ಕೋಲಾರ:- ಪ್ಯಾಲೆಸ್ಟೈನ್ ಬಾವುಟ ಹಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್ ಧ್ವಜ ಹಾರಾಟ ಮತ್ತು ಕ್ಲಾಕ್ ಟವರ್ ಬಳಿ ಮೆರವಣಿಗೆ ಬಂದಾಗ ನಡೆದ ಗುಂಪು ಘರ್ಷಣೆ ವಿಚಾರವಾಗಿ ಪ್ರಕರಣ ದಾಖಲಾಗಿವೆ. ಗಲಾಟೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೋಲಾರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಇನ್ನೂ ಈದ್ ಮಿಲಾದ್ ಮೆರವಣಿಗೆ ವೇಳೆ ಫ್ರೀ ಪ್ಯಾಲೆಸ್ಟೈನ್ ಎನ್ನುವ ಧ್ವಜ ಹಾರಾಡಿತ್ತು. ಎಂ.ಜಿ ರಸ್ತೆಯಲ್ಲಿರುವ ಅಂಜುಮನ್ ಕಛೇರಿಯ ಬಳಿ ಧ್ವಜಾರೋಹಣ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗಿತ್ತು. ಈ ವೇಳೆ ಮೆರವಣಿಗೆಯಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಧ್ವಜದ ಮೇಲೆ ಬರೆಯಲಾಗಿತ್ತು. ಬರಹ ಕಾಣಿಸಿದ್ದೇ ತಡ ಕೂಡಲೇ ಪೊಲೀಸರು ಆ ಬಾವುಟವನ್ನು ತೆಗೆಸಿದ್ದಾರೆ.
Author: Prajatv Kannada
ಚಾಮರಾಜನಗರ:- ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಬಳಿ 60 ವರ್ಷದ ಕಾಡಾನೆ ಮೃತ ದೇಹ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹನೂರು ತಾಲೂಕಿನ ಬೈಲೂರು ವನ್ಯಜೀವಿ ವಲಯ, ಪಿ.ಜಿ.ಪಾಳ್ಯ ಶಾಖೆ, ಮಾವತ್ತೂರು ‘ಎ’ ಗಸ್ತಿನಲ್ಲಿ ಸಿಬ್ಬಂದಿಗಳಿಗೆ ಬಿದಿರು ಕೆರೆ ಅರಣ್ಯ ಪ್ರದೇಶದಲ್ಲಿ ಮೃತ ಆನೆ ಪತ್ತೆಯಾಗಿದೆ. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ, ಸಂರಕ್ಷಣಾಧಿಕಾರಿಗಳು ಮತ್ತು ನಿರ್ದೇಶಕರು, ಮಾರ್ಗದರ್ಶನದ ಅನ್ವಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕೆ. ಸುರೇಶ್, ವಲಯ ಅರಣ್ಯ ಅಧಿಕಾರಿ ಪ್ರಮೋದ್ ಎ.,ರವರ ಸಮಕ್ಷಮ ಹಾಗೂ ಸಿಬ್ಬಂದಿಯವರು ಹಾಜರಾತಿಯಲ್ಲಿ ನಿಯಮಾನುಸಾರ ಇಲಾಖಾ ಪಶುವೈದ್ಯಾಧಿಕಾರಿ ಡಾ| ವಾಸಿಂ ಮಿರ್ಜಾ ರವರು ಮೃತ ಆನೆಯ ಮರಣೋತ್ತರ ಶವ ಪರೀಕ್ಷೆ ನಡೆಸಿದರು. ಒಂದೆರಡು ದಿನದ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರುವುದೆಂದು ಖಚಿತಪಡಿಸಿಕೊಳ್ಳಲಾಯಿತು. ನಿಯಮಾನುಸಾರ ಅಂತ್ಯ ಕ್ರಿಯೆ ನಡೆಯಿತು. ಇತ್ತೀಚೆಗೆ ಬಂಡೀಪುರ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಚಿತ ಅರಣ್ಯ ಪ್ರದೇಶ ಹಾಗೂ ಮಲೆಮಹದೇಶ್ವರಬೆಟ್ಟ ಅರಣ್ಯಗಳಲ್ಲಿ ಆನೆಗಳು ಹಲವು…
