Author: Prajatv Kannada

ಇಂದು ಸೆಪ್ಟೆಂಬರ್ 15 ಇಂಜಿನಿಯರ್ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್‌ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್‌. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಸ್ಮರಣಾರ್ಥ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ಇಂಜಿನಿಯರ್ ದಿನವನ್ನು ಮೊದಲ ಬಾರಿಗೆ 1968, ಸೆಪ್ಟೆಂಬರ್ 15 ರಂದು ಆಚರಣೆ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ಸೆಪ್ಟೆಂಬರ್ 15 ರಂದು ಭಾರತದಲ್ಲಿ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಇಂಜಿನಿಯರ್‌ ದಿನವನ್ನು ಆಚರಣೆ ಮಾಡುವ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು ಮತ್ತು ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳಲಾಗುತ್ತದೆ. ಸರ್‌. ಎಂ. ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15,1861 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸಾಧನೆ ಯಾವಾಗಲು ಶಾಶ್ವತವಾಗಿರುತ್ತದೆ. ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ…

Read More

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು. ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ…

Read More

ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್ ಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದ್ದು ರಿಲೀಸ್ ಗೂ ಮುನ್ನ ದೇವರ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಮಾಡಿದೆ. ಈ ಚಿತ್ರ ಕೇವಲ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಭರ್ಜರಿ ಗಳಿಕೆ ಮಾಡುತ್ತಿದೆ. ಅಮೆರಿಕದಲ್ಲಿ ಈ ಸಿನಿಮಾ ಈಗಾಗಲೇ 8 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಮೆರಿಕದಲ್ಲಿ ತೆಲುಗು ಸಿನಿಮಾಗಳಿಗೆ ಸಖತ್ ಬೇಡಿಕೆ ಇದೆ. ಸಿನಿಮಾ ರಿಲೀಸ್​ಗೂ ಕೆಲ ವಾರ ಮೊದಲೇ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಪ್ರಾರಂಭಿಸಲಾಗುತ್ತದೆ. ಈಗ ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾಗೂ ಅಮೆರಿಕದಲ್ಲಿ ಬುಕಿಂಗ್ ಆರಂಭ ಆಗಿದ್ದು 32 ಸಾವಿರ ಟಿಕೆಟ್​ಗಳು ಮಾರಾಟ ಆಗಿವೆ. ಇದರಿಂದ 8 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದು, ಈ ಮೂಲಕ ಸಿನಿಮಾ ದಾಖಲೆ ಬರೆದಿದೆ. ಕೆಲವು ವರದಿಗಳ ಪ್ರಕಾರ ಅಮೆರಿಕದ 276 ಲೊಕೇಶನ್​ಗಳಲ್ಲಿ ಈ ಸಿನಿಮಾಗೆ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಭಾರತದ…

Read More

ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. https://youtu.be/5CYRH1pLMSk?si=d6FzZ8kOwDdviuSB ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದರು. ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದಿದ್ದಾರೆ. ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ…

Read More

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾಗಿದೆ. ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿದ್ದ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ಮಾಡಿದ್ದಾರೆ. ಅಹಂಕಾರ, ದರ್ಪ ತೋರಿಸಿ ಪದೇ ಪದೇ ಅಸಭ್ಯ ವರ್ತನೆ ಮಾಡುತ್ತಿರುವ ದರ್ಶನ್‌ ಗೆ ಜೈಲಾಧಿಕಾರಿಗಳು ಪಾಠ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜೈಲಿನಲ್ಲಿ ಇರುವಷ್ಟು ದಿನ ಜೈಲು ನಿಯಮಗಳನ್ನು ಪಾಲನೆ ಮಾಡಬೇಕು. ಕೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಖಾರವಾಗಿ ಹೇಳಿದ್ದಾರೆ. ಪದೇ ಪದೇ ಸೌಲಭ್ಯಗಳಿಗಾಗಿ ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಸಾಧ್ಯ ಅಷ್ಟು ಮಾತ್ರ ಕೊಡುತ್ತೇವೆ. ಹೆಚ್ಚಿನದು ಬೇಕು ಅಂದರೆ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಎಂದು ಜೈಲರ್‌ ಎಚ್ಚರಿಕೆ ನೀಡಿದ್ದಾರೆ ಎಂಬ ವಿಚಾರವನ್ನು ಮೂಲಗಳು ತಿಳಿಸಿವೆ.

