ಚೀಫ್ ಸೆಲೆಕ್ಟರ್ ಹುದ್ದೆಗೆ ಅಜಿತ್ ಅಗರ್ಕರ್ ಆಯ್ಕೆ ಅತ್ಯಂತ ಮಹತ್ವದ ನಿರ್ಧಾರ ಆಗಿದೆ. ಏಕೆಂದರೆ, ಚೀಫ್ ಸೆಲೆಕ್ಟರ್ ಹುದ್ದೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ಆಡಿದ ಅನುಭವ ಹೊಂದಿರುವ ಟೀಮ್ ಇಂಡಿಯಾ ಮಾಜಿ ಆಟಗಾರನ ಆಯ್ಕೆ ಆಗಿರುವುದು ಇದು ಎರಡನೇ ಬಾರಿ ಆಗಿದೆ. ಇನ್ನು ಅಜಿತ್ ಅಗರ್ಕರ್ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಆಡಿ ಐಪಿಎಲ್‌ನಲ್ಲೂ ತಮ್ಮ ಕರಾಮತ್ತು ಪ್ರದರ್ಶಿದ್ದ ಅಪ್ರತಿಮ ವೇಗದ ಬೌಲರ್ ಆಗಿದ್ದರು. ಟೀಮ್ ಇಂಡಿಯಾದ ಆಯ್ಕೆ ಸಮಿತಿಯಲ್ಲಿ ಈಗ ಶಿವಸುಂದರ್ ದಾಸ್, ಸುಬ್ರೊತೊ ಬ್ಯಾನರ್ಜಿ, ಸಲಿಲ್ ಅಂಕೋಲಾ ಮತ್ತು ಶ್ರೀಧರನ್ ಶರತ್ ಇದ್ದು, ಐದನೇ ಸದಸ್ಯ ಹಾಗೂ ಸಮಿತಿ ಮುಖ್ಯಸ್ಥನಾಗಿ ಅಜಿತ್ ಅಗರ್ಕರ್ ಸೇರ್ಪಡೆ ಆಗಿದೆ. ಈ ಸಮಿತಿಯಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಅನುಭವ ಅಜಿತ್ ಅಗರ್ಕರ್ ಅವರಿಗೆ ಇರುವ ಕಾರಣ ಅವರನ್ನು ಚೀಫ್ ಸೆಲೆಕ್ಟರ್ ಆಗಿ ನೇಮಕ ಮಾಡಲಾಗಿದೆ. ಇಲ್ಲಿಯವರೆಗೂ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದವರು ಕೆಲವೇ ಕೆಲ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುತ್ತಿದ್ದರು. ಅದಕ್ಕೆ…
Author: Prajatv Kannada
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಯಶಸ್ಸು ಗಳಿಸಿದ ಮೇಲೆ ಜಗತ್ತಿನಾದ್ಯಂತ ಹಲವು ಟಿ20 ಲೀಗ್ ಟೂರ್ನಿಗಳು ಜನ್ಮತಾಳಿವೆ. ಐಪಿಎಲ್ ಟೂರ್ನಿಯನ್ನೇ ಕಾಫಿ ಮಾಡಿರುವ ಉಳಿದ ಟಿ20 ಲೀಗ್‌ಗಳು ಮರ್ಕ್ಯೂ ಆಟಗಾರರನ್ನಾಗಿ ವಿದೇಶಿ ಆಟಗಾರನ್ನು ಆಯ್ದುಕೊಳ್ಳಲು ಅವಕಾಶ ನೀಡಿವೆ. ಆದರೆ ವಿದೇಶಿ ಟಿ20 ಟೂರ್ನಿಗಳಲ್ಲಿ ಭಾರತದ ಯಾವೊಬ್ಬ ಹಾಲಿ ಕ್ರಿಕೆಟಿಗನು ಪಾಲ್ಗೊಳ್ಳಲುವ ಅವಕಾಶವನ್ನು ಬಿಸಿಸಿಐ ನೀಡಿಲ್ಲ. ಟೀಂ ಇಂಡಿಯಾ ಹಾಲಿ ಕ್ರಿಕೆಟಿಗರು ವಿದೇಶಿ ಟಿ20 