Author: Prajatv Kannada

ಕನ್ನಡ ಚಿತ್ರರಂಗದಲ್ಲಿ ಹಲವು ಭಿನ್ನ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಿಸಿ ನಂತರ ಬಣ್ಣದ ಲೋಕದಿಂದ ದೂರ ಉಳಿದಿದ್ದ ಕೋಡಳ್ಳಿ ಶಿವರಾಮ್ ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಶಿವರಾಮ್ ನಿಧನಕ್ಕೆ ಸಾಕಷ್ಟು ಮಂದಿ ಕಂಬನಿ ಮಿಡಿದಿದ್ದಾರೆ. 1978ರಲ್ಲಿ ರಿಲೀಸ್ ಆಗಿದ್ದ ‘ಗ್ರಹಣ’ ಸಿನಿಮಾಗೆ ಶಿವರಾಮ್ ಚಿತ್ರ ಕಥೆ ಬರೆದಿದ್ದು ಟಿಎಸ್ ನಾಗಾಭರಣ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಕೋಡಳ್ಳಿ ಶಿವರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಶಿವರಾಮ್ ಅವರಿಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕಿದ್ದು, ಪ್ರಶಸ್ತಿ ಆಯ್ಕೆ ಸಮಿತಿಯಲ್ಲೂ ಇದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೋಡಳ್ಳಿ ಶಿವರಾಮ್ ಅವರು ಸೆಪ್ಟೆಂಬರ್ 17ರ ರಾತ್ರಿ ನಿಧನರಾಗಿದ್ದಾರೆ. ‘ಗ್ರಹಣ’ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ಮಾಪಕರು ಕೂಡ ಆಗಿದ್ದರು. ಹಲವು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿ ಅವರು ಹೆಸರು ಮಾಡಿದ್ದರು.

Read More

ಬಸ್-ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿರುವ ಘಟನೆ ನೈಜೀರಿಯಾದ ವಾಯುವ್ಯ ರಾಜ್ಯ ಕಡುನಾದಲ್ಲಿ ನಡೆದಿದೆ. ಅಪಘಾತದ ಬಗ್ಗೆ ನೈಜೀರಿಯಾದ ಅಧ್ಯಕ್ಷ ಬೋಲಾ ಟಿನುಬು ಅವರ ವಕ್ತಾರರು ತಿಳಿಸಿದ್ದಾರೆ. ಕಡುನಾದ ಸಮಿನಾಕಾ ಪಟ್ಟಣದಲ್ಲಿ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಯಿಂದ ಡಜನ್ಗಟ್ಟಲೆ ಬದುಕುಳಿದವರು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಅಧ್ಯಕ್ಷರ ವಕ್ತಾರ ಬಾಯೊ ಒನುಗಾ ಟಿನುಬು ಪರವಾಗಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತರು ಉತ್ತರ-ಮಧ್ಯ ರಾಜ್ಯ ಪ್ರಸ್ಥಭೂಮಿಯ ಕ್ವಾಂಡರಿ ಎಂಬ ಪಟ್ಟಣದಿಂದ ತೆರಳುತ್ತಿದ್ದಾಗ ಅವರ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. “ಅಧ್ಯಕ್ಷ ಟಿನುಬು ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಮತ್ತು ಕಡುನಾ ಮತ್ತು ಪ್ರಸ್ಥಭೂಮಿ ರಾಜ್ಯಗಳ ಸರ್ಕಾರಗಳೊಂದಿಗೆ ಸಂತಾಪ ಸೂಚಿಸಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ, ಹೆದ್ದಾರಿ ಮೇಲ್ವಿಚಾರಣೆಯನ್ನು ಸುಧಾರಿಸಲು ಮತ್ತು ದೇಶಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ನೈಜೀರಿಯನ್ ನಾಯಕ ಫೆಡರಲ್ ರಸ್ತೆ…

