Author: Prajatv Kannada

ಹಾಸನ: ಕಾಂಗ್ರೆಸ್‌ ಸರ್ಕಾರ (Congress Government) ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್‌ ರಾಜಣ್ಣ (KN Rajanna) ಹೇಳಿದ್ದಾರೆ. ಬಜೆಟ್‌ನಲ್ಲಿ (Budget 2023) ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ (Congress Guarantee) ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ: ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ. ರಾಷ್ಟ್ರೀಯ ಪಕ್ಷವೇ ನಾಯಕನನ್ನ…

Read More

ಹಾವೇರಿ: ಜುಲೈ 18 ರ ನಂತರ ವಿಪಕ್ಷ ನಾಯಕನ ಆಯ್ಕೆಯನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದಿಂದ ಬಿಸಿಯುಟ ಕಾರ್ಯಕ್ರಮ ನಡೆಯುತ್ತಿದೆ. ಮಹಿಳೆಯರು ಬಳೆ ಹಾಕಿಕೊಂಡು ಕೇಲಸ ಮಾಡಿದ್ದಾರೆ ಯಾವುದೇ ತೊಂದರೆ ಆಗಿಲ್ಲ ಆದ್ರೆ ಈಗ ಯಾಕೆ ಹೊಸ ಸುತ್ತೋಲೆ, ಸರಕಾರಕ್ಕೆ ಮಾಡಲು ಬೇರೆ ಕೇಲಸ ಇಲ್ವಾ? ಎಂದು ಕಿಡಿಕಾರಿದ್ದಾರೆ. ಪ್ರತಿಪಕ್ಷಗಳಿಗೆ ಸ್ವತಂತ್ರವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲಾ. ಬೆಂಗಳೂರಿನಲ್ಲಿ ನಡೆಯುವ ಸಬೆಗೆ ಯಾವುದೇ ಮಹತ್ವ ಇಲ್ಲ, ಕೇವಲ ಮೋದಿಯವರನ್ನ ಸೋಲಿಸಬೇಕು ಎನ್ನುದು ಇವರ ಉದ್ದೇಶ ಎಂದು ಹೇಳಿದರು. ವರ್ಗಾವಣೆ ದಂದೆ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Read More

ಹಾಸನ: ಕಾಂಗ್ರೆಸ್‌ ಸರ್ಕಾರ (Congress Government) ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್‌ ರಾಜಣ್ಣ (KN Rajanna) ಹೇಳಿದ್ದಾರೆ. ಬಜೆಟ್‌ನಲ್ಲಿ (Budget 2023) ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ (Congress Guarantee) ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ: ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ. ರಾಷ್ಟ್ರೀಯ ಪಕ್ಷವೇ ನಾಯಕನನ್ನ…

Read More

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​, ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿದ ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್,(Ravikumar) ಮಾಹಿತಿ ಪ್ರಕಾರ ಹೆಚ್​ಡಿ ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಬಹುದು. ಇಬ್ಬರಿಗೂ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಆಹ್ವಾನ ಕೊಟ್ಟಿರಬಹುದು ಎಂದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿಗೆ ಬೆಂಬಲ ಕೊಡಲು ಅನೇಕ ಪಕ್ಷಗಳು ಮುಂದೆ ಬಂದಿವೆ. ಕೋವಿಡ್ ಸಂದರ್ಭದಲ್ಲಿ ಮೋದಿ ಜೊತೆ ದೇವೇಗೌಡರು ನಿಂತಿದ್ದರು. ಎನ್​ಡಿಎ ಜೊತೆ ಹೋಗಲು ದೇವೇಗೌಡ ಮತ್ತು ಕುಮಾರಸ್ವಾಮಿ ಯೋಚಿಸುತ್ತಿದ್ದಾರೆ. ಇವರ ಚಿಂತನೆಯನ್ನು ಅಭಿನಂದಿಸುತ್ತೇನೆ. ನಮ್ಮ ಪಕ್ಷದ ನಾಯಕರು ಮುಂದಿನ ತೀರ್ಮಾನ ಮಾಡಲಿದ್ದಾರೆ ಎಂದರು.

