Author: Prajatv Kannada

ತಮಿಳು ನಟ ದಳಪತಿ ವಿಜಯ್ ಸಿನಿಮಾ ರಂಗಕ್ಕೆ ಗುಡ್ ಬಾಯ್ ಹೇಳಿ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ಗ್ರೀನ್ ಸಿಗ್ನಲ್ ನೀಡಿರುವ ಕೊನೆಯ ಸಿನಿಮಾ ‘Thalapathy 69’ ಚಿತ್ರಕ್ಕೆ ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಬಂಡವಾಳ ಹೂಡುತ್ತಿದೆ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯ ವೆಂಕಟ್ ಅವರು ಬಂಡವಾಳ ಹೂಡತ್ತಿದ್ದಾರೆ. ಇದೇ ನಿರ್ಮಾಣ ಸಂಸ್ಥೆ ಮೂಲಕ  ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು ಸಂಜೆ 5 ಗಂಟೆಗೆ ಅಪ್​ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ. ದಳಪತಿ ವಿಜಯ್ ನಟನೆಯ ಈ ಹಿಂದಿನ ಸಿನಿಮಾಗಳ ದೃಶ್ಯವನ್ನು ಕಟ್ ಮಾಡಿ ಸೇರಿಸಿ ಟೀಸರ್ ಮಾಡಲಾಗಿದೆ. ‘ನಮ್ಮ ಮೊದಲ ತಮಿಳು ಸಿನಿಮಾ’ ಎಂದು ಕೆವಿಎನ್​ ಹೇಳಿದೆ. ಸಂಜೆ ವೇಳೆಗೆ ಸಿನಿಮಾದ ಟೈಟಲ್, ಈ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬಿತ್ಯಾದಿ ವಿಚಾರಗಳ ಕುರಿತು ಮಾಹಿತಿ ಸಿಗಲಿದೆ.…

Read More

ಮಂಡ್ಯ:- ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪಡದಿ ಟೌನ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. https://youtu.be/x6D2vVsH6yg?si=VcW4SRc0QOuUbJrU ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ. ಇನ್ನೂ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದು ನಾಗಮಂಗಲ ‌ಪಟ್ಟಣ ಹೊತ್ತಿ ಉರಿದಿತ್ತು. ಕರ್ತವ್ಯ ಲೋಪ, ನಿರ್ಲಕ್ಷತನ ಹಿನ್ನೆಲೆಯನ್ನು ಇನ್ಸ್‌ಪೆಕ್ಟರ್‌ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ

Read More

ಚಿತ್ರದುರ್ಗ: ನಾಗಮಂಗಲದ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಗಣಪತಿ ವಿಸರ್ಜ‌ನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. https://youtu.be/CNs6Vu7ug2E?si=8FRDg1okHq5kNzvK ಸುಧಾಕರ್ ಹೇಳಿದರು.ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು. ನಮ್ಮ ಸರ್ಕಾರದ ಗೃಹ ಮಂತ್ರಿಗಳು ಕೂಡ ಘಟ‌ನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು. ಸಿದ್ದರಾಮಯ್ಯ ಪರ ನ್ಯಾಯಾಲಯದಲದಲಿ ತೀರ್ಪು ಬರುವ ವಿಶ್ವಾಸವಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿದ್ದು,ಅವರಿಗೆ 136 ಶಾಸಕರ ಬೆಂಬಲವಿದೆ ಎಂದರು.

