ವಿಜಯಪುರ:- ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ. https://youtu.be/MNjzETTsCF8?si=ISyAt8ACSEJjjwNN ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದು, ಇದೀಗ ಎಫ್‌ಐಆರ್ ದಾಖಲಿಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ ಪೊಲೀಸ್ ಇಲಾಖೆ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ವೈಯಕ್ತಿಕವಾಗಿ ರಾಹುಲ್‌ಗಾಂಧಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ…
Author: Prajatv Kannada
ದೊಡ್ಡಬಳ್ಳಾಪುರ: ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ಸಾಕಷ್ಟು ಅನಾಹುತಾ ಸೃಷ್ಟಿಯಾಗಿದ್ದರೆ, ಮಳೆಯಿಲ್ಲದೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಬರದ ವಾತಾವರಣ ನಿರ್ಮಾಣವಾಗಿದೆ. ಮಳೆಯಿಲ್ಲದೆ ಬೆಳೆಗಳು ಒಣಗುವ ಹಂತಕ್ಕೆ ಹೋಗಿದ್ದು ಜನರು ಮಳೆಗಾಗಿ ಪ್ರಾರ್ಥನೆ ಮಾಡಿ ಹಳೆ ಸಂಪ್ರದಾಯದಂತೆ ಪೂಜೆ ಮಾಡುತ್ತಿದ್ದಾರೆ. ಈ ಕುರಿತು ಕಂಪ್ಲಿಟ್ ವರದಿ ಇಲ್ಲಿದೆ ನೋಡಿ https://youtu.be/aEYaBKRjQa4?si=DRyh-wGdVaed9EWb ಹೌದು ಹೀಗೆ ಊರಿನ ಗ್ರಾಮಸ್ಥರೆಲ್ಲ ಸೇರಿ ಒಟ್ಟಿಗೆ ಕೂತು ಮದುವೆ ಮಾಡುತ್ತಿರುವ ದೃಶ್ಯಗಳು, ತಲೆಗೆ ಬಾಚಿಂಗ, ರೇಷ್ಮೆ ಸೀರೆ ಉಟ್ಟು ವಧುವರರ ರೀತಿ ಫೋಸ್ ನೀಡುತ್ತಿರುವ ಹುಡುಗರು, ಈ ಎಲ್ಲಾ ದೃಶ್ಯಗಳು ಕಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಚ್ಚಾರಲಹಳ್ಳಿ ಗ್ರಾಮದಲ್ಲಿ. ಕಳೆದ ಒಂದು ತಿಂಗಳಿನಿಂದಲೂ ಮಳೆಯಿಲ್ಲದೆ ಕಂಗಲಾಗಿದ್ದು ಇಂದು – ನಾಳೆ ಮಳೆಯಾಗುತ್ತದೆ ಎಂಬ ನಂಬಿಕೆಯಿಂದಲೇ ಜನರು ಕಾಲ ಕಳೆಯುತ್ತಿದ್ದಾರೆ. ಕಳೆದ ತಿಂಗಳು ಬಿದ್ದ ಮಳೆಗೆ ಗೊಬ್ಬರ ಹಾಕಿ, ಬೆಳೆ ಉತ್ತಮವಾಗಿ ಬೆಳೆಯುತ್ತದೆ ಎಂಬ ನಂಬಿಕೆಯಲ್ಲಿ ರೈತರ ಕನಸಿಗೆ ಮಳೆ ನೀರೆರೆಚಿದೆ. ಮಳೆಗಾಗಿ ಈಗ ಜನರು…
ಕಲಬುರಗಿ: ರಮೇಶ್ ಜಾರಕಿಹೊಳಿ ಬಾಯಲ್ಲೂ ಪಕ್ಷ, ಪಕ್ಷದ ಸಿದ್ಧಾಂತ ಬಂದಿರೋದು ಒಳ್ಳೆಯ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣ ಸಂಬಂಧ ಪಾದಯಾತ್ರೆ ಚರ್ಚೆಯ ಹಂತದಲ್ಲಿದೆ. ಇನ್ನು ರಮೇಶ್ ಜಾರಕಿಹೊಳಿ ಹೇಳಿರುವ ವಿಜಯೇಂದ್ರ ನಾಯಕನಾಗಿ ಒಪ್ಪಿಕೊಳ್ಳೊದಿಲ್ಲ ಅನ್ನೋದು ಸ್ವಾಗತ ಮಾಡುತ್ತೇನೆ. ನಾನು ನಾಯಕನಾಗಲು