Read More

ಮೈಸೂರು: ನಗರದ ಒಳಗೆ ಅಥವಾ ಹೊರಗೆ ಉತ್ತಮ ಜಾಗ ಸಿಕ್ಕರೆ ಒಂದು ಟೌನ್‌ಶಿಪ್‌ ನಿರ್ಮಾಣ ಮಾಡಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಭರವಸೆ ನೀಡಿದರು. ನಗರದ ಅಶೋಕಪುರಂ ಡಾ. ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನದ ದೊಡ್ಡ ಗರಡಿ ಸಂಘದಲ್ಲಿ ಆಯೋಜಿಸಿದ್ದ 112ನೇ ವರ್ಷದ ಅಂಬಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಶೋಕಪುರಂನಲ್ಲಿ ವಾಸಿಸುತ್ತಿರುವ ಬಡವರಿಗೆ ಮನೆ ನಿರ್ಮಾಣ ಸೇರಿ ಮೂಲ ಸೌಕರ್ಯ ಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದಾಗ ಕಲಬುರಗಿಯಲ್ಲಿ ದಲಿತರಿಗಾಗಿ ಒಂದೇ ಕಡೆಯಲ್ಲಿ 2 ಸಾವಿರ ಮನೆ ನಿರ್ಮಾಣ ಮಾಡುತ್ತಿರುವ ವಿಚಾರವನ್ನು ಹಂಚಿಕೊಂಡರು. ಅದೇ ರೀತಿ ಮೈಸೂರಿನ ಅಶೋಕಪುರಂನ ಜನರಿಗೂ ಮಾಡುವಂತೆ ಹೇಳಿದರು. ಈ ಬಗ್ಗೆ ಚಿಂತನೆ ನಡೆಸಲಾಗಿದೆ,ಎಂದು ಹೇಳಿದರು. ಅಶೋಕಪುರಂನಲ್ಲಿ ಕೆಲಸಗಳಾಗದೆ ಅಭಿವೃದ್ಧಿ ಕುಂಠಿತವಾಗಿದೆ. ಅಶೋಕಪುರಂನ ಪ್ರಮುಖ ಸಮಸ್ಯೆಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.

Read More

ಹುಬ್ಬಳ್ಳಿ:ರೈತರಿಗೆ ಸಹಾಯ ಮಾಡುವ ಹೆಸರಲ್ಲಿ ಹಾಲಿನ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದೆ. ಆದರೆ ಪ್ರೋತ್ಸಾಹ ದರವನ್ನು ಎರಡು ಮೂರು ತಿಂಗಳು ಕೊಟ್ಟು ಬಂದ್ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿರುವುದನ್ನು ನೋಡಿದರೇ ಸರ್ಕಾರ ದಿವಾಳಿ ಎಂಬುವುದಕ್ಕೆ ಇದೊಂದೆ ಸೂಕ್ತ ನಿದರ್ಶನವಾಗಿದೆ. ಮುಡಾ, ವಾಲ್ಮೀಕಿ ನಿತ್ಯವೂ ಒಂದು ಹಗರಣ. ಕಾಂಗ್ರೆಸ್ ಸರ್ಕಾರ ಹಗರಣದ ಸಾಮ್ರಾಜ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ರಾಜ್ಯ ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಭ್ರಷ್ಟಾಚಾರ ಬಿಟ್ಟರೇ ಬೇರೆ ಏನನ್ನೂ ಮಾಡುತ್ತಿಲ್ಲ. ಸರ್ಕಾರದ ವ್ಯವಸ್ಥೆ ಕುಸಿದು ಬಿದ್ದಿದೆ. ಈ ನಿಟ್ಟಿನಲ್ಲಿ ಕೆಎಂಎಫ್ ಕೂಡ ಅದೇ ದಾರಿಯಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದರು.