Read More

ನಗರದ ಮಹಾಲಕ್ಷ್ಮೀ ಲೇಔಟ್  ನಲ್ಲಿರುವ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದಲ್ಲಿ ಇಂದು ಬೆಳಗ್ಗೆ ಚಾತುರ್ಮಾಸ್ಯ ಸಮಿತಿ(Chaturmasya Samiti) ವತಿಯಿಂದ “ಸಾಧಕ ಶ್ರೀ* ಪ್ರಶಸ್ತಿ ಹಾಗೂ ಸನ್ಮಾನ ಸಮಾರಂಭ ನಡೆಯಿತು. ಸಂಘದಲ್ಲಿ ಹರಿಹರಪುರದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿರವರು 90 ದಿನಗಳ ಕಾಲ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದಾರೆ. ಹೀಗಾಗಿ ಇಂದು ಈ ಚಾತುರ್ಮಾಸ್ಯ ಸಮ್ಮೇಳನದಲ್ಲಿ ಇಬ್ಬರು ಸಾಧಕರಾದ ನಗರದ ಪ್ರಖ್ಯಾತ ಆಯುರ್ವೇದ ವೈದ್ಯರಾದ “ಗಿರಿಧರ್ ಖಜೆ, ಹಾಗೂ ರಾಷ್ಟ್ರೀಯ ರೈತ ಪ್ರಶಸ್ತಿ ವಿಜೇತರಾದ ಎಂ, ಪ್ರಕಾಶ್ ರಾವ್ ಮಂಚಾಲೆ ಇವರಿಗೆ ಚಾತುರ್ಮಾಸ್ಯ ಆಚರಣೆ(Chaturmasya Samiti) ಸಮಿತಿ ವತಿಯಿಂದ ಸಾಧಕ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು ಹಾಗೂ ಮಾಜಿ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ರವರು, ಮಾಜಿ ಶಾಸಕರಾದ ನೆ ಲ ನರೇಂದ್ರ ಬಾಬು, ಮಾಜಿ ಬಿಬಿಎಂಪಿ ಮಾಜಿ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್, ಹರಿಹರಪುರ ಮಠದ ಆಡಳಿತಾಧಿಕಾರಿ ಗಳಾದ ಬಿ ಎಸ್ ರವಿಶಂಕರ್ , ಚಾತುರ್ಮಾಸ್ಯ ಸಮಿತಿಯ…

Read More

ವಿಶ್ವಕಪ್​ನಲ್ಲಿ ಭಾರತದ ಮುಸ್ಲಿಂ ನಮ್ಮನ್ನು ಬೆಂಬಲಿಸುತ್ತಾರೆ ಎಂದು ಪಾಕ್​ ಮಾಜಿ ವೇಗಿ ರಾಣಾ ನವೀದ್​ ಉಲ್​ ಹಸನ್​ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಏಕದಿನ ವಿಶ್ವಕಪ್​ನಲ್ಲಿ ಅಕ್ಟೋಬರ್​ 15ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್​ ಪಂದ್ಯದಲ್ಲಿ ಭಾರತದ ಮುಸ್ಲಿಮರು ಪಾಕಿಸ್ತಾನ ತಂಡವನ್ನು ಬೆಂಬಲಿಸಲಿದ್ದಾರೆ ಎಂದು ಯೂಟ್ಯೂಬ್​ ಪಾಡ್​ಕಾಸ್ಟ್​ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಣಾ ನವೇದ್​ ಉಲ್​ ಹಸನ್​ ಪಾಕಿಸ್ತಾನ ಪರ ಒಟ್ಟಾರೆ 18 ಪಂದ್ಯಗಳನ್ನು ಆಡಿದ್ದಾರೆ. ವಿಶ್ವಕಪ್​ನಲ್ಲಿ 1.30 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ&ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಇದು ವಿಶ್ವದ ಅತಿದೊಡ್ಡ ಕ್ರಿಕೆಟ್​ ಕ್ರೀಡಾಂಗಣವಾಗಿದೆ. ಭಾರತ&ಪಾಕ್​ ಪಂದ್ಯದ ಬಗ್ಗೆ ಮಾತನಾಡಿರುವ 45 ವರ್ಷದ ನವೀದ್​ ಉಲ್​ ಹಸನ್​, ‘ಭಾರತದಲ್ಲಿ ಪಂದ್ಯಗಳು ನಡೆಯುವಾಗ ಯಾವಾಗಲೂ ಖಂಡಿತವಾಗಿಯೇ ಭಾರತವೇ ಫೇವರಿಟ್​ ಆಗಿರುತ್ತದೆ. ಆದರೆ ಪಾಕಿಸ್ತಾನ ತಂಡವೂ ಉತ್ತಮವಿದೆ ಮತ್ತು ಉತ್ತಮ ಪಂದ್ಯ ನಡೆಯಲಿದೆ. ಪ್ರೇಕ್ಷಕರ ವಿಷಯಕ್ಕೆ ಬಂದರೆ, ಭಾರತದಲ್ಲಿರುವ ಮುಸ್ಲಿಮರು ನಮ್ಮ ತಂಡಕ್ಕೆ ಬೆಂಬಲವನ್ನು ನೀಡಲಿದ್ದಾರೆ. ನಾನು ಭಾರತದ…

