Author: Prajatv Kannada

ಮೆಟಾ ಪ್ಲಾಟ್​ಫಾರ್ಮ್ಸ್ ಅಡಿಯಲ್ಲಿ ಫೇಸ್​ಬುಕ್, ಇನ್ಸ್​ಟಾಗ್ರಾಂ, ವಾಟ್ಸಾಪ್​ಗಳು ಕಾರ್ಯನಿರ್ವಹಿಸುತ್ತವೆ. ಮಾರ್ಕ್ ಜುಕರ್ಬರ್ಗ್ ಅವರು ಮೆಟಾದ ಸಿಇಒ ಆಗಿದ್ದಾರೆ. ಇನ್ನೂ ಯುರೋಪಿಯನ್‌ ಯೂನಿಯನ್‌ ಫೇಸ್‌ಬುಕ್‌ ಕಂಪನಿಯ ಮಾತೃಂಸ್ಥೆ ಮೆಟಾಗೆ 800 ಮಿಲಿಯನ್‌ ಯೂರೋ (ಅಂದಾಜು 7,100 ಕೋಟಿ ರೂ) ದಂಡವನ್ನು ವಿಧಿಸಿದೆ. ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವೆಯಾದ   ಅನ್ನು ಅದರ ವೈಯಕ್ತಿಕ ಸಾಮಾಜಿಕ ನೆಟ್‌ವರ್ಕ್ ಫೇಸ್‌ಬುಕ್‌ಗೆ ಜೋಡಿಸಿದೆ. ಅಷ್ಟೇ ಅಲ್ಲದೇ ಇತರ ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವಾ ಪೂರೈಕೆದಾರರ ಮೇಲೆ ವ್ಯಾಪಾರದ ಷರತ್ತನ್ನು ವಿಧಿಸುವ ಮೂಲಕ ತನ್ನ ಆಂಟಿಟ್ರಸ್ಟ್ ನಿಯಮವನ್ನು ಉಲ್ಲಂಘಿಸಿದೆ ಎಂದು ಯುರೋಪಿಯನ್‌ ಯೂನಿಯನ್‌ ಹೇಳಿದೆ ಎಲ್ಲಾ ಫೇಸ್‌ಬುಕ್‌ ಬಳಕೆದಾರರು ಇಷ್ಟವಿಲ್ಲದಿದ್ದರೂ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ಗೆ ಭೇಟಿ ನೀಡುವಂತೆ ರೂಪಿಸಲಾಗಿದೆ. ಯುರೋಪಿಯನ್‌ ಯೂನಿಯನ್‌ ನಿಯಮದ ಪ್ರಕಾರ ಒಂದೇ ವೇದಿಕೆಯಲ್ಲಿ ಎರಡು ಸೇವೆಗಳನ್ನು ನೀಡುವಂತಿಲ್ಲ. ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಮೆಟಾ ತಿಳಿಸಿದೆ. ಫೇಸ್‌ಬುಕ್‌ ತನ್ನ ಮಾರ್ಕೆಟ್‌ಪ್ಲೇಸ್‌ ಸೇವೆಯನ್ನು 2016ರಲ್ಲಿ ಆರಂಭಿಸಿತ್ತು. ಒಂದು ವರ್ಷದ ಬಳಿಕ ಹಲವಾರು ಯುರೋಪ್‌ ರಾಷ್ಟ್ರಗಳಲ್ಲಿ ಈ ಸೇವೆಯನ್ನು…

Read More

ಸ್ಪೇನ್‍ ನ ಈಶಾನ್ಯ ನಗರ ಝರಗೋಜದ ನರ್ಸಿಂಗ್ ಹೋಂ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ನರ್ಸಿಂಗ್ ಹೋಂನಲ್ಲಿ 82 ಮಂದಿಯಿದ್ದರು. ಇಲ್ಲಿ ಬುದ್ಧಿಮಾಂದ್ಯತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಬೆಂಕಿಯ ತೀವ್ರ ಹೊಗೆ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮುಂಬೈ: ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಗಾಯಕ ಮತ್ತು ಸಂಯೋಜಕ, ಪಂಡಿತ್ ಅಜೋಯ್ ಚಕ್ರವರ್ತಿ ಅವರ ಸಹೋದರ ಸಂಜಯ್ ಚಕ್ರವರ್ತಿಯನ್ನು ಚಾರು ಮಾರ್ಕೆಟ್ ಪೊಲೀಸ್ ತಂಡ ಮುಂಬೈನಲ್ಲಿ ಬಂಧಿಸಿದ್ದಾರೆ. ಈ ಘಟನೆಯು ಜೂನ್ ತಿಂಗಳಲ್ಲಿ ನಡೆದಿದ್ದು, ಗಾಯಕ ತಾನು ನಡೆಸುತ್ತಿದ್ದ ಗಾಯನ ಸಂಸ್ಥೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ್ದಾರೆ. ಆಕೆಯ ಪೋಷಕರು ದೂರು ನೀಡಿದ್ದಾರೆ. ಗಾಯಕ ಎಸಗಿರುವ ಆರೋಪದ ಮೇಲೆ ತನಿಖೆ ಆತನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ, ತರಗತಿ ಮುಗಿದ ನಂತರ ಚಕ್ರವರ್ತಿ ಅಲ್ಲೇ ಉಳಿದುಕೊಂಡು ಎಲ್ಲಾ ವಿದ್ಯಾರ್ಥಿಗಳು ಹೋದ ನಂತರ, ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಂತ್ರಸ್ತೆಯನ್ನು ಆಕೆಯ ಪೋಷಕರು ಮಾನಸಿಕ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಚಿಕಿತ್ಸೆಯ ಸಮಯದಲ್ಲಿ ವಿದ್ಯಾರ್ಥಿನಿ ವೈದ್ಯರಿಗೆ ನಡೆದಂತಹ ಎಲ್ಲಾ ಘಟನೆಗಳನ್ನು ಬಹಿರಂಗಪಡಿಸಿದಳು. ನಂತರ ಆಕೆಯ ಪೋಷಕರಿಗೆ ಈ ವಿಷಯ…

Read More

ವೃಶ್ಚಿಕ ಸಂಕ್ರಾಂತಿ ಸೂರ್ಯೋದಯ: 06:25, ಸೂರ್ಯಾಸ್ತ : 05:36 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ,ಶರದ ಋತು, ಕಾರ್ತಿಕ್ ಮಾಸ, ತಿಥಿ: ಪಾಡ್ಯಾ ನಕ್ಷತ್ರ: ಕೃತಿಕಾ ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಸಂ.5:18 ನಿಂದ ಸಂ.6:45 ತನಕ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು ಅದರ ಜೊತೆಗೆ ಭಾವ ಚಿತ್ರ ಹಾಗೂ ಹಸ್ತಸಾಮುದ್ರಿಕೆ ಕಳಿಸಿದರೆ ಸಂಪೂರ್ಣ ಭವಿಷ್ಯ ತಿಳಿಸಲಾಗುವುದು. ಸೋಮಶೇಖರ್ ಗುರೂಜಿ B.Sc ಜ್ಯೋತಿಷ್ಯ ಶಾಸ್ತ್ರ,ವಾಸ್ತು ಶಾಸ್ತ್ರ,ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು. M. 9353488403 ಮೇಷ ರಾಶಿ: ಎಲೆಕ್ಟ್ರಾನಿಕ್ಸ್ ರಿಪೇರಿ, ಕಂಪ್ಯೂಟರ್ ರಿಪೇರಿ, ಮೊಬೈಲ್ ರಿಪೇರಿ, ಧನ ಲಾಭ ಪಡೆಯಲಿದ್ದೀರಿ, ಕೈ ಹಿಡಿದ ಕೆಲಸಗಳು ಮುಗಿಯುವ ಹಠ ನಿಮ್ಮಲ್ಲಿದೆ, ಭೂ ವ್ಯವಹಾರ ಹೂಡಿಕೆ ಧನ ಲಾಭ,…

Read More

ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಇನ್ನೆನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ದೇವಸ್ಥಾನದ ಆಡಳಿತ ಮಂಡಿ ವಿಶೇಷ ಅತಿಥಿಯನ್ನು ಜಾತ್ರೆಗೆ ಆಹ್ವಾನಿಸುತ್ತಿದೆ. ಅಂತೆಯೇ ಈ ಭಾರಿ ಬಾಲಿವುಡ್ ಸ್ಟಾರ್ ನಟ ಅಮಿತಾಬ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ ಅಮಿತಾಭ್​ ಗೆ ಆಹ್ವಾನ ಪತ್ರ ನೀಡಿದೆ. ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿಯವರು ಇತ್ತೀಚೆಗೆ ಅಮಿತಾಭ್​ ಬಚ್ಚನ್ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆ. ಪ್ರೀತಿಯಿಂದ ಆಮಂತ್ರಣ ಪತ್ರಿಕೆ ಸ್ವೀಕರಿಸಿ ಈ ಅಮಿತಾಭ್ ಬಚ್ಚನ್ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಅವರು ಈ ಜಾತ್ರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗವಿಸಿದ್ದೇಶ್ವರ ಮಠದ ಜಾತ್ರೆ ದಕ್ಷಿಣ ಭಾರತದ ಕುಂಭ ಮೇಳ ಎಂದೆ ಖ್ಯಾತಿ ಪಡೆದಿದೆ. ಜನವರಿ 15ರಂದು ಈ ಜಾತ್ರೆ ನಡೆಯಲಿದೆ. ಒಂದೊಮ್ಮೆ ಅಮಿತಾಭ್ ಬಚ್ಚನ್ ಜಾತ್ರೆಗೆ ಆಗಮಿಸಿದರೆ ಇದರ ಮೆರಗು ಮತ್ತಷ್ಟು ಹೆಚ್ಚಲಿದೆ. ಪ್ರತಿ ವರ್ಷವೂ…

