Author: Prajatv Kannada

ಮಾಲಿವುಡ್‌ನಲ್ಲಿ ಹೇಮಾ ಸಮಿತಿ ವರದಿ ಹೊರಬಿದ್ದ ಬಳಿಕ ಚಿತ್ರರಂಗ ಅಲ್ಲೋಲ ಕಲ್ಲೋಲ ಆಗಿದೆ. ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ರಚಿಸಲು ಸೆ.16ರಂದು ಫಿಲ್ಮ್ ಚೇಂಬರ್ ಸಭೆ ಆಯೋಜಿಸಿದೆ. https://youtu.be/pBIxim-R4rM?si=-w4EW3zFrevHN6Ms ಇಂದು ಫಿಲ್ಮ್ ಚೇಂಬರ್‌ನಲ್ಲಿ ಹೈ-ವೋಲ್ಟೇಜ್ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಕಮಿಟಿ ರಚಿಸಿರುವಂತೆ ಇಲ್ಲೂ ರಚಿಸುವಂತೆ ನಟಿಯರು ಸೆ.6ರಂದು ಫಿಲ್ಮ್  ಚೇಂಬರ್ ಪತ್ರ ಬರೆದ್ದರು. ಅದರಂತೆ ನಾಳೆ ಬೆಳಗ್ಗೆ 11:30ಕ್ಕೆ ಈ ಕುರಿತು ಸಭೆ ಮಾಡಲು ನಿರ್ಧರಿಸಿದ್ದಾರೆ. ಈ ಸಭೆಯಲ್ಲಿ 100ಕ್ಕೂ ಹೆಚ್ಚು ಮಹಿಳಾ ಕಲಾವಿದೆಯರು ಭಾಗಿಯಾಗಲಿದ್ದಾರೆ. ನಟಿಯರ ಭದ್ರತೆ ಹಾಗೂ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ಕಮಿಟಿಗೆ ಮನವಿ ಮಾಡಲಿದ್ದಾರೆ. ಕಮಿಟಿ ವರದಿ ಅನುಸರಿಸಿ ಹಲವು ಕಾರ್ಯಕ್ರಮ ಕಾರ್ಯರೂಪಕ್ಕೆ ತರಲು ಚಿಂತನೆ ನಡೆಸಲಿದ್ದಾರೆ.

Read More

ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ. ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್‌ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್‌ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ. ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ ಪದೇ ಪದೇ ಹಸಿವನ್ನು ಈ ತುಳಸಿ ಬೀಜಗಳು ತಡೆಯುತ್ತದೆ. ಹೊಟ್ಟೆ ತುಂಬಿಸಿದ ಅನುಭವವನ್ನು ಉಂಟು ಮಾಡುತ್ತದೆ. ಅಲ್ಲದೆ, ಇದು ಕೊಬ್ಬನ್ನು ಸುಡುವ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ. ಇದರ ಪರಿಣಾಮ ನೀವು ತೂಕವನ್ನು ವೇಗವಾಗಿ ಕಳೆದುಕೊಳ್ಳಬಹುದು. ಇಷ್ಟೇ ಅಲ್ಲ, ಇದು ಅತ್ಯಂತ…

Read More

ದೆಹಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ   ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಟೀಕಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಾಲಿಗೆ ಹರಿಬಿಟ್ಟಿದ್ದಾರೆ. ರಾಹುಲ್‌ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೊದಲು ಅವರು ಮುಸ್ಲಿಮರನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಆಗಲಿಲ್ಲ. ಈಗ ಅವರು ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ದೇಶದ ಮೋಸ್ಟ್ ವಾಂಟೆಡ್ ವ್ಯಕ್ತಿಗಳು ಈ ಹಿಂದೆ ಇಂತಹ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ. ಅಂತಹ ಜನರು ರಾಹುಲ್ ಗಾಂಧಿಯನ್ನು ಬೆಂಬಲಿಸುವುದಾದರೆ, ಇವರು ಕೂಡ ದೇಶದ ನಂ.1 ಭಯೋತ್ಪಾದಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಯುಎಸ್‌ನ ವರ್ಜೀನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಖ್ಖರ…

