ಮೈಸೂರು: ಜಾತಿ- ಜಾತಿಗಳಲ್ಲಿ, ಧರ್ಮ-ಧರ್ಮಗಳಲ್ಲಿ ವೈಷಮ್ಯ ಮೂಡಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದು ಬಿಜೆಪಿ. ಮತ್ತೆ ಕೋಮುಗಲಭೆ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಆರೋಪಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಚುನಾವಣೆ ವೇಳೆ ನೀಡಿದ ಒಂದೇ ಒಂದು ಭರವಸೆಗಳನ್ನು ಕೂಡ ಈಡೇರಿಸಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳನ್ನು ಸಹಿಸಲಾಗದ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕಾಗಿ ನಾವು ಜಾಗೃತರಾಗಬೇಕಿದೆ ಎಂದರು. ರಾಜ್ಯದಲ್ಲಿ ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನೀಡಿದ 5 ಗ್ಯಾರಂಟಿ ಯೋಜನೆಗಳಿಗೆ ಸುಮಾರು . 52 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟು ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಇದರಿಂದ ಪ್ರತಿದಿನ 50 ಲಕ್ಷ ಮಹಿಳೆಯರು ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ…
Author: Prajatv Kannada
ಮೈಸೂರು: ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ. ದಲಿತರು, ನಾಯಕರು, ಹಿಂದುಳಿದ ಸಮಾಜದ ಯುವಕರು ಉಳಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು. ತಿ. ನರಸೀಪುರದಲ್ಲಿ ಯುವ ಬ್ರಿಗೇಡ್ (Yuva Brigade) ಕಾರ್ಯಕರ್ತ ವೇಣುಗೋಪಾಲ ನಾಯಕ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೂಂಡಾಗಿರಿ ವಾತಾವರಣವಿದೆ. ಹಿಂದೂಗಳು ಜೀವನ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಹನುಮ ಜಯಂತಿ ಮಾಡುವುದು ಕೆಲವು ಜನರಿಗೆ ಭಯ ಹುಟ್ಟಿಸಿದೆ. ಕೇಸರಿ ಶಾಲು, ತಿಲಕ ಹಾಕಿಕೊಂಡರೆ ಹುಷಾರ್ ಅಂತ ರಾಜ್ಯದ ಮಂತ್ರಿ ಪೊಲೀಸರಿಗೆ ಹೇಳುತ್ತಾರೆ. ಇದೇನೂ ಪಾಕಿಸ್ತಾನವಾ ಎಂದು ಖಾರವಾಗಿ ಪ್ರಶ್ನಿಸಿದರು. ಹಿಂದೂ ಸಮಾಜ ಉಳಿಸಲು ಶ್ರೀಮಂತರ ಮಕ್ಕಳು ಬರಲ್ಲ. ಹಿಂದೂ ಸಮಾಜ ಉಳಿಸುತ್ತಿರೋರು ಮೇಲ್ಜಾತಿ ಹುಡುಗರಲ್ಲ. ದಲಿತರು, ನಾಯಕರು, ಹಿಂದುಳಿದ ಸಮಾಜದ ಯುವಕರು ಉಳಿಸುತ್ತಿದ್ದಾರೆ. ಗಣಪತಿ ಕೂರಿಸಲು ಹಿಂದಿನ ಸರ್ಕಾರದ ಅವಧಿಯಲ್ಲಿ ಹಲವು ನಿರ್ಬಂಧ ಹೇರಲಾಗಿತ್ತು. ಆಗ ಸಿಎಂ ಬೊಮ್ಮಾಯಿಗೆ ಫೋನ್ ಮಾಡಿ ನೀವು ಕರ್ನಾಟಕದ ಸಿಎಂ ಹ್ಹಾ ಅಥವಾ ಲಾಹೋರ್ ಸಿಎಂ ಹ್ಹಾ…
ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರವು ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂಬ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೊಂದು ಹೊಸ ‘ಬಾಂಬ್’ ಹಾಕಿದ್ದಾರೆ. ‘ಕಳೆದ ಎರಡು ತಿಂಗಳಿಂದ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ 500 ಕೋಟಿ ರು.ಗಿಂತ ಹೆಚ್ಚು ಹಣ ಕೈ ಬದಲಾಗಿದೆ’ ಎಂಬ ಮಾಹಿತಿ ಇದೆ ಎಂದು ಅವರು ಆಪಾದಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವರ್ಗಾವರ್ಗಿ ದಂಧೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಇದೆ. ಆ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಮೇವು ಸಮೃದ್ಧವಾಗಿದೆ. ಇಲ್ಲಿ ಚೆನ್ನಾಗಿ, ಪೊಗದಸ್ತಾಗಿ ಮೇಯುತ್ತಿದ್ದಾರೆ. ಆ ಮೇವನ್ನು ಇಡೀ ದೇಶಕ್ಕೆಲ್ಲಾ ಹಂಚಲು ಹೊರಟ್ಟಿದ್ದಾರೆ. ಇದೇನಾ ಕರ್ನಾಟಕ ಮಾದರಿ ಎಂದರೆ? ಇದೇನಾ ಹೊಸ ಭರವಸೆ, ಹೊಸ ಕನಸು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗ ನಡೆಯುತ್ತಿರುವ ಯೋಜನೆಗಳ ಕಾಮಗಾರಿಗಳ ಒಟ್ಟು ಅಂದಾಜು ವೆಚ್ಚವನ್ನು ಶೇ.20-30ರಷ್ಟುಹೆಚ್ಚಳ ಮಾಡಿಕೊಳ್ಳಲಾಗುತ್ತಿದೆ. ಕಮಿಷನ್ ಹೊಡೆಯೋದಕ್ಕೆ ಏನು ಬೇಕೋ…