Read More

ಬೆಳಗಾವಿ:- ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ಜರುಗಿದೆ. https://youtu.be/if0J2be2_e4?si=iBaELZ3aANh8RTjx ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್​ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದ್ದು, ಸದ್ಯ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ.

Read More

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಗುರುದ್ವಾರದ ಗುರುಸಿಂಗ್ ಸಭಾಭವನದಲ್ಲಿ ಗುರುನಾನಕ್‌ ಜಯಂತಿ ಆಚರಿಸಲಾಯಿತು ಗುರುದ್ವಾರವನ್ನು ವಿವಿಧ ಬಗೆಯ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. https://youtu.be/2KG0N1Uv1-g?si=wlmZxVXylaLroTCe ಗುರುದ್ವಾರಕ್ಕೆ ಬೆಳಿಗ್ಗೆಯಿಂದ ರಾತ್ರಿವರೆಗೂ ಅಪಾರ ಸಂಖ್ಯೆಯಲ್ಲಿ ಸಿಖ್ಖರು ಭೇಟಿ ನೀಡಿ ಪ್ರಾರ್ಥಿಸಿದರು. ‘ಗುರು ಗ್ರಂಥ ಸಾಹೇಬ್‌’ ಧರ್ಮಗ್ರಂಥಕ್ಕೆ ವಿಶೇಷ ಪೂಜೆ ಸಲ್ಲಿಸಿ ನಮಿಸಿದರು. ಜಯಂತಿ ಅಂಗವಾಗಿ ನ.10ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನ.15ರಂದು ಪಂಜಾಬ್‌ ಅಮೃತಸರದ ಹಿರ್ದೇಜಿತ್ ಸಿಂಗ್ ಅವರು ಗುರುನಾನಕ್ ಅವರ ಕುರಿತು ಕಥೆ ವಾಚಿಸಿದರು. ಗುರುವಂತ್‌ ಸಿಂಗ್‌ ಅವರು ಕೀರ್ತನೆ ಹಾಡಿದರು. ಇದಕ್ಕೂ ಮುನ್ನ ಕವಿ ದರ್ಬಾರ್ ಹಾಗೂ ಸಂಗೀತ ಕಾರ್ಯಕ್ರಮ ನೆರೆದವರ ಗಮನ ಸೆಳೆಯಿತು.

Read More

ಕಲಬುರಗಿ: ಕೇಂದ್ರ‌ ಕಾರಾಗೃಹದಲ್ಲಿ ಅಕ್ರಮ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ವೀರಪ್ಪನವರು ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ್ದಾರೆ.. https://youtu.be/U-YKSj1owN0?si=x88p6t7WS9TwOHQH ಬೆಳ್ಳಂಬೆಳಗ್ಗೆ ಭೇಟಿ ನೀಡಿದ ಉಪಲೋಕಾಯುಕ್ತರು ಜೈಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.. ಅಷ್ಟೇಅಲ್ಲ ಕೈದಿಗಳಿಂದ ನಡೆದ ಅಕ್ರಮ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿದ್ದಾರೆ.. ಇದೇವೇಳೆ ಕೈದಿಗಳ ಜೊತೆಯೂ ಮಾತನಾಡಿ ಆಹಾರದ ಗುಣಮಟ್ಟವನ್ನ ಪರಿಶೀಲನೆ ನಡೆಸಿದ್ರು..

Read More

ದೇವನಹಳ್ಳಿ : ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಪ್ರಾಣಿಗಳ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ  ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಕೌಲಲಾಂಪುರರದಿಂದ ಬೆಂಗಳೂರಿಗೆ ಪ್ರಾಣಿಗಳನ್ನು ಬಾಕ್ಸ್ ನಲ್ಲಿಟ್ಟು ತಂದಿದ್ದರು. https://youtu.be/U-YKSj1owN0?si=C6UhI-jltw-smUsT ಟ್ರಾಲಿ ಬ್ಯಾಗ್ ನಲ್ಲಿ ಅಡಗಿಸಿ 40 ಬಾಕ್ಸ್‌ ಗಳಲ್ಲಿ ವಿವಿಧ ಪ್ರಾಣಿಗಳ ರವಾನಿಸಲಾಗುತ್ತಿದ್ದು.ಏರ್ಪೋಟ್ ನಲ್ಲಿ ಪರಿಶೀಲನೆ ವೇಳೆ ಬಾಕ್ಸ್ ನಲ್ಲಿ ಪ್ರಾಣಿಗಳು ಪತ್ತೆಯಾಗಿವೆ. ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಕೆಂಪು ಇಲಿ ಸೇರಿದಂತೆ ವಿವಿಧ ಬಗೆಯ ಪ್ರಾಣಿಗಳನ್ನು ರಕ್ಷಿಸಿರುವ ಕಸ್ಟಮ್ಸ್‌ ಅಧಿಕಾರಿಗಳು ಪ್ರಾಣಿಗಳನ್ನ ತಂದಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂಬಂಧ ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Read More

ಮೆಟಾ ಪ್ಲಾಟ್​ಫಾರ್ಮ್ಸ್ ಅಡಿಯಲ್ಲಿ ಫೇಸ್​ಬುಕ್, ಇನ್ಸ್​ಟಾಗ್ರಾಂ, ವಾಟ್ಸಾಪ್​ಗಳು ಕಾರ್ಯನಿರ್ವಹಿಸುತ್ತವೆ. ಮಾರ್ಕ್ ಜುಕರ್ಬರ್ಗ್ ಅವರು ಮೆಟಾದ ಸಿಇಒ ಆಗಿದ್ದಾರೆ. ಇನ್ನೂ ಯುರೋಪಿಯನ್‌ ಯೂನಿಯನ್‌ ಫೇಸ್‌ಬುಕ್‌ ಕಂಪನಿಯ ಮಾತೃಂಸ್ಥೆ ಮೆಟಾಗೆ 800 ಮಿಲಿಯನ್‌ ಯೂರೋ (ಅಂದಾಜು 7,100 ಕೋಟಿ ರೂ) ದಂಡವನ್ನು ವಿಧಿಸಿದೆ. ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವೆಯಾದ Facebook Marketplace ಅನ್ನು ಅದರ ವೈಯಕ್ತಿಕ ಸಾಮಾಜಿಕ ನೆಟ್‌ವರ್ಕ್ ಫೇಸ್‌ಬುಕ್‌ಗೆ ಜೋಡಿಸಿದೆ. ಅಷ್ಟೇ ಅಲ್ಲದೇ ಇತರ ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವಾ ಪೂರೈಕೆದಾರರ ಮೇಲೆ ವ್ಯಾಪಾರದ ಷರತ್ತನ್ನು ವಿಧಿಸುವ ಮೂಲಕ ತನ್ನ ಆಂಟಿಟ್ರಸ್ಟ್ ನಿಯಮವನ್ನು ಉಲ್ಲಂಘಿಸಿದೆ ಎಂದು ಯುರೋಪಿಯನ್‌ ಯೂನಿಯನ್‌ ಹೇಳಿದೆ. ಎಲ್ಲಾ ಫೇಸ್‌ಬುಕ್‌ ಬಳಕೆದಾರರು ಇಷ್ಟವಿಲ್ಲದಿದ್ದರೂ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ಗೆ ಭೇಟಿ ನೀಡುವಂತೆ ರೂಪಿಸಲಾಗಿದೆ. ಯುರೋಪಿಯನ್‌ ಯೂನಿಯನ್‌ ನಿಯಮದ ಪ್ರಕಾರ ಒಂದೇ ವೇದಿಕೆಯಲ್ಲಿ ಎರಡು ಸೇವೆಗಳನ್ನು ನೀಡುವಂತಿಲ್ಲ. ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಮೆಟಾ ತಿಳಿಸಿದೆ. ಫೇಸ್‌ಬುಕ್‌ ತನ್ನ ಮಾರ್ಕೆಟ್‌ಪ್ಲೇಸ್‌ ಸೇವೆಯನ್ನು 2016ರಲ್ಲಿ ಆರಂಭಿಸಿತ್ತು. ಒಂದು ವರ್ಷದ ಬಳಿಕ ಹಲವಾರು ಯುರೋಪ್‌ ರಾಷ್ಟ್ರಗಳಲ್ಲಿ ಈ ಸೇವೆಯನ್ನು ನೀಡತೊಡಗಿದೆ.…

Read More