ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. https://youtu.be/DK7cBVCWse8?si=OShTCY083O1c_OPT ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದರು. ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದಿದ್ದಾರೆ. ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ ಇಂತಹ ಪದ ಬಳಸಲ್ಲ.…
Author: Prajatv Kannada
ಹುಬ್ಬಳ್ಳಿ: ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿಯಲ್ಲಿರುವ ಗ್ರಾಹಕರಿಗಾಗಿ ಮೂರು ದಿನಗಳ ವಿಶೇಷ ಆಭರಣಗಳ ಪ್ರದರ್ಶನ ಮತ್ತು ಮಾರಾಟವನ್ನು ಸೆ 13 ರಿಂದ 16 ರವರೆಗೆ ಹುಬ್ಬಳ್ಳಿಯ ಫೆರ್ನ್ ರೆಸಿಡೆನ್ಸಿಯಲ್ಲಿ ನಡೆಯಲಿದೆ. ಶುದ್ಧ ಚಿನ್ನ ಮತ್ತು ರತ್ನಗಳು ಹಾಗೂ ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹವನ್ನು ವಿಶಿಷ್ಠ ಶ್ರೇಣಿಯೊಂದಿಗೆ ಪ್ರದರ್ಶಿಸಲಿದೆ. ಪ್ರದರ್ಶನವನ್ನು ಹುಬ್ಬಳ್ಳಿಯ ಮಹಾಪೌರ ರಾಮಣ್ಣ ಬಡಿಗೇರ ಶಿಲ್ಪಾ ಶೆಟ್ಟರ್ ಉದ್ಘಾಟಿಸಿದರು. ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ನ ಮಾಜಿ ಅಧ್ಯಕ್ಷರು ಮತ್ತು ಧಾರವಾಡದ ಸುವರ್ಣ ಶೈಕ್ಷಣಿಕ ಟ್ರಸ್ಟ್ನ ಸಂಸ್ಥಾಪಕಾರದ ಸವಿತ ವಿ.ಅಮರಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ನ ಆಭರಣ ಸಂಗ್ರಹಗಳು ವೈಡೂರ್ಯ, ಸಿಟ್ರಿನ್, ಮುತ್ತುಗಳು, ನೀಲ, ಮಾಣಿಕ್ಯಗಳಂತಹ ಅಪರೂಪದ ವಜ್ರಗಳ ಸೂಕ್ಷ್ಮ ವಿನ್ಯಾಸಗಳೊಂದಿಗೆ ಸೊಬಗು ಮತ್ತು ಕ್ಲಾಸಿಕ್ ಶೈಲಿಯ ಸಮ್ಮಿಲನವಾಗಿವೆ. ನಿಮ್ಮ ವ್ಯಕ್ತಿತ್ವದತ್ತ ಗಮನ ಸೆಳೆಯಲು ಮತ್ತು ಅಬ್ಬರದ ಚಿಕ್ ಆಭರಣಗಳೊಂದಿಗೆ ನಿಮ್ಮ ವಸ್ತ್ರವಿನ್ಯಾಸಕ್ಕೆ ಸರಿಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಸಿಕೆಸಿಯಿಂದ crash.club ಲ್ಯಾಬ್ ಗ್ರೋನ್…
ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಇನ್ನೂ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿದ್ದ ಕಿಲ್ಲಿಂಗ್ ಸ್ಟಾರ್ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್ ಮಾಡಿದ್ದಾರೆ. ಅಹಂಕಾರ, ದರ್ಪ ತೋರಿಸಿ ಪದೇ ಪದೇ ಅಸಭ್ಯ ವರ್ತನೆ ಮಾಡುತ್ತಿರುವ ದರ್ಶನ್ ಗೆ ಜೈಲಾಧಿಕಾರಿಗಳು ಪಾಠ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜೈಲಿನಲ್ಲಿ ಇರುವಷ್ಟು ದಿನ ಜೈಲು ನಿಯಮಗಳನ್ನು ಪಾಲನೆ ಮಾಡಬೇಕು. ಕೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಖಾರವಾಗಿ ಹೇಳಿದ್ದಾರೆ. ಪದೇ ಪದೇ ಸೌಲಭ್ಯಗಳಿಗಾಗಿ ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಸಾಧ್ಯ ಅಷ್ಟು ಮಾತ್ರ ಕೊಡುತ್ತೇವೆ. ಹೆಚ್ಚಿನದು ಬೇಕು ಅಂದರೆ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಎಂದು ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂಬ ವಿಚಾರವನ್ನು ಮೂಲಗಳು ತಿಳಿಸಿವೆ.
