ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.ಮಾನ್ಯತಾ, ಕಾಫಿ ಬರ‍್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನ್‌ಕ್ಯುಬೆಟರ್, ಐಬಿಎಂ -ಡಿ-1-4 ಬ್ಲಾಕ್, ಎಲ್-6 ಸಿಮೇನ್ಸ್, , ಬಿ.ಟಿ.ಎಸ್ ಲೌಸೆಂಟ್, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಜೆಎನ್‌ಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ, ಮತ್ತು ಜೆಎನ್‌ಸಿ, ಗೊದ್ರೇಜ್ ಅಪಾರ್ಟ್‌ಮೆಂಟ್, ಬ್ರಿಗೇಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ವಿದ್ಯುತ್ ಸಂಬಂಧಿತ ಯಾವುದೇ ದೂರುಗಳು ಇದ್ದಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
Author: Prajatv Kannada
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ವನ್ಯಜೀವಿ ಅನುಮೋದನೆಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿದೆ. ಮಹದಾಯಿ ವಾಟರ್ ಡಿಸ್ಪ್ಯೂಟ್ ಟ್ರಿಬ್ಯೂನಲ್ ಅವಾರ್ಡ್ ಅನ್ನು 14-08-2018 ರಂದು ಘೋಷಿಸಲಾಯಿತು ಮತ್ತು 27-02-2020 ರಂದು ಭಾರತದ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತಿರುಗಿಸಲು ರಾಜ್ಯ ಸರ್ಕಾರವು 16-06-2022 ರಂದು CWC ಗೆ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ ಮಾರ್ಪಡಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಅನುಮೋದನೆಗಾಗಿ ಸಲ್ಲಿಸಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ…
ಲೆಬನಾನ್ ಹಾಗೂ ಸಿರಿಯಾಗಳಲ್ಲಿ ಏಕಾಏಕಿ ಪೇಜರ್ ಹಾಗೂ ವಾಕಿ ಟಾಕಿ ಸ್ಫೋಟಗಳು ಹಲವರ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಗೌಪ್ಯ ದಾಳಿಯ ಹಿಂದೆ ಇಸ್ರೇಲ್ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕವೆಂಬಂತೆ, ಸ್ಫೋಟಗಳು ಸಂಭವಿಸುತ್ತಿರುವ ಬೆನ್ನಲ್ಲೇ ಇಸ್ರೇಲ್ ರಕ್ಷಣಾ ಸಚಿವರು ಮಾರ್ಮಿಕ ಹೇಳಿಕೆ ನೀಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಯುದ್ಧದ ಹೊಸ ಹಂತ ಆರಂಭವನ್ನು ಇಸ್ರೇಲ್ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ಸೇನಾ ಪಡೆಗಳೊಂದಿಗೆ ಮಾತನಾಡುತ್ತಾ, ಇಸ್ರೇಲ್ ಸೇನೆ ಹಾಗೂ ಭದ್ರತಾ ಏಜೆನ್ಸಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಯೋವ್ ಗ್ಯಾಲಂಟ್, ಎಲೆಕ್ಟ್ರಾನಿಕ್ ಉಪಕರಣಗಳ ಸ್ಫೋಟ ಪ್ರಕರಣಗಳನ್ನು ಎಲ್ಲಿಯೂ ಉಲ್ಲೇಖಿಸಿಲ್ಲವಾದರೂ, ಫಲಿತಾಂಶಗಳು ಬಹಳ ಪ್ರಭಾವಶಾಲಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಾಜಾದಲ್ಲಿ ಹಮಾಸ್ ಉಗ್ರಗಾಮಿಗಳ ವಿರುದ್ಧದ ತಿಂಗಳುಗಳ ಯುದ್ಧದ ನಂತರ, “ಸಂಪನ್ಮೂಲಗಳು ಮತ್ತು ಬಲಗಳನ್ನು ತಿರುಗಿಸುವ ಮೂಲಕ ಗುರುತ್ವಾಕರ್ಷಣೆಯ ಕೇಂದ್ರ ಉತ್ತರಕ್ಕೆ ಸ್ಥಳಾಂತರಗೊಳ್ಳುತ್ತಿದೆ” ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ. “ನಾವು ಯುದ್ಧದಲ್ಲಿ ಹೊಸ ಹಂತದ ಪ್ರಾರಂಭದಲ್ಲಿದ್ದೇವೆ,…
ಲೆಬನಾನ್ ನಾದ್ಯಂತ ಹಿಜ್ಬುಲ್ಲಾಗಳು ಬಳಕೆ ಮಾಡುತ್ತಿದ್ದ ಪೇಜರ್ ಗಳು ಏಕಕಾಲಕ್ಕೆ ಸ್ಫೋಟಗೊಂಡು 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 2800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು 200ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ಬೆನ್ನಲ್ಲೇ ಹಿಜ್ಬುಲ್ಲಾಗಳು ಬಳಸುವ ಬೆನ್ನಲ್ಲೇ ವಾಕಿ-ಟಾಕಿಗಳೂ ಸ್ಫೋಟಗೊಳ್ಳಲು ಆರಂಭವಾಗಿವೆ. ವಾಕಿ-ಟಾಕಿಗಳ ಸ್ಫೋಟದ ಪರಿಣಾಮವಾಗಿ 14 ಮಂದಿ ಸಾವನ್ನಪ್ಪಿದ್ದು, 450 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. “ಸೊಹ್ಮೋರ್ ಪಟ್ಟಣದಲ್ಲಿ ಸಾಧನಗಳು ಸ್ಫೋಟಗೊಂಡ ನಂತರ ಮೂವರು ಸಾವನ್ನಪ್ಪಿದ್ದಾರೆ” ಎಂದು ಸರ್ಕಾರಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಹೇಳಿದೆ. ದೇಶದ ಅನೇಕ ಪ್ರದೇಶಗಳಲ್ಲಿ ಎಲೆಕ್ಟ್ರಾನಿಕ್ ಸಾಧನಗಳು ಸ್ಫೋಟಗೊಂಡಿರುವ ಇತ್ತೀಚಿನ ಪ್ರಕರಣಗಳಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಸರ್ಕಾರ ತಿಳಿಸಿದೆ. 5 ತಿಂಗಳ ಹಿಂದೆ ವಾಕಿ ಟಾಕಿ ಉಪಕರಣಗಳನ್ನು ಹೆಜ್ಬೊಲ್ಲಾಗಳು ಖರೀದಿಸಿದ್ದರು. ಪೇಜರ್‌ಗಳನ್ನೂ ಅದೇ ಸಮಯದಲ್ಲಿ ಖರೀದಿಸಿದ್ದಾರೆ ಎಂದು ಭದ್ರತಾ ಮೂಲವೊಂದು ಈಗ ಬಹಿರಂಗಪಡಿಸಿದೆ. ಪೂರ್ವ ಮತ್ತು ದಕ್ಷಿಣದ ಹೆಜ್ಬೊಲ್ಲಾಹ್ ಭದ್ರಕೋಟೆಗಳಲ್ಲಿ ಪೇಜರ್‌ಗಳು ಮತ್ತು “ಸಾಧನಗಳು” ಸ್ಫೋಟಗೊಂಡಿವೆ ಎಂದು ರಾಜ್ಯ ಸುದ್ದಿ…
