ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಳ್ಳಾರಿ ಜೈಲು ಸೇರಿ 20 ದಿನ ಕಳೆದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅರಾಮಾಗಿದ್ದ ದರ್ಶನ್ ಗೆ ಬಳ್ಳಾರಿ ಜೈಲಿನ ವಾಸ ನಿತ್ಯ ನರಕವಾಗಿದೆ. ಈ ಮಧ್ಯೆ ದರ್ಶನ್ ರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ಬೆನಲ್ಲೇ ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ಜೈಲಿಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳ್ಳಾರಿ ಜೈಲಿನಲ್ಲಿರೋ ದರ್ಶನ್ ಕಂಡು ನಟ ಧನ್ವೀರ್ ಕಣ್ಣೀರು ಹಾಕಿದ್ದಾರೆ. ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ರಿಯಲ್ ಲೈಫ್ ನಲ್ಲಿ ಹೀರೋಯಿಸಂ ತೋರಿಸೋಕೆ ಹೋಗಿದ್ದಾರೆ. ಪರಿಣಾಮ ಕಳೆದ ಮೂರುವರೆ ತಿಂಗಳಿನಿಂದ ಜೈಲಿನ ಕಂಬಿ ಎಣಿಸ್ತಿದ್ದಾರೆ. ಸದ್ಯಕಂತೂ ದರ್ಶನ್ ಗೆ ಬಿಡುಗಡೆ ಅನ್ನೋದು ಮರೀಚಿಕೆಯಾಗಿದೆ. ಈ ಮಧ್ಯೆ ಪತ್ನಿ, ಸ್ನೇಹಿತರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಜೊತೆಗೆ ಸೆಂಟ್ರಲ್ ಜೈಲಲ್ಲಿ ಇದ್ರೂ ಕಿರಿಕ್ ಮಾಡಿಕೊಳ್ತಿದ್ದ ಕಾಟೇರನಿಗೆ ಕೆಲವೊಂದಿಷ್ಟು ಬುದ್ಧಿ ಮಾತು ಹೇಳಿದ್ದಾರೆ.…
Author: Prajatv Kannada
ಹಾವೇರಿ:- ಇಲ್ಲಿನ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಜರುಗಿದೆ. ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಬಸ್ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಹಾವೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತನ್ನೊಂದಿಗೆ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿಯನ್ನು ಖ್ಯಾತಿ ಕೊರಿಯೋಗ್ರಾಫರ್ ಅತ್ಯಾಚಾರ ಮಾಡಿದ್ದಾರೆ ಎಂಬ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಅನೇಕರು ಜಾನಿ ಮಾಸ್ಟರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಬೇಕು, ಯುವತಿಗೆ ನ್ಯಾಯ ಸಿಗಬೇಕು ಎಂದು ಸಾಕಷ್ಟು ಮಂದಿ ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಅವರು ಸಂತ್ರಸ್ತೆಯ ನೆರವಿಗೆ ಬಂದಿದ್ದು ತಮ್ಮ ಹೋಂ ಬ್ಯಾನರ್ (ಗೀತಾ ಆರ್ಟ್ಸ್) ಅಡಿ ನಿರ್ಮಾಣ ಆಗುವ ಪ್ರತೀ ಚಿತ್ರದಲ್ಲೂ ಆ ಸಂತ್ರಸ್ತೆಗೆ ಅವಕಾಶ ನೀಡೋದಾಗಿ ಅಲ್ಲು ಅರ್ಜುನ್ ಹೇಳಿದ್ದಾರೆ. ಜಾನಿ ಮಾಸ್ಟರ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್. ಹೀಗಾಗಿ, ಅಲ್ಲು ಅರ್ಜುನ್ಗೆ ಅವರ ಜೊತೆ ಒಳ್ಳೆಯ ಗೆಳೆತನ ಇದೆ. ಹಾಗಂದ ಮಾತ್ರಕ್ಕೆ ಅವರು ಸುಮ್ಮನೆ ಕುಳಿತಿಲ್ಲ. ಅವರು ಸಂತ್ರಸ್ತೆಯ ಸಹಾಯಕ್ಕೆ ನಿಂತಿದ್ದಾರೆ. ಜಾನಿ ಮಾಸ್ಟರ್…
