ಭಿಷ್ಮನ ನಿಜವಾದ ಹೆಸರೇನು..? | Prajaa Quiz Poll | Prajaatv Kannada ವಿರಾಟ ಕರ್ಣ ಪಲ್ಲವ ರಾಜ ದೇವವ್ರತ
Author: Prajatv Kannada
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಮರು ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಆಡಳಿತಾರೂಢ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತರು ಬೃಹತ್ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಅವರ ವಿರುದ್ಧ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಇಲ್ಲಸಲ್ಲದ ಆರೋಪ ಹೊರಿಸಿದ್ದಾರೆ. ವಿಪಕ್ಷಗಳ ಧ್ವನಿ ಹತ್ತಿಕ್ಕಲಾಗುತ್ತಿದೆ. ಪ್ರಧಾನಿ ಷರೀಫ್ ಅವರು ರಾಜೀನಾಮೆ ನೀಡಬೇಕು ಎಂದು ಆರೋಪಿಸಿ ಪಿಟಿಐ ಕಾರ್ಯಕರ್ತರು ಕೆಲ ದಿನಗಳಿಂದ ಚಳವಳಿ ಆರಂಭಿಸಿದ್ದಾರೆ. ಮೂರು ದಿನಗಳ ಹಿಂದೆ ಇಮ್ರಾನ್ ಖಾನ್ ಪಕ್ಷದ ಕಾರ್ಯಕರ್ತರು, ನಾಯಕರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಬಂಧಿಸಲಾಗಿದೆ. ಇದರಿಂದ ಹೋರಾಟ ಮತ್ತಷ್ಟು ಕಾವು ಪಡೆದಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಕ್ಷವು ಆರೋಪಿಸಿದ್ದಾಗಿ ಅಲ್ಲಿನ ಮಾಧ್ಯಮಗಳು…
ಕಳೆದ ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ಯುವ ನಟ ಶವವಾಗಿ ಪತ್ತೆಯಾಗಿದ್ದಾರೆ. ಮೆಕ್ಸಿಕನ್ ನಟ ಜೇಮ್ಸ್ ಹಾಲ್‌ಕ್ರಾಫ್ಟ್ ಅವರು ಕೆಲ ದಿನಗಳ ಹಿಂದೆ ಮೆಕ್ಸಿಕೋ ಸಿಟಿಯಿಂದ ನಾಪತ್ತೆಯಾಗಿದ್ದರು. ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಜೇಮ್ಸ್ ಅವರಿಗೆ ಕೇವಲ 26 ವರ್ಷ ವಯಸ್ಸಾಗಿತ್ತು. ಮೂಲಗಳ ಪ್ರಕಾರ ಸೆ.3 ರಿಂದ ಜೇಮ್ಸ್ ಹಾಲ್‌ಕ್ರಾಫ್ಟ್ ನಾಪತ್ತೆಯಾಗಿದ್ದರು. ಅವರು ಯಾವುದೇ ಕುಟುಂಬದ ಸದಸ್ಯರೊಂದಿಗೆ ಸಂಪರ್ಕ ಹೊಂದಿರಲಿಲ್ಲ. ಈ ಸಂಬಂಧ ನಟನ ಕುಟುಂಬಸ್ಥರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಇದೀಗ ಅವರು ಶವವಾಗಿ ಪತ್ತೆಯಾಗಿದ್ದು, ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನೀಡಿದೆ. ನಟನ ಸಾವಿನ ಹಿಂದಿನ ಕಾರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಯಾದಗಿರಿ: ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷ ಅಲ್ಲ, ಹತ್ತು ವರ್ಷ ಸಿಎಂ ಆಗಿ ಅಧಿಕಾರದಲ್ಲಿರ್ತಾರೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. https://youtu.be/eBEJVeQy14s?si=yvVCIBqovPQROklp ಸಿದ್ದರಾಮಯ್ಯ ಮುಂದಿನ ಐದು ವರ್ಷ ಅಲ್ಲ, ಹತ್ತು ವರ್ಷ ಸಿಎಂ ಆಗಿ ಅಧಿಕಾರದಲ್ಲಿರ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರಿಗೆ ಹೆಚ್ಚಿನ ಜನ ಬೆಂಬಲವಿದೆಜನ ಬೆಂಬಲವಿರೋದಕ್ಕೆ ಬಿಜೆಪಿ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯುವ ಯತ್ನ ಮಾಡಿದ್ರೂ ಯಾರೂ ಬಿಜೆಪಿಗೆ ಹೋಗುತ್ತಿಲ್ಲ. ಈ ಹಿಂದೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ 17 ಶಾಸಕರನ್ನು ಖರೀದಿ ಮಾಡಿ ಬಿಜೆಪಿ ಸರಕಾರ ರಚನೆ ಮಾಡಿತ್ತು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೂದಿಗೆರೆ ಗ್ರಾಮದ ಮಂಚಪ್ಪನಹಳ್ಳಿ ಗೇಟ್ ಬಳಿ ನಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ವಾಕ್ಸ್ ವ್ಯಾಗನ್ ಕಾರಿನಲ್ಲಿ ಕಾಣಿಸಿಕೊಂಡಿರುವ ಬೆಂಕಿಯಾಗಿದ್ದು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಕಾರು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಇಳಿದ ಚಾಲಕ ಕಾಡುಗೋಡಿಯಿಂದ ದೊಡ್ಡಬಳ್ಳಾಪುರದ ಕಡೆ ತೆರಳುತ್ತಿದ್ದ ಕಾರು ದೊಡ್ಡಬಳ್ಳಾಪುರದ ಲೋಕೇಶ್ ಎಂಬುವವರಿಗೆ ಸೇರಿದ ಕಾರು ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ ಕಾಂಕ್ರಿಟ್ ಮಿಕ್ಸರ್ ಲಾರಿಯಲ್ಲಿನ ನೀರಿನಿಂದ ಬೆಂಕಿ ನಂದಿಸಿದ ಸ್ಥಳೀಯರು ಬೆಂಕಿ ನಂದಿಸಿದ ಬಳಿಕ ಬಂದ ಅಗ್ನಿಶಾಮಕ ದಳ ಕೆಲ ಕಾಲ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪರ್ಯಾಯ ರಸ್ತೆ ಸಂಚಾರದಲ್ಲಿ ವ್ಯತ್ಯಯ
ಸಾಮಾನ್ಯವಾಗಿ ದಂತ ವೈದ್ಯರ ಬಳಿಕ ಹಲ್ಲು ಕೀಳಿಸಲು ಹೋದಕ್ಕೆ ಒಂದೋ ಅಥವಾ ಎರಡು ಹಲ್ಲೋ ಕೀಳುತ್ತಾರೆ. ಆದರೆ ಇಲ್ಲೊಬ್ಬ ವೈದ್ಯ ಒಂದೇ ದಿನ 23 ಹಲ್ಲುಗಳನ್ನು ಕಿತ್ತು 12 ಹೊಸ ಹಲ್ಲುಗಳನ್ನು ಫಿಕ್ಸ್ ಮಾಡಿದ್ದಾನೆ. ಇದರಿಂದ ನೋವು ತಾಳಲಾರದೆ ವ್ಯಕ್ತಿ ಮೃತಪಟ್ಟ ಘಟನೆ ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಜಿನ್ಹುವಾದಲ್ಲಿ ನಡೆದಿದೆ. ಈ ಬಗ್ಗೆ ಯುವತಿ ಆನ್‌ಲೈನ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಯುವತಿಯ ತಂದೆ ಹುವಾಂಗ್ ಅವರು ಆಗಸ್ಟ್ 14 ರಂದು ಯೋಂಗ್‌ಕಾಂಗ್ ಡ್ಯೂ ಡೆಂಟಲ್ ಆಸ್ಪತ್ರೆಯಲ್ಲಿ ಸುದೀರ್ಘ ದಂತ ಚಿಕಿತ್ಸೆಗೆ ಒಳಗಾಗಿದ್ದರು. ಅಲ್ಲಿನ ದಂತ ಶಸ್ತ್ರಚಿಕಿತ್ಸಕರು “ತಕ್ಷಣದ ಮರುಸ್ಥಾಪನೆ” ವಿಧಾನವನ್ನು ಅನುಸರಿಸಿದರು. ಈ ಕಾರ್ಯವಿಧಾನದ ಭಾಗವಾಗಿ 23 ಹಲ್ಲುಗಳನ್ನು ಹೊರತೆಗೆಯಲಾಯಿತು. ಇದಲ್ಲದೇ 