ಹಾಸನ:- ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ಪಾನಮತ್ತನಾಗಿ ಬಂದ ರೌಡಿಶೀಟರ್ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ. 27 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ್ ನಿನ್ನೆ ರಾತ್ರಿ ಗ್ರಾಮದ ಆಟೋ ನಿಲ್ದಾಣದ ಬಳಿ ನಿಂತಿದ್ದ. ಈ ವೇಳೆ ಕಂಠ ಪೂರ್ತಿ ಕುಡಿದು ಸ್ಥಳಕ್ಕೆ ಬಂದಿದ್ದ ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ಗಣೇಶ್ ಜೊತೆ ಜಗಳ ತೆಗೆದಿದ್ದಾನೆ. ಬಳಿಕ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಬಳಿಕ ಆರೋಪಿ ಚಾಕು ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹತ್ಯೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ
ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಅನಾರೋಗ್ಯದಿಂದ CRPF ಯೋಧ ಸಾವನ್ನಪ್ಪಿರುವ ಘಟನೆ ನಡೆದಿದೆ. ರವಿಶಂಕರ್.ಎಂ.ಆರ್. (39) ಮೃತ ಯೋಧನಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಯೋಧ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿಯಿತ್ತು. ಅರಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧನ ವರದಿ ಸಂಗ್ರಹ ಒಂದು ವಾರದ ಹಿಂದೆ ಹೊಳೆನರಸೀಪುರಕ್ಕೆ ರವಿಶಂಕರ್ ಬಂದಿದ್ದರು. ಇಂದು ಕರ್ತವ್ಯಕ್ಕೆ ತೆರಳಬೇಕಿದ್ದ ರವಿಶಂಕರ್ ಅವರಿಗೆ ಶುಕ್ರವಾರ ಜ್ವರ, ಸುಸ್ತು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ತೆರಳಿದ್ದು ವೈದ್ಯರು ಸರಿಯಾಗಿ ತಪಾಸಣೆ ಮಾಡದೇ ಕೇವಲ ಮಾತ್ರೆ ನೀಡಿ ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಯೋಧ ರವಿಶಂಕರ್.ಎಂ.ಆರ್. ಸಾವನ್ನಪ್ಪಿದ್ದಾರೆ. ಸರಿಯಾದ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ್ಯ ತೋರಿದ್ದು, ರವಿಶಂಕರ್ ಸಾವಿಗೆ ವೈದ್ಯನೇ ನೇರ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಆಸ್ಪತ್ರೆ ಬಳಿ ರವಿಶಂಕರ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೊಳೆನರಸೀಪುರ ನಗರ ಪೊಲೀಸ್ ಠಾಣೆ…
ಬೆಂಗಳೂರು: ಸೋಮವಾರ ಬೆಂಗಳೂರು ನಗರದಲ್ಲಿ ಈದ್ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ನ ರಸ್ತೆ ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಹಬ್ಬದ ದಿನದಂದು ಕೆಲವು ಸೂಚನೆಗಳನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್ ಆದೇಶ ಹೊರಡಿಸಿದೆ. ಸೂಚನೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು. ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು. ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು. ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮೆರವಣಿಗೆಯ ಸಂದರ್ಭದಲ್ಲಿ ಆಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳಬೇಕು. ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾಗಿದೆ. ಕೆಲ ಆರೋಪಿಗಳು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಲು ತಯಾರಾಗಿದ್ದಾರೆ. https://youtu.be/Jumh-Nk_S18?si=d7neK4xc1DxqrvjP ಇನ್ನೂ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಮಾಧ್ಯಮಗಳ ಕ್ಯಾಮರಾಗಳಿಗೆ ಮಧ್ಯದ ಬೆರಳು ತೋರಿಸಿ ಅಸಹ್ಯಕರ ಸಂಜ್ಞೆ ಮಾಡಿದ್ದರು ಎಂಬ ದೃಶ್ಯ ವೈರಲ್ ಬೆನ್ನೆಲ್ಲೆ ನಟದ ಫ್ಯಾನ್‌ಗಳ ಅಧಿಕೃತ ಪುಟ ಡಿ ಕಂಪನಿ ಸ್ಪಷ್ಟನೆ ನೀಡಿದೆ. ಡಿ ಬಾಸ್ ಮಾಡಿದ್ದ ವಿಘ್ನ ಹರ ಮುದ್ರೆ ಹೊರತು ಅಸಹ್ಯಕರ ಸಂಜ್ಞೆಯಲ್ಲ ಎಂದು ಹೇಳಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಕುಟುಂಬಸ್ಥರನ್ನು ಭೇಟಿ ಮಾಡಲು ಸೆಲ್‌ನಿಂದ ಹೊರ ಬರುವ ವೇಳೆ ಕ್ಯಾಮರಾಗಳಿಗೆ ಕೈನ ಮಧ್ಯದ ಬೆರಳನ್ನು ಮುಂದೆ ಮಾಡಿ ಉಳಿದ ಬೆರಳುಗಳನ್ನು ಮಡಿಚಿಟ್ಟುಕೊಂಡಿದ್ದರು. ಇದು ಅಸಹ್ಯಕರ ಸಂಜ್ಞೆ ಎಂದು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದ ಉಂಟು ಮಾಡಿತ್ತು. ದರ್ಶನ್ ನಡುವಳಿಕೆ ಸುಧಾರಿಸಿಲ್ಲ ಮಾಧ್ಯಮಗಳು ತನ್ನ ವಿರುದ್ಧ ಸುದ್ದಿ ಬಿತ್ತರ ಮಾಡುತ್ತಿರುವುದಕ್ಕೆ ಈ ರೀತಿ ಅಸಹನೆ…
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಡಿ BJP ಶಾಸಕ ಮುನಿರತ್ನ ವಿರುದ್ಧ ಎರಡು FIR ದಾಖಲಾಗಿದೆ. https://youtu.be/SIs6zDF-MgU?si=FUlXgmawlvwwEq6r ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿದ್ದು, ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ. ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿದ್ದರು.ಶಾಸಕ ಮುನಿರತ್ನ ಅವರು ಸೆಪ್ಟೆಂಬರ್ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡಿದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು…
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾಗಿದೆ. ಕೆಲ ಆರೋಪಿಗಳು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಲು ತಯಾರಾಗಿದ್ದಾರೆ. ಇನ್ನೂ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಮಾಧ್ಯಮಗಳ ಕ್ಯಾಮರಾಗಳಿಗೆ ಮಧ್ಯದ ಬೆರಳು ತೋರಿಸಿ ಅಸಹ್ಯಕರ ಸಂಜ್ಞೆ ಮಾಡಿದ್ದರು ಎಂಬ ದೃಶ್ಯ ವೈರಲ್ ಬೆನ್ನೆಲ್ಲೆ ನಟದ ಫ್ಯಾನ್‌ಗಳ ಅಧಿಕೃತ ಪುಟ ಡಿ ಕಂಪನಿ ಸ್ಪಷ್ಟನೆ ನೀಡಿದೆ. ಡಿ ಬಾಸ್ ಮಾಡಿದ್ದ ವಿಘ್ನ ಹರ ಮುದ್ರೆ ಹೊರತು ಅಸಹ್ಯಕರ ಸಂಜ್ಞೆಯಲ್ಲ ಎಂದು ಹೇಳಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಕುಟುಂಬಸ್ಥರನ್ನು ಭೇಟಿ ಮಾಡಲು ಸೆಲ್‌ನಿಂದ ಹೊರ ಬರುವ ವೇಳೆ ಕ್ಯಾಮರಾಗಳಿಗೆ ಕೈನ ಮಧ್ಯದ ಬೆರಳನ್ನು ಮುಂದೆ ಮಾಡಿ ಉಳಿದ ಬೆರಳುಗಳನ್ನು ಮಡಿಚಿಟ್ಟುಕೊಂಡಿದ್ದರು. ಇದು ಅಸಹ್ಯಕರ ಸಂಜ್ಞೆ ಎಂದು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದ ಉಂಟು ಮಾಡಿತ್ತು. ದರ್ಶನ್ ನಡುವಳಿಕೆ ಸುಧಾರಿಸಿಲ್ಲ ಮಾಧ್ಯಮಗಳು ತನ್ನ ವಿರುದ್ಧ ಸುದ್ದಿ ಬಿತ್ತರ ಮಾಡುತ್ತಿರುವುದಕ್ಕೆ ಈ ರೀತಿ ಅಸಹನೆ ತೋರಿದ್ದಾರೆ…
ಬೆಂಗಳೂರು:- ಮಗಳಿಂದಲೇ ತಾಯಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.ಈ ಸಂಬಂಧ ಮಾತನಾಡಿದ ಅವರು, ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ ದಾಖಲಿಸ್ತೀವಿ. ಕೊಲೆಯಾಗಿರೋ ಮಹಿಳೆ 46 ವರ್ಷದ ಮಹಿಳೆ ಜಯಲಕ್ಷ್ಮೀ. ಒಬ್ಬ ಮಹಿಳೆ ಮತ್ತು ಪುರುಷನನ್ನು ಬಂಧನ ಮಾಡಿದ್ದೀವಿ. ಆರಂಭದಲ್ಲಿ ಕೊಲೆಯಾಗಿರೋ ಶಂಕೆಯಿತ್ತು. ನಂತರ ಪೋಸ್ಟ್ ಮಾರ್ಟಮ್ ಮೂಲಕ ಕೊಲೆ ಆಗಿರೋದು ಕನ್ಫರ್ಮ್ ಆಗಿದೆ. ಆರಂಭದಲ್ಲಿ ಮಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದರು. ತಾಯಿಕೆ ಆರೋಗ್ಯ ಸರಿ ಇರಲಿಲ್ಲ ಅನಂತರ ಬಿದ್ದು ಸಾವಾಗಿದ್ದಾರೆ ಎಂದಿದ್ದರು. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿಕೆ ಕೊಟ್ಟಿದ್ದಾರೆ.