Author: Prajatv Kannada

ತುಮಕೂರು: ಜಿಲ್ಲೆಯಲ್ಲಿ ಮೌಢ್ಯಾಚರಣೆ ಇನ್ನೂ ಜೀವಂತವಾಗಿದೆ. ಇದಕ್ಕೆ ಸಾಕ್ಷಿಯೆನ್ನುವಂತೆ ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಹೆರಿಗೆ ನಂತರ ಬಾಣಂತಿಯನ್ನು ಗ್ರಾಮದಿಂದ ಹೊರಗಿಟ್ಟ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ವಸಂತ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ನವಜಾತ ಹೆಣ್ಣು ಮಗು ತಾಯಿ ಮಾಡಿಲಿನಲ್ಲಿದೆ. ಆದರೆ ಮೌಢ್ಯಾಚರಣೆ ನಡೆಸುತ್ತಿರುವ ಗೊಲ್ಲ ಸಮುದಾಯದ ಜನರು, ಎರಡು ತಿಂಗಳ ಕಾಲ ಬಾಣಂತಿಯನ್ನು ಊರಿನಿಂದ ಹೊರಗಿಟ್ಟಿದ್ದಾರೆ. ಗುಡಿಸಲು ಮಾಡಿ ಅದರಲ್ಲಿ ಬಾಣಂತಿ ಮತ್ತು ಮಗುವನ್ನು ಇರಿಸಿದ್ದಾರೆ. ನಮ್ಮ ದೇವರಿಗೆ ಸೂತಕ ಆಗಲ್ಲ, ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಗೊಲ್ಲ ಸಮುದಾಯದವರು ಹೇಳುತ್ತಿದ್ದಾರೆ.

Read More

ಮೈಸೂರು: ಬೆಡ್​ ರೂಮಿಗೆ ಬಂದು ಹಾಯಾಗಿ ಮಲಗಿದ್ದ ನಾಗರಹಾವನ್ನು ಸುರಕ್ಷಿತವಾಗಿ ಸೆರೆಹಿಡಿದ ಘಟನೆ ನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಹೆಬ್ಬಾಳ‌ದ ಎರಡನೇ ಹಂತದಲ್ಲಿರುವ ಪ್ರಜ್ವಲ್ ಎಂಬವರ ಮನೆಗೆ ಯಾರೂ ಇಲ್ಲದ ವೇಳೆ ಅದೇಗೋ ಹೊಕ್ಕಿದ್ದ ಸರ್ಪ, ಅವರು ಮಲಗಿದ್ದ ಹಾಸಿಗೆಯ ಮೇಲೆಯೇ ಮಲಗಿತ್ತು. ಕೊಠಡಿಯಲ್ಲಿ ತಾನು ಮಲಗಿದ್ದ ಪಕ್ಷದಲ್ಲೇ ಬುಸ್​ ಬುಸ್ ಎಂಬ ಬುಸುಗುಡುತ್ತಿದ್ದ ಸದ್ದು ಕೇಳಿ ಬರುತ್ತಿತ್ತು. ಈ ಶಬ್ದ ಕೇಳಿ ಎಚ್ಚರಗೊಂಡ ಯುವಕ ಪ್ರಜ್ವಲ್, ಅನುಮಾನದಿಂದ ಹಾಸಿಗೆ ತೆಗೆದಾಗ ಈ ಹಾವು ಇರುವುದು ಕಂಡು ಬಂದಿದೆ. ಹೆಡೆ ಎತ್ತಿದ ನಾಗರ ಹಾವು ಕಂಡು ತಕ್ಷಣ ಭಯಭೀತನಾದ ಪ್ರಜ್ವಲ್ ಮನೆಯಿಂದ ಹೊರ ಓಡಿ ಹೋಗಿದ್ದಾನೆ. ಬಳಿಕ ಇಂತಹದ್ದೊಂದು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಉರಗತಜ್ಞ ಸ್ನೇಕ್ ಶ್ಯಾಮ್ ಅವರು ಸುರಕ್ಷಿತವಾಗಿ ಹಾವನ್ನು ಹಿಡಿದಿದ್ದಾರೆ. ಭೀಮನ ಅಮಾವಾಸ್ಯೆ ಇದ್ದ ಕಾರಣ ಹಾವಿಗೆ ಪೂಜೆ ಸಲ್ಲಿಸಿದ ಅಕ್ಕ-ಪಕ್ಕದ ಮನೆಯ ಮಹಿಳೆಯರು ಹಾವಿಗೆ ಕೈ ಮುಗಿದು ಬೇಡಿಕೊಂಡರು.

