Author: Prajatv Kannada

ನವದೆಹಲಿ: ಒಂದು ಕಾಲದಲ್ಲಿ ಕೆಲ ಯುವಕ-ಯುವತಿಯರು ಕಾಂಡೋಮ್ ಚಾಲೆಂಜ್ ಸ್ವೀಕರಿಸಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿಕೊಳ್ಳುತ್ತಿದ್ದರು. ಈ ಫೋಟೋ ಹಾಗು ವಿಡಿಯೋಗಳನ್ನು ನೋಡಿದ ಯುವ ಜನತೆ ಚಾಲೆಂಜ್ ಸ್ವೀಕರಿಸಲು ಹೋಗಿ ಪೇಚಿಗೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಏನಿದು ಕಾಂಡೋಮ್ ಚಾಲೆಂಜ್?: ಕಾಂಡೋಮ್‍ನ್ನು ಮೂಗಿನ ರಂಧ್ರದಲ್ಲಿ ಹಾಕಿಕೊಂಡು ಬಾಯಿ ಮುಖಾಂತರ ಹೊರಗೆ ತೆಗೆಯುವುದು. ಹೀಗೆ ಮೂಗಿನ ರಂಧ್ರದ ಮೂಲಕ ಹೋದ ಕಾಂಡೋಮ್ ಬಾಯಿ ಮೂಲಕ ಹೊರ ಬರುವಾಗ ಉಸಿರಾಟದಲ್ಲಿ ಏರಿಳಿತ ಉಂಟಾದ್ರೆ ಅಪಾಯ ಉಂಟಾಗುವ ಸಾಧ್ಯತೆಗಳು ಹೆಚ್ಚಿವೆ. ಆದ್ರೂ ಕೆಲವರು ಮಾತ್ರ ಸಲೀಸಾಗಿ ಕಾಂಡೋಮ್ ನ್ನು ಮೂಗಿನ ಮೂಲಕ ಸೇರಿಸಿ ಬಾಯಿಯಿಂದ ಹೊರ ತೆಗೆದಿದ್ದಾರೆ. ಕಾಂಡೋಮ್ ತೆಳುವಾದ ಪ್ಲಾಸ್ಟಿಕ್ ನಿಂದ ಮಾಡಲ್ಪಟ್ಟಿರುತ್ತದೆ. ಕಾಂಡೋಮ್ ಮೇಲೆ ಎಣ್ಣೆ( Lubricant And Spermicide) ಮಾದರಿಯ ಅಂಶದ ಲೇಪನದ ಜೊತೆಗೆ ಕೆಲವು ರಾಸಾಯನಿಕ ಪದಾರ್ಥಗಳ ಬಳಕೆ ಆಗಿರುತ್ತದೆ. ಕಾಂಡೋಮ್ ಚಾಲೆಂಜ್ ಸ್ವೀಕರಿಸಿದ ವ್ಯಕ್ತಿ ಕಾಂಡೋಮ್‍ನ್ನು ಮೂಗಿನ ನಾಳಗಳಲ್ಲಿ ಸೇರಿಸಿದಾಗ ಅಲ್ಲಿರುವ ಮೃದು ಮೂಳೆಗಳಿಗೆ ತೊಂದರೆ ಆಗುವ ಸಾಧ್ಯತೆಗಳೂ ಕೂಡ…

Read More

ಹಿರಿಯೂರು: ಕಾಂಗ್ರೆಸ್‌ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದ್ದು, ನಂಬಿ ಬಂದವರ ಎಂದಿಗೂ ಕೈ ಬಿಟ್ಟಿಲ್ಲ. ಪೋಷಿಸಿ ಸಲಹಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಹೇಳಿದರು. ನಗರದ ತುಳಸಿ ನಾರಾಯಣರಾವ್ ಕಲ್ಯಾಣ ಮಂಟಪದಲ್ಲಿ ಡಿ. ಸುಧಾಕರ್‌ ಮತ್ತು ಜಿ.ಎಸ್‌ ಮಂಜುನಾಥ್‌ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಸನ್ಮಾನ ಮತ್ತು ಜಿ.ಎಸ್‌ ಮಂಜುನಾಥ್‌ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಳ್ಮೆಯಿಂದ ಕಾದಲ್ಲಿ ಅವಕಾಶಗಳ ಹೆಬ್ಬಾಗಿಲುಗಳು ತಂತಾನೆ ತೆರೆಯುತ್ತವೆ ಎಂದರು. ಜಿ.ಎಸ್‌. ಮಂಜುನಾಥ್‌ ಈ ಮೊದಲು ಹಿರಿಯೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತರೂ ಜನರ ಒಡನಾಟ ಎಂದೂ ಬಿಡಲಿಲ್ಲ. ಎಲ್ಲಾ ಜನಾಂಗದ ಜನರ ಮತ್ತು ಯುವಕರ ಒಲವು ಮತ್ತು ವಿಶ್ವಾಸ ಗಳಿಸಿಕೊಂಡು ಸದಾ ಜನರೊಡನೆ ಬೆರೆಯುವ ಗುಣವುಳ್ಳವ ರಾಗಿದ್ದಾರೆ. ಭವಿಷ್ಯದಲ್ಲಿ ಜಿ.ಎಸ್‌. ಮಂಜುನಾಥ್‌ರವರಿಗೆ ನಿಜಕ್ಕೂ ಒಳ್ಳೆಯ ದಿನಗಳು ಕಾದು ಕುಳಿತಿವೆ ಎಂದರು. ಜಿ.ಎಸ್‌ ಮೂಲತಃ ಹೋರಾಟದ ಮನೋಭಾವದ ವ್ಯಕ್ತಿ. ಅನೇಕ ಜನಪರ ಹೋರಾಟಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪೌರ ನೌಕರರ ಪರವಾಗಿ ಹೋರಾಟ…

