ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರವು 2014 ರ ಬಳಿಕ ತನ್ನ ಮೊದಲ ಅಸೆಂಬ್ಲಿ ಚುನಾವಣೆಯನ್ನು ನೋಡುತ್ತದೆ. 2019 ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಬಾರಿಗೆ ಚುನಾವಣೆ ನಡೆಯುತ್ತಿದೆ. ವಿಧಾನಸಭೆ ಚುನಾವಣೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ನೋಡುತ್ತಿರುವುದು ಕೂಡ ಇದೇ ಮೊದಲು. 370 ನೇ ವಿಧಿಯನ್ನು ರದ್ದುಗೊಳಿಸಿದಾಗ, ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ಮೋದಿ, ಅಮಿತ್ ಶಾ ನೇತೃತ್ವದ ಬಿಜೆಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಡ, ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಇತರ ಪಕ್ಷಗಳು ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿಯವರ ಅಪ್ನಿ ಪಾರ್ಟಿ…
Author: Prajatv Kannada
ಶಿವಮೊಗ್ಗ:- ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಿನ್ನೆ ಪ್ಯಾಲೆಸ್ತೀನ್ ಪರವಾದ ಪ್ಲೇಕ್ಸ್ ಕಟ್ಟಲಾಗಿತ್ತು. ಇದಕ್ಕೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. https://youtu.be/ZxbLzuVsYrY?si=cjq-HXmz8zmFFuJu ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿಯವರಿಗೆ ಪತ್ರ ಬರೆದಿದ್ದಾರೆ. ಸದ್ಯ ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಹಣಗೆರೆಕಟ್ಟೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಕೇಂದ್ರ. ಒಂದೇ ಕಾಂಪೌಂಡ್ ನಲ್ಲಿ ದರ್ಗಾ ಇದೆ, ಭೂತಪ್ಪ ದೇವಸ್ಥಾನವು ಇದೆ. ಹತ್ತಾರು ಸಾವಿರ ಭಕ್ತರು ಪ್ರತಿನಿತ್ಯ ಬಂದು ಹೋಗುವ ಯಾತ್ರಾ ಸ್ಥಳ. ಈದ್ ಮಿಲಾದ್ ಹಬ್ಬದ ವೇಳೆ ಕಿಡಿಗೇಡಿಗಳು ಪ್ಯಾಲೆಸ್ತೀನ್ ಪರ ಫ್ಲೆಕ್ಸ್ ಹಾಕಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲ್ಯಾಸ್ಟ್, ರಾಮೇಶ್ವರ ಕೆಫೆ ಸ್ಫೋಟದ ಮೂಲ ತೀರ್ಥಹಳ್ಳಿ. ಪ್ಯಾಲೆಸ್ತೀನ್ ಪರ ಫ್ಲೆಕ್ಸ್ ಹಾಕಿರುವ ಹಿನ್ನೆಲೆ ಏನು? ಅದರ ಮೂಲ ಯಾವುದು? ಅದರ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ನಲ್ಲಿ ಸೆಟಲ್ ಆಗಿದ್ದಾರೆ. ಪತಿ ನಿಕ್ ಜೋನಾಸ್ ಹಾಗೂ ಮಗಳೂ ಮಾಲ್ತಿ ಜೊತೆ ವಿದೇಶದಲ್ಲಿ ಸೆಟಲ್ ಆಗಿರುವ ಪಿಗ್ಗಿ ಇತ್ತೀಚೆಗೆ ನಿಕ್ ಅವರ ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ. ನಿಕ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಮಗಳ ಜೊತೆ ಸೇರಿಕೊಂಡು ಪ್ರಿಯಾಂಕ ಪತಿಯ ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಪ್ಪನ ಹುಟ್ಟುಹಬ್ಬಕ್ಕೆ ಮಗಳು ಕೂಡ ಕೈಗೆ ಮೈಕ್ ಹಿಡಿದುಕೊಂಡು ಹಾಡಿದ್ದಾಳೆ. ಅಪ್ಪನ ಸಂಗೀತ ಕಾರ್ಯಕ್ರಮದಲ್ಲಿ ಮಗಳು ಅಷ್ಟೇ ಉತ್ಸಾಹದಲ್ಲಿಯೇ ಕಾಣಿಸಿಕೊಂಡಿದ್ದಳು. ಸ್ಟೇಜ್ ಹತ್ತಿ ಮೈಕ್ ಹಿಡಿದು ಏನೋ ಹೇಳೋ ಪ್ರಯತ್ನ ಮಾಡಿದ್ದಾಳೆ ಮಾಲ್ತಿ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಅಂತೂ ತಮ್ಮದೇ ರೀತಿಯಲ್ಲಿಯೇ ಇಲ್ಲಿ ಗಮನ ಸೆಳೆದಿದ್ದಾರೆ. ನಿಕ್ ಜೋನಾಸ್ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಮತ್ತು ನಿಕ್ ಪರಸ್ಪರ ಲಿಪ್ ಕಿಸ್ ಮಾಡಿದ್ದಾರೆ. ಈ ವೇಳೆ ಪ್ರಿಯಾಂಕಾ ಮಗಳನ್ನ ಎತ್ತುಕೊಂಡಿದ್ದರು. ಆದರೆ ಅಪ್ಪ ಮತ್ತು ಅಮ್ಮನ ಕಿಸಿಂಗ್ ನೋಡಿದ ಮಗಳು ತನ್ನ ಎರಡು ಕೈಗಳನ್ನ…
ಹಾವೇರಿ:- ಇಲ್ಲಿನ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಜರುಗಿದೆ. https://youtu.be/C5a5WrUumJM?si=6sc_B7Q-bTzsbxWa ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಬಸ್ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಹಾವೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ದರ್ಶನ್‌ಗೆ ರಾಜಾಥಿತ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಆದೇಶ ಪ್ರಕಟಿಸಿದೆ. https://youtu.be/KCaRPFPVlZ4?si=KLnIu9iCQL_vP9gy ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು ಕಳೆದ ವರ್ಷ ಆಗಸ್ಟ್‌ನಲ್ಲಿ ಸಿದ್ದಪುರ ಮಹೇಶ್‌ನನ್ನ ನಾಗ ತಂಡ ಕೊಚ್ಚಿ ಕೊಲೆ ಮಾಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬಂದ ಕೇವಲ ಇನ್ನೂರು ಮೀಟರ್ ಅಂತರದಲ್ಲೇ ಸಿದ್ದಪುರ ಮಹೇಶನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಬರೋಬ್ಬರಿ ಇಪ್ಪತ್ತು ಜನರನ್ನು ಬಂಧನ ಮಾಡಲಾಗಿದೆ. ತಮ್ಮ ವಿರೋಧಿ ತಂಡಕ್ಕೆ ಟಾಂಗ್ ನೀಡಲು ಜೈಲಿನ ಒಳಗಡೆ ನಾಗನ…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಳವಳ ವ್ಯಕ್ತಪಡಿಸಿದರು. https://youtu.be/SxJ9k7fySZk?si=LY0aq6a9yQWYtOjS ಮಲ್ಲೇಶ್ವರದ ಬಿಜೆಪಿರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ರಾಜ್ಯ ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ. ಅವರ ಕೈಯನ್ನು ರಾಜ್ಯ ಸರ್ಕಾರ ಕಟ್ಟಿ ಹಾಕಿದೆ. ಸರ್ಕಾರ ಹೇಳುವ ಕೆಲಸವಷ್ಟೇ ರಾಜ್ಯ ಪೊಲೀಸ್ ಮಾಡುತ್ತಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಿಕ್ಷೆ ವಿಧಿಸಿಲ್ಲ. ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರ್ಕಾರ ಅಧಿಕಾರದಲ್ಲಿದೆ ಎಂದು ಟೀಕಿಸಿದರು. ಬೆಂಗಳೂರು, ಮೈಸೂರು, ಕೊಡಗು, ಹಾಸನ, ಕೋಲಾರ, ನಾಗಮಂಗಲ ಸೇರಿ ಬೇರೆ ಬೇರೆ ಜಾಗಗಳಲ್ಲಿ ಇವತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿದೆ. ಪ್ಯಾಲೆಸ್ತೀನ್ ಧ್ವಜ ಹಾರುತ್ತಿದೆ. ಆದರೆ, ರಾಜ್ಯ ಸರ್ಕಾರ ಓಲೈಕೆ ರಾಜಕೀಯದಲ್ಲಿ ನಿರತವಾಗಿದೆ. ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ. ನಮಗೆ ವೋಟ್ ಬ್ಯಾಂಕ್ ಬೇಕು ಎಂಬ ಮಾನಸಿಕತೆ ಇರುವ ಸಿದ್ದರಾಮಯ್ಯನವರಿಂದ ನಾವು ದೇಶಪ್ರೇಮ, ಕಾನೂನಿನ ಅನುಷ್ಠಾನ ನಿರೀಕ್ಷೆ ಮಾಡುವುದು…
ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಸಿನಿಮಾಗಳ ಜೊತೆಗೆ ರಾಜಕೀಯದಲ್ಲೂ ಬ್ಯುಸಿಯಾಗಿದ್ದಾರೆ. ಸದ್ಯ ಕಂಗನಾ ನಿರ್ದೇಶಿಸಿ, ನಟಿಸಿ, ನಿರ್ಮಾಣ ಮಾಡಿರುವ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ‘ಎಮರ್ಜೆನ್ಸಿ’ ಸಿನಿಮಾವನ್ನು ಬಿಡುಗಡೆಗೆ ರೆಡಿಯಾಗಿದೆ. ಆದರೆ ಅಂದುಕೊಂಡ ಸಮಯಕ್ಕೆ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಈ ಚಿತ್ರ ಒಂದಿಲ್ಲೊಂದು ಕಾರಣಗಳಿಂದ ವಿವಾದಗಳ ಸುಳಿಗೆ ಸಿಲುಕುತ್ತಲೇ ಇದೆ. ಈ ನಡುವೆ ಹೊಸದೊಂದಿ ಸಮಸ್ಯೆ ಶುರುವಾಗಿದೆ. ವಿವಾದಾತ್ಮಕ ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯನೋಟಿಸ್ ಜಾರಿ ಮಾಡಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.…
ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆ ನೀಡಿದ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದು ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಹಿನ್ನೆಲೆಯಲ್ಲಿ ಸಾವಿರಾರು ಅಭಿಮಾನಿಗಳು ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದಾರೆ. ದೂರದೂರುಗಳಿಂದ ಬೆಳ್ಳಂಬೆಳಗ್ಗೆಯೇ ಬಂದು ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆಯೊಡ್ಡಿದ್ದಾರೆ. ಸ್ಟುಡಿಯೋ ಗೇಟ್ ಬೀಗ ಹಾಕಿ ಸ್ಮಾರಕ ಮೈಸೂರಿನಲ್ಲಿ ಆಗಿರುವುದರಿಂದ ಅಲ್ಲಿಗೇ ಹೋಗಿ ಪೂಜೆ ಮಾಡುವಂತೆ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ಅಭಿಮಾನಿ ಸ್ಟುಡಿಯೋದಲ್ಲಿ ಯಾವುದೇ ಕಾರ್ಯಕ್ರಮ, ಸಂಭ್ರಮಾಚಾರಣೆ ಮಾಡದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಆದ್ರೆ ಅಭಿಮಾನಿಗಳು ಪೂಜೆ ಸಲ್ಲಿಸೋಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಇದರ ಹೊರತಾಗಿಯೂ ಕೋರ್ಟ್ ತಡೆಯಾಜ್ಞೆ ನೆಪ…