ಸೂರ್ಯೋದಯ: 06.02 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಪಾಡ್ಯ 02:09 AM ತನಕ ನಂತರ ಬಿದಿಗೆ ನಕ್ಷತ್ರ: ಇವತ್ತು ಪುಷ್ಯ 07:58 AM ತನಕ ನಂತರ ಆಶ್ಲೇಷ ಯೋಗ: ಇವತ್ತು ವಜ್ರ 10:26 AM ತನಕ ನಂತರ ಸಿದ್ಧಿ ಕರಣ: ಇವತ್ತು ಬವ 02:09 AM ತನಕ ನಂತರ ಬಾಲವ 03:18 PM ತನಕ ನಂತರ ಕೌಲವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 12.49 AM to 02.37 AM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ…
ಬೆಂಗಳೂರು: ಕೇಂದ್ರ ಗುಪ್ತಚರ ಮಾಹಿತಿ ಮೇರಗೆ ಬೆಂಗಳೂರಲ್ಲಿ ಐವರು ಶಂಕಿತ ಉಗ್ರರು ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಕನಕನಗರ ಬಳಿಯ ಸುಲ್ತಾನ್ ಪಾಳ್ಯ ಮಸೀದಿ ಬಳಿ ಟೆರರ್ ಮೀಟಿಂಗ್ ವೇಳೆ ಆರೋಪಿಗಳು ಸಿಸಿಬಿ ಬಲಗೆ ಬಿದ್ದಿದ್ದಾರೆ. 2017ರಲ್ಲಿ ಆರ್ ಟಿನಗರದ ನೂರ್ ಕೊಲೆ ಕೇಸ್ನಲ್ಲಿ ಬಂಧನವಾಗಿದ್ದ ಆರೋಪಿಗಳ ಪೈಕಿ ಐವರು ಟೆರರ್ ಲಿಂಕ್ ಪಡೆದಿದ್ರು ಎಂದು ಹೇಳಲಾಲಗ್ತಿದೆ. ಕೊಲೆ ಪ್ರಕರದ ಪ್ರಮುಖ ಆರೋಪಿ ಜುನೈದ್ ಸದ್ಯ ತಲೆಮರೆಸಿಕೊಂಡಿದ್ದು ಇವನಸಹಚರರಾಗಿರೋ ಸುಹೈಲ್, ಉಮರ್, ತಬ್ರೇಜ್, ಮುದಾಸಿರ್ ಮತ್ತು ಫೈಜಲ್ ರಬ್ಬಾನಿ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನು ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದಾಗ 2008ರ ಬೆಂಗಳೂರು ಸಿರಿಯಲ್ ಬಾಂಬ್ ಬ್ಲಾಸ್ಟ್ ಕೇಸ್ ನ ರುವಾರಿ ನಾಸೀರ್ ಸಂಪರ್ಕದಲ್ಲಿದ್ದ ಜುನೈದ್ ಉಗ್ರ ಚಟುವಟಿಕೆ ಆಸಕ್ತಿ ತೋರಿ ನಾಸೀರ್ ಹೇಳಿದಂತೆ ವಿದ್ವಾಂಸಕ ಕೃತ್ಯ ನಡೆಸಲು ತಯಾರಿ ನಡೆಸಿದ್ನಂತೆ. ಅಲ್ಲದೆ ಕೊಲೆ ಕೇಸ್ ನಲ್ಲಿ ಬೇಲ್ ಮೇಲೆ ಹೊರ ಬಂದ ನಾಸೀರ್ ಮತ್ತೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾ.…
ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿಯನ್ನೇ ನಡುಗಿಸುವ ಕೆಲಸ ನಡೆದಿದೆ. ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು (Suspected Terrorists) ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಸಿಸಿಬಿ ಬಂಧಿಸಿದೆ. ಆರ್ ಟಿ ನಗರ ಕೊಲೆ ಕೇಸ್ನ ಅರೋಪಿಗಳು ಜೈಲಿನಲ್ಲಿ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದಾರೆ. ನಂತರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳನ್ನು ಒಗ್ಗೂಡಿಸುತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ, ಸಿಸಿಬಿ ಮಾಹಿತಿ ಸಂಗ್ರಹ ಮಾಡಿತ್ತು. ಮಾಹಿತಿ ಅನ್ವಯ ಸಿಸಿಬಿ ಜೊತೆಗೆ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿ ವಿಚಾರಣೆ ನಡೆಸಿದೆ. ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿರುವ ಸುಲ್ತಾನ್ ಪಾಳ್ಯದ ಕನಕ ನಗರದ ಮಸೀದಿ ಬಳಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿತರ ಬಳಿ ಇದ್ದ 7 ಪಿಸ್ತೂಲ್, ಮದ್ದುಗುಂಡುಗಳು, 2 ಡ್ಯಾಗರ್, ಅಮೋನಿಯಾ, 2 ಸ್ಯಾಟ್ಲೈಟ್ ಫೋನ್, 4…
