Author: Prajatv Kannada

ಬೆಂಗಳೂರು: ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾನು 14 ಬಜೆಟ್ ಮಂಡಿಸಿದ್ದೇನೆ. ಇದೇ ಮೊದಲ ಸಲ ವಿಪಕ್ಷದವರು ಒಬ್ಬರೂ ಇಲ್ಲದ ಸಮಯದಲ್ಲಿ ಉತ್ತರ ಕೊಡುತ್ತಿದ್ದೇನೆ. ವಿಪಕ್ಷದವರ ಆಸನಗಳು ಖಾಲಿ ಇವೆ. ಈ ತರಹದ ಬಜೆಟ್ ಉತ್ತರ ಇದೇ ಮೊದಲು. ವಿಪಕ್ಷ ನಾಯಕ ಇಲ್ಲದೇ ಮೊದಲ ಸಲ ಬಜೆಟ್ ಅಧಿವೇಶನ ನಡೆದಿದೆ. ರಾಷ್ಟ್ರೀಯ ಪಕ್ಷ ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗಿಲ್ಲ ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದರು. ಮಹದಾಯಿ ಯೋಜನೆ ಬಗ್ಗೆ ಶಾಸಕ ಎನ್​​.ಹೆಚ್​​​.ಕೋನರೆಡ್ಡಿ ಪ್ರಸ್ತಾಪ ಮಾಡಿದ್ದು, ಬಜೆಟ್​​ನಲ್ಲಿ ಹೇಳಿದಂತೆ ಮಹದಾಯಿ ಯೋಜನೆ ಜಾರಿ ಮಾಡಬೇಕು. ಮಹದಾಯಿ ಯೋಜನೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ಸಿಎಂ ಮಹದಾಯಿ ಯೋಜನೆ ಜಾರಿ ಮಾಡುವ ಭರವಸೆ ಕೊಡಬೇಕು. ಬಸವರಾಜ ಬೊಮ್ಮಾಯಿ ಅವರು ಯೋಜನೆ ಜಾರಿ ಮಾಡುತ್ತಾರೆ ಎಂದು ಅಂದುಕೊಂಡಿದ್ದೆ. ಈ ಹಿಂದೆ ಯೋಜನೆ ಜಾರಿಗೆ ಆಗ್ರಹಿಸಿ ಅವರು ಪಾದಯಾತ್ರೆ…

Read More

ಬೆಂಗಳೂರು: ರಾಜ್ಯಪಾಲರಿಗೆ ದೂರು ನೀಡಿ ಬಿಜೆಪಿ, JDS ನಾಯಕರು ಹೊರಬಂದಿದ್ದಾರೆ. ಸ್ಪೀಕರ್, ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಗೆಹ್ಲೋಟ್​ಗೆ ಮಾಜಿ ಸಿಎಂಗಳಾದ ಬೊಮ್ಮಾಯಿ, ಹೆಚ್​ಡಿಕೆ ನೇತೃತ್ವದಲ್ಲಿ ದೂರು ನೀಡಲಾಗಿದೆ. ರಾಜ್ಯಪಾಲರಿಗೆ ದೂರು ನೀಡಿ ಬಿಜೆಪಿ, JDS ನಾಯಕರು ಹೊರಬಂದಿದ್ದಾರೆ. ಸ್ಪೀಕರ್, ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಗೆಹ್ಲೋಟ್​ಗೆ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಹೆಚ್​ಡಿಕೆ ನೇತೃತ್ವದಲ್ಲಿ ದೂರು ನೀಡಲಾಗಿದೆ.