Read More

ಬೆಳಗಾವಿ: ಕಾಂಗ್ರೆಸ್ ಸರ್ಕಾರ(Congress Government) ಮುಜರಾಯಿ ಇಲಾಖೆಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನ ನಾನು ಸ್ವಾಗತ ಮಾಡುತ್ತೇನಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು, ‘ ದೇವಸ್ಥಾನದ ಪವಿತ್ರತೆ ಉಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಅದರಂತೆ ಖಾಸಗಿ ದೇವಸ್ಥಾನಗಳಲ್ಲೂ ಕೂಡ ಮೊಬೈಲ್ ಬ್ಯಾನ್ ಮಾಡುವಂತೆ ವಿನಂತಿ ಮಾಡುತ್ತೇನೆ. ಜೊತೆಗೆ ಖಾಸಗಿ ದೇವಸ್ಥಾನದ ಆಡಳಿತ ಮಂಡಳಿಗೆ ನಮ್ಮೆಲ್ಲಾ ಕಾರ್ಯಕರ್ತರು ಮನವಿ ಕೊಡುತ್ತಾರೆಂದು ಹೇಳಿದರು.

Read More

ಬೆಂಗಳೂರು: ದೇಶದ ಜನರ ಧ್ವನಿ ಅಡಗುಸುತ್ತಿರುವವರ ವಿರುದ್ಧವೇ ನಮ್ಮ ಸಮರವಾಗಿದೆ. ಇದಕ್ಕಾಗಿ ವಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಯುದ್ದ ಇಂಡಿಯಾ ಮತ್ತು ಎನ್​ಡಿಎ ನಡುವೆ ನಡೆಯಲಿದೆ. ಇಂಡಿಯಾ ಮತ್ತು ಮೋದಿ ನಡುವಿನ ಸಮರ ಇದಾಗಿದೆ. ಇಂಡಿಯಾ ವಿರುದ್ದ ಯಾರೇ ಸಮರ ಸಾರಿದರೂ ಅದರ ಪರಿಣಾಮ ಏನಾಗುತ್ತೆ ನಿಮಗೇ ಗೊತ್ತು ಎಂದರು. ಬಿಜೆಪಿ ಸಿದ್ಧಾಂತದ ವಿರುದ್ಧವೇ ನಮ್ಮ ಹೋರಾಟ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ದೇಶದ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಇದು ವಿಪಕ್ಷ, ಬಿಜೆಪಿ ವಿರುದ್ಧ ನಡೆಯುತ್ತಿರುವ ಹೋರಾಟವಲ್ಲ. ದೇಶದ ಧ್ವನಿಯನ್ನು ಅಡಗಿಸುತ್ತಿರುವವರ ವಿರುದ್ಧ ಹೋರಾಟ ಎಂದರು.

Read More

ಬೆಂಗಳೂರು: ಬಿಜೆಪಿ ಸರ್ಕಾರದ ದೌರ್ಬಲ್ಯ ಎತ್ತಿಹಿಡಿಯುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎನ್​ಡಿಎ ಸಭೆಯಲ್ಲಿ ಪಾಲ್ಗೊಂಡು ಕೆಲವು ಪಕ್ಷಗಳ ಹೆಸರು ಚುಣಾವಣಾ ಆಯೋಗದಲ್ಲಿ ಇಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ. ಅವರ ಜೊತೆಗಿರೋ ಪಕ್ಷಗಳು ತುಕಡೇ ತುಕಡೇ ಆಗಿವೆ. ವಿಪಕ್ಷಗಳ ಸಭೆ ಮಾಡೋದನ್ನ ನೋಡಿ ಮೋದಿಗೆ ಭಯವಾಗಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ ಎಂದರು. ನ್​ಡಿಎ ಸಭೆಯನ್ನು ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ, ಎನ್​ಡಿಎ ಮೈತ್ರಿಕೂಟದಲ್ಲಿ 30 ಪಕ್ಷಗಳಿವೆ, ಅದರ ಹೆಸರು ಗೊತ್ತಿಲ್ಲ. ಸದ್ಯ ತುಕುಡೆ ತುಕುಡೆಯಾಗಿರುವ ಮೈತ್ರಿ ಪಕ್ಷಗಳನ್ನು ಒಂದು ಮಾಡಲು ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ನಾಶ ಮಾಡಲು ಹೊರಟಿದೆ. ಸಂವಿಧಾನ ನಾಶ ಮಾಡಲಿ ಹೊರಟಿದ್ದಾರೆ. ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ‌ಮಾಡಿಕೊಂಡು ವಿಪಕ್ಷಗಳ ವಿರುದ್ದ ಆಯುಧವಾಗಿ ಬಳಸುತ್ತಿದ್ದಾರೆ. ದೇಶದ ರಕ್ಷಣೆ ನಮ್ಮ ಹೊಣೆ ಅದೇ ನಮ್ಮ ಮೊದಲ ಆದ್ಯತೆಯಾಗಿದೆ. ಎಲ್ಲ ಪಕ್ಷಗಳ ನಾಯಕರು ಇದಕ್ಕೆ ಸಲಹೆ ನೀಡಿದ್ದಾರೆ ಎಂದರು.…

