Author: Prajatv Kannada

ಬೆಂಗಳೂರು ;- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ. ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು. ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳು, ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳು ಸೇರಿ ಒಟ್ಟು 1,020 ಲೋಕ ಅದಾಲತ್ ಪೀಠಗಳನ್ನು ಸ್ಥಾಪಿಸಲಾಗಿತ್ತು. ಇದರಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ 2.50 ಲಕ್ಷಕ್ಕೂ ಅಧಿಕ ವ್ಯಾಜ್ಯಪೂರ್ವ ಪ್ರಕರಣಗಳು 32.25 ಲಕ್ಷ ಸೇರಿ ಒಟ್ಟು 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

Read More

ಬೆಂಗಳೂರು ;- ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ವಿಧಾನಸೌಧದಲ್ಲಿ ನಮಾಜ್ ಗೆ ನಮಗೆ ವ್ಯವಸ್ಥೆ ಮಾಡಿಕೊಡಿ. ಒಂದು ಕೊಠಡಿ ಮೀಸಲಿಡಿ ಎಂದು ವಿಧಾನ ಪರಿಷತ್ ಸಭಾಪತಿಗಳಿಗೆ ಮನವಿ ಮಾಡಿದ್ದಾರೆ. ಈ ವೇಳೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭಾಧ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದು ನಾಯಕರ ಮಾತುಗಳನ್ನು ಕೇಳಿ ಅಧ್ಯಕ್ಷರ ಅಪೇಕ್ಷೆಯಂತೆ ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.

Read More

ಬಿಡಿಎ ಹೊಸ ಭೂ ಪರಿಹಾರ ಅಡಿ ಪರಿಹಾರ ಕೊಡಲ್ವಾಂತೆ.ಇದೇ ವಿಚಾರ ಬಿಡಿಎ ಹಾಗೂ ರೈತರ ನಡುವಿನ ಹೋರಾಟ ತಾರಕಕ್ಕೇ ರಿದೆ. ಇಷ್ಟು ದಿನ ಭೂಸ್ವಾಧೀನ ಜಾಗದಲ್ಲಿ  ಬಿಡಿಎ ವಿರುದ್ಧ ಕೇವಲ ಪ್ರತಿಭಟನೆ ,ಹಾಗೂ ರ್ಯಾಲಿ ಮಾಡ್ತಿದ್ದ, ರೈತರು ಇವತ್ತು ಬಿಡಿಎ ಕೇಂದ್ರ ಕಚೇರಿಗೆ ನುಗ್ಗಿದ್ದರರು.ಕಾರಂತ ಬಡಾವಣೆ ಹಾಗೂ ಫೆರಿಫರಲ್ ರಸ್ತೆ ಹೊಸ ಭೂ ಪರಿಹಾರ ಅಡಿ  ಭೂಪರಿಹಾರ ಕೊಟ್ಟಿಲ್ಲ ಅಂದ್ರೆ ಪರಿಣಾಮ ನೆಟ್ಟಗಿರಲ್ಲ ಅಂತ ಎಚ್ಚರಿಕೆ ನೀಡಿದ್ರು. ಬಿಡಿಎ ಹೊಸದಾಗಿ ನಿರ್ಮಾಣ ಮಾಡ್ತಿರೋ ಉದ್ದೇಶಿತ ಡಾ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಜಮೀನು ಬಿಟ್ಟುಕೊಡುವವರಿಗೆ ಪರಿಹಾರ ವಿತರಣೆ ವಿಷಯ ಕಗ್ಗಂಟ್ಟು ಆಗಿದೆ..ರೈತರು ಹಾಗೂ ಬಿಡಿಎ ನಡುವೆ ಹಗ್ಗಜಗ್ಗಾಟ ನಡೆಯುತ್ತಲ್ಲೇ ಇದೆ.‌‌.ಲೇಔಟ್ ನಿರ್ಮಾಣಕ್ಕ 3567 ಎಕರೆ ಜಾಗ ಸ್ವಾಧೀನಪಡಿಸಿಕೊಂಡಿರೋ ಬಿಡಿಎ ಸ್ವಾಧೀನ ಜಾಗದಲ್ಲಿ ಟೆಂಡರ್ ಕರೆದು ಲೇಔಟ್ ಪರಿವರ್ತನೆ ಮಾಡ್ತಿದೆ.ಈ ಸಂಬಂಧ ಕೆರಳಿರುವ ರೈತರು 2013 ರ ಕಾಯ್ದೆ ಅಡಿ ಭೂಪರಿಹಾರ ನೀಡುವರಿಗೂ ಲೇಔಟ್ ಮಾಡೋಕೆ ಬಿಡೋದಿಲ್ಲ ಅಂತ ಪಟ್ಟು ಹಿಡಿದ್ದಾರೆ.. ಹೌದು.…