12 ಹೊಸ ಹಲ್ಲುಗಳನ್ನು ಅಳವಡಿಸಲಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದ ಶಸ್ತ್ರಚಿಕಿತ್ಸಕ ಐದು ವರ್ಷಗಳ ಸೇವೆಯಲ್ಲಿ ಅನುಭವ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ರೂಟ್ ಕೆನಾಲ್ ಚಿಕಿತ್ಸೆ, ಹೊರತೆಗೆಯುವಿಕೆ ಮತ್ತು ಇತರ ಹಲ್ಲಿನ ಚಿಕಿತ್ಸೆಗಳಲ್ಲಿ ಹೆಚ್ಚು ನುರಿತ. ಆದರೆ ಚಿಕಿತ್ಸೆಯ ನಂತರ,…
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಮೇ 15ರಂದು ಆಯೋಜಿಸಿದ್ದ ರೇವ್ ಪಾರ್ಟಿ ಪ್ರಕರಣ ಸಾಕಷ್ಟು ಸುದ್ದಿಯಾಗಿತ್ತು. ಈ ಪ್ರಕರಣದಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಇತ್ತೀಚೆಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ತೆಲುಗು ನಟಿ ಹೇಮಾ ಡ್ರಗ್ಸ್ ಸೇವನೆ ಮಾಡಿರುವುದು ಕನ್ಪಾರ್ಮ್ ಆಗಿದೆ. ಬೆಂಗಳೂರಿನಲ್ಲಿ ನಡೆದ ಈ ರೇವ್ ಪಾರ್ಟಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ವಾಸು ಎಂಬಾತ ಈ ಪಾರ್ಟಿಯನ್ನು ಆಯೋಜನೆ ಮಾಡಿದ್ದು,\ಈ ಪಾರ್ಟಿಗೆ ಅನೇಕ ಸೆಲೆಬ್ರಿಟಿಗಳಿಗೆ ಆತ ಆಹ್ವಾನ ನೀಡಿದ್ದ. ಈ ಈವೆಂಟ್ನಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿ ಆಗಿದ್ದರು. ಆದರೆ ವಿಚಾರಣೆ ವೇಳೆ ನಟಿ ತಾನು ರೇವ್ ಪಾರ್ಟಿಯಲ್ಲಿ ಇರಲೇ ಇಲ್ಲ ಎಂದು ಹೇಳಿದ್ದರು. ಅಲ್ಲದೆ ಘಟನೆ ನಡೆದ ಸಂದರ್ಭದಲ್ಲಿ ನಾನು ನನ್ನ ಮನೆಯಲ್ಲೇ ಇದ್ದೆ ಎಂದಿದ್ದರು. ಆದ್ರೆ ಬಳಿಕ ನಟಿ ತಾನು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾಗಿ ತಪ್ಪೊಪ್ಪಿಕೊಂಡಿದ್ದರು. ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಪ್ರಕರಣದ ತನಿಖೆ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ರನ್ನು ನೋಡಲು ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರು ದೀನಾಕರ್ ತೂಗುದೀಪ್ ಆಗಮಿಸಿದ್ದರು. ಈ ಮಧ್ಯೆ ದರ್ಶನ್ ಗೆ ಅಮ್ಮನನ್ನು ನೋಡಲು ಮನ ಹಂಬಲಿಸಿದೆ. ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ ಇಂದಿಗೆ 15 ದಿನ. ಪೊಲೀಸರು ಪ್ರಕರಣ ಸಂಬಂಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದೇ ವಿಚಾರವಾಗಿ ದರ್ಶನ್ ಜೊತೆ ಮಾತುಕತೆ ನಡೆಸಲು ಅವರ ಕುಟುಂಬ ಬಳ್ಳಾರಿ ಜೈಲಿಗೆ ಆಗಮಿಸಿತ್ತು. ಈ ವೇಳೆ ವಿಜಯಲಕ್ಷ್ಮಿ, ಸಹೋದರ ದಿನಕರ ತೂಗುದೀಪ ಹಾಗೂ ವಕೀಲರ ಜೊತೆ ದರ್ಶನ್ ಮಾತುಕತೆ ನಡೆಸಿದ್ದಾರೆ. ಬರೋಬ್ಬರಿ 