಲೆ ರಾಕೆಟ್ ದಾಳಿ ನಡೆಸಿದ್ದರು. ಇದರಲ್ಲಿ ಕನಿಷ್ಠ 11 ಸೈನಿಕರು ಸಾವನ್ನಪ್ಪಿದರು. ಲಾಹೋರ್‌ನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ರಹೀಮ್ ಯಾರ್ ಖಾನ್ ಜಿಲ್ಲೆಯಲ್ಲಿ ಹಲವಾರು ಯೋಧರನ್ನು ಒತ್ತೆಯಾಳಾಗಿ ಇರಿಸಲಾಗಿತ್ತು. ಉಗ್ರರು ರಾಕೆಟ್‌ಗಳ ಮೂಲಕ ದಾಳಿ ನಡೆಸಿದ್ದಾರೆ ಎಂದು ಪಂಜಾಬ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಏಳು ಸೈನಿಕರು ಮೃತಪಟ್ಟಿದ್ದಾರೆ. ಸೈನಿಕರ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ಪ್ರಧಾನಿ ಶಹಬಾಜ್ ಷರೀಫ್ ಅವರು ಭಯೋತ್ಪಾದನೆಯನ್ನು ಕೊನೆಗೊಳಿಸುವುದಾಗಿ ಪಣ ತೊಟ್ಟರು. ಭಾನುವಾರ…

Read More

ಭಾರತವನ್ನು ಕ್ವಾಡ್‌ ಒಕ್ಕೂಟದ ನಾಯಕ ರಾಷ್ಟ್ರವಾಗಿ ಅಮೆರಿಕ ಕಾಣುತ್ತದೆ ಮತ್ತು ನಾಲ್ಕು ರಾಷ್ಟ್ರಗಳ ಒಕ್ಕೂಟ ರಚನೆಗೆ ಭಾರತ ಮಹತ್ವದ ಪಾತ್ರ ವಹಿಸಿರುವುದಕ್ಕೆ ಆಭಾರಿಯಾಗಿದ್ದೇವೆ ಎಂದು ಶ್ವೇತಭವನದ ಉನ್ನತ ಅಧಿಕಾರಿ ಮೀರಾ ರಾಪ್‌-ಹೂಪರ್‌ ತಿಳಿಸಿದ್ದಾರೆ. ಶ್ವೇತಭವನದ ಭದ್ರತಾ ಮಂಡಳಿಯಲ್ಲಿ ಪೂರ್ವ ಏಷ್ಯಾ ಮತ್ತು ಒಸಿನಿಯಾದ ಹಿರಿಯ ನಿರ್ದೇಶಕರಾಗಿರುವ ಅವರು, ಕ್ವಾಡ್‌ ಶೃಂಗಸಭೆಗೆ ಎರಡು ದಿನ ಇರುವ ಮಧ್ಯೆಯೇ ಈ ಹೇಳಿಕೆ ನೀಡಿದ್ದಾರೆ. ಕ್ವಾಡ್‌ ಒಕ್ಕೂಟವು ಭಾರತ, ಆಸ್ಟ್ರೇಲಿಯಾ ಜಪಾನ್ ಮತ್ತು ಅಮೆರಿಕ ದೇಶಗಳನ್ನು ಒಳಗೊಂಡಿದೆ. ಶನಿವಾರ ನಡೆಯಲಿರುಯ ಶೃಂಗದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು, ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್‌, ಜಪಾನ್‌ ಪ್ರಧಾನಿ ಕಿಶಿದಾ ಫುಮಿನೊ ಅವರಿಗೆ ಆತಿಥ್ಯ ನೀಡಲಿದ್ದಾರೆ.

Read More

ವಿದ್ಯಾರ್ಥಿನಿಯ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಬೆಂಗಳೂರಿನ ಕಗ್ಗಲಿಪುರದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಬಂಧಿಸುವಂತೆ ಆಗ್ರಹಿಸಲಾಗಿತ್ತು. https://youtu.be/1V-p3XuQGVQ?si=trG8Y6OhFRAQwhxh ಸ್ತಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕ ಮತ್ತು ಆತನ ಮೊಬೈಲ್​ನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಆರೋಪ ಕೇಳಿಬರುತ್ತಿದ್ದಂತೆ ವಿದ್ಯಾರ್ಥಿನಿಯರಿಂದ ಗಲಾಟೆ ಮಾಡಲಾಗಿದೆ. ಯುವಕನನ್ನು ಬಂಧಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ನ್ಯಾಯ ಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸದ್ಯ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.

