ನವದೆಹಲಿ:- ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಮಾಡಿದ್ದಾರೆ. ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಗಣಪತಿಯನ್ನು ಕೂಡ ಕಂಬಿ ಹಿಂದೆ ಹಾಕಲಾಗಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಮೀಸಲಾತಿ ವಿರೋಧಿಯಾಗಿದೆ. ಕಾಂಗ್ರೆಸ್ ದಿನಕ್ಕೊಂದು ಹೊಸ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳಲು ಕಾಂಗ್ರೆಸ್‌ಗೆ ನಾಚಿಕೆ ಆಗುವುದಿಲ್ಲವೇ? ದೇಶದ ಏಕತೆ ಮೇಲೆ ಕಾಂಗ್ರೆಸ್ನಿಂದ ನಿರಂತರ ದಾಳಿ ನಡೆಯುತ್ತಿದೆ. ಕೇವಲ ಬಿಜೆಪಿಗೆ ಮಾನಹಾನಿ ಮಾಡುವ ಉದ್ದೇಶದಿಂದ ದೇಶದ ಮಾನಹಾನಿ ಮಾಡಲು ನಾಚಿಕೆಯಾಗುವುದಿಲ್ವಾ? ಇದು ಹಳೆಯ ಕಾಂಗ್ರೆಸ್ ಅಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಈಗ ಮೊದಲಿನ ಕಾಂಗ್ರೆಸ್ ಆಗಿ ಉಳಿದಿಲ್ಲ. ಇಂದಿನ ಕಾಂಗ್ರೆಸ್ ನಗರ ನಕ್ಸಲ್ನ ಹೊಸ ರೂಪವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ…
Author: Prajatv Kannada
ಜೈಪುರ್: ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮುಂಜಾನೆ ಕಾರು ಮತ್ತು ಅಪರಿಚಿತ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30ರ ವೇಳೆಗೆ ಈ ಅಪಘಾತ ನಡೆದಿದೆ. ಯಾತ್ರಿಕರು ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಎಂದು ತಿಳಿದು ಬಂದಿದೆ. ಅವರೆಲ್ಲ ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದರು. ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ಡಿಕ್ಕಿಯಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದೇವೆ ಎಂದು ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತದೇಹಗಳ ಗುರುತು ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.26 ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಇದುವರೆಗೂ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಈ ಬಾರಿ ಬೆಳಗ್ಗೆ ತೀರ್ಥೋದ್ಭವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ…
ಕಲಬುರಗಿ: ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಕಲಬುರಗಿಯ ಮೂವರು ಯುವಕರು ಭಾರತಕ್ಕೆ ವಾಪಸ್ ಆಗಿದ್ದಾರೆ. ಕಲಬುರಗಿ ಮೂಲದ ಮೂವರು ಸೇರಿ 6 ಮಂದಿ ತವರಿಗೆ ಮರಳಿದ್ದಾರೆ. ಕಲಬುರಗಿ ನಗರದ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮಹ್ಮದ್ ಸಮೀರ, ಮಿಜಗುರಿ ಪ್ರದೇಶದ ಮಹ್ಮದ್ ನಯೂಮ್ ವಾಪಸ್ ಆಸ ಯುವಕರು ಭಾರತಕ್ಕೆ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉಕ್ರೇನ್‌ಗೆ ಭೇಟಿ ನೀಡಿ ವಾಪಸ್ ಆದ ಕೆಲವೇ ದಿನಗಳಲ್ಲಿ ಭಾರತದ ಯುವಕರು ದೇಶಕ್ಕೆ ಮರಳಿದ್ದಾರೆ. ಮುಂಬೈ ಮೂಲದ ಏಜೆಂಟನೊಬ್ಬ ವೆಬ್‌ಸೈಟ್‌ನಲ್ಲಿ ಪರಿಚಯ ಮಾಡಿಕೊಂಡು ಯುವಕರನ್ನು ಉಕ್ರೇನ್‌ಗೆ ಕರೆಸಿಕೊಂಡಿದ್ದ. ಕೆಲಸ ಕೊಡಿಸುವ ನೆಪದಲ್ಲಿ ಯುವಕರನ್ನು ಉಕ್ರೇನ್‌ಗೆ ಕರೆಸಿಕೊಳ್ಳಲಾಗಿತ್ತು. ಯುದ್ಧ ಭೂಮಿಯಲ್ಲಿ ಯುವಕರನ್ನ ಸೈನ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಸೈನ್ಯದಲ್ಲಿ ಬಂಕರ್‌ಗಳನ್ನು ಅಗೆಯುವ ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು. ಈ ಕುರಿತು ವೀಡಿಯೋ ಮಾಡಿ ಯುವಕರು ಕಷ್ಟ ತೋಡಿಕೊಂಡಿದ್ದರು. ಯುವಕರನ್ನು ಮರಳಿ ತರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಒತ್ತಾಯಿಸಿದ್ದರು.