ಹೊರಟಿಲ್ಲ. ನಮ್ಮ ಪಕ್ಷದ ಹಿರಿಯರು, ರಾಜ್ಯದ ಅಧ್ಯಕ್ಷನಾಗಿ ನೇಮಕ ಮಾಡಿದ್ದಾರೆ. ಸದ್ಯ ಭ್ರಷ್ಟ ಸರ್ಕಾರವನ್ನ ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷರನ್ನು ಓಲೈಸಲು ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ ನಡೆಸಿದ್ದಾರೆ. ಅವರ ಸರ್ಕಾರ ಬಂದು ವರ್ಷವಾದರೂ ಈ ಭಾಗದ ನೆನಪಾಗಲಿಲ್ಲ. ಹೀಗಾಗಿ ಅಚಾನಕ್ಕಾಗಿ ಇದೀಗ ಈ ಭಾಗದ ನೆನಪಾಗಿ ಸಚಿವ ಸಂಪುಟ ಸಭೆ ನಡೆಸಿದರು. ಆದರೆ ಈ ಭಾಗಕ್ಕೆ ಏನು ಪ್ರಯೋಜನವಾಗಿಲ್ಲ. ಹೀಗಾಗಿ ಬೆಂಗಳೂರು, ಮೈಸೂರು ಮುಖ್ಯಮಂತ್ರಿ ಎಂದು ಜನ ಹೇಳುತ್ತಿದ್ದಾರೆ ಎಂದು…
ಕಳೆದ ಕೆಲ ದಿನಗಳಿಂದ ನಟ ವರುಣ್ ಆರಾಧ್ಯ ಹಾಗೂ ಆತನ ಮಾಜಿ ಪ್ರೇಯಸಿ ಸಖತ್ ಸುದ್ದಿಯಾಗ್ತಿದ್ದಾರೆ. ವರುಣ್ ತನ್ನ ಖಾಸಗಿ ವಿಡಿಯೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಪ್ರೇಯಸಿ ದೂರು ನೀಡಿದ್ದರು. ಬಳಿಕ ಇಬ್ಬರೂ ರಾಜಿ ಆಗಿ ಹೊರ ಬಂದ್ಮೇಲೆ, ಈಗ ಮತ್ತೆ ಆರೋಪಗಳ ವರಸೆ ಶುರು ಮಾಡಿದ್ದಾರೆ. ಮತ್ತೊಂದೆಡೆ ವರುಣ್ ಆರಾಧ್ಯನ ಚಾಟಿಂಗ್ ರಹಸ್ಯ ಲೀಕ್ ಆಗಿದೆ. ಸೆಪ್ಟೆಂಬರ್ 07.. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಯೂಟ್ಯುಬರ್ ವರುಣ್ ಆರಾಧ್ಯ ವಿರುದ್ಧ ಮಾಜಿ ಪ್ರೇಯಸಿ ದೂರು ಕೊಟ್ಟಿದ್ದಳು.. ಖಾಸಗಿ ವಿಡಿಯೋಗಳನ್ನ ಇಡ್ಕೊಂಡು ಬೆದರಿಸ್ತಿದ್ದಾನೆ ಅಂತಾ ಆರೋಪ ಮಾಡಿದ್ದಳು. ಬಳಿಕ ಸೋಶಿಯಲ್ ಮೀಡಿಯಾಗೆ ಬಂದು ಬೇರೆಯದ್ದೇ ಕಥೆ ಕಟ್ಟಿದ್ದಳು. ಇದೆಲ್ಲಾ ಸುಳ್ಳು ಸುದ್ದಿ ಮಾಧ್ಯಮಗಳು ಹೀಗೆಲ್ಲಾ ಸೃಷ್ಟಿಸಿದ್ದಾವೆ ಎಂದಿದ್ದಳು. ಇದೀಗ ಇಬ್ಬರ ನಡುವಿನ ಚಾಟಿಂಗ್ ರಹಸ್ಯ ಬಯಲಾಗಿದೆ. ಮಾಜಿ ಪ್ರೇಯಸಿ: ?? ಏನ್ ಮಾತಾಡ್ತಾ ಇದ್ಯಾ..? ವರುಣ್: ಎಲ್ ಸ್ಟೋರಿ.. ಏನ್ ಮಾಡ್ಕೊತೀಯಾ ಮಾಡ್ಕೋ.. ನಾನು ವರುಣ್ ಆರಾಧ್ಯಾ ವರುಣ್:…
ರಾಯಚೂರು: ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಮಾಡಿ ಕಾಂಗ್ರೆಸ್‌ನವರು ಕೇವಲ ನಾಟಕ ಕಂಪನಿಯನ್ನು ತಂದು ನಾಟಕ ತೋರಿಸಿ ಹೋಗಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಜಾನೆ ಖಾಲಿಯಾಗಿದೆ ಎಲ್ಲಿಂದ ತಂದು ಅನುದಾನ ಕೊಡುತ್ತಾರೆ ಗೊತ್ತಿಲ್ಲ. ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ. ಕೊಡುತ್ತೇನೆ ಅಂತಿದ್ದಾರೆ. ಅದು ಕೊಡುವುದಿದ್ದರು ಪರವಾಗಿಲ್ಲ, ಕಲಬುರಗಿಯಲ್ಲಿನ 5 ಸಾವಿರ ಗುಂಡಿಗಳನ್ನಾದರೂ ಮುಚ್ಚಲಿ. ಈ ಸರ್ಕಾರ ಅಭಿವೃದ್ಧಿ ಪರವಾಗಿಲ್ಲ, ಅವರನ್ನ ಗೇಲಿ ಮಾಡುವಂತಹ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು. ನಾಗಮಂಗಲ ಗಲಭೆ ಪ್ರಕರಣ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಬೆಂಕಿ ಹಚ್ಚುತ್ತಿರುವುದು ಕಾಂಗ್ರೆಸ್. ಅದನ್ನು ಆರಿಸುವ ಕೆಲಸ ನಮಗಿದೆ. ನಾಗಮಂಗಲಕ್ಕೆ ನಾನು ಹೋಗಿದ್ದೆ. ಅಲ್ಲಿನ ಪರಿಸ್ಥಿತಿ ನೋಡಿ ಬಂದಿದ್ದೇನೆ. ಹಿಂದೂಗಳನ್ನ ಟಾರ್ಗೆಟ್ ಮಾಡಿ ಅವರ ಅಂಗಡಿಗಳಿಗೆ ಬೆಂಕಿ ಹಾಕಿದ್ದಾರೆ. ಪೆಟ್ರೋಲ್ ಬಾಂಬ್ ಹಾಕಿದ್ದಾರೆ. ಇದರಲ್ಲಿ ಪಶ್ಚಿಮ ಬಂಗಾಳ ಹಾಗೂ ಕೇರಳದವರು ಭಾಗಿಯಾಗಿದ್ದಾರೆ. ನಾಗಮಂಗಲದಲ್ಲಿ ಅವರಿಗೆ ಏನ್ ಕೆಲಸ ಎಂದು…
ಐಶ್ವರ್ಯಾ ರೈ ಮಗಳು ಆರಾಧ್ಯ ಸದಾ ಅಮ್ಮನೊಂದಿಗೆ ಇರುತ್ತಾರೆ. ಸದಾ ಅಮ್ಮನ ಜೊತೆಯೇ ಸುತ್ತಾಡುವ ಮಗಳಿಗೆ ಐಶ್ವರ್ಯಾ ಪ್ರೀತಿಯ ಜೊತೆಗೆ ಸಂಸ್ಕಾರವನ್ನು ಹೇಳಿಕೊಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಆಗುವಂಥ ಘಟನೆ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ನಡೆದಿದೆ. ಕನ್ನಡದ ಖ್ಯಾತ ನಟ ಶಿವರಾಜ್ಕುಮಾರ್ ಅವರನ್ನು ನೋಡುತ್ತಿದ್ದಂತೆ ಆರಾಧ್ಯಾ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಈ ವಿಡಿಯೋ ಸದ್ಯ ಸಖತ್ ವೈರಲ್ ಆಗಿದೆ. ದುಬೈನಲ್ಲಿ ನಡೆದ ಸೈಮಾ ಅವಾರ್ಡ್ ಕಾರ್ಯಕ್ರಮಕ್ಕೆ ಐಶ್ವರ್ಯಾ ರೈ ಮಗಳು ಆರಾಧ್ಯ ಜೊತೆ ತೆರಳಿದ್ದರು. ಕನ್ನಡದ ಹಲವು ನಟ, ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಶಿವರಾಜ್ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಐಶ್ವರ್ಯಾ ಹಾಗೂ ಶಿವರಾಜ್ಕುಮಾರ್ ಅವರ ಭೇಟಿ ಆಗಿದೆ. ಶಿವರಾಜ್ಕುಮಾರ್ ಹಾಗೂ ವಿಕ್ರಂ ಭೇಟಿ ಆದರು. ಈ ವೇಳೆ ಅಲ್ಲೇ ಇದ್ದ ಐಶ್ವರ್ಯಾ ರೈ ಅವರು ಶಿವರಾಜ್ಕುಮಾರ್ ಅವರನ್ನು ನೋಡುತ್ತಿದ್ದಂತೆ ಓಡೋಡಿ ಬಂದು ಶಿವಣ್ಣನಿಗೆ ಶೇಕ್ಹ್ಯಾಂಡ್ ಮಾಡಿದರು. ಇದರ ಜೊತೆಗೆ ಅಲ್ಲೇ ಇದ್ದ…