ಬೆಂಗಳೂರು:- ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಯುವಕ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜರುಗಿದೆ. ರಾತ್ರಿ 12.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಿಲ್ದಾಣದಲ್ಲಿವಿಶೇಷ ಚೇತನ ಯುವಕ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತಿವೇಗದಿಂದ ಬಿಎಂಟಿಸಿ ಬಸ್ ಬಂದಿದೆ. ಬಳಿಕ ನಿಯಂತ್ರಣಕ್ಕೆ ಸಿಗದೇ ಯುವಕನ ಮೇಲೆ ಬಸ್ ಮುಂದಿನ ಚಕ್ರ ಹರಿದಿದೆ. ಕೂಡಲೇ ಕೆಳಗೆ ಬಿದ್ದ ಚಾಲಕ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಕೆಎ 57 ಎಫ್ 4330 ನಂಬರ್ ನ ಬಿಎಂಟಿಸಿ ಬಸ್ ಇದಾಗಿದ್ದು, ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮೃತ ಯುವಕನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಲ್ಲದೇ ಬಿಎಂಟಸಿ ಬಸ್ ಚಾಲಕ ಗೋಪಾಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಬಸ್ ನಿಲ್ದಾಣ ಎಂಟ್ರಿ ಪಾಯಿಂಟ್ ನಲ್ಲಿ ಅತೀ ವೇಗದಿಂದ ಬರುವ ಬಸ್ಸುಗಳು ಇದೇ ಕಾರಣದಿಂದಾಗಿ ಅಪಘಾತ ಸಂಭವಿಸಿದೆ.
ಬೆಂಗಳೂರು:- ಡಿಸಿಎಂ ಗಡುವಿನೊಳಗೆ 6000 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಡಿಕೆ ಶಿವಕುಮಾರ್ 15 ದಿನಗಳ ಗಡುವು ನೀಡಿದ ನಂತರ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ಪರಿಣಾಮವಾಗಿ ಬಿಬಿಎಂಪಿ ಈವರೆಗೆ ಸುಮಾರು 6,000 ಗುಂಡಿಗಳನ್ನು ಮುಚ್ಚಿದೆ ಮತ್ತು 32,200 ಚದರ ಮೀಟರ್ ಹಾನಿಗೊಳಗಾದ ರಸ್ತೆ ಮೇಲ್ಮೈಗಳನ್ನು ಸರಿಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಇನ್ನೆರಡು ದಿನಗಳಲ್ಲಿ ಎಲ್ಲ ರಸ್ತೆಗುಂಡಿಗಳನ್ನು ಮುಚ್ಚಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆದರೆ ಹೊಸ ಗುಂಡಿಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಸ್ತೆ ಗುಂಡಿ ಗಮನ’ ಆಯಪ್ ಮೂಲಕ ಸುಮಾರು 1,300 ದೂರುಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ ಸುಮಾರು 300 ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದ್ದಲ್ಲ. ಪ್ರಾಥಮಿಕವಾಗಿ ಗುಂಡಿಗೆ ಸಂಬಂಧಿಸಿದ ಸಮಸ್ಯೆಗಳತ್ತ ಗಮನ ಹರಿಸಲಾಗಿದೆ. ಉಳಿದ ಸಮಸ್ಯೆಗಳನ್ನು ಎರಡು ದಿನಗಳಲ್ಲಿ ಪರಿಹರಿಸುವ ನಿರೀಕ್ಷೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ರಸ್ತೆಗಳಲ್ಲಿನ ಗುಂಡಿಗಳ ದುರಸ್ತಿಗೆ…
