ಕೋಲಾರ : ಯಾವುದೇ ಸಮಾಜವನ್ನು ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಶಾಸಕ ಮುನಿರತ್ನ ಅವರು ನಿಂದನೆ ಮಾಡಿದ್ದರೆ ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಗಾಗುತ್ತಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವ್ರು ಹೇಳಿದರು. ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಬಂಧನದ ವಿಚಾರ ಮಾಧ್ಯಮಗಳಲ್ಲಿ ನೋಡಿದ್ದೇನೆ. ಜಿಲ್ಲೆಯ ನಂಗಲಿ ಟೋಲ್ ಬಳಿ ಹಿಡಿದುಕೊಂಡು ಹೋಗಿರುವುದು ನಿಜ. ಅದಾದ ಬಳಿಕ ಏನಾಗಿದೆ ಎನ್ನುವುದು ನನಗೆ ಗೊತ್ತಿಲ್ಲ, ನಿಂದನೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಕ್ರಮವಾಗಲಿದೆ ಎಂದರು. ಆಪರೇಷನ್ ಕಮಲಕ್ಕೆ ಒಳಗಾದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಆರೋಪ. ನನಗೆ ಅದರ ಬಗ್ಗೆ ಮಾಹಿತಿ ಇಲ್ಲ, ತಿಳಿದುಕೊಂಡು ಹೇಳುವೆ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಗೋಪಾಲಗೌಡ, ಗಂಗಣ್ಣ ಮುಂತಾದವರಿದ್ದರು.
Author: Prajatv Kannada
ಛತ್ತೀಸ್‌ಗಢ:- ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಜರುಗಿದೆ. https://youtu.be/9fQ3qHTxFm8?si=IlZh_ut2MSQDdnPg ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ ಹಾನಿಯನ್ನುಂಟುಮಾಡುತ್ತಿದೆ, ಇದರಿಂದಾಗಿ ಐವರನ್ನೂ ಹೊಡೆದು ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15 ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇದಾದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಮತ್ತು ಮೌಸಂ ಅರ್ಜೋ ಎಂದು ಗುರುತಿಸಲಾಗಿದೆ. ಮೃತರಲ್ಲಿ ಛತ್ತೀಸ್‌ಗಢ ಪೊಲೀಸರೊಂದಿಗೆ ಕೆಲಸ ಮಾಡುವ ಹೆಡ್ ಕಾನ್‌ಸ್ಟೆಬಲ್ ಕೂಡ ಸೇರಿದ್ದಾರೆ. ಪೊಲೀಸರು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದಾಗ ಮನೆಯವರು ವಾಮಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದರಿಂದ ಹಳ್ಳಿಯ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳು ಮತ್ತು ಜನರಿಗೆ ವೈಯಕ್ತಿಕ ಹಾನಿ ಉಂಟಾಗುತ್ತದೆ ಎಂದು ಅವರು ನಂಬಿದ್ದರು.…
ಹುಬ್ಬಳ್ಳಿ: ಮಹಾರಾಜ ಅಗ್ರಸೇನ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೊಸೈಟಿ ಮತ್ತು ಆಲ್ ಇಂಡಿಯಾ ಜೈನ್ ಯುಥ್ ಫೆಡರೇಷನ್‌ನ ಮಹಾವೀರ ಲಿಂಬ್ ಸೆಂಟರ್ ಆಶ್ರಯದಲ್ಲಿ ಇಲ್ಲಿಯ ಕೆಎಂಸಿಆರ್‌ಐನ ಮಹಾವೀರ ಲಿಂಬ್ ಸೆಂಟರ್‌ನಲ್ಲಿ 11 ಅಂಗವಿಕಲರಿಗೆ ಉಚಿತ ಕೃತಕ ಕಾಲು ಜೋಡಣಾ ಶಿಬಿರ ಏರ್ಪಡಿಸಲಾಗಿತ್ತು. https://youtu.be/6XSU5C-q5Ek?si=BGiyCujcCWCUWtkX ಲಿಂಬ್ ಸೆಂಟರ್ ಅಧ್ಯಕ್ಷ ಮಹೇಂದ್ರ ಸಿಂಘಿ ಮಾತನಾಡಿ, ಅಂಗವಿಕಲರ ಬಾಳಿಗೆ ಬೆಳಕಾಗುವಂತಹ ಕಾರ್ಯಕ್ರಮ ಇದು. ಸಂತೋಷ ಮತ್ತು ಸ್ವಾಭಿಮಾನದಿಂದ ಹೆಜ್ಜೆ ಇಟ್ಟು ನಡೆಯಬೇಕು ಎಂದು ಸಲಹೆ ನೀಡಿದರು. ಮಹಾರಾಜ ಅಗ್ರಸೇನ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿ ಚೇರ್ಮನ್ ಸುಜಿತ್ ಯಾದುಕ, ಉಪಚೇರ್ಮನ್ ಕೇದಾರ ಅಗರವಾಲ, ನಿರ್ದೇಶಕರಾದ ಸುಭಾಷ ಮಹಾಜನ, ಸುರೇಶ ಅಗರವಾಲ, ಅಮಿತ ಮಹಾಜನ, ಗೌತಮ ಗುಲೇಚ್ಛಾ, ಮುಖೇಶ ಅಗರವಾಲ, ಭಾರತಿ ಅಗರವಾಲ, ಅಶೋಕ ಕುಮಾರ ಮಹಾಜನ, ಹೇಮಂತ ಮೋಡಿ, ಅನಿತಾ ಮಹಾಜನ, ಭರತ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