ಲೀಗ್‌ನಲ್ಲಿ ಪಾಲ್ಗೊಳ್ಳುವುದಕ್ಕೆ ನಿಷೇಧ ಹೇರಿದ್ದು, ಕಠಿಣ ನಿಯಮಾವಳಿಗಳನ್ನು ತಂದಿದೆ. ಹೀಗಿದ್ದೂ ಇತ್ತೀಚೆಗಿನ ದಿನಗಳಲ್ಲಿ ಕೆಲವು ಕ್ರಿಕೆಟಿಗರು ಭಾರತ ಹಾಗೂ ಅಂತಾರಾಷ್ಟ್ರೀಯ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿ, ವಿದೇಶಿ ಟಿ20 ಲೀಗ್‌ನಲ್ಲಿ ಪಾಲ್ಗೊಳ್ಳಲಾರಂಭಿಸಿದ್ದಾರೆ. ಆದರೆ ಈ ರೀತಿ ಮಾಡುವುದಕ್ಕೂ ಬ್ರೇಕ್ ಹಾಕಲು ಬಿಸಿಸಿಐ ಮುಂದಾಗಿರುವಂತೆ ಕಂಡುಬಂದಿದ್ದು, ಈ ಕುರಿತಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುಟ್ಟೊಂದನ್ನು ಬಿಚ್ಚಿಟ್ಟಿದ್ದಾರೆ. ಮುಂಬೈನಲ್ಲಿ ಶುಕ್ರವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಮೀಟಿಂಗ್‌ನಲ್ಲಿ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ಈ ಕುರಿತಂತೆ ಉದ್ದೇಶಪೂರ್ವಕವಾಗಿ ನಿವೃತ್ತಿ ತೆಗೆದುಕೊಂಡು, ವಿದೇಶಿ ಲೀಗ್‌ನಲ್ಲಿ ಪಾಲ್ಗೊಳ್ಳಲಿಚ್ಚಿಸುವ ಆಟಗಾರರಿಗೆ ಬ್ರೇಕ್ ಹಾಕುವ ಸುಳಿವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಿಚ್ಚಿಟ್ಟಿದ್ದಾರೆ. ವಿದೇಶಿ ಟಿ20 ಲೀಗ್‌ನಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದಲೇ ಕೆಲವು ಕ್ರಿಕೆಟಿಗರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿರುವುದು ಬಿಸಿಸಿಐ ಅಪೆಕ್ಸ್ ಬಾಡಿಯ ಅಸಮಾಧಾನಕ್ಕೆ ಗುರಿಯಾಗಿದೆ. “ಉದ್ದೇಶಪೂರ್ವಕವಾಗಿಯೇ ಅವಧಿಗೂ ಮುನ್ನ ನಿವೃತ್ತಿ ನಿರ್ಧಾರ ಪ್ರಕಟಿಸುತ್ತಿರುವ ಚಾಳಿಗೆ ಕಡಿವಾಣ ಹಾಕಲು ನಾವು ಸದ್ಯದಲ್ಲಿಯೇ ಒಂದು ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ. ಒಂದು ತಿಂಗಳು ಅಥವಾ ಸ್ವಲ್ಪ ದಿನಗಳ ಬಳಿಕ ಪಾಲಿಸಿ ನೀತಿ–ನಿಯಮಗಳು ತೀರ್ಮಾನವಾದ ಬಳಿಕ ಅದನ್ನು ಒಪ್ಪಿಗೆಗಾಗಿ ಅಪೆಕ್ಸ್ ಕೌನ್ಸಿಲ್‌ಗೆ ಕಳಿಸಿಕೊಡಲಾಗುವುದು” ಎಂದು ಜಯ್ ಶಾ ತಿಳಿಸಿದ್ದಾರೆ.
ವಾಷಿಂಗ್ಟನ್ (ಯುಎಸ್): ಪೂರ್ವ ಸಿರಿಯಾದಲ್ಲಿ ಡ್ರೋನ್ ದಾಳಿ ನಡೆಸಿ, ಇಸ್ಲಾಮಿಕ್ ಸ್ಟೇಟ್ ನಾಯಕನನ್ನು ಹತ್ಯೆಗೈಯ್ಯಲಾಗಿದೆ ಎಂದು ಯುಎಸ್ ಮಿಲಿಟರಿ ಹೇಳಿಕೊಂಡಿದೆ. ಯುಎಸ್ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಶುಕ್ರವಾರ ನಡೆದ ಮುಷ್ಕರದಲ್ಲಿ ಒಸಾಮಾ ಅಲ್-ಮುಹಾಜರ್ ಕೊಲ್ಲಲ್ಪಟ್ಟಿದ್ದಾನೆ. ದಾಳಿಯಲ್ಲಿ MQ-9 ಡ್ರೋನ್ ಬಳಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಅದೇ ದಿನ ರಷ್ಯಾದ ವಿಮಾನಗಳು ಡ್ರೋನ್ ಅನ್ನು ಬೆನ್ನಟ್ಟಿದ್ದವು. ಸಿರಿಯಾದಲ್ಲಿ ಯುಎಸ್ ಸೆಂಟ್ರಲ್ ಕಮಾಂಡ್ ದಾಳಿಯು ಪೂರ್ವ ಸಿರಿಯಾದಲ್ಲಿ ಐಸಿಸ್ ನಾಯಕ ಉಸಾಮಾ ಅಲ್-ಮುಹಾಜಿರ್ ಅನ್ನು ಕೊಂದಿದೆ ಎಂದು ಹೇಳಿಕೆ ತಿಳಿಸಿದೆ. ಹತ್ಯೆಗೀಡಾದ ವ್ಯಕ್ತಿ ಅಲ್-ಮುಹಾಜಿರ್ ಎಂದು ಯುಎಸ್ ಮಿಲಿಟರಿ ಹೇಗೆ ದೃಢಪಡಿಸಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಬೇರೆ ಯಾವುದೇ ಮಾಹಿತಿ ನೀಡಿಲ್ಲ. ದಾಳಿಯಲ್ಲಿ ಯಾವುದೇ ನಾಗರಿಕರು ಗಾಯಗೊಂಡಿರುವ ಯಾವುದೇ ಸೂಚನೆಯಿಲ್ಲ ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
ನವದೆಹಲಿ: ಕೇಂದ್ರದ ನರೇಂದ್ರ ಮೋದಿ(Narendra Modi) ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಎತ್ತಿದೆ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಸಿಟ್ಟಿಗೆದ್ದಿರುವ(Sachin pilot) ಸಚಿನ್ ಪೈಲಟ್, ಗೆಹ್ಲೋಟ್ ಜೊತೆ ಕಾಂಗ್ರೆಸ್ ಹೈಕಮಾಂಡ್ ರಾಜಿ ಮಾಡಿದ ನಂತರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಯಾವುದೇ ಕಾಂಕ್ರೀಟ್ ಪ್ರಸ್ತಾಪವಿಲ್ಲದೆ ಯುಸಿಸಿ ಬಗ್ಗೆ ಮಾತನಾಡುವುದು ತುಂಬಾ ವ್ಯಂಗ್ಯವಾಡಿದರು. ಹಣದುಬ್ಬರ, ಬಡತನ ಮತ್ತು ಇತರ ಗಂಭೀರ ವಿಷಯಗಳನ್ನು ಸಾರ್ವಜನಿಕರಿಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಉದ್ದೇಶಪೂರ್ವಕವಾಗಿ ಯುಸಿಸಿಯ ಗೂಗ್ಲಿಯನ್ನು ಸಾರ್ವಜನಿಕರ ಮುಂದೆ ಎಸೆದಿದೆ. ಆದರೆ ಇದು ಯಾವುದೇ ವಿಶೇಷ ಪರಿಣಾಮ ಬೀರುವುದಿಲ್ಲ, ಸಾರ್ವಜನಿಕರು ತಮ್ಮ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಸಚಿನ್ ಪೈಲಟ್, ಯುಸಿಸಿಗೆ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ (Rain) ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆ ಬಾಲ್ಟಾಲ್ ಬೇಸ್‌ನಿಂದ ಮತ್ತೆ ಅಮರನಾಥ ಯಾತ್ರೆ (Amarnath Yatra) ಪುನರಾರಂಭಗೊಳಿಸಲಾಗಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನದಿಂದ ಪಹಲ್ಗಾಮ್ ಬೇಸ್‌ನಿಂದ ಯಾತ್ರೆಯನ್ನು ಪುನರಾರಂಭ ಮಾಡಲಾಗಿತ್ತು. ಹವಾಮಾನ ಪರಿಸ್ಥಿತಿ ಸೂಕ್ತವಾಗಿದ್ದ ಹಿನ್ನೆಲೆ 6491 ಮಂದಿ ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದರು. ಈಗ ಬಾಲ್ಟಾಲ್ ಭಾಗದಲ್ಲೂ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 116 ಸಾಧುಗಳು, 6 ಸಾಧ್ವಿಗಳು ಸೇರಿ ಈವರೆಗೂ 93,929 ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಿರಿಯ ಅಧಿಕಾರಿಗಳು ಮತ್ತು ಅಮರನಾಥ ಯಾತ್ರಾ ಆಡಳಿತ ಮಂಡಳಿಯ ಜೊತೆಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಿದ್ದಾರೆ. ಅಮರನಾಥ ಯಾತ್ರೆ ರದ್ದು ಹಿನ್ನೆಲೆ ಗೃಹ ಸಚಿವ ಅಮಿತ್ ಶಾ ಲೆಫ್ಟಿನೆಂಟ್…
ನವದೆಹಲಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದೆಹಲಿಯ (New Delhi) ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಭಾನುವಾರ ಘೋಷಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ಮಳೆಯ (Delhi Rain) ಪ್ರಮಾಣ ಹೆಚ್ಚಾಗತೊಡಗಿದ್ದು, ದೆಹಲಿಯ ಹಲವು ಭಾಗಗಳಲ್ಲಿ ರಸ್ತೆಗಳು ಜಾಲವೃತವಾಗಿದೆ. ಸದ್ಯ ನಾಳೆ ಸಹ ದೆಹಲಿಯಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ಮಳೆಯಾಗಿದೆ. ಇದು 1982 ರಿಂದ ಇಲ್ಲಿಯವರೆಗೆ ಜುಲೈ ತಿಂಗಳಲ್ಲಿ ಒಂದೇ ದಿನದಲ್ಲಾದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿಯಲ್ಲಿ ಮುಂದಿನ 2-3 ದಿನಗಳ ಕಾಲ ಹೆಚ್ಚಿನ ತೀವ್ರತೆಯ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೈಸೂರು ;- ತಾಯಿ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆ ಮೈಸೂರಿನಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗ್ತಾ ಇರೋದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ. ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ…
ವಿಜಯಪುರ ;- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದರೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವಿಜಯಪುರದಲ್ಲಿ ಮಾತನಾಡಿದ ಅವರು, ಡ್ರೈವ್‌ನಲ್ಲಿರುವ ಧ್ವನಿ ಯಾರದು ಎಂಬುದನ್ನು ಪರಿಶೀಲಿಸಬೇಕು. ಯಾರು ಮಾತನಾಡಿದ್ದಾರೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ. ಏಕೆಂದರೆ, ಈಗೆಲ್ಲ ಮಿಮಿಕ್ರಿ ಬೇರೆ ಮಾಡುತ್ತಾರೆ. ಕುಮಾರಸ್ವಾಮಿ ಅವರು ಪೆನ್ಡ್ರೈವ್ ಬಿಡುಗಡೆ ಮಾಡಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು. ಇನ್ನೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವಾರು ಕಾಮಗಾರಿಯಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚು ಮೊತ್ತ ಬಿಡುಗಡೆ ಮಾಡಿಸಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ. ಸಿಸಿ ಪಾಟೀಲರು ತಮ್ಮ ಬಜೆಟ್ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಸಿಸಿ ಪಾಟೀಲರು ಯಾಕೆ ಹೆಚ್ಚು ಖರ್ಚು ಮಾಡಿದರು, ಗೊತ್ತಲ್ಲ ಎಂದು ಟಾಂಗ್ ನೀಡಿದರು.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆ ನಿಂತರೂ ಮಳೆಯಿಂದ ಭಾರೀ ಅವಾಂತರಗಳು ಸಂಭವಿಸುತ್ತಲೇ ಇದೆ. ಸಂತೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ-66ರ ಸರ್ವಿಸ್ ರಸ್ತೆ(Road Collapse) ಕುಸಿದಿದೆ. ಐದಾರು ದಿನಗಳಿಂದ ಸುರಿದ ಮಳೆಗೆ ಮಣ್ಣು ಸಡಿಲಗೊಂಡಿದ್ದು ಬಹುಮಹಡಿ ಕಟ್ಟಡದ ಮುಂದಿನ ಸರ್ವಿಸ್ ರಸ್ತೆ ಕುಸಿದಿದೆ. ಉಡುಪಿ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿಯ ಮಣ್ಣು ಕುಸಿದು ಸರ್ವೇ ರಸ್ತೆ ಹಾಗೂ ತಡೆಗೋಡೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಅವಜ್ಞಾನಿಕ ಕಾಮಗಾರಿಯಿಂದಾಗಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಮಣ್ಣು ಕುಸಿದಿದ್ದು ಇಲ್ಲಿ ನೂರಾರು ಕುಟುಂಬಗಳು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದೆ. ಅಧಿಕಾರಿಗಳು ಹಾಗೂ ಸಂಸದರ ನಿರ್ಲಕ್ಷದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಕೂಡಲೇ ಇದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರಿಂಗ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ: ಸ್ವಾಮೀಜಿ ನಾಲ್ಕು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿಗಳ ಯಾತ್ರೆ ವೇಳೆ ರಕ್ಷಣೆ ಕೊಡಬೇಕು ಎಂದು ಗೃಹ ಸಚಿವ ಪರಮೇಶ್ವರ್(Parameshwar) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಸಮುದಾಯದ ಸಂಘ ಸಂಸ್ಥೆಗಳ ಲಿಖಿತ ರೂಪದಲ್ಲಿ ತಿಳಿಸಿದರೇ ನಾವು ರಕ್ಷಣೆ ಕೊಡುತ್ತೇವೆ. ಅವರು ತಂಗೋ ಜಾಗ ಅಧಿಕೃತ ಆಗಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿ ಶಾಲಾ ಕಾಲೇಜುಗಳಲ್ಲಿ ಉಳಿದುಕೊಳ್ಳುತ್ತಾರೆ. ಈ ವಿಚಾರವಾಗಿ ನಾನು ಮಧು ಬಂಗಾರಪ್ಪ ಜೊತೆ ಮಾತಾಡುತ್ತೇನೆ. ಜೈನ ಮಂಡಳಿ ಮಾಡಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಿಂದೂಳಿದ ವರ್ಗಗಳ ನಿಮಗ ಮಂಡಳಿ ಇದೆ. ಮುಖ್ಯಮಂತ್ರಿ ಗಮನಕ್ಕೆ ತಂದು ಜೈನ ಸಮುದಾಯದ ಮಂಡಳಿ ಮಾಡೋಕೆ ಕ್ರಮ ಕೈಗೊಳ್ಳುತ್ತೇವೆ. ಬಜೆಟ್ ಮೊದಲೆ ಆಗಿದ್ದರೇ ನಾವು ಪ್ರಕಟಣೆ ಮಾಡುತ್ತಿದ್ವಿ. ಜೈನ ಮಂದಿರಗಳಿಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ. ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.