Read More

ರಾಯಚೂರು:– ಇತ್ತೀಚೆಗೆ ಆರೋಗ್ಯದ ವಿಷಯದಲ್ಲಿ ನಾನಾ ಕಂಪನಿಗಳು ಔಷಧಿಗಳ ಬಗ್ಗೆ ಜಾಹೀರಾತುಗಳನ್ನು ಬಿಡುತ್ತಿವೆ. ದಪ್ಪ, ತೆಳ್ಳ, ಉದ್ದ, ಎತ್ತರ ಎಂದೆಲ್ಲ ಜನರನ್ನು ನಂಬಿಸಿ ಔಷಧಿ ಮಾರಾಟ ಮಾಡುವ ಕಾಯಕ ಮಾಡುತ್ತಿವೆ. ಹೀಗೆ ತೆಳ್ಳಗಾಗುವ ಪ್ರಾಡೆಕ್ಟ್ ನಂಬಿ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ 26 ನೆ ವಾಡ್೯ನ ನಿವಾಸಿ ಅಯಾದ್ ಖಾತೂನ್ ಎಂಬ ಮಹಿಳೆಗೆ ಮೊಣಕಾಲು ನೋವಿಗೆ ಹರ್ಬಲ್ ಲೈಫ್ ಕಂಪನಿಯ ಔಷಧವನ್ನು ಸೇವಿಸಿದ್ದಾರೆ. ಹರ್ಬಲ್ ಲೈಫ್ ನ ಗುರುಬಸವ ಎಂಬುವವರು ಅಯಾದ್ ಖಾನ್ ಎಂಬ ಮಹಿಳೆಗೆ ಔಷಧ ನೀಡಿದ್ದಾರೆ. ಆದರೆ, ಈ ಔಷಧಿ ಸೇವಿಸಿದ್ದ ಮಹಿಳೆಯ ವಾಂತಿಯಿಂದ ಒದ್ದಾಡಿದ್ದಾರೆ. ಕೂಡಲೇ ಕುಟುಂಬಸ್ಥರು ರಾಯಚೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಕಂಪನಿಯ ವಿರುದ್ಧ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು ;- ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಜು. 20 ರಿಂದ ಮದ್ಯ ದುಬಾರಿ ಆಗಲಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಸುಂಕ ಏರಿಕೆ ಜುಲೈ 20 ರಿಂದ ಜಾರಿಯಾಗಲಿದೆ. ಸುಂಕ ಹೆಚ್ಚಳ ಕುರಿತಾಗಿ ಸರ್ಕಾರದಿಂದ ಸೋಮವಾರ ಕರಡು ಪ್ರಕಟಿಸಲಾಗಿದ್ದು, 7 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸಲು ಕೋರಲಾಗಿದೆ, ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ ಎಲ್ಲಾ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹಾಲಿ ಇರುವ ದರಕ್ಕಿಂತ ಶೇಕಡ 20ರಷ್ಟು ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ ಮಾಡಲಿದ್ದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 175 ರಿಂದ ಶೇಕಡ 185ರಷ್ಟು ಹೆಚ್ಚಳವಾಗಲಿದೆ. ಭಾರತೀಯ ಮದ್ಯ 60 ಎಂಎಲ್ ಒಂದು ಪೆಗ್ ಗೆ 10 ರಿಂದ 20 ರೂಪಾಯಿ ಹೆಚ್ಚಳ ಆಗಲಿದೆ. ಬಿಯರ್ ಬೆಲೆ ಪ್ರತಿ ಬಾಟಲ್ ಗೆ ಮೂರರಿಂದ…

Read More

ಬೆಂಗಳೂರು ;- ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೇ ತಿಂಗಳಲ್ಲಿ ಅಪಖ್ಯಾತಿಗೆ ಒಳಗಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಟೀಕೆ ಮಾಡಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನುಡಿದಂತೆ ನಡೆಯದ ಸರ್ಕಾರ ಕವಲು ದಾರಿಯಲ್ಲಿದ್ದು, ಒಂದೇ ತಿಂಗಳಲ್ಲಿ ಅಪಖ್ಯಾತಿಗೆ ಒಳಗಾದ ಸರ್ಕಾರ ಇದಾಗಿದೆ. ಪಂಚ ಗ್ಯಾರಂಟಿ ಜಾರಿಗೊಳಿಸುವಲ್ಲಿ ಗೊಂದಲ ಇದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಅಂತ ಆರೋಪ ಮಾಡಿದ್ದೀರಿ, ಎಫ್‌ಸಿ‌ಐ ಅಧಿಕಾರಿಗೆ ಒಂದು ರಾಜ್ಯಕ್ಕೆ ಅಕ್ಕಿ ಕೊಡುವ ಅಧಿಕಾರ ಇಲ್ಲ. ನೀವು ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಿತ್ತು. ಅಷ್ಟಕ್ಕೂ ಕೇಂದ್ರ ಸರ್ಕಾರ ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತ ಹೇಳಿತ್ತಾ? ಕೇಂದ್ರದ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡಿದ್ದೀರಾ” ಎಂದು ಪ್ರಶ್ನಿಸಿದರು. ಮಾನ್ಸೂನ್ ಕಾರಣದಿಂದ ಅಕ್ಕಿ ಅಲಭ್ಯತೆ ಇದೆ. ಹಾಗಾಗಿ ಕೇಂದ್ರ ಅಕ್ಕಿ ಕೊಡಕ್ಕಾಗಿಲ್ಲ. ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ತಯಾರಾಗಿದ್ದರು. ಆಂಧ್ರಪ್ರದೇಶ, ಛತ್ತೀಸ್‌ಗಡ ಸರ್ಕಾರಗಳು ಸಹಾಯ ಮಾಡಲು ಮುಂದಾಗಿದ್ದವು. ತೆಲಂಗಾಣ ಸರ್ಕಾರ ಭತ್ತ ಕೊಡಲು…

Read More

ಬೆಂಗಳೂರು ;– ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಗ್ಯಾರಂಟಿಗಳು ಸಿಗಲಿವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದರು. ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ ರೂ.ಗೌರವಧನ ಕೊಡುತ್ತಿದೆ, ಇದರ ಜೊತೆಗೆ 5 ರಿಂದ 8 ಸಾವಿರ ಅವರ ಕೆಲಸದ ಆಧಾರದಲ್ಲಿ ಇನ್ಸೆಂಟಿವ್ ಸಿಗಲಿದೆ. ಇನ್ಸೆಂಟಿವ್​ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡರ ಪಾಲೂ ಇದೆ. ಆದರೆ, ಅವರಿಗೆ ಪಿಂಚಣಿ ನೀಡಲಾಗಲ್ಲ, ಅವರು ಖಾಯಂ ನೌಕರರಲ್ಲದ ಕಾರಣ ಅವರಿಗೆ ಪಿಂಚಣಿ ನೀಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ. ಈಗಿರುವ ಪ್ರಕಾರ ಕೊಡಲು ಸಾಧ್ಯವೂ ಇಲ್ಲ. ಭವಿಷ್ಯದಲ್ಲಿ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.

Read More

ಬೆಂಗಳೂರು ;- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಹೈಕೋರ್ಟ್ ರದ್ದುಪಡಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆ ಮುಂದೂಡಿದೆ. ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ನಗರದ ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ಇತರ ಭಾಗದಲ್ಲಿ ಪ್ರತಿಭಟನೆ ನಡೆಸಬಾರದು ಎಂಬುದಾಗಿ ರಾಜ್ಯಸರ್ಕಾರದ ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ನಗರದ ಪುರಭವನದ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಮಾಡಿ ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್.ಪಾರ್ಕ್ ಠಾಣೆಯ ಇನ್ಸ್‌ಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ಸಲ್ಲಿಸಿದ್ದಾರೆ. ಆದರೆ, ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಎಸ್.ಜೆ.ಪಾರ್ಕ್​ ಠಾಣೆ ಇನ್ಸ್‌ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು…

Read More

ಬೆಂಗಳೂರು ;-ಕಾರಣಾಂತರಗಳಿಂದ ಗೃಹಲಕ್ಷ್ಮಿ ಯೋಜನೆ ಜಾರಿ ವಿಳಂಬ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ 3 ಯೋಜನೆ ಜಾರಿಗೊಳಿಸಿದ್ದೇವೆ. ನವೆಂಬರ್- ಡಿಸೆಂಬರ್​​ನಿಂದ ಯುವ ನಿಧಿ ಯೋಜನೆ ಜಾರಿಗೊಳಿಸುತ್ತೇವೆ ಎಂದರು. ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಲ್ಪ ಸಮಯ ಬೇಕಿದೆ. ಮನೆ ಕುಟುಂಬದ ಯಜಮಾನಿಗೆ 2 ಸಾವಿರ ರೂಪಾಯಿ ಹಾಕಬೇಕಿರುವುದರಿಂದ ಅವರ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮಯಾವಕಾಶ ಬೇಕಾಗಿದೆ. ಹಾಗಾಗಿ ಸ್ವಲ್ಪ ವಿಳಂಬವಾಗಿದೆ. ಆಗಸ್ಟ್ 16ರಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.

Read More

ಬೆಂಗಳೂರು ;– 5 ಗುಂಟೆ ಒಳಗಿನ ಭೂಮಿಯಲ್ಲಿ ಗೃಹನಿರ್ಮಾಣಕ್ಕೆ ಮತ್ತು ನೋಂದಣಿಗೆ ಅವಕಾಶ ನೀಡುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ”5 ಗುಂಟೆ ಒಳಗಿನ ಕಂದಾಯ ಭೂಮಿಯನ್ನು ಮಾರಾಟ ಮಾಡಬಾರದು ಎಂಬ ಕಾರಣಕ್ಕೆ ನೋಂದಣಿಗೆ ನಿರ್ಬಂಧಿಸಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರು ಈ ರೀತಿಯ ಸಣ್ಣ ಸಣ್ಣ ಪ್ರಮಾಣದ ಭೂಮಿಯಲ್ಲಿ ಬಡಾವಣೆಗಳನ್ನು ನಿರ್ಮಿಸಿ ಲಾಭ ಮಾಡಿಕೊಳ್ಳುತ್ತಾರೆ. ಅಲ್ಲಿ ಸೌಲಭ್ಯ ಇಲ್ಲದೇ ಇರುವಾಗ ಜನ ಸರ್ಕಾರವನ್ನು ಪ್ರಶ್ನೆ ಮಾಡುತ್ತಾರೆ. ಈ ಕಾರಣಕ್ಕಾಗಿ 2021ರಲ್ಲಿ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ” ಎಂದು ತಿಳಿಸಿದರು ಆದರೆ, ಅವಿಭಜಿತ ಕುಟುಂಬಗಳ ಸದಸ್ಯರ ನಡುವೆ ಕಡಿಮೆ ಪ್ರಮಾಣದ ಭೂಮಿ ನೋಂದಣಿಯಗಲಿದೆ. ಮನೆ ಕಟ್ಟಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು. ಎಲ್ಲಿಯಾದರೂ ಈ ರೀತಿಯ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದರೆ, ಸರಿಪಡಿಸಿ ಕೋಡುತ್ತೇವೆ” ಎಂದು ಭರವಸೆ ನೀಡಿದರು.

Read More

ಬೆಂಗಳೂರು ;- ಪಿಎಸ್‌ಐ ಮರುಪರೀಕ್ಷೆ ಪ್ರಶ್ನಿಸಿ ಬೆಂಗಳೂರಿನ ಹೈಕೋರ್ಟ್ ಗೆ ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆ ಜುಲೈ 12ಕ್ಕೆ ನಡೆಯಲಿದೆ. ನೂರಾರು ಅಭ್ಯರ್ಥಿಗಳು ಅರ್ಜಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು. ಇದರ ವಿಚಾರಣೆ ವೇಳೆ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಹಾಜರಾಗಿ, ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಯಾವುದೇ ಆರೋಪಕ್ಕೆ ಗುರಿಯಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆ ನಡೆಸದಿರಲು ಕೈಗೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಕಾರಣಗಳನ್ನು ವಿವರಿಸಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಅರ್ಜಿದಾರರ ಪರ ವಕೀಲರು, ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರ ವಿರುದ್ಧ ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿಲ್ಲ. ಆರೋಪಿಗಳ ವಿರುದ್ಧ ಯಾವೆಲ್ಲಾ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಅವುಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ…

Read More