ಬೆಂಗಳೂರು : ಒಂದು ದೇಶ. ಒಂದೇ ಚುನಾವಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರದ ಎನ್.ಡಿ. ಎ ಸರಕಾರ ಕೈಗೊಂಡಿರುವ ತೀರ್ಮಾನವನ್ನು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ಸ್ವಾಗತಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಟಿಎ ಶರವಣ, ಒಂದು ದೇಶ. ಒಂದೇ ಚುನಾವಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರದ ಎನ್.ಡಿ. ಎ ಸರಕಾರ ಕೈಗೊಂಡಿರುವ ತೀರ್ಮಾನ ಭಾರತ ಪ್ರಜಾಸತ್ತೆಯ ಚಾರಿತ್ರಿಕ ಸುಧಾರಣೆ ಎಂದು ಬಣ್ಣಿಸಿದ್ದಾರೆ. ಭಾರತದ ಚುನಾವಣೆ ವ್ಯವಸ್ಥೆಯನ್ನು ಅತ್ಯಂತ ಕ್ರಮ ಬದ್ದ ಮತ್ತು ಸರಳಗೊಳಿಸುವ ಈ ಪ್ರಯತ್ನ ಅಭೂತಪೂರ್ವ ಆಗಿದ್ದು, ಅದನ್ನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ ಎಂದು ಅವರು ಶ್ಲಾಘಿಸಿದ್ದಾರೆ. ಈ ಐತಿಹಾಸಿಕ ಕ್ರಮದಿಂದಾಗಿ ಭಾರತದಲ್ಲಿ ಪ್ರಜಾಸತ್ತೆ ಇನ್ನಷ್ಟು ಬಲಗೊಂಡು, ಬೊಕ್ಕಸದ ಮೇಲಿನ ಭಾರ ಭಾರಿ ಪ್ರಮಾಣದಲ್ಲಿ ತಗ್ಗುತ್ತದೆ. ಪಾರದರ್ಶಕ ವ್ಯವಸ್ಥೆ ಜಾರಿಗೆ ಬರುತ್ತದೆ. ಚುನಾವಣೆ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುವುದು ನಿಶ್ಚಿತ ಎಂದು ಶರವಣ ಅವರು ಹೇಳಿದ್ದಾರೆ. ರಾಜ್ಯ…
ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. IPC ಸೆಕ್ಷನ್ ವಿವಿದ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು:- ಡ್ರಗ್ಸ್ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟಾಸ್ಕ್ಫೋರ್ಸ್ ಸಮಿತಿ ರಚಿಸಿದೆ. 7 ಸಚಿವರನ್ನೊಳಗೊಂಡ ಟಾಸ್ಕ್ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದ, ಇನ್ನುಳಿದ 6 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಗೃಹ ಸಚಿವ ಪರಮೇಶ್ವರ್ ಅವರನ್ನು ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾನ್ನಾಗಿ ನೇಮಕ ಮಾಡಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಈ ಸಮಿತಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ತಿಂಗಳಿಗೊಮ್ಮೆ ಸಭೆ ನಡೆಸಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಮಿತಿ ಸದಸ್ಯರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ರಾಜ್ಯ ಸರ್ಕಾರ ಈ…
ಬೆಂಗಳೂರು:- ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಇಂದು ಹಗುರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡ ಹಿನ್ನೆಲೆ, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.