Read More

ಬೆಂಗಳೂರು: ಘಟಬಂಧನ್ ಸಭೆಗೆ ಆಗಮಿಸಿರುವ ಹೊರರಾಜ್ಯದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ನಿಯೋಜನೆ ಮಾಡಿರುವ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿಯನ್ನು ಜಾರಿಗೆ ತಂದು ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದೆ ಎಂದು ಕಿಡಿಕಾರಿದೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು…

Read More

ಬೆಂಗಳೂರು: ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆಮಾಕ್ರಟಿಕ್​​ ಇನ್​ಕ್ಲೂಸಿವ್​​​​ ಅಲೈನ್ಸ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ  ತಿಳಿಸಿದರು. ‘I-N-D-I-A’ ಎಂದರೆ Indian National Development Inclusive Alliance ಕನ್ನಡದಲ್ಲಿ ಹೇಳೋದಾದ್ರೆ ಭಾರತೀಯ ರಾಷ್ಟ್ರೀಯ ಅಭಿವೃದ್ದಿ ಅಂತರ್ಗತ ಒಕ್ಕೂಟ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿ ಕೂಟದ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿರುವ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ‘I-N-D-I-A’ ಎಂಬ ಹೊಸ ಹೆಸರು ಇಟ್ಟಿವೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳ ಒಕ್ಕೂಟದ ಸಭೆಯಲ್ಲಿ ತಮ್ಮ ಒಕ್ಕೂಟ ಹೊಸ ಹೆಸರನ್ನು ಅಂತಿಮಗೊಳಿಸಲಾಗಿದೆ. ವಿಪಕ್ಷ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದ 26 ರಾಜಕೀಯ ಪಕ್ಷಗಳ ನಾಯಕರು ಈ ಹೊಸ ಹೆಸರಿಗೆ ಸಮ್ಮತಿ ಸೂಚಿಸಿದ್ದಾರೆ. ಅಷ್ಟೇ ಅಲ್ಲ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ಕುರಿತಾಗಿ ರಣ ತಂತ್ರ ಸಜ್ಜಾಗುತ್ತಿದೆ. 26 ಪಕ್ಷಗಳು ಈ…