Read More

ಮಂಡ್ಯ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. https://youtu.be/2kTTWfL6cro?si=AncgggYxj3PvYHJ8 ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಈ ರೀತಿಯ ಕೆಲಸವಾಗುತ್ತಿರಬಹುದು ಎಂದರು. ವೀರೇಂದ್ರ ಪಾಟೀಲ್ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಮನಗರ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಾಯಕರೇ ಬೆಂಕಿ ಹಚ್ಚಿಸಿ ಗಲಭೆ ಮಾಡಿಸಿದ್ದರು. ಈಗ ನಾಗಮಂಗಲದಲ್ಲಿ ಗಲಭೆ ಮಾಡಿಸಲಾಗಿದೆ. ಆದರೆ, ಕೆಲವರು ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುತ್ತಾರೆ. ಇನ್ನೂ ಕೆಲವರು ಮುಖ್ಯಮಂತ್ರಿ ಕುರ್ಚಿಗಾಗಿ ಟವೆಲ್ ಹಾಕಿದ್ದಾರೆ ಎಂದು ಹೇಳಿದರು. ನಾಗಮಂಗಲದಲ್ಲಿ ಗಣೇಶ ಕೂರಿಸಿದವರನ್ನೇ ಎ1 ಮಾಡಿದ್ದಾರೆ. ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಅಮಾಯಕರನ್ನು ಬಂಧಿಸಿರುವುದು ತಪ್ಪು. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಸ್ಪಾನ್ಸರ್ ‘ಕೈ’ ನಾಯಕರು. ಆ ಘಟನೆಯಿಂದ ಜೈಲಿಗೆ ಹೋದವರು ಈಗ ಏನು…

Read More

ರಾಮನಗರ, (ಮಾಗಡಿ)- ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೆ.13ರ ಶುಕ್ರವಾರ ಮಾಗಡಿಯ ಹೊಸಪೇಟೆ ಸರ್ಕಲ್ ನಲ್ಲಿ ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. https://youtu.be/jaDgiQFl_X8?si=m9MtHpmVC5ae_bpD ಕಾಮಗಾರಿಗಳು ಹಾಗೂ ಉದ್ಘಾಟನೆಯಾದ ಕಟ್ಟಡಗಳ ವಿವರ ಇಂತಿದೆ. 8 ಕೋಟಿ ರೂಪಾಯಿ ವೆಚ್ಚದ ಮಾಗಡಿ ಪುರಸಭೆ ಮಾರುಕಟ್ಟೆ (ಅಂಗಡಿ) ಮಳಿಗೆಗಳ ನಿರ್ಮಾಣ, ಲೋಕೋಪಯೋಗಿ ಇಲಾಖೆ ವತಿಯಿಂದ ಮಾಗಡಿ ಪಟ್ಟಣದ ವ್ಯಾಪ್ತಿಯಲ್ಲಿ ಎಸ್.ಎಚ್.ಡಿ.ಪಿ. (ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ) ಯ 20 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ, ಮಾಗಡಿಯ ಜೂನಿಯರ್ ಕಾಲೇಜ್ ಆವರಣದಲ್ಲಿ 7 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರು ಹಾಲು ಒಕ್ಕೂಟದ ನೂತನ ಶಿಬಿರ ಕಚೇರಿ ಹಾಗೂ ಮಾಗಡಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಐಟಿಐ ಕಾಲೇಜನ್ನು ಉದ್ಘಾಟಿಸಿದರು. ಮಾಗಡಿ ತಾಲೂಕಿನ ಹಾರೋಹಳ್ಳಿ ಗ್ರಾಮದ ಪಾಲಿಟೆಕ್ನಿಕ್ ಕಾಲೇಜಿಗೆ, ಮಾಗಡಿ ಪಟ್ಟಣದಲ್ಲಿ ಅತ್ಯಾಧುನಿಕ ಗ್ರಂಥಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಮಾಗಡಿ ತಾಲೂಕು ಜೂನಿಯರ್…