24 ನಿಮಿಷಗಳ ಕಾಲ ಮಾತುಕತೆ ನಡೆದಿದೆ ಎನ್ನಲಾಗಿದೆ. ಸಹೋದರನ ಬಳಿ ಅಮ್ಮನ ಬಗ್ಗೆ ದರ್ಶನ್ ಕೇಳಿದ್ದಾರೆ. ಅಮ್ಮ ಬರಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ನಿನ್ನೆಯೇ ತಾಯಿ ಮೀನಾ ತೂಗುದೀಪ ಜೈಲಿಗೆ ಬಂದು ಮಾತನಾಡಿಸಿಕೊಂಡು ಹೋಗಬೇಕಿತ್ತು. ಕಾರಣಾಂತರಗಳಿಂದ ನಿನ್ನೆಯ ಜೈಲು ಭೇಟಿ ಕ್ಯಾನ್ಸಲ್ ಆಗಿದೆ. ಇವತ್ತು…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಇದರ ಬೆನ್ನಲ್ಲೇ ನಟ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದರ್ಶನ್ ಸಹೋದರ ದಿನಕರ್ ಕೂಡ ಆಗಮಿಸಿದ್ದಾರೆ. ಚಾರ್ಜ್‌ಶೀಟ್ ಪ್ರತಿ ಸಮೇತ ಇಬ್ಬರು ವಕೀಲರೊಂದಿಗೆ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೈಲಿಗೆ ಭೇಟಿ ನೀಡಿ, ದರ್ಶನ್ ಜೊತೆ ಕಾನೂನು ಸಮರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಪತಿಗಾಗಿ ಡ್ರೈ ಫ್ರೂಟ್ಸ್, ಬಿಸ್ಕೆಟ್ ಹಾಗೂ ದೇವರ ಪ್ರಸಾದೊಂದಿಗೆ ಆಗಮಿಸಿದ್ದಾರೆ. ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್‌ರನ್ನು ಬಂಧಿಸಿದ್ದರು.
‘ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಮಾಜಿ ಪ್ರೇಯಸಿ ಎಫ್‌ಐಆರ್ ದಾಖಲಿಸಿದ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೆಲ್ಲಾ ಸುಳ್ಳು ಸುದ್ದಿ ಎಂದು ಯುವತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನೂ 3 ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ಕೊಡುತ್ತೇನೆ ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೀವು ನೋಡುತ್ತಿರುವುದು ಸುಳ್ಳು ಸುದ್ದಿ. ನಾನು ದೂರು ನೀಡಿರುವುದು ನಮ್ಮ ರೀಲ್ಸ್ ಮತ್ತು ಫೋಟೋಗಳನ್ನು ಗೂಗಲ್‌ನಿಂದ ಡಿಲೀಟ್ ಮಾಡುವುದಕ್ಕೆ. ದಯವಿಟ್ಟು ಫೇಕ್ ನ್ಯೂಸ್ ಹರಡಿಬೇಡಿ ಎಂದು ಯುವತಿ ಬರೆದುಕೊಂಡಿದ್ದಾರೆ. ಯಾರೆಲ್ಲಾ ಹರಿದಾಡುತ್ತಿರುವ ನ್ಯೂಸ್ ನೋಡಿಕೊಂಡು ಕಾಮೆಂಟ್ ಮಾಡುತ್ತಿದ್ದೀರಿ ದಯವಿಟ್ಟು ಮೂರು ದಿನಗಳ ಕಾಯಬೇಕಿದೆ. ಈ ಬಗ್ಗೆ ಕ್ಲ್ಯಾರಿಟಿ ಕೊಡಲು ನಿಮ್ಮ ಮುಂದೆ ಬರುತ್ತೀನಿ ಎಂದು ಯುವತಿ ಹೇಳಿದ್ದಾರೆ. ವರುಣ್ ಆರಾಧ್ಯ ವಿರುದ್ಧ ನೆಟ್ಟಿಗರು ತಿರುಗಿಬಿದ್ದ ಕಾರಣ ಯುವತಿ ಉಲ್ಟಾ ಹೊಡೆದ್ರಾ? ಅಸಲಿಗೆ ಎನಾಗಿದೆ ಎಂಬುದನ್ನು ಕಾಯಬೇಕಿದೆ. ಅಂದಹಾಗೆ, ನಟ ವರುಣ್ ಆರಾಧ್ಯ ವಿರುದ್ಧ ಸೆ.7ರಂದು ಬೆಂಗಳೂರು ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್…