Read More

ಬೆಂಗಳೂರು ;-ಡಿಸೆಂಬರ್‌ ಅಂತ್ಯದೊಳಗೆ 400 ಪಶು ವೈದ್ಯರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಮೂಲಕ ಜಾನುವಾರು ಹಾಗೂ ವೈದ್ಯರ ಅನುಪಾತದಲ್ಲಿ ಸೃಷ್ಟಿಯಾಗಿರುವ ಅಂತರ ಕಡಿಮೆ ಮಾಡಲಾಗುವುದು ಎಂದರು. ಮುಂದಿನ 2 ತಿಂಗಳು ಅವಧಿಯಲ್ಲಿ 200 ಪಶು ಇನ್‌ಸ್ಪೆಕ್ಟರ್‌ಗಳು ಹಾಗೂ ಡಿಸೆಂಬರ್‌ ಅಂತ್ಯದ ವೇಳೆಗೆ 400 ಪಶು ವೈದ್ಯರ ನೇಮಕ ಮಾಡಲಾಗುವುದು. ಸದ್ಯಕ್ಕೆ ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿ ವೈದ್ಯರನ್ನು ವರ್ಗಾವಣೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

Read More

ಬೆಂಗಳೂರು ;- ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1 ತಿಂಗಳಲ್ಲಿ 368 ಕೋಟಿ ರೂ. ವೆಚ್ಚ ತಗುಲಿದೆ. ಉಚಿತ ಪ್ರಯಾಣದ ಶಕ್ತಿ ಯೋಜನೆ ಆರಂಭವಾಗಿದ್ದು, ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ತಿಂಗಳಲ್ಲಿ ನಾಲ್ಕು ನಿಗಮಗಳಲ್ಲಿ 15.57ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಬಿಎಂಟಿಸಿಯಲ್ಲಿ ಅತಿ ಹೆಚ್ಚು 5.02 ಕೋಟಿ ಮಹಿಳಾ ಪ್ರಯಾಣಿಕರು ಓಡಾಡಿದ್ದಾರೆ. ಕೆಎಸ್‌ಆರ್ಟಿಸಿಯಲ್ಲಿ 4.67 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 2.13 ಕೋಟಿ, NWKRTC ಯಲ್ಲಿ 3.74 ಮಹಿಳೆಯರು ಪ್ರಯಾಣಿಸಿದ್ದಾರೆ. ಬಿಎಂಟಿಸಿಯಲ್ಲಿ ಮಹಿಳಾ ಪ್ರಯಾಣಿಕರಿಗೆ 64.72 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಎಸ್‌ಆರ್ಟಿಸಿಯಲ್ಲಿ 137.62 ಕೋಟಿ ರೂ., ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ.ಯಲ್ಲಿ 95.45 ಕೋಟಿ ರೂ., ಕೆ.ಕೆ.ಆರ್.ಟಿ.ಸಿ.ಯಲ್ಲಿ 70.42 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ.

Read More

ಬೆಂಗಳೂರು ;– ಶೀಘ್ರವೇ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ನೇಮಕ ಮಾಡಲಾಗಿದ್ದ 13,500 ಶಿಕ್ಷಕರ ನೇಮಕ ನ್ಯಾಯಲಯದಲ್ಲಿದ್ದು, ಆದಷ್ಟು ಬೇಗ ಇತ್ಯರ್ಥವಾಗುವ ನಿರೀಕ್ಷೆ ಇದೆ. ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಸದ್ಯ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಈ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.