Read More

ತಮಿಳುನಾಡು ರಾಜಕೀಯದಲ್ಲಿ ಅಧಿಪತಿಯಾಗುವುದಕ್ಕೆ ದಳಪತಿ ಅಖಾಡಕ್ಕೆ ಇಳಿದಿದ್ದಾರೆ. ಅದರ ಮೊದಲ ಭಾಗವಾಗಿ ತಮಿಳುಗ ವೆಟ್ರಿ ಕಳಗಂ ಪಕ್ಷ ಕಟ್ಟಿದ್ದಾರೆ. ತನಗೆ ನೇಮೂ ಫೇಮೂ ಕೊಟ್ಟ ತಮಿಳು ಮಕ್ಕಳ ಸೇವೆಗೆ ಸಿದ್ಧರಾಗಿ ನಿಂತಿದ್ದಾರೆ. ಅದಕ್ಕಾಗಿ ರಾಜಕೀಯವೇ ಅತ್ಯುತ್ತಮ ಅಂತಾ ತೀರ್ಮಾನಿಸಿ ಸಿನಿಮಾ ರಂಗಕ್ಕೆ ಕೊನೆಯ ಫುಲ್ ಸ್ಟಾಪ್ ಇಡ್ತಿದ್ದಾರೆ. ತಮಿಳು ಚಿತ್ರರಂಗದಲ್ಲಿ ಇನ್ಮುಂದೆ ಮಾಸ್ಟರ್ ಮೇನಿಯಾವೇ ಇರೋದಿಲ್ಲ. ಯಾಕಂದ್ರೆ ಫುಲ್ ಟೈಮ್ ಪಾಲಿಟಿಕ್ಸ್ ಗೆ ಇಳಿಯುತ್ತಿರುವ ವಿಜಯ್ ಕೊನೆಯಾದಾಗಿ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು ಕೂಡ ರಾಜಕೀಯ ಜೀವನಕ್ಕೆ ಹತ್ತಿರುವ ಕಥೆ ಅನ್ನೋದು ಇಂಟ್ರೆಸ್ಟಿಂಗ್ ಮ್ಯಾಟರ್. ಇದೆಲ್ಲದಕ್ಕಿಂತ ಹೆಚ್ಚಾಗಿ ಇಳದಳಪತಿ ವಿಜಯ್ ಕೊನೆಯ ಹಾಗೂ 69ನೇ ಚಿತ್ರವನ್ನು ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಸಾರಥ್ಯ ವಹಿಸಿಕೊಂಡಿದೆ. https://x.com/KvnProductions/status/1834481009553010728 ಕೆವಿಎನ್‌..ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ. ಆರ್‌ ಆರ್‌ ಆರ್‌, ಸೀತಾರಾಮಂ, ಅನಿಮಲ್, ವಿಕ್ರಾಂತ್‌ ರೋಣ, 777 ಚಾರ್ಲಿ, ಸಪ್ತಸಾಗರದಾಚೆ ಎಲ್ಲೋ ಹೀಗೆ ಅನೇಕ ಬ್ಲಾಕ್‌ಬಸ್ಟರ್‌ ಸಿನ್ಮಾಗಳನ್ನ ಡಿಸ್ಟ್ರಿಬ್ಯೂಷನ್‌…

Read More

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಬಂದ NTTF ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ. 19 ವರ್ಷದ ಪ್ರಸಾದ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು, NTTF ಮೂರನೇ ಸೆಮಿಸ್ಟರ್ ಓದುತ್ತಿದ್ದ ಪ್ರಸಾದ್, ನಾಗ ಶೆಟ್ಟಿಕೊಪ್ಪದ ನಿವಾಸದಲ್ಲಿ ತಡರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡನೇ ಸೆಮಿಸ್ಟರ್ ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಆಗಿದ್ದ ಪ್ರಸಾದ್,ವಿದ್ಯಾಭ್ಯಾಸದಲ್ಲಿ ಹಿಂದೆ ಇದ್ದ ಅನ್ನೋ ಕಾರಣಕ್ಕೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಾಗಿದ್ದು, ನಿನ್ನೆ ರಾತ್ರಿ ತಂದ ತಾಯಿ ಯೊಂದಿಗೆ ಊಟ ಮಾಡಿ ಮಲಗಿದ್ದನು. ಆದ್ರೆ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾಹಿತಿ ಪಡೆದಿದ್ದಾರೆ. ಇನ್ನೂ ಘಟನೆ ಸಂಬಂಧ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪರೀಕ್ಷೆಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದೆ. ಹೊಸ ನಿಯಮ ಈ ವರ್ಷದ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಸಮಯ ಕಡಿತ ಮಾಡಿರೋ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ https://youtu.be/2kTTWfL6cro?si=5uptDkZSJSdeA5Yi ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ಈ ಮೊದಲು ವಿದ್ಯಾರ್ಥಿಗಳು ಉತ್ತರ ಬರೆಯಲು 3 ಗಂಟೆ 15 ನಿಮಿಷ ಸಮಯ ಕೊಡಲಾಗ್ತಿತ್ತು.3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ. ಸಮಯ ಕಡಿತಕ್ಕೆ ಬೋರ್ಡ್ ಕಾರಣ ನೀಡಿದೆ. ಮೊದಲು 3…