Read More

ನಟ  ಕಿಚ್ಚ ಸುದೀಪ್ ಮುಂಗಡ ಹಣ ಪಡೆದು ಸಿನಿಮಾ ಮಾಡದೆ ಓಡಾಡುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಗಂಭೀರ ಆರೋಪ ಮಾಡಿದ್ದರು. ಕಳೆದ ಹತ್ತು, ಹನ್ನೆರಡು ದಿನಗಳಿಂದ ನಡೆಯುತ್ತಿರುವ ಈ ಜಾಟಾಪಟಿ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಇತಿಶ್ರೀ ಹಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಇದಕ್ಕೆ ಸುದೀಪ್ ಮನಸ್ಸು ಮಾಡಿರುವಂತೆ ಕಾಣುತ್ತಿಲ್ಲ. ಇದೇ ಕಾರಣಕ್ಕೆ ಸುದೀಪ್ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಎನ್.ಕುಮಾರ್ ಪರವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘದಲ್ಲಿ ಹಲವು ಸಭೆಗಳು ನಡೆದಿವೆ. ಕಿಚ್ಚ ಕೋರ್ಟ್ ಮೆಟ್ಟಿಲು ಏರುತ್ತಿದ್ದಂತೆಯೇ ಮತ್ತೆ ನಿರ್ಮಾಪಕ ಸಂಘ ಹಾಗೂ ವಾಣಿಜ್ಯ ಮಂಡಳಿ ಮತ್ತೊಂದು ಸಭೆ ಮಾಡಿ, ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸುದೀಪ್ ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಎನ್.ಕುಮಾರ್, ‘ನಾನು ಸುದೀಪ್ ಅವರ ಮಾನ ತೆಗೆಯುವಂತಹ ಕೆಲಸ ಮಾಡಿಲ್ಲ. ನನ್ನ ನೋವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದೇನೆ. ಅದಕ್ಕೂ ಮೊದಲ ನಿರ್ಮಾಪಕರ ಸಂಘ ಮತ್ತು…

Read More

ಇತ್ತೀಚೆಗೆ ಬಹುತೇಕ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಹೊಟ್ಟೆ ಬೊಜ್ಜು ಕೂಡ ಒಂದಾಗಿದೆ. ಬದಲಾದ ಆಹಾರ ಪದ್ಧತಿ ಹಾಗೂ ದೈಹಿಕ ಚಟುವಟಿಕೆ ಕಡಿಮೆಯಾಗುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ. ಹೊಟ್ಟೆಯ ಬೊಜ್ಜು ಅತೀಯಾಗಿ ಕಾಣಿಸಿಕೊಂಡರೆ ಮಧುಮೇಹದಿಂದ ಹಿಡಿದು ಹೃದಯದ ಸಮಸ್ಯೆ, ಕ್ಯಾನ್ಸರ್ ನಂತಹ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾಗಾದ್ರೆ ನಾವು ಈ ಸಮಸ್ಸೆಯಿಂದ ಬಜಾವ್​ ಆಗಲು ಕೆಲವೊಂದು ಬದಲಾವಣೆ ನಮ್ಮ ಡೈಲಿ ರೊಟಿನ್ ಮಾಡಿಕೊಳ್ಳಬೇಕು. ಬೊಜ್ಜು ಕರಗಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ 1.ಸ್ವೀಟ್ಸ್ ಸ್ವಲ್ಪ ಕಡಿಮೆ ತಿನ್ನಿ.. ಸಾಮಾನ್ಯವಾಗಿ ಹೊಟ್ಟೆಯ ಕೊಬ್ಬು ಹೆಚ್ಚಾಗಲು ಕಾರಣ ಪ್ರತಿದಿನ ಸೇವಿಸುವ ಸಿಹಿ ಪದಾರ್ಥಗಳು..! ಹಾಗಾಗಿ ಸಕ್ಕರೆ ಮಿಶ್ರಿತ ಸ್ವೀಟ್ಸ್​ಗಳನ್ನ ಕಡಿಮೆ ತಿನ್ನಿ ಖಾಲಿ ಹೊಟ್ಟೆಗೆ ಒಂದು ಗ್ಲಾಸ್ ಲಿಂಬೆ ನೀರು ಕುಡಿಯಿರಿ ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ ಲಿಂಬೆಯ ರಸವನ್ನು ಸೇರಿಸಿ ದಿನಾ ಖಾಲಿ ಹೊಟ್ಟೆಗೆ ಸೇವಿಸಿ 3.ಜೀರಿಗೆ ನೀರು ಸೇವನೆ ಮಾಡಿ  ಒಂದೆರಡು ಟೀ ಚಮಚ ಜೀರಿಗೆಯನ್ನು ನೀರಿನೊಂದಿಗೆ ಚೆನ್ನಾಗಿ ಕುದಿಸಿ ಕುದಿಸಿ, ಉಗುರು ಬೆಚ್ಚಗಿರುವಾಗಲೇ ಪ್ರತಿದಿನ ಒಂದೊಂದು ಲೋಟ ಕುಡಿಯುತ್ತಾ ಬಂದರೆ ಕಿಬ್ಬೊಟ್ಟೆ ಹಾಗೂ ಸೊಂಟದ ಸುತ್ತಲೂ ಶೇಖರಣೆ ಗೊಂಡ ಕೊಬ್ಬು ಸುಲಭವಾಗಿ ಕರಗಿಸುತ್ತದೆ  4.ದಿನಕ್ಕೆ ಎರಡು ಗ್ಲಾಸ್ ಗ್ರೀನ್ ಟೀ ಕುಡಿಯಿರಿ…