ಜೈಲಿನಲ್ಲಿ ಪದೇ ಪದೇ ಕಿರಿಕ್ ಮಾಡಿಕೊಳ್ತಿದ್ದ ನಟ ದರ್ಶನ್ ಗೆ ವಕೀಲರು ಪತ್ರ ಬರೆದಿದ್ದು ಸಮಸ್ಯೆ ಎದುರು ಹಾಕಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರು. ಪದೇ ಪದೇ ಕಿರಿಕ್ ಮಾಡಿಕೊಳ್ತಿದ್ರೆ ಮುಂದೆ ಜಾಮೀನಿಗೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದ್ದರು. ಇದೀಗ ವಕೀಲರ ಎಚ್ಚಿಕೆಯ ಬಳಿಕ ನಟ ದರ್ಶನ್ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಪದೇ ಪದೇ ದುರ್ನಡತೆ ತೋರುತ್ತಿದ್ದ ಕಾರಣ ವರ್ತನೆ ಬದಲಾಯಿಸುವ ಕುರಿತು ವಕೀಲರು ಪತ್ರ ಬರೆದಿದ್ದರು. ಇದೀಗ ಆರೋಪಿ ದರ್ಶನ್ ವರ್ತನೆಯಲ್ಲಿ ಸಾಕಷ್ಟು ಬದಲಾವಣೆ ಕಾಣಿಸಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. ವಕೀಲರು ದರ್ಶನ್‌ಗೆ ಬರೆದ ಪತ್ರದಲ್ಲಿ ಅನಗತ್ಯ ಕಿರಿಕ್ ಮಾಡಿಕೊಳ್ಳಬೇಡಿ. ಮಾಧ್ಯಮಗಳ ಮೇಲೆ ದುರ್ನಡತೆ ತೋರುವ ಕುರಿತು, ಜೈಲಿನಲ್ಲಿ ಕಿರಿ ಕಿರಿ ಮಾಡಬೇಡಿ. ವರ್ತನೆ ಬದಲಿಸಿಕೊಳ್ಳದಿದ್ದರೇ ಜಾಮೀನು ಅರ್ಜಿ ಹಾಕಿದಾಗ ಸಮಸ್ಯೆ ಆಗುತ್ತದೆ ಎಂದು ಉಲ್ಲೇಖಿಸಿದ್ದರು. ವಕೀಲರು ದರ್ಶನ್‌ಗೆ ಬರೆದ ಪತ್ರದಲ್ಲಿ ಅನಗತ್ಯ ಕಿರಿಕ್ ಮಾಡಿಕೊಳ್ಳಬೇಡಿ. ಮಾಧ್ಯಮಗಳ ಮೇಲೆ ದುರ್ನಡತೆ ತೋರುವ ಕುರಿತು, ಜೈಲಿನಲ್ಲಿ ಕಿರಿ…
ನವದೆಹಲಿ: ದೇಶದಲ್ಲಿ ಅಕ್ಟೋಬರ್ 1 ರ ವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ (ಬುಲ್ಡೋಜರ್ ನ್ಯಾಯ) ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ವಾದಗಳನ್ನು ಆಲಿಸುವ ವರೆಗೆ ದೇಶದ ಯಾವುದೇ ಸ್ಥಳದಲ್ಲಿ ಖಾಸಗಿ ಆಸ್ತಿಯ ವಿರುದ್ಧ ಅನಧಿಕೃತ ಬುಲ್ಡೋಜರ್ ಕ್ರಮ ಬೇಡ ಎಂದು ಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ‘ಬುಲ್ಡೋಜರ್ ಕಾರ್ಯಾಚರಣೆ’ಯು ಸರಿಯಾದ ಪ್ರಕ್ರಿಯೆಗಳ ನಂತರ ನೆಲಸಮಕ್ಕೆ ಮಂಜೂರು ಮಾಡುವಂತಹ ಕ್ರಮಗಳ ಮೇಲೆ ಪರಿಣಾಮ ಬೀರುತ್ತದೆ. ಮುಂದಿನ ವಿಚಾರಣೆಯ ತನಕ ನಿಮ್ಮ ಕೈಗಳನ್ನು ನಿಯಂತ್ರಿಸಿ. ಇದರಿಂದ ಸ್ವರ್ಗವೇ ಧರೆಗೆ ಬೀಳುವುದಿಲ್ಲ ಎಂದು ನ್ಯಾಯಾಲಯ ಚಾಟಿ ಬೀಸಿದೆ. ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು.ಬುಲ್ಡೋಜರ್ ಕಾರ್ಯಾಚರಣೆ ಕ್ರಮವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಕ್ರಮ ಅದ್ಭುತ ಎಂದು ವೈಭವೀಕರಿಸುವವರ ವಿರುದ್ಧ ಕೋರ್ಟ್ ಎಚ್ಚರಿಕೆ ಸಂದೇಶ ರವಾನಿಸಿದೆ. ನ್ಯಾಯಾಲಯದ ಅನುಮತಿ ಇಲ್ಲದೇ ಮುಂದಿನ ದಿನಾಂಕದ ವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಸೂಚಿಸಿದೆ. ಇದೇ ವೇಳೆ, ಕ್ರಿಮಿನಲ್ ಪ್ರಕರಣಗಳಲ್ಲಿ…