Read More

ಬೆಂಗಳೂರು: ನಾಗಮಂಗಲ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಗೊಳಗಾದ ಅಂಗಡಿ, ವಾಹನ ಮಾಲೀಕರಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಯಾವುದೇ ಘಟನೆಗಳು ನಡೆದರೆ ನಿಮ್ಮನ್ನೇ ಹೊಣೆ ಮಾಡುತ್ತೇವೆ ಎಂದು ಸೂಚಿಸಿದ್ದೇವೆ. https://youtu.be/z5a_n0B1QCc?si=y0PT4bDOR5v2hkkH ಈ ಘಟನೆಯನ್ನು ನಿರ್ವಹಣೆ ಮಾಡುವಲ್ಲಿ ಪೊಲೀಸರು ಎಡವಿದ್ದಾರೆ. ಹೀಗಾಗಿ ಇನ್ ಸ್ಪೆಕ್ಟರ್ ಅವರನ್ನು ಅಮಾನತು ಮಾಡಿದ್ದೇವೆ. ಅವರ ಮೇಲೆ ತನಿಖೆ ನಡೆಯುತ್ತಿದೆ. ವರದಿ ಕೊಡಲು ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನೂ ಇನ್ನೂ ಗೃಹ ಸಚಿವರು ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ. ಘಟನೆಯನ್ನು ಯಾರಾದರೂ ಸಮರ್ಥನೆ ಮಾಡುತ್ತೇವಾ? ಕಾರಣಕರ್ತರನ್ನು ಬಂಧನ ಮಾಡುತ್ತೇನೆ. ಹೇಳಿಕೆಗಳನ್ನು ಬಿಜೆಪಿಗರು ಕೊಡುವುದು ಸಹಜ. ನನಗೂ ಮಾತನಾಡಲು ಬರುತ್ತೆ. ನನ್ನ ಮಾತನ್ನು ಟ್ವಿಸ್ಟ್ ಮಾಡಲಾಗಿದೆ ಎಂದರು ಈ ಘಟನೆ ಪೂರ್ವನಿಯೋಜಿತ…

Read More

ಬೆಂಗಳೂರು: ಕೆಲಸ‌ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆ ಕೆಲಸದಾಕೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/3L4BWSDeskw?si=SeS27PfdqVtui4_6 ಬಿಹಾರ ಮೂಲದ ಪಿಂಕಿದೇವಿ ಬಂಧಿತ ಆರೋಪಿತೆಯಾಗಿದ್ದು, ಸಾಫ್ಟ್ ವೇರ್ ಉದ್ಯೋಗಿ ಮನೆಯಲ್ಲಿ ಕೆಲಸಕ್ಕಿದ್ದ ಪಿಂಕಿದೇವಿ, ಕೆಲಸ ಮಾಡಿಕೊಂಡೇ ಮನೆಯಲ್ಲಿರುವ ಚಿನ್ನಾಭರಣಗಳನ್ನು ಕದ್ದು ಬಿಹಾರಕ್ಕೆ ಪರಾರಿಯಾಗಿದ್ದಳು. ಇನ್ನೂ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಬಿಹಾರಕ್ಕೆ ತೆರಳಿ ಆರೋಪಿತೆಯನ್ನ ಬಂಧಿಸಿ ಕರೆತಂದಿದ್ದಾರೆ. ಇನ್ನೂ ಬಂಧಿತ ಆರೋಪಿತೆಯಿಂದ 54 ಲಕ್ಷ ಮೌಲ್ಯದ 570 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ವೈಟ್ ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More