ಬೆಂಗಳೂರು: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ, ಹಿಂದುಳಿದ ಸಮುದಾಯಗಳ ಬಗ್ಗೆ ಬಿಜೆಪಿಗೆ ಯಾವ ರೀತಿಯ ದ್ವೇಷ ಇದೆ ಎಂಬುದಕ್ಕೆ ಮುನಿರತ್ನ ಅವರ ಮಾತುಗಳೇ ಸಾಕ್ಷಿ ಎಂದು ಟೀಕಿಸಿದ್ದಾರೆ. ಇದೇ ವೇಳೆ ಬಿಜೆಪಿ ನಾಡಿನ ದಲಿತರ ಕ್ಷಮೆ ಕೇಳಿ ಶಾಸಕ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಸಕ ಮುನಿರತ್ನ ಅವರು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬವರ ಜೊತೆ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ವೈರಲ್ ಆಡಿಯೋ ಉಲ್ಲೇಖಿಸಿ ಬಿಜೆಪಿಯ ಹಿಂದುತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಇಂದು ಸೆಪ್ಟೆಂಬರ್ 15 ಇಂಜಿನಿಯರ್ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಸ್ಮರಣಾರ್ಥ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ಇಂಜಿನಿಯರ್ ದಿನವನ್ನು ಮೊದಲ ಬಾರಿಗೆ 1968, ಸೆಪ್ಟೆಂಬರ್ 15 ರಂದು ಆಚರಣೆ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ಸೆಪ್ಟೆಂಬರ್ 15 ರಂದು ಭಾರತದಲ್ಲಿ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಇಂಜಿನಿಯರ್ ದಿನವನ್ನು ಆಚರಣೆ ಮಾಡುವ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು ಮತ್ತು ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳಲಾಗುತ್ತದೆ. ಸರ್. ಎಂ. ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15,1861 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸಾಧನೆ ಯಾವಾಗಲು ಶಾಶ್ವತವಾಗಿರುತ್ತದೆ. ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ…
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು. ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ…
ಜೂನಿಯರ್ ಎನ್ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್ ಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದ್ದು ರಿಲೀಸ್ ಗೂ ಮುನ್ನ ದೇವರ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಮಾಡಿದೆ. ಈ ಚಿತ್ರ ಕೇವಲ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಭರ್ಜರಿ ಗಳಿಕೆ ಮಾಡುತ್ತಿದೆ. ಅಮೆರಿಕದಲ್ಲಿ ಈ ಸಿನಿಮಾ ಈಗಾಗಲೇ 8 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಮೆರಿಕದಲ್ಲಿ ತೆಲುಗು ಸಿನಿಮಾಗಳಿಗೆ ಸಖತ್ ಬೇಡಿಕೆ ಇದೆ. ಸಿನಿಮಾ ರಿಲೀಸ್ಗೂ ಕೆಲ ವಾರ ಮೊದಲೇ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಪ್ರಾರಂಭಿಸಲಾಗುತ್ತದೆ. ಈಗ ಜೂನಿಯರ್ ಎನ್ಟಿಆರ್ ನಟನೆಯ ‘ದೇವರ’ ಸಿನಿಮಾಗೂ ಅಮೆರಿಕದಲ್ಲಿ ಬುಕಿಂಗ್ ಆರಂಭ ಆಗಿದ್ದು 32 ಸಾವಿರ ಟಿಕೆಟ್ಗಳು ಮಾರಾಟ ಆಗಿವೆ. ಇದರಿಂದ 8 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದು, ಈ ಮೂಲಕ ಸಿನಿಮಾ ದಾಖಲೆ ಬರೆದಿದೆ. ಕೆಲವು ವರದಿಗಳ ಪ್ರಕಾರ ಅಮೆರಿಕದ 276 ಲೊಕೇಶನ್ಗಳಲ್ಲಿ ಈ ಸಿನಿಮಾಗೆ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಭಾರತದ…
ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. https://youtu.be/5CYRH1pLMSk?si=d6FzZ8kOwDdviuSB ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದರು. ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದಿದ್ದಾರೆ. ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ…
ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾಗಿದೆ. ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿದ್ದ ಕಿಲ್ಲಿಂಗ್ ಸ್ಟಾರ್ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್ ಮಾಡಿದ್ದಾರೆ. ಅಹಂಕಾರ, ದರ್ಪ ತೋರಿಸಿ ಪದೇ ಪದೇ ಅಸಭ್ಯ ವರ್ತನೆ ಮಾಡುತ್ತಿರುವ ದರ್ಶನ್ ಗೆ ಜೈಲಾಧಿಕಾರಿಗಳು ಪಾಠ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜೈಲಿನಲ್ಲಿ ಇರುವಷ್ಟು ದಿನ ಜೈಲು ನಿಯಮಗಳನ್ನು ಪಾಲನೆ ಮಾಡಬೇಕು. ಕೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಖಾರವಾಗಿ ಹೇಳಿದ್ದಾರೆ. ಪದೇ ಪದೇ ಸೌಲಭ್ಯಗಳಿಗಾಗಿ ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಸಾಧ್ಯ ಅಷ್ಟು ಮಾತ್ರ ಕೊಡುತ್ತೇವೆ. ಹೆಚ್ಚಿನದು ಬೇಕು ಅಂದರೆ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಎಂದು ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂಬ ವಿಚಾರವನ್ನು ಮೂಲಗಳು ತಿಳಿಸಿವೆ.