Read More

ಮಂಡ್ಯ: ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. https://youtu.be/Fh5qtx1HELU?si=dcb7OMcJ6dgWyX8a ಬಿಜೆಪಿ ಕಚೇರಿಯಲ್ಲಿ ಸತ್ಯಶೋಧನಾ ಸಮಿತಿ ವರದಿ ಸ್ವೀಕಾರ ಹಿನ್ನೆಲೆ ಆಗಮಿಸಿದ್ದ ಬಿವೈ ವಿಜಯೇಂದ್ರ ಮಾತನಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿಬರ್ತಿವೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ ಸರ್ಕಾರ ವಿಫಲವಾಗಿದೆ. ರಾಜ್ಯದ ಜನರಿಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ ಎಂದರು. ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಒಂದಾದ ಮೇಲೆ ಒಂದು ಘಟನೆ ನಡೆಯುತ್ತಿದೆ. ನಾಗಮಂಗಲ ಕೇಸ್ ಭಯದಿಂದ ಜನರು ಊರು ಬಿಟ್ಟಿದ್ದಾರೆ. ನಿರಪರಾಧಿಗಳ ಮೇಲೆ…

Read More

ಬೀದರ್:‌ ತಮಿಳು, ಮಹಾರಾಷ್ಟ್ರ, ತೆಲುಗು, ಹಿಂದಿ,ಕನ್ನಡ , ಉರ್ದು,ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಯಲ್ಲಿ ಸುಮಾರು 40 ನಮೂನೆಯ ಕಳಪೆ ಗುಟ್ಕಾ, ಪಾನಮಸಲಾ ತಂಬಾಕು ತಯಾರಿಸಿ ವಿವಿಧ ರಾಜ್ಯಕ್ಕೆ ಸಾಗಿಸುತ್ತಿರುವ ಅಡ್ಡೆ ಮೇಲೆ ಬೀದರ್ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ದಾಳಿ ಮಾಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಮಹೇಶ ಪಾಟೀಲ್ ನೇತೃತ್ವದಲ್ಲಿ ದಾಳಿ ಮಾಡಿ ಒಂದು ಕೋಟಿ ಗೂ ಅಧಿಕ ಮೌಲ್ಯದ ಪಾನಪಸಾಲ ತಯಾರಿಕೆ ಕಚ್ಚಾವಸ್ತುಗಳು ಹಾಗೂ ಗುಟ್ಕಾ ಹಾಗೂ ಪಾನ ಮಸಾಲಾವನ್ನು ವಶಕ್ಕೆ ಪಡೆದಿದ್ದಾರೆ. ಬೀದರನ ಕೋಳಾರ ಕೈಗಾರಿಕೆ ಪ್ರದೇಶದಲ್ಲಿರುವ ಗೋದಾಮಿನಲ್ಲಿ ನಕಲಿ ವಿವಿಧ ಬ್ಯ್ಯಾಂಡ್ ಹೆಸರಲ್ಲಿ ಕಚ್ಚಾ ವಸ್ತುಗಳು ಪತ್ತೆ ಮಾಡಲಾಗಿದ್ದು, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರಪ್ರದೇಶಕ್ಕೆ ಇಲ್ಲಿ ತಯಾರಿಸುವ  ಸುಮಾರು 40 ಕ್ಕೂ ಅಧಿಕ ನಮೂನೆಯ ಗುಟ್ಕಾ ಪಾನಮಸಲಾ ಸರಬರಾಜು ಮಾಡೋ ಮಾಹಿತಿ ಮೇರೆಗೆ ಮಧ್ಯ ರಾತ್ರಿ ಕಾರ್ಯಚರಣೆ ನಡೆಸಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಲಾರಿ ಚಾಲಕ ಹಾಗೂ ಕೆಲ…

Read More

ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ  ಅವರು ಹಿಟ್ಲರ್ ಆಗಿದ್ದಾರೆ. ಸರ್ಕಾರ ನನ್ನ ವಿರುದ್ಧವೂ ಎಫ್‌ಐಆರ್ ದಾಖಲಿಸಿದೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದು ನಾಗಮಂಗಲ ಗಲಭೆ ವಿಚಾರವಾಗಿ ಎಫ್‌ಐಆರ್ ದಾಖಲಿಸಿರುವ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆ ವಿಚಾರವಾಗಿ ನನ್ನ ಮೇಲೆ ಎಫ್‌ಐಆರ್   ದಾಖಲಿಸಿದ್ದಾರೆ. ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಬೇಡ, ಎಫ್‌ಐಆರ್ ಹಾಕಿದೆ, ನಾವು ಎದುರಿಸ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ ಅವರು ಹಿಟ್ಲರ್ ಆಗಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರ ಧ್ವನಿ ಅಡಗಿಸುವ, ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಐವಾನ್ ಡಿಸೋಜಾ ಅವರು ಬಾಂಗ್ಲಾ ಮಾದರಿಯ ಗಲಭೆ…

Read More

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿಸೆಪ್ಟೆಂಬರ್ 24ರಿಂದ ಮತ್ತೆ ಮಳೆ ಶುರುವಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://youtu.be/ghIvcNP34Qs?si=8Vnl1saRctCQMU9C ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಇತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ…

Read More