Read More

ಬೆಂಗಳೂರು: ಮುಡಾ ಸೈಟ್ ಹಗರಣದ ಸುದ್ದಿ ಜೋರಾಗುತ್ತಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಮೇಲೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. https://youtu.be/62fOOReZjd4?si=aKF3X0SDNpCLGwGv ಮೈಸೂರಿನಲ್ಲಿ ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗವನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅ ಜಾಗದಲ್ಲಿ ಡಿಸಿಎಂ ಆಗಿದ್ದಾಗ ಮನೆ ಕಟ್ಟಿದ್ದಾರೆ ಅಂತ ಸಿದ್ದರಾಮಯ್ಯ ಮೇಲೆ ನೇರ ಆರೋಪ ಮಾಡಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 15 ಸೈಟ್ ಅಕ್ರಮವಾಗಿ ಪಡೆದ ಪ್ರಕರಣ ಒಂದು ಕಡೆಯಾದರೆ ಇದು ಇನ್ನೊಂದು ಅಕ್ರಮ. ಸಿದ್ದರಾಮಯ್ಯ ಡಿಸಿಎಂ ಆಗಿ ಮೈಸೂರಿನಲ್ಲಿ ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ಸಿದ್ದರಾಮಯ್ಯ ಅವರೇ ಮನೆ ಕಟ್ಟಿದ್ದೀರಿ? ಬೇಕಾ ದಾಖಲೆ ಎಂದು ಪ್ರಶ್ನಿಸಿದರು. ದಲಿತನಿಗೆ ಹಂಚಿಕೆಯಾದ ಮುಡಾ ಸೈಟ್‌ನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮುಡಾ ಕೇಸ್‌ ಮಾತ್ರ ಅಲ್ಲ. ಮೈಸೂರಿನಲ್ಲಿ ಸೀರಿಸ್ ಆಫ್ ಅಕ್ರಮ ಕೇಸ್ಮುಡಾಗೆ 24 ಸಾವಿರ ರೂ. ಪಾವತಿಸಿ ದಲಿತ ವಿಕಲಚೇತನ ಮುಡಾದಿಂದ ಜಾಗ ಪಡೆದಿದ್ದರು. ಅ ಜಾಗವನ್ನು ಸಾಕಮ್ಮ ಹೆಸರಿ‌ನಲ್ಲಿ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 3 ತಿಂಗಳು ಕಳೆದಿದೆ. ತನಿಖೆ ಕೊನೆಯ ಹಂತ ತಲುಪಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಮಧ್ಯೆ ದರ್ಶನ್ ಹೊರ ಬರುವುದನ್ನೇ ಅವರ ಅಭಿಮಾನಿಗಳು ಕಾಯ್ತಿದ್ದಾರೆ. ಸದ್ಯ ದರ್ಶನ್ ಅಭಿಮಾನಿಯೊಬ್ಬ ಜೋಕುಮಾರ ಸ್ವಾಮಿ ಬಳಿ ಭವಿಷ್ಯ ಕೇಳಿದ್ದು ದರ್ಶನ್ ಹೊರ ಬರುವುದು ಯಾವಾಗ ಎಂದು ಜೋಕುಮಾರ್ ಸ್ವಾಮಿ ಹೇಳಿದ್ದಾರೆ. ದರ್ಶನ ಸಿನಿಮಾ ಹಿಟ್ ಆಗುವ ಬಗ್ಗೆ, ದರ್ಶನ್ ಜೈಲಿಂದ ಬಿಡುಗಡೆಯಾಗುವ ಬಗ್ಗೆ, ಮುಂದಿನ ಜೀವನ ಬಗ್ಗೆ ಅಭಿಮಾನಿ ಜೋಕುಮಾರ್ ಸ್ವಾಮಿ ಬಳಿ ಕೇಳಿದ್ದಾರೆ. ಜೋಕುಮಾರ ಸ್ವಾಮಿಯ ಬುಟ್ಟಿ ಎತ್ತಿ ಪ್ರಶ್ನೆ ಕೇಳಿದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜೈಲಿಂದ ಮೂರು ತಿಂಗಳಲ್ಲಿ ದರ್ಶನ್ ಹೊರಗೆ ಬರುತ್ತಾರೆ. ಬಳಿಕ ಡೆವಿಲ್ ಸಿನಿಮಾ ಹಿಟ್ ಆಗುವ ಬಗ್ಗೆಯೂ ಪಾಸಿಟಿವ್ ಹೇಳಿದ್ದಾರೆ. ಇನ್ನೂ ದರ್ಶನ ಹೊರ ಬಂದ ಮೇಲೆ ಹೇಗೆ ಎನ್ನುವ ಪ್ರಶ್ನೆಯನ್ನೂ ಕೇಳಲಾಯಿತು. ಗಣೇಶನ ಬಳಿಕ ಭೂಮಿಗೆ ಬರುವ ಜೋಕುಮಾರ ಸ್ವಾಮಿ ಬರುತ್ತಾನೆ ಎಂಬ…

