Author: Prajatv Kannada

ಹುಬ್ಬಳ್ಳಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ ತಾಲೂಕು ವರೂರು ಗ್ರಾಮಕ್ಕೆ ಸಚಿವ ಪರಮೇಶ್ವರ್(Parameshwar) ಭೇಟಿ ನೀಡಿದ್ದು ನವಗ್ರಹ ತೀರ್ಥಕ್ಷೇತ್ರ ಜೈನಮುನಿ ಗುಣಧರನಂದಿಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮುನ್ನ ವರೂರು ಗ್ರಾಮಕ್ಕೆ ಭೇಟಿ ನೀಡಿದ್ದ ಎಡಿಜಿಪಿ ಹಿತೇಂದ್ರ ಜೈನಮುನಿ ಗುಣಧರನಂದಿಶ್ರೀಗಳ ಜೊತೆ ಚರ್ಚೆ ನಡೆಸಿದ್ದರು.

Read More

ಬೆಂಗಳೂರು: 2013ರ ಮೇ 13 ರಂದು ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ್ದರು. ಮೇ 13ರಂದು ಸಿದ್ದರಾಮಯ್ಯರಿಂದ ಐತಿಹಾಸಿಕ ನಿರ್ಧಾರ-ಅನ್ನಭಾಗ್ಯ(Anna Bhagya Scheme)  ಯೋಜನೆ ಘೋಷಣೆ ಮಾಡಲಾಯಿತು. ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಇಂದು ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಣೆ ಮಾಡಲಿದೆ. 2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5…

Read More

ಬೆಂಗಳೂರು:  ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ ಪೆನ್ ಡ್ರೈವ್ ಬಿಡುಗಡೆ ಮಾಡಲು ಸೋಮವಾರ(ಇಂದು) ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ಪೆನ್ ಡ್ರೈವ್ ನಲ್ಲಿರುವ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದರ ನಡುವೆ ಈವರೆಗೆ ಒಂದು ಲೆಕ್ಕ ಸೋಮವಾರದಿಂದ ಅಸಲಿ ಲೆಕ್ಕ ಶುರು ಎಂಬಂತಾಗಿದೆ. ಪೆನ್‌ಡ್ರೈವ್‌ ಮೂಲಕ ನೆಕ್ಸ್ಟ್‌ ಪಾಲಿಟಿಕ್ಸ್‌ ಡ್ರೈವ್‌ ಶುರುವಾದಂತಿದೆ. 4 ಇಲಾಖೆಗಳ ವರ್ಗಾವಣೆ ವಿಚಾರಗಳ ಬಗ್ಗೆ ಹೆಚ್‌ಡಿಕೆ ತಲಾಶ್ ಆರಂಭಿಸಿದ್ದಾರೆ. ಹುಡುಕಲು ಹೋದ ಹೆಚ್‌ಡಿಕೆಗೆ ಸಿಕ್ಕಿದ್ದೇನು..? ಬಿಟ್ಟಿದ್ದೇನು..? ಎಂಬ ಚರ್ಚೆಗಳು ಶುರುವಾಗಿದೆ. ಸದನದಲ್ಲಿ ಬಿಜೆಪಿ (BJP) ಸಹಕಾರದೊಂದಿಗೆ ಸಿದ್ದರಾಮಯ್ಯ (Siddaramaiah) ಟೀಂ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಹೆಚ್‌ಡಿಕೆ ನಂಬಿಕಸ್ಥ ಅಧಿಕಾರಿಗಳೇ ಪೆನ್‌ಡ್ರೈವ್‌ ಅಸಲಿಗೆ ಕಾರಣ ಎಂಬ ಚರ್ಚೆ ಶುರುವಾಗಿದೆ. 4 ಇಲಾಖೆಗಳಲ್ಲಿ ಮೂವರು ಪ್ರಭಾವಿಗಳ ಸಂಭಾಷಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಪೆನ್‌ಡ್ರೈವ್‌ ಪ್ರಮುಖ ಅಧಿಕಾರಿಗಳ ವಿಚಾರದಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದೆ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ  ಗ್ಯಾರಂಟಿಗನ್ನ  ಜಾರಿ ಮಾಡೋಕೆ ತಿಪ್ಪರಲಾಗ ಹಾಕ್ತಿದೆ. ಈಗಾಗಲೇ ನೂರೆಂಟು ವಿಘ್ನಗಳ ನಡುವೆ ಶಕ್ತಿ, ಗೃಹಜ್ಯೋತಿ ಸ್ಕೀಂ ಜಾರಿ  ಮಾಡಿರೋ ಸಿದ್ದು ಸರ್ಕಾರ ಇಂದಿನಿಂದ ಅನ್ನಭಾಗ್ಯ ಯೋಜನೆ ಜಾರಿ  ಮಾಡೋಕೆ ಸಿದ್ದತೆ ನಡೆಸಿದೆ. ಅನ್ನ ಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ಇಂದು ಸಂಜೆಯಿಂದ್ಲೇ ಹಣ ಜಮೆ ಮಾಡಲು ಮುಂದಾಗಿದೆ.. ಐದು ಗ್ಯಾರಂಟಿಗಳನ್ನ ಘೋಷಣೆ ಮಾಡಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರೋ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಅನುಷ್ಠಾನ ಭಾರೀ ಸವಾಲು ಎನ್ನಿಸಿದೆ. ಹಲವು ಅಡ್ಡಿ ಆತಂಕಗಳ ನಡುವೆ ಶಕ್ತಿ, ಗೃಹಜ್ಯೋತಿ ಜಾರಿ ಮಾಡಿರೋ ಸರ್ಕಾರ ಇಂದಿನಿಂದ ಮತ್ತೊಂದು ಮಹತ್ವಾಕಾಂಕ್ಷೆ ಅನ್ನಭಾಗ್ಯ ಯೋಜನೆ ಜಾರಿ ಮಾಡ್ತಿದೆ. ಹೌದು.. ಸಿಎಂ ಸಿದ್ದರಾಮಯ್ಯ ಸರ್ಕಾರ ಮಾತು ಕೊಟ್ಟಂತೆ ಈಗಾಗಲೇ ಶಕ್ತಿ, ಗೃಹಜ್ಯೋತಿ ಜಾರಿ ಮಾಡಿದೆ. ಇದ್ರ ಬೆನ್ನಲ್ಲೇ ಇದೀಗ ಇಂದಿನಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡ್ತಿದೆ. ಸರ್ಕಾರ 10 ಕೆಜಿ ಅಕ್ಕಿ ನೀಡುತ್ತೆ ಅಂತ ಹೇಳಿತ್ತು. ಆದ್ರೆ ಅಕ್ಕಿ ಕೊರತೆ  ಕಾರಣದಿಂದ 5 ಕೆಜಿ ಅಕ್ಕಿ ಬದಲು…