Read More

ಬೆಂಗಳೂರು :  ಸಿಲಿಕಾನ್ ಸಿಟಿಯಲ್ಲಿ ಭಯಾನಕ ಸ್ಫೋಟ ನಡೆಸಲು  ಸಜ್ಜಾಗಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಅರೆಸ್ಟ್‌ ಮಾಡಿದ್ದು ಈಗ  ಸಿಸಿಬಿ  ಅಧಿಕಾರಿಗಳು ಐವರು ಶಂಕಿತ  ತನಿಖೆ ಶುರುಮಾಡಿದೆ.  ಆದರೆ ತನಿಖೆ ವೇಳೆ ಭಯಾನಕ ಸ್ಪೋಟಕ ಅಂಶಗಳು ಹೊರಬಿದ್ದಿದೆ. ಹಣದ ಮೂಲ. ಹಾಗು ಸಿಕ್ಕ ಜೀವಂತ ಗುಂಡುಗಳು ಬೇರೆಯದ್ದೆ ಕಥೆ ಹೇಳುತ್ತಿವೆ. ಹೌದು.. ಸಿಸಿಬಿ ಕೈಯಲ್ಲಿ ಲಾಕ್ ಆಗಿರುವ ಕ್ರಿಮಿಗಳ ಬಳಿ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇವುಗಳನ್ನೆಲ್ಲ ಖರೀದಿಸಲು ಖುದ್ದು ಎ2 ಆರೋಪಿ ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಫಂಡ್ ಕೊಡುತ್ತಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಮೊಬೈಲ್ ಬಳಸಲು ಸಾಧ್ಯವಿಲ್ಲದ ಕಡೆ ಉಗ್ರರು ವಾಕಿಟಾಕಿ (Walkie-Talkie) ಬಳಕೆ ಮಾಡುತ್ತಾರೆ. ಕಾಡಿನಲ್ಲಿ ತರಬೇತಿ (Forest Training) ನಡೆಸುವಾಗ ವಾಕಿಟಾಕಿ ಬಳಕೆ ಮಾಡಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದಲ್ಲಿ ಅಥವಾ ಕಟ್ಟಡಗಳ ಮೇಲೆ ದಾಳಿ ಮಾಡಿದಾಗ ಜಾಮರ್ ಬಳಕೆ ಮಾಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಮೊಬೈಲ್ ಸಿಗ್ನಲ್‌ಗಳು…

Read More

ವಿಶ್ವ ಕ್ರಿಕೆಟ್​ನ ಸಾಮ್ರಾಟ ಕಿಂಗ್​ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಂ ಇಂಡಿಯಾ ಟ್ರಿನಿಡಾಡ್ ತಲುಪಿದ್ದು, ವೆಸ್ಟ್ ಇಂಡೀಸ್ ಕೂಡ ತನ್ನ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು, ಸರಣಿ ತನ್ನದಾಗಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ. ಅಲ್ಲದೆ ಈ ಟೆಸ್ಟ್ ಪಂದ್ಯ ಉಭಯ ದೇಶಗಳ ನಡುವಿನ 100ನೇ ಟೆಸ್ಟ್ ಪಂದ್ಯವಾಗಿರುವುದರಿಂದ ಈ ಪಂದ್ಯವನ್ನು ಗೆಲ್ಲುವುದು ಉಭಯ ದೇಶಗಳ ಗುರಿಯಾಗಿದೆ. ಹಾಗೆಯೇ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದು 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿರುವುದರಿಂದ ವಿಶ್ವ ಕ್ರಿಕೆಟ್​ನ ಸಾಮ್ರಾಟ ಕಿಂಗ್​ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ. ಜುಲೈ 20 ರ…

Read More

ಇತ್ತೀಚೆಗಷ್ಟೇ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ತೆರೆಗೆ ಬಂದಿದ್ದು ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿ ಬಿಟ್ಟಿತ್ತು. ಚಿತ್ರ ತೆರೆಕಂಡ ವಾರದೊಳಗೆ ಥಿಯೇಟರ್ ನಿಂದ ಎತ್ತಂಗಡಿ ಮಾಡಲಾಗಿತ್ತು. ಈ ಮಧ್ಯೆ ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಅದು ಕೂಡ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಪ್ರಾಜೆಕ್ಟ್ ಕೆ ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿದೆ ಚಿತ್ರತಂಡ. ಪ್ರಭಾಸ್ ಅವರ ಮಾಮೂಲು ಲುಕ್ ಇರುವಂತಹ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಪ್ರಾಜೆಕ್ಟ್ ಕೆ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್,  ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ…

Read More

ಹೆಸರು ಕಾಳು ಸಸ್ಯ ಆಧಾರಿತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಅಷ್ಟೇ ಅಲ್ಲ, ಎಲ್ಲಾ ಅಗತ್ಯ ಅಮೈನೋ ಆಮ್ಲಗಳು ಇದರಲ್ಲಿ ಕಂಡುಬರುತ್ತವೆ.ಇದನ್ನು ಮೊಳಕೆ ಬರಿಸಿ ತಿನ್ನುವುದರಿಂದ ಅದರ ಉತ್ಕರ್ಷಣ ನಿರೋಧಕ ಗುಣಗಳನ್ನು ಹೆಚ್ಚಿಸುತ್ತದೆ ಮತ್ತು ಪ್ರೋಟೀನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಹೆಸರು ಕಾಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ​ ಹೆಸರು ಕಾಳುಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವು ಫ್ರೀ ರಾಡಿಕಲ್ ಹಾನಿ, ಉರಿಯೂತ ಮತ್ತು ಹೃದಯ ಕಾಯಿಲೆಗೆ ಸಂಬಂಧಿಸಿದೆ. ಹೆಸರು ಕಾಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ​ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ​ ಹೆಸರು ಕಾಳಿನಲ್ಲಿ ನಾರಿನಂಶ ಅಧಿಕವಾಗಿದೆ. ಆದ್ದರಿಂದ ಅವು ನಿಮ್ಮ ಜೀರ್ಣಾಂಗ ವ್ಯವಸ್ಥೆ ಮತ್ತು ಕರುಳಿನ ಆರೋಗ್ಯಕ್ಕೂ ಉತ್ತಮವಾಗಿವೆ. ಮಲಬದ್ಧತೆ ಅಥವಾ ಅಜೀರ್ಣದಂತಹ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಿದ್ದರೆ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಕರುಳಿನ ಚಲನೆಯನ್ನು ಉತ್ತೇಜಿಸಲು ನೀವು ಹೆಸರು ಕಾಳು ಅಥವಾ ಅದರ ಗಂಜಿ ತಿನ್ನಬೇಕು. ಇದು ಕರಗಬಲ್ಲ ಫೈಬರ್ ಮತ್ತು ಪೆಕ್ಟಿನ್…

Read More

ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಮಾನವ- ಆನೆ ನಡುವಿನ ಸಂಘರ್ಷದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ವರ್ಷದ ಜುಲೈ 14 ರವರೆಗೆ 239 ಆನೆಗಳ ಹತ್ಯೆ ನಡೆದಿದೆ. ಪ್ರತಿ ದಿನ ಸರಾಸರಿ ಒಂದಕ್ಕಿಂತಲೂ ಹೆಚ್ಚು ಆನೆಗಳು ಬಲಿಯಾಗಿವೆ ಎಂದು ಸರ್ಕಾರದ ಹೊಸ ಮಾಹಿತಿಯೊಂದನ್ನು ನೀಡಿದೆ. ಶ್ರೀಲಂಕಾ ಅಧ್ಯಕ್ಷರ ಮಾಧ್ಯಮ ವಿಭಾಗವು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 74 ಆನೆಗಳು ಪತ್ತೆಯಾಗದ ಕಾರಣಗಳಿಂದ ಸಾವನ್ನಪ್ಪಿವೆ. 49 ಆನೆಗಳು ಗುಂಡೇಟಿಗೆ ಬಲಿಯಾಗಿವೆ. 36 ಆನೆಗಳು ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವನ್ನಪ್ಪಿವೆ ಎಂದು ಎಕಾನಮಿ ನೆಕ್ಸ್ಟ್ ನ್ಯೂಸ್ ಪೋರ್ಟಲ್ ಬುಧವಾರ ವರದಿ ಮಾಡಿದೆ. ಅನುರಾಧಪುರ ಜಿಲ್ಲೆಯೊಂದರಲ್ಲೇ 47 ಆನೆಗಳು ಮತ್ತು ಇದರ ನೆರೆಯ ಜಿಲ್ಲೆ ಪೊಲ್ಲನ್ನರುವಾದಲ್ಲಿ 46 ಆನೆಗಳು ಬಲಿಯಾಗಿವೆ ಎಂದು ಅದು ಹೇಳಿದೆ.

Read More

ನವದೆಹಲಿ: ಬಿಜೆಪಿ ವಿರೋಧಿ ಪಕ್ಷಗಳು ರಚಿಸಿರುವ ಹೊಸ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂಬ ಹೆಸರು ನೀಡಿರುವುದಕ್ಕೆ ತಾವು ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ಆ ಬಗ್ಗೆ ಬಂದಿರುವ ವರದಿಗಳು ಆಧಾರರಹಿತ ಎಂದು ಜೆಡಿಯು ವರಿಷ್ಠ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌(Nitish Kumar) ಸ್ಪಷ್ಟಪಡಿಸಿದ್ದಾರೆ.  ”2024ರ ಚುನಾವಣೆಗಾಗಿ ನಾವು ಬಿಜೆಪಿಯೇತರ ಪಕ್ಷಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿದ್ದೇವೆ. ಪಾಟ್ನಾದಲ್ಲಿ ನಡೆದ ಮೈತ್ರಿಕೂಟದ ಮೊದಲ ಸಭೆಗೆ(First meeting of alliance) 16 ಪಕ್ಷಗಳು ಹಾಜರಾಗಿದ್ದವು. ಬೆಂಗಳೂರಿನ ಸಭೆಗೆ 26 ಪಕ್ಷಗಳು ಒಟ್ಟುಗೂಡಿವೆ. ನಮ್ಮ ಸಂಖ್ಯೆ ಹೆಚ್ಚುತ್ತಿದೆ, ಪ್ರತಿಪಕ್ಷಗಳ ಒಗ್ಗಟ್ಟೂ ಸಹ ಬಲಗೊಳ್ಳುತ್ತಿದೆ. ಸಭೆ ಫಲಪ್ರದವಾಗಿದೆ. ಅಸಮಾಧಾನದ ಪ್ರಶ್ನೆಯೇ ಉದಯಿಸುವುದಿಲ್ಲ,” ಎಂದು ನಿತೀಶ್‌ ಹೇಳಿದ್ದಾರೆ ಬೆಂಗಳೂರಿನ ಪ್ರತಿಪಕ್ಷಗಳ ಸಭೆಗೆ ಹಾಜರಾಗಿದ್ದ ನಿತೀಶ್‌, ಬಳಿಕ ನಡೆದ ಸುದ್ದಿಗೋಷ್ಠಿಗೆ ಗೈರಾಗಿದ್ದರು. ಅವರು ‘ಇಂಡಿಯಾ’ ಹೆಸರಿನ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ”ಮೈತ್ರಿಕೂಟದ ಮುಂದಾಳತ್ವ ನೀಡದ್ದಕ್ಕಾಗಿ ನಿತೀಶ್‌ ಬೇಸರಗೊಂಡಿದ್ದಾರೆ. ಹೀಗಾಗಿಯೇ ಅವರು ಸುದ್ದಿಗೋಷ್ಠಿ ಬಹಿಷ್ಕರಿಸಿ ಪಟನಾಗೆ ಹಿಂದಿರುಗಿದರು,” ಎಂದು ಬಿಹಾರ ಮಾಜಿ ಡಿಸಿಎಂ ಸುಶೀಲ್‌…

Read More

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ(Gundlupet) ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಯಲ್ಲಿ ಜು.18 ರಂದು ಕಲುಷಿತ ಆಹಾರ ಸೇವಿಸಿ ಒಟ್ಟು 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿಂದಂತೆ ಯಡವನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ಆಗಿರುವ​ ಕುಮಾರಸ್ವಾಮಿ ಎನ್ನುವವರನ್ನ ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಿಇಒ ಡಾ.ನವೀನ್‌ಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು.

Read More

ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಯೋತ್ಪಾದಕರಂತಹ ಕೆಟ್ಟ ಹುಳುಗಳು ಹೊರಬರುತ್ತಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಇಂತಹ ಉಗ್ರರನ್ನೇ ಪೋಷಣೆ ಮಾಡುತ್ತ ಬಂದಿದ್ದಾರೆ. ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಅತ್ಯಂತ ಕೆಟ್ಟ ವಿಚಾರವಾಗಿದ್ದು, ಇವತ್ತು ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಾನು ಈ ಬಗ್ಗೆ ಮಾಹಿತಿ ಪಡೆದುಕೊಂಡೆ. ಅವರ ಬಳಿ ಜೀವಂತ ಬಾಂಬ್ ಸೇರಿ ಅನೇಕ ವಸ್ತುಗಳು ಸಿಕ್ಕಿವೆ ಎಂದು ಹೇಳಿದರು. ಸುಲ್ತಾನಪಾಳ್ಯದಲ್ಲಿ ಇವರು ವಾಸವಾಗಿದ್ದರು ಎನ್ನಲಾಗಿದೆ. ಇವರ ಜೊತೆಗೆ ಇಬ್ಬರು ಮಹಿಳೆಯರ ಉಲ್ಲೇಖವೂ ಆಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಈ ರೀತಿ ಕೆಟ್ಟ ಹುಳು ಹೊರ ಬರುತ್ತಿವೆ. ಹಾವು, ಚೇಳುಗಳು ಇವೆಲ್ಲವೂ ಹೊರಗೆ ಬರುತ್ತವೆ. ಈಗ ಇವರಿಗೆಲ್ಲ ಪೋಷಣೆ ಕಾಂಗ್ರೆಸ್ ಸರ್ಕಾರ ಆಗಿದೆ ಎಂದು ಗಂಭೀರ ಸ್ವರೂಪದ ಅರೋಪ ಮಾಡಿದರು. ಇಂತಹ ಉಗ್ರರನ್ನೇ ಪೋಷಣೆ ಮಾಡುತ್ತಾ ಬಂದಿದ್ದಾರೆ. ಈ ಮೂಲಕ…

Read More