Read More

ಧಾರವಾಡ: ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮನ ಮೂರ್ತಿ ಭಗ್ನ ಮಾಡಿದ ಘಟನೆ ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ. https://youtu.be/F4csgI-54RQ?si=gZmI6wKwV1jyPfj3 ನರಗುಂದ-ನವಲಗುಂದ ಬಂಡಾಯದ ಗೋಲಿಬಾರ್‌ನಲ್ಲಿ ಹುತಾತ್ಮರಾದ ಬಸಪ್ಪ ಲಕ್ಕುಂಡಿ ಪ್ರತಿಮೆ ಭಗ್ನ ಮಾಡಿದ ಯುವಕ, ಗ್ರಾಮದ ಬಸ್ ನಿಲ್ದಾಣದ ಎದುರಿನ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ಮೂರ್ತಿಯ ಖಡ್ಗಕ್ಕೆ ಭಗ್ನ ಮಾಡಿದ್ದಾನೆ. ಮೂರ್ತಿಯ ಕೆಲ ಭಾಗ ಭಗ್ನ ಮಾಡಿರುವವನು ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆ ಬಳಿಕ ನವಲಗುಂದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಭಗ್ನವಾಗಿರುವ ಮೂರ್ತಿಗಳಿಗೆ ಬಟ್ಟೆ ಸುತ್ತಿರುವ ಪೊಲೀಸರು, ಭಗ್ನ ಮಾಡಿರೋ ಮಾನಸಿಕ ಅಸ್ವಸ್ಥನನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಅಳಗವಾಡಿ ಗ್ರಾಮದಲ್ಲಿ ಪೊಲೀಸರು ಶಾಂತಿ ಸಭೆನ್ನು ಮಾಡಿದ್ದು, ಐದು ದಿನಗಳಲ್ಲಿ ರಾಯಣ್ಣನ ಹಾಗೂ ರೈತ ಹುತಾತ್ಮನ ಹೊಸ ಮೂರ್ತಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ. ಮೂರ್ತಿ ಭಗ್ನ ಮಾಡಿದವನ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು: ಡಿಸಿಇಟಿ-24 ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆಪ್ಟೆಂಬರ್ 18ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. https://youtu.be/uNPsO5WGevI?si=LyReAShn7-hTyIN7 ಸೀಟುಗಳ ಲಭ್ಯತೆಯನ್ನು ಸೆ.18ರ ಮಧ್ಯಾಹ್ನ 2ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಸೆ.18ರ 4ಗಂಟೆಯಿಂದ ಸೆ.20ರವರೆಗೆ ಹೊಸದಾಗಿ ಆಯ್ಕೆ ದಾಖಲಿಸಬಹುದು. ಸೆ.21ರಂದು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು. ಸೆ.23ರಿಂದ 25ರವರೆಗೆ ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸೆ.25ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ ಎಂದು ವಿವರಿಸಿದ್ದಾರೆ. ಜುಲೈನಲ್ಲಿ ನಡೆದ ಮೇಕ್ ಅಪ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಡಿಸಿಇಟಿ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳ ರ‍್ಯಾಂಕ್ ಅನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿರುವ ಅಭ್ಯರ್ಥಿಗಳು ಕೂಡ ಹೊಸದಾಗಿ ಆಯ್ಕೆ ದಾಖಲಿಸಬಹುದು ಎಂದು ತಿಳಿಸಿದ್ದಾರೆ. ಅಲ್ಲದೆ, ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಪಡೆಯದ ಮತ್ತು ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳೂ ಈ ಸುತ್ತಿನಲ್ಲಿ ಹೊಸದಾಗಿ ಆಯ್ಕೆ ದಾಖಲಿಸಬಹುದು…

Read More

ಆಫ್ರಿಕಾ ಖಂಡದ ದಕ್ಷಿಣ ಭಾಗದ ದೇಶಗಳು ಭೀಕರ ಬರಗಾಲ ಎದುರಿಸುತ್ತಿವೆ. ಯಾವ ಮಟ್ಟಿಗೆ ಎಂದರೆ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಜನರು ಹಸಿವಿನಿಂದ ಒದ್ದಾಡಿ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಹಸಿವು ನೀಗಿಸುವ ಉದ್ದೇಶದಿಂದ ಇದೀಗ ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ನೂರಾರು ಕಾಡಾನೆಗಳು ಹಾಗು ಇತರೆ ಪ್ರಾಣಿಗಳ ಹತ್ಯೆಗೆ ನಿರ್ಧಾರ ಕೈಗೊಂಡಿವೆ. ಕಾಡಾನೆಗಳು ಹಾಗೂ ಇತರೆ ಪ್ರಾಣಿಗಳ ಮಾಂಸದಿಂದ ಜನರ ಹಸಿವು ನೀಗಿಸಲು ಮುಂದಾಗಿವೆ. ನಾವು ಸುಮಾರು 200 ಆನೆಗಳನ್ನು ಕೊಲ್ಲುತ್ತೇವೆ. ಅವುಗಳ ಮಾಂಸವನ್ನು ಅವಶ್ಯವಿರುವ ಸಮುದಾಯಗಳ ಜನರಿಗೆ ಹಂಚುತ್ತೇವೆ” ಎಂದು ಜಿಂಬಾಬ್ವೆ ತಿಳಿಸಿದೆ. ಇದೇ ರೀತಿ ನಮೀಬಿಯಾ ದೇಶ ಕೂಡಾ ವಾರದ ಹಿಂದೆ ಇಂಥದ್ದೇ ಕ್ರಮಕ್ಕೆ ಮುಂದಾಗಿತ್ತು. 700ಕ್ಕೂ ಹೆಚ್ಚು ಕಾಡುಪ್ರಾಣಿಗಳನ್ನು ಕೊಲ್ಲಲು ನಿರ್ಧರಿಸಿದ್ದು ಅವುಗಳಲ್ಲಿ 83 ಆನೆಗಳನ್ನು ಕೊಲ್ಲುವ ಕಾರ್ಯ ಆರಂಭವಾಗಿದೆ. 1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಜೊತೆಗೆ 55,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ…