ಮುಂದಿನ ತಿಂಗಳು ನಡೆಯಲಿರು ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಕಮಲಾ ಹ್ಯಾರಿಸ್ ಮಧ್ಯೆ ಸಾಕಷ್ಟು ಫೈಫೋಟಿ ನಡೆಯುತ್ತಿದೆ. ಈ ಮಧ್ಯೆ ಎರಡು ಭಾರಿ ಟ್ರಂಪ್ ಹತ್ಯೆಗೆ ವಿಪಲ ಯತ್ನ ನಡೆಸಲಾಗಿದೆ. ಇದೀಗ ಟೆಕ್ ಬಿಲಿಯನೇರ್ ಎಲೋನ್ ಮಸ್ಕ್ ಹೇಳಿಕೆಯೊಂದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಯಾರೂ ಹತ್ಯೆ ಮಾಡಲು ಪ್ರಯತ್ನಿಸುತ್ತಿಲ್ಲವೇಕೆ ಎಂದು ಪ್ರಶ್ನಿಸುವ ಮೂಲಕ ಟೆಕ್ ಬಿಲಿಯನೇರ್ ಎಲೋನ್ ಮಸ್ಕ್ ವಿವಾದಕ್ಕೀಡಾಗಿದ್ದಾರೆ . ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದ ನಂತರ ಮಸ್ಕ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಫ್ಲೋರಿಡಾದ ಗಾಲ್ಫ್ ಕೋರ್ಸ್ ಹೊರಗೆ ಟ್ರಂಪ್ ಮೇಲೆ ಭಾನುವಾರ ಗುಂಡಿನ ದಾಳಿ ನಡೆದಿದ್ದು, ಇದು ಅವರ ಮೇಲೆ ನಡೆದ ಎರಡನೇ ಗುಂಡಿನ ದಾಳಿಯಾಗಿದೆ. ಟ್ರಂಪ್ ಅವರನ್ನು…
ಭಾರತದಲ್ಲಿ ಮುಸ್ಲಿಮರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಅಸಡ್ಡೆ ತೋರಿಸುವ ಜನರನ್ನು ಮುಸ್ಲಿಮರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹೇಳಿಕೆಯನ್ನು ಭಾರತ ಬಲವಾಗಿ ಖಂಡಿಸಿದೆ. ಇಂಥ ಹೇಳಿಕೆಗಳು ಮಾಹಿತಿ ಕೊರತೆಯಿಂದ ಕೂಡಿವೆ ಹಾಗು ಇದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಭಾರತ ಹೇಳಿದೆ. ಅಯತೊಲ್ಲಾ ಅಲಿ ಖಮೇನಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿ, ‘ಭಾರತದ ಮೇಲೆ ಬೊಟ್ಟು ಮಾಡಿ ತೋರಿಸುವವರು ಮೊದಲು ತಮ್ಮ ದೇಶದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ದಾಖಲೆಗಳನ್ನು ಪರಿಶೀಲಿಸಬೇಕು. ಆಮೇಲೆ ಮತ್ತೊಬ್ಬರ ಮೇಲೆ ಮೇಲೆ ತಮ್ಮ ಅವಲೋಕನಗಳನ್ನು ಮಾಡಬೇಕು’ ಎಂದಿದೆ. ಅಲ್ಲದೇ, ಭಾರತದಲ್ಲಿ ಅಲ್ಪಸಂಖ್ಯಾತರ ಕುರಿತು ಇರಾನ್‌ನ ಸರ್ವೋಚ್ಚ ನಾಯಕ ನೀಡಿರುವ ಹೇಳಿಕೆಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ. ಇಂಥ ಹೇಳಿಕೆಗಳನ್ನು ಒಪ್ಪಲಾಗದು’ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಖಮೇನಿ ಹೇಳಿದ್ದೇನು?: ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಖಮೇನಿ, ‘ಇಸ್ಲಾಮಿಕ್ ಉಮ್ಮಾ ಎಂಬ ನಮ್ಮ ಹಂಚಿಕೆಯ ಗುರುತಿನ ಬಗ್ಗೆ…
ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್‌ಸ್ವಾಮಿ ನಾರಾಯಣ ದೇಗುಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಭಾರತೀಯ ಕಾನ್ಸುಲೇಟ್ ಜನರಲ್, ಇಂಥ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್ ಸ್ವಾಮಿ ನಾರಾಯಣ ದೇಗುಲದ ಮೇಲಿನ ದಾಳಿ ಒಪ್ಪುವಂಥದ್ದಲ್ಲ. ಕಾನ್ಸುಲೇಟ್ ಕಚೇರಿ ಹಿಂದೂ ಸಮುದಾಯದ ಜೊತೆ ಸಂಪರ್ಕದಲ್ಲಿದೆ. ಈ ವಿಷಯವನ್ನು ಯುಎಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಂಥ ಹೇಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದೆ. ಅಮೆರಿಕನ್ ಹಿಂದೂ ಫೌಂಡೇಷನ್ ದೇಗುಲದ ಮೇಲಿನ ದಾಳಿ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಯುಎಸ್ ನ್ಯಾಯಾಂಗ ಇಲಾಖೆಯನ್ನು ಒತ್ತಾಯಿಸಿದೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ‘ಈ ವಾರಾಂತ್ಯದಲ್ಲಿ ಮೆಲ್ವಿಲ್ಲೆ ಸಮೀಪದ ನಾಸ್ಸೌ ಕೌಂಟಿಯಲ್ಲಿ ಹಿಂದೂ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಸೇರುವ ಕಾರ್ಯಕ್ರಮ…
ಬೆಂಗಳೂರು:- ಫ್ರೀಡಂ ಪಾರ್ಕಿನಲ್ಲಿ ಮೊದಲೇ ಮೂಲಸೌಕರ್ಯ ಇಲ್ಲದೇ ಕಂಗಾಲಾಗಿದ್ದ ಜನರಿಗೆ ಇದೀಗ ನಾಯಿ ಕಾಟ ಕೂಡ ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಪ್ರತಿಭಟನೆಗೆ ಬರುವ ಜನರು ಫ್ರೀಡಂ ಪಾರ್ಕ್ ಒಳಗೆ ಎಂಟ್ರಿಯಾದರೆ ಸಾಕು, ಗುಂಪು ಗುಂಪಾಗಿ ಶ್ವಾನಪಡೆ ಅತ್ತ ಬರುತ್ತದೆ. ಇದಕ್ಕೆ ಹೆದರಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಫ್ರೀಡಂ ಪಾರ್ಕ್ನ ಶಿಲ್ಪಕಲೆ ಗ್ಯಾಲರಿ ಬೀದಿನಾಯಿಗಳ ಅಡ್ಡೆಯಾಗಿದ್ದು, ಓಲ್ಡ್ ಸೆಂಟ್ರಲ್ ಜೈಲನ್ನ ನೋಡಲು ಬರುವ ಪ್ರವಾಸಿಗರಿಗೂ ಬೀದಿನಾಯಿಗಳ ಭಯ ಶುರುವಾಗಿದೆ. ಎಲ್ಲೆಂದರಲ್ಲಿ ಮಲಗಿ ನಿದ್ದೆ ಮಾಡುತ್ತಿರುವ ಶ್ವಾನಪಡೆ, ಪಾರ್ಕ್ ಸುತ್ತಮುತ್ತ ಯಾರಾದರೂ ಕಾಣಿಸಿಕೊಂಡ್ರೆ ಗ್ಯಾಂಗ್ ಕಟ್ಟಿಕೊಂಡು ಸುತ್ತುವರಿದು ಭಯಪಡಿಸುತ್ತಿವೆ. ಇದು ಜನರಿಗೆ ಓಡಾಡಲೂ ಭಯ ಹುಟ್ಟುವಂತೆ ಮಾಡಿದೆ. ಇತ್ತ ರಾಜಧಾನಿಯ ಬೀದಿನಾಯಿಗಳ ಕಾಟವನ್ನು ಕಂಡು ಸುಸ್ತಾದ ಜನರು ಬೀದಿನಾಯಿಗಳಿಗೆ ಬಿಬಿಎಂಪಿ ಕಡಿವಾಣ ಹಾಕಲಿ ಎಂದು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು:- ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬೆಂಗಳೂರು:- ನಮ್ಮ ಪಾರ್ಟಿ, ನಮ್ಮ ಲೀಡರ್, ನನ್ನಿಷ್ಟ ಎಂದು ಹೇಳುವ ಮೂಲಕ ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.ವಿದೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈ ವೇಳೆ ನಾನು ಯಾರ ಬಳಿ ಮಾತಾಡಬೇಕು? ಏನು ಮಾಡಬೇಕು? ಎಲ್ಲವನ್ನೂ ನಿಮ್ಮ ಬಳಿ ಹೇಳ್ಕೋಬೇಕಾ? ನನ್ನ ತಮ್ಮ, ತಂಗಿ, ಕುಟುಂಬದ ಜೊತೆ ಏನು ಮಾತಾಡ್ತೇನೆ ಎಲ್ಲಾ ಹೇಳಬೇಕಾ ಎಂದು ಪ್ರಶ್ನಿಸಿದ್ದಾರೆ. ಶಾಸಕ ಮುನಿರತ್ನ ಅವರ ಬಂಧನದ ವಿಚಾರವಾಗಿ, ಈ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಈ ಬಗ್ಗೆ ಬಿಜೆಪಿಯ ಆರ್.