ಹೆಜ್ಬುಲ್ಲಾ ಸಂಘಟನೆಯ ಸದಸ್ಯರ ಸಾವಿಗೆ ಕಾರಣವಾದ ಪೇಜರ್ ಸ್ಫೋಟ ಪ್ರಕರಣದಲ್ಲಿ ಸ್ಫೋಟಕ್ಕೊಂಡು ಪೇಜರ್ ಗಳು ತೈವಾನ್ ನಿಂದ ಬಂದಿದ್ದು. ಅವುಗಳನ್ನು ನಾವು ತಯಾರಿಸಿಲ್ಲ ಎಂದು ಗೋಲ್ಡ್ ಅಪೋಲೋ ಸಂಸ್ಥೆ ಹೇಳಿಕೊಂಡಿದೆ. ಲೆಬನಾನ್ ನಲ್ಲಿ ಹೆಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಪೇಜರ್ ಗಳು ಏಕಾಏಕಿ ಬ್ಲಾಸ್ಟ್ ಆಗಿ ಕನಿಷ್ಠ 11 ಮಂದಿ ಸಾವಿಗೀಡಾಗಿ 2,800ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಸುಮಾರು 200 ಮಂದಿ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಮುಂದುವರೆದಿದೆ. ಗಾಯಾಳುಗಳಿಗೆ ಹೆಚ್ಚಾಗಿ ಮುಖ, ಕೈಗಳು ಮತ್ತು ಹೊಟ್ಟೆಗೆ ಗಾಯಗಳಾಗಿವೆ ಎಂದು ಲೆಬನಾನಿನ ಆರೋಗ್ಯ ಸಚಿವ ಫಿರಾಸ್ ಅಬಿಯಾಡ್ ಹೇಳಿದ್ದಾರೆ. ಏತನ್ಮಧ್ಯೆ ಹೆಜ್ಬುಲ್ಲಾ ಸಂಘಟನೆಯ ಸದಸ್ಯರ ಸಾವಿಗೆ ಕಾರಣವಾದ ಪೇಜರ್ ಸ್ಫೋಟ ಪ್ರಕರಣದಲ್ಲಿ ಬಳಸಲಾದ ಪೇಜರ್ ಗಳನ್ನು ತೈವಾನ್ ನಿಂದ ತರಲಾಗಿತ್ತು. ಮತ್ತು ಹೀಗೆ ಪೇಜರ್ ಗಳು ಲೆಬೆನಾನ್ ಸೇರುವ ಮುನ್ನವೇ ಅದಕ್ಕೆ ಸ್ಫೋಟಕಗಳನ್ನು ಅಳವಡಿಸಲಾಗಿತ್ತು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ವರದಿಯಲ್ಲಿರುವಂತೆ ಈ ಎಲ್ಲ ಪೇಜರ್ ಗಳನ್ನು ತೈವಾನ್ ಮೂಲದ…
ಡಿಜಿಟಲ್ ಕಾರಣದಿಂದಾಗಿ ಸಾಕಷ್ಟು ಸಿನಿಮಾಗಳು ಥಿಯೇಟರ್ ಗೆ ಬರ್ತಿದ್ದಂತೆ ಮೊಬೈಲ್ ಗೆ ಎಂಟ್ರಿಕೊಟ್ಟು ಬಿಡ್ತಾವೆ. ಅಲ್ಲದೆ ಶೂಟಿಂಗ್ ಸಂದರ್ಭದಲ್ಲಿನ ದೃಶ್ಯಗಳು ಲೀಕ್ ಆಗಿ ಚಿತ್ರತಂಡಕ್ಕೆ ಸಾಕಷ್ಟು ಸಮಸ್ಯೆಯಾಗುತ್ತದೆ. ಇದೀಗ ರಜನಿಕಾಂತ್, ಉಪೇಂದ್ರ, ಅಕ್ಕಿನೇನಿ ನಾಗಾರ್ಜುನ ನಟಿಸುತ್ತಿರುವ ‘ಕೂಲಿ’ ಸಿನಿಮಾದ ದೃಶ್ಯ ಲೀಕ್ ಆಗಿದೆ. ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ. ಅಲ್ಲದೆ, ಅವರು ಕೈಮುಗಿದು ಒಂದು ಕೋರಿಕೆಯನ್ನು ಮಾಡಿಕೊಂಡಿದ್ದಾರೆ. ರಜನಿಕಾಂತ್ ಅವರು ಸದ್ಯ ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ, ಉಪೇಂದ್ರ ಅವರಂಥ ಸ್ಟಾರ್ ಕಲಾವಿದರು ನಟಿಸುತ್ತಿರುವದರಿಂದ ಸಹಜವಾಗಿಯೇ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಆದ್ರೆ ಈ ಮಧ್ಯೆ ಕಿಡಿಗೇಡಿಗಳು ಕೂಲಿ ಸಿನಿಮಾದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಲೀಕ್ ಮಾಡಿದ್ದಾರೆ. ಲೀಕ್ ಆಗಿರುವ ದೃಶ್ಯದಲ್ಲಿ ನಾಗಾರ್ಜುನ ಅವರು ಶೂಟ್ನಲ್ಲಿ ಭಾಗಿಯಾಗಿದ್ದಾರೆ. ನಾಗಾರ್ಜುನ ಅವರು ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ. ಇದನ್ನು ಶೂಟ್…
ತೆಲುಗು ಚಿತ್ರರಂಗದ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ್ದ ಹೈದರಾಬಾದ್ನಲ್ಲಿದ್ದ ಎನ್ ಕನ್ವೆನ್ಷನ್ ಸೆಂಟರ್ ಅನ್ನು ತೆಲಂಗಾಣ ಸರ್ಕಾರ ಕಳೆದ ತಿಂಗಳು ನೆಲಸಮಗೊಳಿಸಿತು. ತೆಲಂಗಾಣ ಸರ್ಕಾರ ಅಡಿಯಲ್ಲಿ ಕೆಲಸ ಮಾಡುತ್ತಿರುವ ಹೈಡ್ರಾ ತಂಡ, ಎನ್ ಕನ್ವೆನ್ಷನ್ ಸೆಂಟರ್ ಅನ್ನು ನೆಲಸಮಗೊಳಿಸಿದ್ದು, ಇದರ ವಿರುದ್ಧ ನಟ ನಾಗಾರ್ಜುನ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿವಾದದ ಬಗ್ಗೆ ನಾಗಾರ್ಜುನ ಸಹೋದರ ಪ್ರತಿಕ್ರಿಯೆ ನೀಡಿದ್ದಾರೆ. ಹತ್ತು ವರ್ಷಗಳ ಹಿಂದೆ ಹೈದರಾಬಾದ್ನ ಮಾದಾಪುರದ ಬಳಿ 10 ಎಕರೆ ಪ್ರದೇಶದಲ್ಲಿ ನಾಗಾರ್ಜುನ ಎನ್ ಕನ್ವೆನ್ಷನ್ ಸೆಂಟರ್ ನಿರ್ಮಾಣ ಮಾಡಿದ್ದರು. ಆದರೆ ಎನ್ ಕನ್ವೆನ್ಷನ್ ಸೆಂಟರ್ ನಿರ್ಮಾಣವನ್ನು ರಾಜಕಾಲುವೆ ಮೇಲೆ ಮಾಡಲಾಗಿದೆ ಎಂದು ಆರೋಪಿಸಿದ್ದ ಹೈಡ್ರಾ ತಂಡ ಏಕಾಏಕಿ ಎನ್ ಕನ್ವೆನ್ಷನ್ ಅನ್ನು ನೆಲಸಮಗೊಳಿಸಿತು. 1.2 ಎಕರೆ ರಾಜಕಾಲುವೆ ಪ್ರದೇಶ ಹಾಗೂ 2 ಎಕರೆ ಬಫರ್ ವಲಯವನ್ನು ಅತಿಕ್ರಮಿಸಿಕೊಂಡು ಎನ್ ಕನ್ವೆನ್ಷನ್ ಸೆಂಟರ್ ಅನ್ನು ನಿರ್ಮಾಣ ಮಾಡಲಾಗಿದೆ ಎಂದು ಹೈಡ್ರಾ ಆರೋಪಿಸಿತ್ತು. ತಮ್ಮ ಕಟ್ಟಡ ನೆಲಸಮವಾದ…
ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 100 ದಿನ ಕಳೆದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೆ ದರ್ಶನ್ ಸಂಪೂರ್ಣ ಸೊರಗಿ ಹೋಗಿದ್ದಾರೆ. ಈ ಮಧ್ಯೆ ದರ್ಶನ್ ಪದೇ ಪದೇ ಜೈಲು ಅಧಿಕಾರಿಗಳ ಬಳಿ ಹೊಸ ಹೊಸ ಬೇಡಿಕೆಗಳನ್ನು ಇಡುತ್ತಿದ್ದಾರೆ. ತಮ್ಮ ಬ್ಯಾರಕ್ನಲ್ಲಿ ಟಿವಿ ಅಳವಡಿಸುವಂತೆ ದರ್ಶನ್ ಪದೇ ಪದೇ ಜೈಲಧಿಕಾರಿಗಳ ಬಳಿ ಕೇಳಿ ಕೊಂಡಿದ್ದರು. ಟಿವಿ ಅಳವಡಿಸಲಾಗಿತ್ತಾದರೂ ಆ ಟಿವಿ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹಲವು ದಿನಗಳಿಂದ ಈ ಬಗ್ಗೆ ಬೇಡಿಕೆ ಇಡುತ್ತಲೇ ಬಂದಿದ್ದ ದರ್ಶನ್ಗೆ ಕೊನೆಗೂ ಜೈಲಧಿಕಾರಿಗಳು ಟಿವಿ ನೀಡಿದ್ದಾರೆ. ಇರುವುದರಲ್ಲೇ ಚೆನ್ನಾಗಿ ಕೆಲಸ ಮಾಡುವ ಟಿವಿಯೊಂದನ್ನು ದರ್ಶನ್ ಇರುವ ಕೋಣೆಯಲ್ಲಿ ಅಳವಡಿಸಿದ್ದಾರೆ. ದರ್ಶನ್ ಕೋಣೆಯಲ್ಲಿ ಟಿವಿ ಏನೋ ಅಳವಡಿಸಲಾಗಿದೆ. ಆದರೆ ದರ್ಶನ್ ಕೇವಲ ಸರ್ಕಾರಿ ಚಾನೆಲ್ಗಳನ್ನು ಮಾತ್ರವೇ ವೀಕ್ಷಿಸಬೇಕಿದೆ. ಯಾವುದೇ ಖಾಸಗಿ ಚಾನೆಲ್ಗಳು ಪ್ರಸಾರವಾಗದಂತೆ ಮಾಡಿಫಿಕೇಷನ್ ಮಾಡಲಾಗಿದೆ.…
ಕರ್ನಾಟಕದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಚಿತ್ರರಂಗ ಹಲವು ವರ್ಷಗಳಿಂದ ಬೇಡಿಕೆ ಇಡುತ್ತಲೇ ಇದೆ. ಆದರೆ ಇದುವರೆಗೂ ಯಾವ ಸರ್ಕಾರವು ಚಿತ್ರ ನಗರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಚಿತ್ರನಗರಿ ನಿರ್ಮಾಣ ಕುರಿತಾಗಿ ಅಧಿಕಾರಿಗಳ ಸಭೆ ಜೊತೆನಡೆಸಿದ್ದು, ಕೆಲವು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ‘ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಬೇಕು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಭೂಮಿ ಗುರುತಿಸಬೇಕು. ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯಬೇಕು. ಭೂಮಿಯನ್ನು…
ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಸುದ್ದಿಯನ್ನು ಚಂದನ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ. ಕವಿತಾ ಗೌಡ ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮಗನ ಪುಟ್ಟ ಕಾಲುಗಳನ್ನು ತಮ್ಮ ಕೈಯಲ್ಲಿ ಹಿಡಿದು ವಿಡಿಯೋ ಮಾಡಿರುವ ಚಂದನ್ ಅದನ್ನು ಹಂಚಿಕೊಂಡಿದ್ದಾರೆ. ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ಖ್ಯಾತಿ ಘಳಿಸಿದ್ದ ಕವಿತಾ ಹಾಗೂ ಚಂದನ್ ಬಳಿಕ ಪ್ರೀತಿಸಿ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದರು. ಕೆಲ ತಿಂಗಳ ಹಿಂದಷ್ಟೆ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಷಯ ಹಂಚಿಕೊಂಡಿದ್ದು, ಕೆಲ ದಿನಗಳ ಹಿಂದೆ ಕವಿತಾ ಗೌಡ ಅವರಿಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಲಾಗಿತ್ತು. ಇದೀಗ ಮೊದಲ ಮಗುವನ್ನು ಜೋಡಿ ಬರಮಾಡಿಕೊಂಡಿದ್ದಾರೆ. ಗಣೇಶ…