ಮಂಡ್ಯ:- ಇತ್ತೀಚೆಗೆ ನಡೆದ ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ನಾಗಮಂಗಲ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ. ಹೀಗಾಗಿ ವರದಿ ತಯಾರು ಮಾಡಲು ಎಸಿ ನೇತೃತ್ವದಲ್ಲಿ ಏಳು ಅಧಿಕಾರ ತಂಡ ರಚನೆ ಮಾಡಲಾಗಿತ್ತು. ಇದೀಗ ನಷ್ಟದ ಮೌಲ್ಯಮಾಪನ ಮಾಡಿ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದರು. ಇನ್ನು ಎಫ್ಐಆರ್ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ. ದುಷ್ಕರ್ಮಿಗಳ ಕ್ರೌರ್ಯದಿಂದ, ವ್ಯಾಪಾರಸ್ಥರ ಬದುಕು ಬೀದಿ ಪಾಲಾಗಿದೆ. ಗಲಾಟೆ ಹಿಂದೆ ಪೊಲೀಸರ ಲೋಪ ದೋಷ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಕಾವಲಿಗೆ 24…
ಬೆಳಗಾವಿ:- ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಜರುಗಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಿರಿಕ್ ಆಗಿದ್ದು ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರ ಗ್ಯಾಂಗ್ನಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ದರ್ಶನ್ ಪಾಟೀಲ್, ಸತೀಶ್ ಪೂಜಾರಿಗೆ ಬಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮತ್ತೊಂದೆಡೆ ಚಾಕು ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬೆನ್ನತ್ತಿ ಚೇಸ್ ಮಾಡಿ ಹಿಡಿದಿದ್ದಾರೆ. ಬೈಕ್ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ವಿಶ್ವೇಶ್ವರಯ್ಯನಗರದಲ್ಲಿ ಸೆರೆಯಾಗಿದ್ದಾರೆ. ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ…
ಬೆಂಗಳೂರು:- ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಎರಡು ದಿನದ ಹಿಂದಷ್ಟೇ ಮೆಟ್ರೋ ನಿಲ್ದಾಣದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸಲು ಪರದಾಡಿದ್ದ ಘಟನೆ ಸುದ್ದಿಯಾದ ಬೆನ್ನಲ್ಲೇ ಮಹಿಳಾ ಆಯೋಗ ಪತ್ರ ಬರೆದಿದೆ. ಸೋಮವಾರ ಟ್ರಿನಿಟಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ತಾಯಿ ತನ್ನ ಮಗುವಿಗೆ ಹಾಲುಣಿಸಲು ಮೆಟ್ರೋ ನಿಲ್ದಾಣದ ಒಳಭಾಗದಲ್ಲಿ ಪರದಾಡಿದ್ದರು. ಅಕ್ಕಪಕ್ಕದ ಗೋಡೆ ಮರೆಯಲ್ಲಿ ನಿಂತು, ನೆಲದ ಮೇಲೆ ಕೂತು ಪರದಾಡಿದ್ದ ಮಹಿಳೆ ವಿಡಿಯೋ ವೈರಲ್ ಆಗಿತ್ತು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರವಿದೆ. ಮೆಟ್ರೋ ನಿಲ್ದಾಣಗಳಲ್ಲಿ ಯಾಕೆ ಇಲ್ಲ ಎನ್ನುವ ಪ್ರಶ್ನೆ ಉದ್ಬವ ಆಗಿತ್ತು. ಈ ಬೆನ್ನಲ್ಲೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಿಎಂಆರ್‌ಸಿಎಲ್ ಎಂಡಿಗೆ ಪತ್ರ ಬರೆದು ಕೂಡಲೇ ಆರೈಕೆ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿದ್ದಾರೆ. * ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಆರೈಕೆ ಕೇಂದ್ರಗಳು ಈಗಾಗಲೇ ಇವೆ. * ಆದರಂತೆ ನಮ್ಮ ಮೆಟ್ರೋದಲ್ಲಿ ಮಹಿಳೆಯ ಆರೈಕೆ…
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ರಚಿಸಿರುವಂತೆ ಕನ್ನಡ ಚಿತ್ರರಂಗದಲ್ಲೂ ಅಂಥದ್ದೆ ಸಮಿತಿ ರಚನೆಗೆ ಸಾಕಷ್ಟು ಮಂದಿ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ಪರ ವಿರೋಧಗಳು ಚರ್ಚೆ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ ಕಮಿಟಿ ರಚಿಸುವ ಬಗ್ಗೆ ಸೆ.16ರಂದು ಸಭೆ ಕೂಡ ನಡೆಯಿತು. ಸ್ಯಾಂಡಲ್ವುಡ್ ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗ್ಬೇಕು ಎಂದು ಅನೇಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ವುಡ್ ನಟಿಯರ ರಕ್ಷಣೆಗೆ ಕಮಿಟಿ ರಚನೆ ಆಗ್ಬೇಕು ಎನ್ನುವ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಉಪೇಂದ್ರ, ಅದು ತುಂಬಾ ಪರ್ಸನಲ್ ವಿಚಾರ ಪಬ್ಲಿಕ್ ಮ್ಯಾಟರಲ್ಲ. ಏನೇನಾಗಿದೆ, ಏನಾಗಿಲ್ಲ ಅನ್ನೋದು ಅವರಿಗಷ್ಟೇ ಗೊತ್ತಿರುತ್ತೆ. ಈಗೇನೋ ಒಂದು ಕಮಿಟಿ ಮಾಡಿ ಅಲ್ಲಿ ಹೇಳಿಕೊಳ್ಳಬೇಕು ಅಂತಿದ್ದಾರೆ ಎಂದು ಉಪೇಂದ್ರ ಹೇಳಿದ್ದಾರೆ. ಆದ್ರೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಅಲ್ ರೆಡಿ ಅರ್ಟಿಸ್ಟ್ ಅಸೋಸಿಯೇಷನ್ ಇದೆ. ಚೇಂಬರ್ ಇದೆ ಅಂತ ಕೆಲವರು ವಾದ ಮಾಡ್ತಿದ್ದಾರೆ. ಕಮಿಟಿ ಬರುತ್ತಾ? ಮುಂದೇನಾಗುತ್ತೆ ಅನ್ನೋದು ನನಗೂ ಗೊತ್ತಿಲ್ಲ. ಅನುಕೂಲವಾಗುತ್ತೆ.…
ಲೆಬನಾನ್ ಹಾಗೂ ಸಿರಿಯಾದಲ್ಲಿ ಹಿಜ್ಬುಲ್ಲಾ ಸಂಘಟನೆ ಸದಸ್ಯರ ಮೇಲೆ ರಹಸ್ಯ ದಾಳಿ ನಡೆದಿದ್ದು ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಉಗ್ರರು ಸಂವಹನಕ್ಕಾಗಿ ಬಳಸುತ್ತಿದ್ದ ಪೇಜರ್ ಸಾಧನ ಸ್ಫೋಟಸಿ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ಲೆಬನಾನ್‌ನಲ್ಲಿ ಸ್ಥಳೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಭಾರತೀಯ ಕಾಲಮಾನ ಸಂಜೆ 6:30ಕ್ಕೆ ಈ ಸ್ಫೋಟ ಸಂಭವಿಸಿದೆ. ದಾಳಿಯ ಪರಿಣಾಮ ರಸ್ತೆಯಲ್ಲಿ, ತರಕಾರಿ ಮಾರುಕಟ್ಟೆ, ಕಾರಿನಲ್ಲಿದ್ದ ಸದಸ್ಯರು ಅಲ್ಲೇ ಕುಸಿದು ಬಿದ್ದಿದ್ದಾರೆ. ಘಟನೆಯಲ್ಲಿ ಲೆಬನಾನ್‌ನಲ್ಲಿದ್ದ ಇರಾನ್ ರಾಯಭಾರಿ ಸಹ ಗಾಯಗೊಂಡಿದ್ದಾರೆ. ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ ಎರಡರಿಂದಲೂ ನಿಷೇಧಿಸಲ್ಪಟ್ಟ ಹಿಜ್ಬುಲ್ಲಾ ಸಂಘಟನೆ ಲೆಬನಾನ್‌ನಲ್ಲಿ ರಾಜಕೀಯ ಮತ್ತು ಪ್ಯಾರಾ ಮಿಲಿಟರಿ ಪಡೆಯನ್ನು ಹೊಂದಿದ್ದು ಇರಾನ್‌ನಿಂದ ಬೆಂಬಲಿತವಾಗಿದೆ. ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಇಸ್ರೇಲ್‌ನೊಂದಿಗೆ ಯುದ್ಧ ಮಾಡುತ್ತಿರುವ ಹಮಾಸ್ ಸಂಘಟನೆಯನ್ನು ಹಿಜ್ಬುಲ್ಲಾ ಬೆಂಬಲಿಸುತ್ತಿದೆ. ಕೆಲ ವರದಿಗಳು ಸೈಬರ್ ದಾಳಿಯಿಂದಾಗಿ ಲಿಥಿಯಂ ಬ್ಯಾಟರಿಗಳಿಂದ ಸ್ಫೋಟಗಳು ಸಂಭವಿಸಿವೆ ಎಂದರೆ ಕೆಲವು ವರದಿಗಳು ಪೇಜರ್‌ಗಳ ಒಳಗೆ ಸ್ಫೋಟಕಗಳ ತೆಳುವಾದ…