ಮಂಗಳೂರು: ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಗಿರೀಶ್.ಎನ್ ತಿಳಿಸಿದ್ದಾರೆ. https://youtu.be/9fQ3qHTxFm8?si=-phyURnzCnf8Oeww ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್ ಮಾತನಾಡಿ, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೇವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ…
ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಿದ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. https://youtu.be/mDSKu80PKS0?si=KZ4yRxMgSm88CZnC ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಕುಮಾರಸ್ವಾಮಿ, ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಿ ಅಂತ ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ್ದಾರೆ. ಹೆಚ್‌ಡಿಕೆ ಎಕ್ಸ್‌ನಲ್ಲಿ ಏನಿದೆ? ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಮಾನ್ಯ ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ,…
ಮಾಲಿವುಡ್‌ನಲ್ಲಿ ಹೇಮಾ ಸಮಿತಿ ವರದಿ ಹೊರಬಿದ್ದ ಬಳಿಕ ಚಿತ್ರರಂಗ ಅಲ್ಲೋಲ ಕಲ್ಲೋಲ ಆಗಿದೆ. ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ರಚಿಸಲು ಸೆ.16ರಂದು ಫಿಲ್ಮ್ ಚೇಂಬರ್ ಸಭೆ ಆಯೋಜಿಸಿದೆ. https://youtu.be/pBIxim-R4rM?si=-w4EW3zFrevHN6Ms ಇಂದು ಫಿಲ್ಮ್ ಚೇಂಬರ್‌ನಲ್ಲಿ ಹೈ-ವೋಲ್ಟೇಜ್ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಕಮಿಟಿ ರಚಿಸಿರುವಂತೆ ಇಲ್ಲೂ ರಚಿಸುವಂತೆ ನಟಿಯರು ಸೆ.6ರಂದು ಫಿಲ್ಮ್ ಚೇಂಬರ್ ಪತ್ರ ಬರೆದ್ದರು. ಅದರಂತೆ ನಾಳೆ ಬೆಳಗ್ಗೆ 11:30ಕ್ಕೆ ಈ ಕುರಿತು ಸಭೆ ಮಾಡಲು ನಿರ್ಧರಿಸಿದ್ದಾರೆ. ಈ ಸಭೆಯಲ್ಲಿ 100ಕ್ಕೂ ಹೆಚ್ಚು ಮಹಿಳಾ ಕಲಾವಿದೆಯರು ಭಾಗಿಯಾಗಲಿದ್ದಾರೆ. ನಟಿಯರ ಭದ್ರತೆ ಹಾಗೂ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ಕಮಿಟಿಗೆ ಮನವಿ ಮಾಡಲಿದ್ದಾರೆ. ಕಮಿಟಿ ವರದಿ ಅನುಸರಿಸಿ ಹಲವು ಕಾರ್ಯಕ್ರಮ ಕಾರ್ಯರೂಪಕ್ಕೆ ತರಲು ಚಿಂತನೆ ನಡೆಸಲಿದ್ದಾರೆ.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ. ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ. ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ ಪದೇ ಪದೇ ಹಸಿವನ್ನು ಈ ತುಳಸಿ ಬೀಜಗಳು ತಡೆಯುತ್ತದೆ. ಹೊಟ್ಟೆ ತುಂಬಿಸಿದ ಅನುಭವವನ್ನು ಉಂಟು ಮಾಡುತ್ತದೆ. ಅಲ್ಲದೆ, ಇದು ಕೊಬ್ಬನ್ನು ಸುಡುವ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ. ಇದರ ಪರಿಣಾಮ ನೀವು ತೂಕವನ್ನು ವೇಗವಾಗಿ ಕಳೆದುಕೊಳ್ಳಬಹುದು. ಇಷ್ಟೇ ಅಲ್ಲ, ಇದು ಅತ್ಯಂತ…