Read More

ಪಾಕ್ (Pakistan) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಇಬ್ಬರು ಆಟಗಾರರು ಏಷ್ಯಾಕಪ್ (Asia Cup) ಹಾಗೂ ವಿಶ್ವಕಪ್​ಗೂ (World Cup) ಮುಂಚೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅಮೇರಿಕಾದಲ್ಲಿ ಆರಂಭವಾಗುತ್ತಿರುವ ಮೇಜರ್ ಲೀಗ್ ಕ್ರಿಕೆಟ್​ನಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ಇಬ್ಬರು ಕ್ರಿಕೆಟಿಗರು ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಅಷ್ಟಕ್ಕೂ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆ ಇಬ್ಬರು ಕ್ರಿಕೆಟಿಗರು ಯಾರು ಎಂಬುದನ್ನು ನೋಡುವುದಾದರೆ, ಎಹ್ಸಾನ್ ಆದಿಲ್ ಮತ್ತು ಆಲ್ ರೌಂಡರ್ ಹಮ್ಮದ್ ಅಜಮ್. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, ಇಬ್ಬರೂ ಆಟಗಾರರಿಗೆ ಮಂಡಳಿ ಕೃತಜ್ಞತೆ ಸಲ್ಲಿಸಿದೆ. https://twitter.com/TheRealPCB/status/1678016152033968129?ref_src=twsrc%5Etfw%7Ctwcamp%5Etweetembed%7Ctwterm%5E1678016152033968129%7Ctwgr%5Eb00f765bc10178c9fb61e948abeb40e5a7daabfe%7Ctwcon%5Es1_&ref_url=https%3A%2F%2Ftv9kannada.com%2Fsports%2Fcricket-news%2Fpakistan-cricketers-hammad-azam-ehsan-adil-announce-international-retirements-psr-619513.html ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಈ ಇಬ್ಬರು ಆಟಗಾರರು ಮೇಜರ್ ಲೀಗ್​ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳಲಿದ್ದು, ಇದರಲ್ಲಿ ಆಲ್ ರೌಂಡರ್ ಹಮ್ಮದ್ ಅಜಮ್ ಮತ್ತು ಎಹ್ಸಾನ್ ಆದಿಲ್ ಐಪಿಎಲ್ ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ಮಾಲೀಕತ್ವದ ಎಂಐ ನ್ಯೂಯಾರ್ಕ್ ಪರ ಆಡಲಿದ್ದಾರೆ. ಪಾಕಿಸ್ತಾನದಲ್ಲಿ ಕ್ರಿಕೆಟ್ ಜೀವನ ಆರಂಭಿಸಿದ…

Read More

ಭಾರತದದಲ್ಲಿ ಅಕ್ಟೋಬರ್‌ನಲ್ಲಿ ಆರಂಭಗೊಳ್ಳಲಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಪಾಲ್ಗೊಳ್ಳುವ ಬಗ್ಗೆ ನಿರ್ಧರಿಸಲು ಪಾಕ್‌ ಪ್ರಧಾನಿ ಶಾಬಾಜ್‌ ಶರೀಪ್‌ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ. ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ನೇತೃತ್ವದ ಸಮಿತಿಯು ಭಾರತದಲ್ಲಿ ಪಾಕ್‌ ಆಟಗಾರರಿಗೆ ನೀಡಲಾಗುವ ಭದ್ರತೆ, ಸರ್ಕಾರದ ನಿಲುವು ಹಾಗೂ ಇತರ ಆಯಾಮಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆ ಬಳಿಕ ಪಾಕ್‌ ತಂಡ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಬೇಕೇ ಬೇಡಬೇ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ಆದರೆ ಅದಕ್ಕೂ ಮುನ್ನ ಪಾಕ್ ತಂಡದ ಮಾಜಿ ಆಲ್​ರೌಂಡರ್ ನೀಡಿರುವ ಹೇಳಿಕೆ ಟೀಂ ಇಂಡಿಯಾ (Team India) ಅಭಿಮಾನಿಗಳನ್ನು ಕೆರಳಿಸಿದೆ. ವಾಸ್ತವವಾಗಿ ಉಭಯ ದೇಶಗಳ ನಡುವಣ ಸಂಬಂಧ ಹದಗೆಟ್ಟಿರುವುದರಿಂದ ಎರಡೂ ದೇಶಗಳ ತಂಡಗಳು ದ್ವಿಪಕ್ಷೀಣ ಸರಣಿಯನ್ನು ಆಡುತ್ತಿಲ್ಲ. ಆದರೆ ಇದಕ್ಕೆ ಹೊಸ ಬಣ್ಣ ಹಚ್ಚಿರುವ ಪಾಕ್ ಮಾಜಿ ಕ್ರಿಕೆಟಿಗ ಸೋಲುವ ಭೀತಿಯಿಂದ ಭಾರತ ತಂಡ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಣ ಸರಣಿ ಆಡುತ್ತಿಲ್ಲ ಎಂದಿದ್ದಾರೆ. ಅತಿರೇಕವೆನಿಸಿದ ಅಬ್ದುಲ್ ರಜಾಕ್ ಹೇಳಿಕೆ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಸರಣಿಯ…