Read More

ಬೆಂಗಳೂರು: ಒಕ್ಕೂಟದ ಉದ್ದೇಶ ಹಾಗೂ ಗುರಿಗೆ ಸಂಬಂಧಿಸಿ 26 ರಾಷ್ಟ್ರೀಯ ವಿಪಕ್ಷಗಳು ಸಾಮೂಹಿಕ ಸಂಕಲ್ಪ ಮಾಡಿಕೊಂಡಿದ್ದು, ದ್ವೇಷ ರಾಜಕಾರಣದ ವಿರುದ್ಧ ಸಾಮೂಹಿಕ ಹೋರಾಟಕ್ಕೆ ನಿರ್ಧಾರ ಮಾಡಿವೆ. ಸಾರ್ವಜನಿಕ ಉದ್ದಿಮೆಗಳ ಸಂರಕ್ಷಣೆಗೆ ನಿರ್ಣಯ ಕೈಗೊಂಡಿದ್ದು, ಮಣಿಪುರದ ಗಲಭೆ ವಿಚಾರ ಕೂಡ ಸಾಮೂಹಿಕ ಸಂಕಲ್ಪದ ವೇಳೆ ಪ್ರಸ್ತಾಪವಾಗಿದೆ. ಲೋಕಸಭೆಗೆ ಒಟ್ಟಾಗಿ ಸ್ಪರ್ಧೆ ಮಾಡುವ ನಿರ್ಣಯ ಕೈಗೊಂಡಿದ್ದು, ಸೀಟು ಹಂಚಿಕೆಗೆ ಸಂಬಂಧಿಸಿ ರಾಜ್ಯವಾರು ಸಮಿತಿಗಳ ರಚನೆಗೆ ಚರ್ಚೆ ನಡೆಸಲಾಗಿದೆ. ಯಾವ ಯಾವ ರಾಜ್ಯ ಗಳಲ್ಲಿ ಎಷ್ಟೆಷ್ಟು ಸೀಟು ಹಂಚಿಕೆ ಎಂಬ ನಿರ್ಧಾರ ಮಾಡಲು ಪ್ರತ್ಯೇಕ ಸಮಿತಿ ಮಾಡಲು ತೀರ್ಮಾನ ಮಾಡಲಾಗಿದೆ. ರಾಜ್ಯವಾರು ಸಮಿತಿ ಮಾಡಿ ಮುಂದಿನ ದಿನಗಳಲ್ಲಿ ಸೀಟು ಹಂಚಿಕೆ ಸಂಬಂಧ ಚರ್ಚೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಸಾಮೂಹಿಕ ಸಂಕಲ್ಪಕ್ಕೆ ಸಮ್ಮತಿ ಸೂಚಿಸಿ 26 ಪಕ್ಷಗಳ ನಾಯಕರು ಸಹಿ ಹಾಕಿದ್ದಾರೆ.

Read More

ಸೂರ್ಯೋದಯ: 06.02 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಅಮವಾಸ್ಯೆ 12:01 AM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಪುನರ್ವಸು 05:11 AM ತನಕ ನಂತರ ಪುಷ್ಯ ಯೋಗ: ಇವತ್ತು ಹರ್ಷಣ09:37 AM ತನಕ ನಂತರ ವಜ್ರ ಕರಣ: ಇವತ್ತು ನಾಗವ 12:01 AM ತನಕ ನಂತರ ಕಿಂಸ್ತುಘ್ನ 01:03 PM ತನಕ ನಂತರ ಬವ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 02.32 AM to 04.18 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ…

Read More

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ತಮ್ಮ ಅಳಿಯನ ಬಗ್ಗೆ ಸುನಿಲ್ ಶೆಟ್ಟಿಗೆ ತುಂಬಾ ಅಭಿಮಾನವಿದೆ. ಅದನ್ನು ಅವರು ಆಗಾಗ ಸಂದರ್ಶನಗಳಲ್ಲಿ ಹೇಳುತ್ತಲೇ ಇರುತ್ತಾರೆ. ಇದೀಗ ಕೆಎಲ್ ರಾಹುಲ್ ಬಗ್ಗೆ ಸಂದರ್ಶನವೊಂದರಲ್ಲಿ ಸುನಿಲ್ ಶೆಟ್ಟಿ ಮಾತನಾಡಿದ್ದಾರೆ. ‘ನೀನು ಅಷ್ಟೊಂದು ಒಳ್ಳೆಯವನಾಗಬೇಡ. ನಮಗೆ ನಮ್ಮ ಬಗ್ಗೇ ಕೀಳರಿಮೆಯಾಗುತ್ತದೆ ಎಂದು ನಾನು ರಾಹುಲ್ ಗೆ ಹೇಳುತ್ತಲೇ ಇರುತ್ತೇನೆ. ಆತ ಅಷ್ಟು ಒಳ್ಳೆಯವನು. ನಾನು ಯಾವತ್ತೂ ಅಥಿಯಾಗೆ ಹೇಳುತ್ತಿರುತ್ತೇನೆ, ನೀನು ರಾಹುಲ್ ನನ್ನು ಪಡೆಯುವುದಕ್ಕೆ ಪುಣ್ಯ ಮಾಡಿದ್ದೆ. ಅವಳು ಮಾತ್ರವಲ್ಲ, ನಮ್ಮ ಕುಟುಂಬವೇ ಅವರ ವಿಚಾರದಲ್ಲಿ ಪುಣ್ಯ ಮಾಡಿದೆ’ ಎಂದಿದ್ದಾರೆ.

Read More