ದೆಹಲಿ: ರಾಹುಲ್ ಗಾಂಧಿ ಭಾರತದ ನಂಬರ್ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಟೀಕಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್ ನಾಲಿಗೆ ಹರಿಬಿಟ್ಟಿದ್ದಾರೆ. ರಾಹುಲ್ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೊದಲು ಅವರು ಮುಸ್ಲಿಮರನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಆಗಲಿಲ್ಲ. ಈಗ ಅವರು ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ದೇಶದ ಮೋಸ್ಟ್ ವಾಂಟೆಡ್ ವ್ಯಕ್ತಿಗಳು ಈ ಹಿಂದೆ ಇಂತಹ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ. ಅಂತಹ ಜನರು ರಾಹುಲ್ ಗಾಂಧಿಯನ್ನು ಬೆಂಬಲಿಸುವುದಾದರೆ, ಇವರು ಕೂಡ ದೇಶದ ನಂ.1 ಭಯೋತ್ಪಾದಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಯುಎಸ್‌ನ ವರ್ಜೀನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಖ್ಖರ…
ಮುಂಬೈ: ಸಹೋದರಿ ಜೊತೆಗೂಡಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಏಕನಾಥ್ ಶಿಂಧೆ ಅವರು ತಮ್ಮ ಇನ್‌ಸ್ಟಾ ಖಾತೆಯಲ್ಲಿ, ಗಣೇಶ ಚತುರ್ಥಿ ಆಚರಣೆಯ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಮತ್ತು ಅವರ ಸಹೋದರಿ ಅರ್ಪಿತಾ ಖಾನ್ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದ ಫೋಟೊ ಕೂಡ ಅದರಲ್ಲಿದೆ. ಸಲ್ಮಾನ್ ತಮ್ಮ ಕ್ಯಾಶುಯಲ್ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಏಕನಾಥ್ ಶಿಂಧೆ ಅವರು ಸಲ್ಮಾನ್‌ಗೆ ಪುಷ್ಪಗುಚ್ಛ ನೀಡಿ, ವರ್ಣರಂಜಿತ ಶಾಲು ಹೊದಿಸಿ ಸ್ವಾಗತ ಕೋರಿದ್ದಾರೆ. ಶಿಂಧೆ ಅವರ ಪುತ್ರ ಹಾಗೂ ಸಂಸದ ಡಾ.ಶ್ರೀಕಾಂತ್ ಶಿಂಧೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರತಿ ವರ್ಷದಂತೆ ಈ ವರ್ಷವೂ ಸಲ್ಮಾನ್ ಖಾನ್ ತಮ್ಮ ಮನೆಯಲ್ಲೂ ಗಣೇಶ ಚುತುರ್ಥಿ ಆಚರಿಸಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದ ಫೋಟೊಗಳನ್ನು ಸ್ಟಾರ್ ನಟ ಹಂಚಿಕೊಂಡಿದ್ದರು. ಸಲ್ಮಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮತ್ತು ಅವರ ಪತಿ ಆಯುಷ್ ಶರ್ಮಾ ಕೂಡ ತಮ್ಮ…
ಸೂರ್ಯೋದಯ: 06:08, ಸೂರ್ಯಾಸ್ತ : 06:13 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ತ್ರಯೋದಶಿ ನಕ್ಷತ್ರ: ಧನಿಷ್ಠ ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ: 03:00 ನಿಂದ 04:30 ತನಕ ಅಮೃತಕಾಲ: ಬೆ.7:08 ನಿಂದ ಬೆ.8:35 ತನಕ ಅಭಿಜಿತ್ ಮುಹುರ್ತ: ಬೆ.11:46 ನಿಂದ ಮ.12:35 ತನಕ ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ…