ಬೆಂಗಳೂರು ;- ಬಿಸಿಯೂಟ ಕಾರ್ಯಕರ್ತೆಯರಿಗೆ ಬಳೆ ನಿಷೇಧ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ ಎನ್ನುವುದು ಸುಳ್ಳು ಸುದ್ದಿ. ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವಾಂಶವೇ ಬೇರೆ ಎಂದು ಸಿಎಂ ತಿಳಿಸಿದ್ದಾರೆ. ವಾಸ್ತವವಾಗಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.
Author: Prajatv Kannada
ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನಟ ಅಹಿಂಸಾ ಚೇತನ್ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಸುಮಾರು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಆದರೆ, ಇಲ್ಲಿಯವರೆಗೆ ಸಿದ್ದರಾಮಯ್ಯ ಅವರು ಸರ್ಕಾರದ ಅಧಿಕೃತ ನಿವಾಸಕ್ಕೆ ತೆರಳಿಲ್ಲ. ಈ ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಮೂಡನಂಬಿಕೆಗಳ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗಿದ್ದರು. ಆದರೆ, ಈಗ ಅವರೇ ಮೂಢನಂಬಿಕೆಗಳನ್ನು ಆಚರಣೆ ಮಾಡುತ್ತಿದ್ದಾರೆ. ಆಷಾಢ ಮಾಸವಿದ್ದ ಕಾರಣ ಈ ಮಾಸ ಅಶುಭವೆಂದು ಮನೆಯನ್ನು ಬದಲಿಸದೇ ಮುಂದಿನ ತಿಂಗಳಲ್ಲಿ ಮನೆ ಪ್ರವೇಶ ಮಾಡಲಿದ್ದಾರೆ ಎಂಬ ರೀತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನಟ ಅಹಿಂಸಾ ಚೇತನ್ ಕಿಡಿಕಾರಿದ್ದಾರೆ. ಆಷಾಢದ ‘ಅಶುಭ’ ಅವಧಿಯ ನಂತರ ಹೊಸ ಮನೆಗೆ ಶಿಫ್ಟ್ ಆಗಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ನಿಜವಾದ ವೈಜ್ಞಾನಿಕ ಚಿಂತಕನಿಗೆ ಇಂತಹ ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು? 2 ತಿಂಗಳ ಹಿಂದೆ ‘ದೇವರ’ ಹೆಸರಿನಲ್ಲಿ ಸಿಎಂ…
ಬೆಂಗಳೂರು ;- ರಾಜ್ಯಾಧ್ಯಕ್ಷ ಸ್ಥಾನ ನೀಡದೆ ಇದ್ದಾಗ ಮುಂದಿನ ನಡೆ ತೀರ್ಮಾನಿಸುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗುಗಳನ್ನು ತಿಳಿದಿದ್ದೇನೆ. ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ್ದೇನೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುತ್ತೇನೆ. ಇಲ್ಲವಾದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆ ನಡೆಯಲಿದೆ. ಈ ಹಿನ್ನೆಲೆ ನಗರದೆಲ್ಲೆಡೆ ಪೋಸ್ಟರ್ ಗಳು ರಾರಾಜಿಸುತ್ತಿವೆ. ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿಯ ವಿರುದ್ಧ ಒಗ್ಗಟ್ಟನ್ನು ಪ್ರದರ್ಶಿಸುವ ವಿಪಕ್ಷಗಳ ಸಭೆಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ ಎಂದು ಮೂಲಗಳು ತಿಳಿಸಿವೆ. ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತಿತರ ನಾಯಕರ ಫೋಸ್ಟರ್ ಗಳು ರಾಜಧಾನಿಯಲ್ಲಿ ರಾರಾಜಿಸುತ್ತಿವೆ. ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಈ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಅವರ ಫೋಸ್ಟರ್ ಕೂಡಾ ಕಂಡುಬಂದಿದೆ
ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆದಿರುವ ಬಗ್ಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ. ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಇಲ್ಲಿ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ. ನಮ್ಮಲ್ಲೇ ಬೆಳೆಗಳಿಗೂ ಸಮಸ್ಯೆಯಾಗುತ್ತಿದೆ ಎಂದರು. ಮಂಡ್ಯ ನಗರದಲ್ಲಿ ಮಾತನಾಡಿದ ಅವರು, ನೀರಾವರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ ಬಳಿಕ ತೀರ್ಮಾನ ಮಾಡುತ್ತೇವೆ ಎಂದರು.
ಬೆಂಗಳೂರು ;- ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಒಂದು ಅವಧಿಗೆ ಕ್ರಮ ಕೈಗೊಂಡು, ಮುಂದಿನ ಹಂತದ ನಿರ್ವಹಣೆಯನ್ನು ಸ್ಥಳಿಯ ಕೈಗಾರಿಕಾ ಸಂಘಗಳಿಗೆ ಒಪ್ಪಿಸಲು ಕ್ರಮವಹಿಸುವುದು. ರಾಜ್ಯದ ಬಹುತೇಕ ಕೈಗಾರಿಕಾ ಪ್ರದೇಶಗಳ ಮೂಲ ಸೌಲಭ್ಯಗಳು ಉನ್ನತೀಕರಣಗೊಳ್ಳಬೇಕಿದೆ. ಅದಕ್ಕಾಗಿ ರಾಜ್ಯ ಸರ್ಕಾರ ಒಂದು ಅವಧಿಗೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪುನರಾಭಿವೃದ್ಧಿಯ ಬಳಿಕ ಸದರಿ ಕೈಗಾರಿಕಾ ಪ್ರದೇಶಗಳ ನಿರ್ವಹಣೆಯನ್ನು ಸ್ಥಳೀಯ ಕೈಗಾರಿಕಾ ಸಂಘಗಳಿಗೆ ವಹಿಸಲಾಗುವುದು. ಸಂಗ್ರಹವಾಗುವ ಆರ್ಥಿಕ ಸಂಪನ್ಮೂಲದಲ್ಲಿ ಶೇ.70ರಷ್ಟನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಬಳಕೆ ಮಾಡಿ, ಬಾಕಿ ಉಳಿದ ಶೇ.30ರಷ್ಟನ್ನು ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುವುದು ಎಂದರು. ಆಪಲ್ ಫೋನ್ ತಯಾರಿಸುವ ಫಾಕ್ಸೋನ್ ಸಂಸ್ಥೆ ದೊಡ್ಡ ಬಳ್ಳಾಪುರದಲ್ಲಿ 300 ಎಕರೆಯಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಮುಂದೆ ಬಂದಿದೆ. ಒಂದು ಬಿಲಿಯನ್ ಡಾಲರ್…
ನವದೆಹಲಿ: ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ (ISRO) ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ. ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‍ವರ್ಕ್ (ISTRAC)ನಲ್ಲಿ ಚಂದ್ರಯಾನ-3 ಗಗನನೌಕೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಹ್ಯಾಕಾಶ ನೌಕೆಯು ಈಗ 41,762 ಕಿ.ಮೀ x 173 ಕಿ.ಮೀ ಕಕ್ಷೆಯಲ್ಲಿದೆ ಎಂದು ಮಾಹಿತಿ ನೀಡಿದೆ. ಶುಕ್ರವಾರ ಆಂಧ್ರಪ್ರದೇಶದ (Andhrapradesh) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಶುಭಶುಕ್ರವಾರದಂದು ಜಿಎಸ್‍ಎಲ್‍ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಿಂದ ಉಪಗ್ರಹವು ಮಧ್ಯಾಹ್ನ 2.35ಕ್ಕೆ ನಭಕ್ಕೆ ಚಿಮ್ಮಿತ್ತು. ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14…
ಬೆಂಗಳೂರು: ಸ್ಪೀಕರ್ ಯು.ಟಿ. ಖಾದರ್ (UT Khader) ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ನಡೆದ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ನಿವೃತ್ತ ಸುಪ್ರೀಂ ಕೋರ್ಟ ನ್ಯಾಯಾಧೀಶರಾದ ವಿ ಗೋಪಾಲ್ ಗೌಡ ಅವರು ಉಪಸ್ಥಿತರಿದ್ದರು.
ಹಾಸನ: ಕಾಂಗ್ರೆಸ್ ಸರ್ಕಾರ (Congress Government) ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್ ರಾಜಣ್ಣ (KN Rajanna) ಹೇಳಿದ್ದಾರೆ. ಬಜೆಟ್‌ನಲ್ಲಿ (Budget 2023) ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ (Congress Guarantee) ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ: ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ. ರಾಷ್ಟ್ರೀಯ ಪಕ್ಷವೇ ನಾಯಕನನ್ನ…
ಹಾವೇರಿ: ಜುಲೈ 18 ರ ನಂತರ ವಿಪಕ್ಷ ನಾಯಕನ ಆಯ್ಕೆಯನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದಿಂದ ಬಿಸಿಯುಟ ಕಾರ್ಯಕ್ರಮ ನಡೆಯುತ್ತಿದೆ. ಮಹಿಳೆಯರು ಬಳೆ ಹಾಕಿಕೊಂಡು ಕೇಲಸ ಮಾಡಿದ್ದಾರೆ ಯಾವುದೇ ತೊಂದರೆ ಆಗಿಲ್ಲ ಆದ್ರೆ ಈಗ ಯಾಕೆ ಹೊಸ ಸುತ್ತೋಲೆ, ಸರಕಾರಕ್ಕೆ ಮಾಡಲು ಬೇರೆ ಕೇಲಸ ಇಲ್ವಾ? ಎಂದು ಕಿಡಿಕಾರಿದ್ದಾರೆ. ಪ್ರತಿಪಕ್ಷಗಳಿಗೆ ಸ್ವತಂತ್ರವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲಾ. ಬೆಂಗಳೂರಿನಲ್ಲಿ ನಡೆಯುವ ಸಬೆಗೆ ಯಾವುದೇ ಮಹತ್ವ ಇಲ್ಲ, ಕೇವಲ ಮೋದಿಯವರನ್ನ ಸೋಲಿಸಬೇಕು ಎನ್ನುದು ಇವರ ಉದ್ದೇಶ ಎಂದು ಹೇಳಿದರು. ವರ್ಗಾವಣೆ ದಂದೆ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.