Read More

ಲೆಬನಾನ್‌ನಲ್ಲಿ ನಡೆದ ಭೀಕರ ಪೇಜರ್ ಸ್ಫೋಟಗಳಲ್ಲಿ ಲೆಬನಾನ್ ಸಶಸ್ತ್ರ ಉಗ್ರಗಾಮಿ ಸಂಘಟನೆ ಹಿಜ್ಬುಲ್ಲಾ ಸೇರಿದಂತೆ 9 ಮಂದಿ ಸಾವನ್ನಪ್ಪಿ ಸುಮಾರು 3,000 ಮಂದಿ ಗಾಯಗೊಂಡಿದ್ದಾರೆ. ಇರಾನ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಇಸ್ರೇಲ್ ಲೆಬನಾನ್‌ನಲ್ಲಿ ಸಾಮೂಹಿಕ ಹತ್ಯೆ ಮಾಡಿದೆ ಎಂದು ಆರೋಪಿಸಿದೆ. ಘಟನೆಯನ್ನು ಲೆಬನಾನ್‌ನಲ್ಲಿ ನಡೆದ ಭಯೋತ್ಪಾದಕ ಕಾರ್ಯಾಚರಣೆ ಎಂದು ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ನಾಸರ್ ಕನಾನಿ ಹೇಳಿದ್ದಾರೆ. “ಈ ಭಯೋತ್ಪಾದಕ ಕೃತ್ಯವು ವಾಸ್ತವವಾಗಿ ಸಾಮೂಹಿಕ ಹತ್ಯೆಯ ಒಂದು ರೂಪವಾಗಿದೆ. ಝಿಯೋನಿಸ್ಟ್ ಆಡಳಿತವು ಪ್ಯಾಲೇಸ್ತೀನಿಯನ್ ಜನರ ವಿರುದ್ಧ ಯುದ್ಧ ಅಪರಾಧಗಳು ಮತ್ತು ನರಮೇಧವನ್ನು ಮಾಡುವುದರ ಜೊತೆಗೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯ ಅಪಾಯವನ್ನು ಗಂಭೀರ ಸ್ಥಿತಿಯಲ್ಲಿ ಇರಿಸಿದೆ ಎಂದು ಮತ್ತೊಮ್ಮೆ ಸ್ಪಷ್ಟವಾಗಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ. ಮಂಗಳವಾರ ಲೆಬನಾನ್‌ನಾದ್ಯಂತ ಸಾವಿರಾರು ಪೇಜರ್‌ಗಳು ಏಕಕಾಲದಲ್ಲಿ ಸ್ಫೋಟಗೊಂಡವು. ಇದರಿಂದ 9 ಜನ ಸಾವನ್ನಪ್ಪಿದರು. ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ ಇರಾನ್ ಬೆಂಬಲಿತ ಸಶಸ್ತ್ರ ಗುಂಪಿನ ಹಿಜ್ಬುಲ್ಲಾದ ಸುಮಾರು 3,000…

Read More

ಬೆಂಗಳೂರು:- ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹೀಗಾಗಿ ದರ ಗಗನಕ್ಕೇರಿದೆ. https://youtu.be/7aXZV0UOR30?si=-aZ_we-AGpA1u1Jz ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ‌ ಬೆಲೆ‌ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ.‌ ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರು‌ಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ. ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ…

Read More

ಗದಗ: ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಗದಗ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ತಾಲೂಕಾವಾರು ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು https://youtu.be/-MtTazq3sV8?si=vjhYrLe5LwcqJbYG ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲು ಮುಂದಾದರು. ರೋಣ ಶಾಸಕ‌ಜಿ ಎಸ್ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿ .ಪಂ ಸಿಇಓ ಭರತ್ ಎಸ್ ಸೇರಿದಂತೆ ಅಪಾರ ಸಂಖ್ಯೆಯ ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗಿಯಾಗಿದ್ದರು.

Read More

ಬೆಳಗಾವಿ: ಸತೀಶ ಜಾರಕಿಹೊಳಿ ಅವರ ಸರಳತೆ ನೋಡಿ ಸಿಎಂ ಸ್ಥಾನ ಸಿಗಬೇಕು ಎಂದು ಅಡವಿಸಿದ್ದೇಶ್ವರ ಸಂಸ್ಥಾನ ಮಠದ ಅಂಕಲಗಿ-ಕುಂದರಗಿ ಸ್ವಾಮೀಜಿಗಳು ಹೇಳಿದ್ದಾರೆ. https://youtu.be/Rf0ZuvBgXx8?si=_VEOvY3a4WiTorOX ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರಿಗೆ ಸರಳತೆ, ಸೌಜನ್ಯತೆ ಇದೆ, ಏನೇ ಸಮಸ್ಯೆ ಇದ್ದರೂ ಸ್ಪಂದಿಸುವ ಗುಣ ಇದೆ ಎಂದು ಹೇಳಿದ್ದಾರೆ. ಅಲ್ಲದೇ ನಾನು ಸಣ್ಣ ಹುಡಗ ಇದ್ದಾಗಿನಿಂದ ಸತೀಶ ಅವರನ್ನ ನೋಡಿದ್ದೇನೆ. ಲೋಕೋಪಯೋಗಿ ಸಚಿವರಾಗೇ ಇಷ್ಟ ಕೆಲಸ ಮಾಡಿದ್ದಾರೆ ಇನ್ನು ರಾಜ್ಯದ ಚುಕ್ಕಾಣಿ ಕೊಟ್ಟರೆ ಎಷ್ಟ ಕೆಲಸ ಮಾಡಬಹುದು ಎಂದು ಊಹಿಸಲಾಗದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಚುಕ್ಕಾಣಿ ಒಮ್ಮೆ ಸತೀಶ ಜಾರಕಿಹೊಳಿ ಹಿಡಿಯಬೇಕು. ಇನ್ನಷ್ಟು ಉನ್ನತ ಹುದ್ದೆಯಲ್ಲಿ ಇದ್ದರೆ ಇನ್ನಷ್ಟು ಕೆಲಸ ಮಾಡಲಿಕ್ಕೆ ಅನುಕೂಲ ಆಗುತ್ತೆ. ಶಾಸಕರಾದ ನಂತರ ಜಿಲ್ಲೆಯಲ್ಲಿ ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ನೀವು ಮುಂದಿನ ದಿನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಅವರಿಗೆ…

Read More

ಬಳ್ಳಾರಿ: ಟ್ರೇಡ್ ಲೈಸೆನ್ಸ್ ಇಲ್ಲದೇ ಅನಧಿಕೃತವಾಗಿ ಕತ್ತೆಗಳ ಮಾರಾಟ ಮಾಡುತ್ತಿದ್ದ ಕಂಪನಿಯನ್ನು ಕ್ಲೋಸ್ ಮಾಡಿ, ಕಂಪನಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ಜೆನ್ನಿ ಮಿಲ್ಕ್ ಕಂಪನಿಯನ್ನು ಅನಧಿಕೃತವಾಗಿ, ಟ್ರೇಡ್ ಲೈಸೆನ್ಸ್ ಇಲ್ಲದೇ ಕತ್ತೆಗಳ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಗಳು ತಾತ್ಕಾಲಿಕವಾಗಿ ಕ್ಲೋಸ್ ಮಾಡಿಸಿದ್ದಾರೆ. ಅನಧಿಕೃತ ಕಚೇರಿ ಓಪನ್ ಮಾಡಿ, ರೈತರನ್ನ ಗುರಿಯಾಗಿಸಿಕೊಂಡು ಕತ್ತೆ ಮಾರಾಟ ಮಾಡಿ, ಹಾಲು ಖರೀದಿಸುತ್ತಿದ್ದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಡೆದು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಗರಾಭಿವೃದ್ಧಿ ಕೋಶಾಧಿಕಾರಿ ಮನೋಹರ್, ಹೊಸಪೇಟೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿ, ಒಂದು ಘಂಟೆಗಳ ಕಾಲ ತಪಾಸಣೆ ನಡೆಸಿ ಕಚೇರಿಗೆ ಬೀಗ ಜಡಿದು, ಸೀಲ್ ಹಾಕಿಸಿದ್ದಾರೆ. ಈ ಕಂಪನಿಯಿಂದ ರೈತರು 3 ಲಕ್ಷ ರೂ.ಗೆ ಕತ್ತೆ ಪಡೆದು, ಬಳಿಕ ಪ್ರತಿ ಲೀಟರ್ ಹಾಲಿಗೆ 2,300 ರೂ. ನಂತೆ ಕಂಪನಿಗೆ ಹಾಲನ್ನು ಮಾರಾಟ ಮಾಡುತ್ತಿದ್ದರು.…

Read More