Read More

ಬೆಂಗಳೂರು: ಕಳೆದ ಮೂರು ದಿನಗಳಿಂದ ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾಕ್ ಸಮರ ಮುಂದುವರೆದಿದೆ. ಇಬ್ಬರು ಆರೋಪ, ಪ್ರತ್ಯಾರೋಪ ಮಾಡಿದ್ದು ಇದೀಗ ಸುದೀಪ್ ಕಾನೂನಿನ ಮೂಲಕ ಉತ್ತರಿಸಲು ಮುಂದಾಗಿದ್ದಾರೆ. ಈ ಮಧ್ಯೆ ನಟ ಸುದೀಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಹುಚ್ಚ ಸಿನಿಮಾ ಸಮಯದಲ್ಲಿ ನೀಡಿದ ಮುಂಗಡ ಹಣವನ್ನು ಸುದೀಪ್​​ ವಾಪಸ್​ ಕೊಟ್ಟಿಲ್ಲ ಎಂದು ನಿರ್ಮಾಪಕ ರೆಹಮಾನ್​ ಆರೋಪಿಸಿದ್ದಾರೆ. ಹುಚ್ಚ ಸಿನಿಮಾ ಮಾಡಿದ್ದು ನಾನು. ಆ ಸಿನಿಮಾದಿಂದಲೇ ಕಿಚ್ಚ ಅನ್ನೋ ಬಿರುದು ಬಂದಿದ್ದು. ಹಾಗಂತ ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದೊಮ್ಮೆ ಹಾಕಲು ಸಾಧ್ಯವೇ ಎಂದು ಹೇಳುವ ಮೂಲಕ ಸುದೀಪ್​ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ಎಂ.ಎನ್​ ಕುಮಾರ್​, ನಟ ಸುದೀಪ್​ ವಿರುದ್ಧ ಬರೋಬ್ಬರಿ 10 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿದ್ದರು. ಸಿನಿಮಾ ಮಾಡುವುದಾಗಿ ಹೇಳಿ, ಹಣ ಪಡೆದು ತಮ್ಮ ಆಪ್ತರಿಗೆ ಕೊಡಿಸಿದ್ದಾರೆ. ಈಗ ಸಿನಿಮಾ ಮಾಡಿಕೊಡಿ ಅಂತಾ ಕೇಳಿದ್ರೆ, ಪ್ರತಿಕ್ರಿಯೆ ನೀಡಿಲ್ಲ ಅಂತಾ ಕಳೆದ…

Read More

ಟಾಲಿವುಡ್ ನಟ ನಿತಿನ್ ರಾಜಕೀಯ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಸದ್ಯದಲ್ಲೇ ನಟನೆಗೆ ಗುಡ್ ಬೈ ಹೇಳಲಿರುವ ನಟ ನಿತಿನ್ ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾದ ಬಳಿಕ ರಾಜಕೀಯಕ್ಕೆ ಎಂಟ್ರಿಕೊಡಲಿರುವ ನಿತಿನ್ ಈ ಮೂಲಕ ತಮ್ಮ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಲು ಮುಂದಾಗಿದ್ದಾರೆ. ಈಗಾಗಲೇ ಸಾಕಷ್ಟು ನಟ, ನಟಿಯರು ರಾಜಕೀಯಕ್ಕೆ ಎಂಟ್ರಿಕೊಟ್ಟು ಹೆಸರು ಮಾಡಿದ್ದಾರೆ. ನಟರಾದ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಪವನ್ ಕಲ್ಯಾಣ್ ರಾಜಕೀಯದಲ್ಲಿ ಸಾಕಷ್ಟು ಹೆಸರು ಮಾಡಿದ್ದು ಇದೀಗ ಅದೇ ಹಾದಿಯಲ್ಲಿ ನಟ ನಿತಿನ್ ಹೆಜ್ಜೆ ಇಡಲು ಸಜ್ಜಾಗಿದ್ದಾರೆ. ಸಿನಿಮಾರಂಗದಲ್ಲಿ ತಮಗೆ ಸಾಕಷ್ಟು ಡಿಮ್ಯಾಂಡ್ ಇರುವಾಗಲೇ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರೋದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಸದ್ಯದಲ್ಲೇ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ವರ್ಷಾಂತ್ಯಕ್ಕೆ ನಡೆಯಲಿರೋ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿತಿನ್ ಮುಂದಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಕದವನ್ನು ನಿತಿನ್ ತಟ್ಟಿದ್ದಾರೆ ಎನ್ನಲಾಗಿದೆ. ನಿಜಾಮಾಬಾದ್ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ನಿತಿನ್ ಬೇಡಿಕೆ ಇಟ್ಟಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್…

Read More