ಆಶೋಕ್, ವಿಜಯೇಂದ್ರ, ಇನ್ನೂ ದೊಡ್ಡ ದೊಡ್ಡ ನಾಯಕರು ಇದ್ದಾರೆ. ಅಲ್ಲದೇ ಆ ಸಮುದಾಯದ ಮುಖ್ಯಸ್ಥರು, ಸ್ವಾಮಿಗಳು ಅವರೆಲ್ಲ ಮಾತಾಡಬೇಕು. ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಂಡು ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ.
ಬೆಂಗಳೂರು:- ರಾಜಧಾನಿ ಬೆಂಗಳೂರು ನಲ್ಲಿ ಮತ್ತೆ ಗನ್ ಸೌಂಡ್ ಕೇಳಿ ಬಂದಿದ್ದು, ರೌಡಿಶೀಟರ್ ಓರ್ವನ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಯುವಕನ ಬಟ್ಟೆ ಬಿಚ್ಚಿಸಿ ರೌಡಿಶೀಟರ್ ಪವನ್ @ಕಡಬು ಹಲ್ಲೆ ಮಾಡಿದ್ದ. ಈ ಸಂಬಂಧ ದೂರು ಆಧರಿಸಿ ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಅಟ್ಯಾಕ್ ಗೆ ಮುಂದಾಗಿದ್ದಾನೆ. ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ಮೇಲೆ ಡ್ರಾಗಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಹೀಗಾಗಿ ಪ್ರಾಣ ರಕ್ಷಣೆಗಾಗಿ ಪವನ್ ಕಾಲಿಗೆ ಪೊಲೀಸರು ಗುಂಡು ನುಗ್ಗಿಸಿದ್ದಾರೆ. ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ನಾಗಶ್ ಹಾಗೂ ಗೋವಿಂದ ರಾಜ್ ನಗರ ಇನ್ಸ್ಪೆಕ್ಟರ್ ಸುಬ್ರಮಣ್ಯರಿಂದ ಶೂಟ್‌ಔಟ್ ನಡೆದಿದೆ. ಆರೋಪಿ ಪವನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರು:- ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆ ಜೊತೆ ವಿಲೀನವಾಗಲಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ಸೋಮಣ್ಣ ತಿಳಿಸಿದರು. ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದರು ವಿಲೀನ ವಿಚಾರವಾಗಿ ನಾವು ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ನಂತರ, ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಹಿಂದೆ ರೈಲ್ವೆ ಇಲಾಖೆಯು ರಾಜ್ಯ ಸರ್ಕಾರದ ಶೇ 50ರಷ್ಟು ಕೊಡುಗೆಯೊಂದಿಗೆ ರಾಜ್ಯದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ ದೊರೆಯುವುದಿಲ್ಲ. ಈ ಕಾರಣಕ್ಕೆ ಎಲ್ಲಾ ವೆಚ್ಚವನ್ನು ಕೇಂದ್ರವೇ ಭರಿಸಲು ನಿರ್ಧರಿಸಿದೆ ಎಂದು ಸೋಮಣ್ಣ ತಿಳಿಸಿದರು. ರಾಜ್ಯದ ಹಲವು ಬಾಕಿ ಇರುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು.…