ಬೆಂಗಳೂರು: ಕಾಂಗ್ರೆಸ್ನ 4 ನೇ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಇನ್ನು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ನೀಡಲಾಗಿದೆ. ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಪಡೆಯಲು, ಮನೆ ಯಜಮಾನಿಯ ಪತಿಯ ಆಧಾರ್ಕಾರ್ಡ್ ಕೂಡ ಬೇಕಾಗುತ್ತದೆ. ಹೌದು ಬೇರೆ ಖಾತೆಗೆ ಹಣ ಹಾಕೆನ್ನುವವರು ಪಾಸ್ಬುಕ್ ಜೆರಾಕ್ಸ್ ಕೊಡಬೇಕು. ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ. 8147500500ಕ್ಕೆ ಪಡಿತರ ಚೀಟಿ ಸಂಖ್ಯೆ SMS ಮಾಡಿ, ಕೂಡಲೇ ಇದು ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ರವಾನಿಸುತ್ತದೆ. ಗೊಂದಲವಿದ್ದರೆ 1902 ನಂಬರ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಬಂಧಿತ ಶಂಕಿತ ಉಗ್ರರರು. ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐದು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಆರ್ ಟಿ ನಗರ ಕೊಲೆ ಕೇಸ್ನ ಅರೋಪಿಗಳು ಜೈಲಿನಲ್ಲಿ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದಾರೆ. ನಂತರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳನ್ನು ಒಗ್ಗೂಡಿಸುತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ, ಸಿಸಿಬಿ ಮಾಹಿತಿ ಸಂಗ್ರಹ ಮಾಡಿತ್ತು. ಮಾಹಿತಿ ಅನ್ವಯ ಸಿಸಿಬಿ ಜೊತೆಗೆ ಕಾರ್ಯಾಚರಣೆ ನಡೆಸಿ ಐವರನ್ನು…
ಬೆಂಗಳೂರು ;- ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತೀರ್ಮಾನಿಸಿದ್ದಾರೆ ಮಂಗಳವಾರ ಇಬ್ಬರು ಸಚಿವರು ಹಾಗೂ 15 ಶಾಸಕರೊಂದಿಗೆ ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಿದ್ದಾರೆ. ಈ ವೇಳೆ ಕಾಲಮಿತಿಯೊಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರ ಮಾಡುವಂತೆ ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಅಡಿ ಪ್ರತಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವಾರು ಹಂಚಿಕೆಯಾದ ಮನೆ ಮತ್ತು ಬಾಕಿ ಉಳಿದ ಮನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಗ್ರಾಮ ಸಭೆ ಮೂಲಕ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಲು ಸೂಚಿಸಿದ್ದಾರೆ. 1.41 ಲಕ್ಷ ಮನೆಗಳಲ್ಲಿ 71,000 ಫಲಾನುಭವಿಗಳ ಪಟ್ಟಿ ಇನ್ನೂ ಸಿದ್ಧವಾಗಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಪಟ್ಟಿ ಕಳುಹಿಸಲು ತಿಳಿಸಿದ್ದಾರೆ. ಸಬ್ಸಿಡಿ ಮೊತ್ತ ಹೆಚ್ಚಳ ಮಾಡುವಂತೆ ಶಾಸಕರು ಮನವಿ ಮಾಡಿದ್ದು, ಈ ಬಗ್ಗೆ ಸಿಎಂ ಗಮನಕ್ಕೆ ತರುವುದಾಗಿ…
ಬೆಂಗಳೂರು ;– ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಗಾರು ಮಳೆ ವೈಫಲ್ಯವಾಗಿರುವುದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಆತ್ಮಹತ್ಯೆಗೊಳಗಾದ ರೈತರಲ್ಲಿ 18 ಜನ ಹಾವೇರಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ಮುಂಗಾರು ವೈಫಲ್ಯದಿಂದ ಎರಡೆರಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಬೆಳೆಯದೆ ಸಾಲ ತೀರಿಸಲು ಸಾಧ್ಯವಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೊಂದ ಅನೇಕ ಸಣ್ಣ, ಅತಿ ಸಣ್ಣ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ನೆರವಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.