Read More

ಪ್ಯಾರಿಸ್: ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ರೂಪಿಸಲು ಬೃಹತ್ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯ ಬ್ಯಾಸ್ಟಿಲ್ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತ-ಫ್ರಾನ್ಸ್ ದ್ವಿಪಕ್ಷೀಯ ಬಾಂಧವ್ಯಕ್ಕೆ 25 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ ಪ್ಯಾರಿಸ್ಗೆ ಭೇಟಿ ನೀಡಿರುವುದು ಹೆಮ್ಮೆ ಎನಿಸುತ್ತಿದೆ ಎಂದರು. ವಿಶ್ವದಾದ್ಯಂತ 30ಕ್ಕೂ ಹೆಚ್ಚು ದೇಶಗಳು ಭಾರತದ ಜತೆ ಬಾಂಧವ್ಯ ಹೊಂದಿವೆ. ಆದರೆ, ಫ್ರಾನ್ಸ್ ಜತೆಗಿನ ಸಂಬಂಧಕ್ಕೆ ವಿಶಿಷ್ಟ ಸ್ಥಾನಮಾನವಿದೆ ಎಂದು ಹೇಳಿದರು. ಉಭಯ ದೇಶಗಳ ರಕ್ಷಣಾ ಒಪ್ಪಂದವು ಭಾರತ- ಫ್ರಾನ್ಸ್ ಸಂಬಂಧದ ಬುನಾದಿ ಎಂದು ಬಣ್ಣಿಸಿರುವ ಮೋದಿ, ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದಲ್ಲಿ ಫ್ರಾನ್ಸ್ ಮಹತ್ವದ ಪಾಲುದಾರನಾಗಿದೆ ಎಂದರು. ಭಾರತ-ಫ್ರಾನ್ಸ್ ಬಾಂಧವ್ಯದ 25ನೇ ವರ್ಷಾಚರಣೆ ಸಂದರ್ಭದಲ್ಲಿ ಟ್ವೀಟ್ ಮಾಡಿದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್, ಉಭಯ ದೇಶಗಳ ನಡುವಿನ ಸಂಬಂಧ ವಿಶ್ವಾಸಾರ್ಹ ಮತ್ತು ಸ್ನೇಹದ ಆಚರಣೆ ಎಂದು…