Read More

ಮುಂಬೈ: ಸಹೋದರಿ ಜೊತೆಗೂಡಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌  ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಏಕನಾಥ್‌ ಶಿಂಧೆ ಅವರು ತಮ್ಮ ಇನ್‌ಸ್ಟಾ ಖಾತೆಯಲ್ಲಿ, ಗಣೇಶ ಚತುರ್ಥಿ  ಆಚರಣೆಯ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಮತ್ತು ಅವರ ಸಹೋದರಿ ಅರ್ಪಿತಾ ಖಾನ್ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದ ಫೋಟೊ ಕೂಡ ಅದರಲ್ಲಿದೆ. ಸಲ್ಮಾನ್ ತಮ್ಮ ಕ್ಯಾಶುಯಲ್ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಏಕನಾಥ್ ಶಿಂಧೆ ಅವರು ಸಲ್ಮಾನ್‌ಗೆ ಪುಷ್ಪಗುಚ್ಛ ನೀಡಿ, ವರ್ಣರಂಜಿತ ಶಾಲು ಹೊದಿಸಿ ಸ್ವಾಗತ ಕೋರಿದ್ದಾರೆ. ಶಿಂಧೆ ಅವರ ಪುತ್ರ ಹಾಗೂ ಸಂಸದ ಡಾ.ಶ್ರೀಕಾಂತ್ ಶಿಂಧೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರತಿ ವರ್ಷದಂತೆ ಈ ವರ್ಷವೂ ಸಲ್ಮಾನ್‌ ಖಾನ್‌ ತಮ್ಮ ಮನೆಯಲ್ಲೂ ಗಣೇಶ ಚುತುರ್ಥಿ ಆಚರಿಸಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದ ಫೋಟೊಗಳನ್ನು ಸ್ಟಾರ್‌ ನಟ ಹಂಚಿಕೊಂಡಿದ್ದರು. ಸಲ್ಮಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮತ್ತು ಅವರ ಪತಿ ಆಯುಷ್ ಶರ್ಮಾ ಕೂಡ ತಮ್ಮ…

Read More

ಸೂರ್ಯೋದಯ: 06:08, ಸೂರ್ಯಾಸ್ತ : 06:13 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ತ್ರಯೋದಶಿ ನಕ್ಷತ್ರ: ಧನಿಷ್ಠ ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ: 03:00 ನಿಂದ 04:30 ತನಕ ಅಮೃತಕಾಲ: ಬೆ.7:08 ನಿಂದ ಬೆ.8:35 ತನಕ ಅಭಿಜಿತ್ ಮುಹುರ್ತ: ಬೆ.11:46 ನಿಂದ ಮ.12:35 ತನಕ ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ…

Read More

ನಾಗಮಂಗಲದಲ್ಲಿ ಮತ್ತೆ ಕೋಮು ಘರ್ಷಣೆಗೆ ಅವಕಾಶ ಮಾಡಿಕೊಡದಂತೆ ಪೊಲೀಸರಿಗೆ ಸರ್ಕಾರ ಖಡಕ್‌ ಸೂಚನೆ ನೀಡಿದೆ. ಭಾನುವಾರದಿಂದಲೇ ಎಸ್ಪಿ ಮಲ್ಲಿಕಾರ್ಜುನ್‌ ಬಾಲದಂಡಿ ಅವರು ನಾಗಮಂಗಲದಲ್ಲೇ ಮೊಕ್ಕಾಂ ಹೂಡಿದ್ದಾರೆ. ಭದ್ರತೆ ಹಾಗೂ ಪರಿಸ್ಥಿತಿ ನಿಯಂತ್ರಣದ ಬಗ್ಗೆ ಗೃಹ ಇಲಾಖೆಗೆ ಗಂಟೆ ಗಂಟೆಗೂ ಮಾಹಿತಿ ನೀಡಲಾಗುತ್ತಿದೆ ಎಂದರು. ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ನಾಗಮಂಗಲದ ಗಲ್ಲಿಗಲ್ಲಿಗಳಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೊನ್ನೆ ಗಲಭೆಗೆ ಕಾರಣವಾದ ದರ್ಗಾ, ಮಸೀದಿ ಬಳಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಮಂಡ್ಯ ಸರ್ಕಲ್, ಈದ್ಗಾ ಮೈದಾನದ ಸುತ್ತಲೂ ಭಾರೀ ಬಂದೋ ಬಸ್ತ್ ಇದೆ. 2 ಎಸ್ಪಿ, 2 ಎಎಸ್ಪಿ, 4 ಡಿವೈಎಸ್ಪಿ, 20ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌, 20ಕ್ಕೂ ಹೆಚ್ಚು ಪಿಎಸ್‌ಐ ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೇ ತಲಾ 7 ಡಿಎಆರ್‌, ಕೆಎಸ್‌ಆರ್‌ಪಿ ಸೇರಿದಂತೆ 700ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ

Read More

ಬಾಗಲಕೋಟೆ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಆದ ಘಟನೆಯನ್ನು ಖಂಡಿಸಿ ಬಜರಂಗದಳ ಮತ್ತು ಹಿಂದು ಸಂಘಟನೆಗಳ ವತಿಯಿಂದ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಗರದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಮುಖಂಡ ರವಿ ಜವಳಗಿ ಮಾತನಾಡಿ, ನಮ್ಮ ನಾಡಿನಲ್ಲಿಯೇ ಗಣೇಶ ಉತ್ಸವ ಆಚರಿಸಲು ತೊಂದರೆಯಾಗುವುದು ದುರ್ಧೈವದ ಸಂಗತಿ. ಘಟನೆಯಲ್ಲಿ ಮತಾಂದ ಶಕ್ತಿಗಳು ಚಪ್ಪಲಿ,ಕಲ್ಲು, ಪೆಟ್ರೋಲ್ ಬಾಂಬ್ ಗಳನ್ನು ಎಸೆದು ಹಿಂದುಗಳ ಭಾವನೆಗೆ ಧಕ್ಕೆ ತಂದಿರುವುದು ಖಂಡನೀಯವಾಗಿದೆ .ರಾಜ್ಯದಲ್ಲಿ ತಾಲಿಬಾನ್ ಆಡಳಿತ ಇದೇಯಾ ಎಂದು ಪ್ರಶ್ನಿಸುತ್ತಾ, ಪೊಲೀಸರು ಗಣೇಶನನ್ನು ಬಂಧಿಸುವ ಕೆಲಸ ಮಾಡಿದ್ದು, ಇದರ ಶಾಪ ಸಿದ್ರಾಮಯ್ಯನವರ ಸರ್ಕಾರಕ್ಕೆ ತಟ್ಟುತ್ತದೆ. ಎಂದು ಆಕ್ರೋಶ ಹೊರಹಾಕಿದರು. ಇದೇ ಸಂದರ್ಭದಲ್ಲಿ ಮುಖಂಡರಾದ ಹನಮಂತ ಜಮಾದಾರ, ವಿಜಯಕುಮಾರ ಸಬಕಾಳೆ, ಮಹಾಲಿಂಗ ಕಂಕಣವಾಡಿ, ಶ್ರೀಶೈಲ ಮಠ, ಪುಂಡಲೀಕ ಗಡೇಕರ, ಶಿವನಗೌಡ ಪಾಟೀಲ ಸೇರಿದಂತೆ ಪುರಸಭೆ ಸದಸ್ಯರು, ಮುಖಂಡರು ಇದ್ದರು.

Read More

ಬೆಂಗಳೂರು/ ಕಲಬುರಗಿ:  ಇಂದು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಅವರು  ಮಧ್ಯಾಹ್ನ ಮೂರು ಗಂಟೆಗೆ ಹೆಚ್‌ಎಎಲ್ ನಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ https://youtu.be/JtjztTOqUlQ?si=6d1raRIxhS5K6KqY ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ  ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ನಡೆಯುತ್ತಿರುವ ಸಭೆ ಆಗಿದ್ದು  ಹಾಗಾಗಿ ಇಡೀ ಸಂಪುಟ ಸಹೋದ್ಯೋಗಿಗಳ ಜೊತೆ ಕಲಬುರಗಿಗೆ ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ

Read More

ಬೆಂಗಳೂರು: ಹೊಸ ರೂಲ್ಸ್ ಅಳವಡಿಕೆಗೆ ಪಿಜಿಗಳಿಗೆ ನೀಡಿದ ಗಡುವು ವಿಸ್ತರಣೆ ಮಾಡಿದ್ದು  ಗಡುವು ವಿಸ್ತರಣೆ ಬೆನ್ನಲೆ ಪಿಜಿ ಮಾಲಿಕರ ಸಭೆ ಕರೆದ ಬಿಬಿಎಂಪಿ ಬೆಂಗಳೂರು ವ್ಯಾಪ್ತಿಯ ಪಿಜಿ ಉದ್ಯಮಕ್ಕೆ ಸಂಬಂಧಿಸಿದಂತೆ ಹೊರಡಿಸಿದ್ದ ಮಾರ್ಗಸೂಚಿ ಪರಿಷ್ಕರಣೆಗೆ ಒತ್ತಾಯ ನಿಯಮಗಳ ಆಳವಡಿಕೆಗೆ ಸೆಪ್ಟೆಂಬರ್ 15 ಗಡುವು ನೀಡಲಾಗಿತ್ತು https://youtu.be/5m7c2MjIUTk?si=gKGsUigMQ4O3QEOH ಪಿಜಿ ಮಾಲಿಕರಿಂದ ಮಾರ್ಗಸೂಚಿ ಪರಿಷ್ಕರಣೆಗೆ ಒತ್ತಡ ಹಿನ್ನೆಲೆ ನಾಳೆ ಸಭೆ ಕರೆದಿದ್ದು  ನಿಯಮಗಳ ಆಳವಡಿಕೆಗೆ ಸೆಪ್ಟೆಂಬರ್ 15 ಗಡುವು ನೀಡಲಾಗಿತ್ತುಮಾರ್ಗಸೂಚಿ ಪಾಲನೆ ಮಾಡದಿದ್ದರೆ ಬಿಬಿಎಂಪಿ 2020ರ ಕಾಯಿದೆಯ ಸೆಕ್ಷನ್ 307 ಮತ್ತು 308 ರಡಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿತ್ತು ಮಾರ್ಗಸೂಚಿಯಲ್ಲಿ ರುವಂತೆ ಪ್ರತಿ ವ್ಯಕ್ತಿಗೆ 70 ಚದರ ಅಡಿ ಜಾಗದ ಬದಲಿಗೆ 35 ಚದರ ಅಡಿ ಇರುವಂತೆ ಅವಕಾಶ ನೀಡುವಂತೆ ಒತ್ತಾಯಸಿಸಿಟಿವಿ ದೃಶ್ಯಗಳ ಸಂರಕ್ಷಣೆಗೆ 90 ದಿನಗಳ ಬದಲಿಗೆ ಒಂದು ತಿಂಗಳ ಅವಧಿ ಸೀಮಿತಗೊಳಿಸುವಂತೆವ ಮಾರ್ಪಾಡು ಮಾಡುವಂತೆ ಮನವಿ ಮಾಡಲಾಗಿತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯ ಕೆಲವು ವಾರ್ಡ್‌ಗಳಲ್ಲಿ 20 ಹಾಸಿಗೆಗಳು ಮತ್ತು…

Read More

ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ಜಿದ್ದಾದಿಂದ ಬಂದ PIA ವಿಮಾನವೊಂದರಲ್ಲಿ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಾಯಿಲೆಯ ಲಕ್ಷಣಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ಹೇಳಿರುವುದಾಗಿ ತಿಳಿಸಿದ್ದಾರೆ. ಮಂಕಿಪಾಕ್ಸ್ ಕಾಯಿಲೆ ಇರುವ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಹೆಚ್ಚುವರಿ ಪರೀಕ್ಷೆ ಮತ್ತು ಆರೈಕೆಗಾಗಿ ಸಿಂಧ್‌ ನ ಸರ್ಕಾರಿ ಆಸ್ಪತ್ರೆಯೊಂದರ ಪ್ರತ್ಯೇಕ ವಾರ್ಡ್‌ಗೆ ಕರೆದೊಯ್ಯಲಾಯಿತು. ಈ ವಾರದ ಆರಂಭದಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಂಕಿ ಪಾಕ್ಸ್ ನ ಐದನೇ ಪ್ರಕರಣ ವರದಿಯಾಗಿತ್ತು 33 ವರ್ಷದ ಸಂತ್ರಸ್ತ ಖೈಬರ್ ಪಖ್ತುಂಖ್ವಾದ ಪೇಶಾವರ ನಿವಾಸಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಈತ ಸೆಪ್ಟೆಂಬರ್ 7 ರಂದು ಸೌದಿ ಅರೇಬಿಯಾದಿಂದ ಪಾಕಿಸ್ತಾನಕ್ಕೆ ಹಿಂದಿರುಗಿದ ನಂತರ ಆತನಿಗೆ ಮಂಕಿಪಾಕ್ಸ್ ಇರುವುದಾಗಿ ಖೈಬರ್ ಆಸ್ಪತ್ರೆ ದೃಢಪಡಿಸಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

Read More