Read More

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಗೋವಿಂದ್ ಇಂದಿಗೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಗೋವಿಂದ್ ಗೆ ಅದ್ಯಾವ ಮಟ್ಟಿಗೆ ಅಭಿಮಾನಿಳು ಇದ್ದರು ಅನ್ನೋದನ್ನು ಗೋವಿಂದ್ ಪತ್ನಿ ಸುನೀತಾ ಹೇಳಿದ್ದಾರೆ. ಗೋವಿಂದ್ ಮೇಲಿನ ಪ್ರೀತಿಯಿಂದ ಮಿನಿಸ್ಟರ್ ಮಗಳು 20 ದಿನಗಳ ಕಾಲ ತಮ್ಮ ಮನೆಯಲ್ಲಿ ಇದ್ದರು ಎಂಬುದನ್ನು ಸುನೀತಾ ರಿವೀಲ್ ಮಾಡಿದ್ದಾರೆ. ನಟ ಗೋವಿಂದ ಅವರಿಗೆ ಮಹಿಳಾ ಅಭಿಮಾನಿಗಳು ಹೆಚ್ಚು. ಹೀಗೆಯೇ ಅಭಿಮಾನಿಯೊಬ್ಬರು ನಟ ಗೋವಿಂದ ಮನೆಗೆ ಬಂದು ನಾನು ಮನೆಗೆಲಸ ಮಾಡುತ್ತೇನೆ ಎಂದು ಬಂದು ಅವರ ಮನೆ ಸೇರಿಕೊಳ್ಳುತ್ತಾರೆ. ಆ ಯುವತಿಯನ್ನು ನೋಡಿದ ಸುನಿತಾ ಅವರಿಗೆ ಏನೋ ಒಂದು ಅನುಮಾನ ಬರುತ್ತದೆ. ಹುಡುಗಿ ನೋಡಲು ಒಳ್ಳೆಯ ಮನೆತನದಿಂದ ಬಂದಂತಿದೆ. ಮನೆಗೆಲಸಕ್ಕೆ ಬರುತ್ತೇನೆ ಎಂದು ಮನೆಗೆ ಆಗಮಿಸಿದ ಆಕೆಗೆ ಅಸಲಿಗೆ ಮನೆಗೆಲಸ ಹೇಗೆ ಮಾಡುವುದು ಅಂತಲೇ ಗೊತ್ತಿರುವುದಿಲ್ಲ. ಆದರೂ ಅವರ ಜೊತೆ 20 ರಿಂದ 22 ದಿನಗಳ ಕಾಲ ಇದ್ದು ಹೋಗಿದ್ದಾರೆ. ಕೊನೆಗೆ ಗೊತ್ತಾಗಿದ್ದು ಆ ಯುವತಿ ಮಿನಿಸ್ಟರ್​ ಒಬ್ಬರ ಪುತ್ರಿ ಹಾಗೂ ನಟ…

Read More