Read More

ನಾಗ್ಪುರ : ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್‌ ಪೂಜಾರಿ, ಸದ್ಯ ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್‌ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ ಬೆದರಿಕೆ ಕರೆ ಮಾಡಿದಾಗ ಪಾಷಾ ಜತೆಗೇ ಪೂಜಾರಿ ಬೆಳಗಾವಿ ಜೈಲಿನಲ್ಲಿದ್ದ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಹೀಗಾಗಿ ಇದು ಭಯೋತ್ಪಾಕರ ಕುಮ್ಮಕ್ಕಿನ ಮೇಲೆ ನಡೆದ ಬೆದರಿಕೆಯೇ ಎಂಬ ಕುರಿತು ತನಿಖೆ ಚುರುಕುಗೊಳಿಸಲಾಗಿದೆ. ಹೀಗಾಗಿ ಪಾಷಾನನ್ನು ಬಂಧಿಸಲು ನಾಗ್ಪುರ ಪೊಲೀಸರ ತಂಡವು ಕರ್ನಾಟಕಕ್ಕೆ ರವಾನೆಯಾಗಿದೆ ಎಂದು ನಾಗ್ಪುರದ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬೆಳಗಾವಿ ಜೈಲಿನಲ್ಲಿದ್ದ ಕೈದಿ ಜಯೇಶ್‌ ಪೂಜಾರಿ, ನಾಗ್ಪುರದಲ್ಲಿರುವ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಕಳೆದ ಜನವರಿಯಲ್ಲಿ ಕರೆ ಮಾಡಿ, ತಾನು ದಾವೂದ್‌ ಇಬ್ರಾಂಹಿ ಗ್ಯಾಂಗ್‌ ಸದಸ್ಯ ಹಾಗೂ 100 ಕೋಟಿ ರು. ಕೊಡದಿದ್ದರೆ ಕೊಲೆ ಮಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಆತನನ್ನು ಬೆಳಗಾವಿ ಜೈಲಿಂದ ನಾಗ್ಪುರಕ್ಕೆ ಕರೆತರಲಾಗಿತ್ತು. ಪ್ರಕರಣದ ತನಿಖೆ ವೇಳೆ ಜಮ್ಮು– ಕಾಶ್ಮೀರದಲ್ಲಿ ಲಷ್ಕರ್‌-ಎ–ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ಹಾಗೂ ಅವರಿಗೆ ಸಹಾಯ ಮಾಡಿದ್ದ ಕೇಸಲ್ಲಿ ಅಪರಾಧಿಯಾಗಿ ಬಂಧಿತನಾಗಿರುವ ಪಾಷಾ ಜತೆ ಪೂಜಾರಿ ಸಂಪರ್ಕದಲ್ಲಿದ್ದಾನೆ ಎಂದು ನಾಗ್ಪುರ ಪೊಲೀಸರು ತಿಳಿಸಿದ್ದಾರೆ. 2005ರಲ್ಲಿ ಬೆಂಗಳೂರಿನ ‘ಭಾರತೀಯ ವಿಜ್ಞಾನ ಸಂಸ್ಥೆ’ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲೂ ಪಾಷಾ ಭಾಗಿಯಾಗಿದ್ದ. ಹಿಂಡಲಗಾ ಕಾರಾಗೃಹಕ್ಕೆ ಮಹಾ ಪೊಲೀಸ್‌ ಭೇಟಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮಹಾರಾಷ್ಟ್ರದ ನಾಗ್ಪುರ ಎಟಿಎಸ್‌ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಮಂಗಳೂರು ಮೂಲಕ ಜಯೇಶ ಪೂಜಾರಿ ಎಂಬ ಕೈದಿ, ಜೈಲಿನಲ್ಲಿಯೇ ಇದ್ದುಕೊಂಡು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಕಚೇರಿಗೆ ಜ.14ರಂದು ಕರೆ ಮಾಡಿ .100 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಒಂದು ವೇಳೆ ಕೊಡದಿದ್ದರೆ ಬಾಂಬ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಈ ಕುರಿತು ಮಹಾರಾಷ್ಟ್ರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿದ್ದರಿಂದ ಈ ಕರೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಂದಿರುವುದು ಎಂದು ಖಚಿತಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು. ಆದರೆ ಈ ಘಟನೆ ಮಾಸುವ ಮುನ್ನವೇ ಮಾ.21ರಂದು ಎರಡನೇ ಬಾರಿಗೆ ಜಯೇಶ್‌ ಕಾಂತಾ ಅಲಿಯಾಸ್‌ ಜಯೇಶ್‌ ಪೂಜಾರಿ ಎಂಬಾತನ ಹೆಸರಿನಲ್ಲಿ ಮಹಾರಾಷ್ಟ್ರದ ನಾಗ್ಪುರದ ನಿತಿನ್‌ ಗಡ್ಕರಿ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿ .10 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು.  

Read More