Read More

ಬೆಂಗಳೂರು :  ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಮಾತನಾಡಿದ್ದಕ್ಕೆ ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಮೇಜು ಕುಟ್ಟಿ ಬೆಂಬಲ ವ್ಯಕ್ತಪಡಿಸಿದ್ದ ಶಾಸಕಿ ನಯನಾ ಮೋಟಮ್ಮ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಮಾಡಲಾಗಿತ್ತು. ಆದರೆ, ಇದಕ್ಕೆ ಖಾರವಾಗಿಯೇ ಉತ್ತರಿಸಿದ ಶಾಸಕಿ ನಯನಾ ಮೋಟಮ್ಮ, ಟ್ರೋಲರ್ಸ್‌ಗಳು ಸಮಾಧಾನದಿಂದ ವರ್ತಿಸಿ. ಅವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ, ಆದರೆ ಸ್ವಲ್ಪ ಮಾಹಿತಿ ಕೊರತೆಯಿತ್ತು. ಈಗಲೂ ನಾನು ಅವರ ಮಾತನ್ನು ಬೆಂಬಲಿಸುತ್ತೇನೆ ಎಂದು ಟ್ರೋಲರ್ಸ್‌ಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಹೌದು, ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ನಡೆದ ಘಟನೆಯನ್ನು ಇಟ್ಟುಕೊಂಡು ಭಾರಿ ಟ್ರೋಲ್‌ ಮಾಡುತ್ತಿದ್ದವರಿಗೆ ಶಾಸಕಿ ನಯನಾ ಮೋಟಮ್ಮ (MLA Nayana Motamma) ನೀಡಿದ ಪ್ರತಿಕ್ರಿಯೆಗೆ ಕೂಡ ಭಾರಿ ಬೆಂಬಲ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ನಯನಾ ಮೋಟಮ್ಮ ಅವರು, ಸಾವಾಗಿಲ್ಲ ಮಾರ್ರೆ ನಿಜ! ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು. ಪ್ರದೀಪ್ ಈಶ್ವರ್  (MLA Pradeep Eshwar) ಅವರು ಹೇಳಿರೋ ವಿಚಾರದಲ್ಲಿ ಯಾವ ತಪ್ಪು ಇಲ್ಲ. ಮಾಹಿತಿ…

Read More

ಬೆಂಗಳೂರು: ಉಭಯ ಸದನಗಳಲ್ಲಿ ಕಲಾಪ(Karnataka Assembly Session) ಆರಂಭವಾಗಿದೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮಧುಮಾದೇಗೌಡ (Madhumade Gowda)ಪ್ರಶ್ನೆ ಕೇಳಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಎಷ್ಟು ಕೋರ್ಸ್ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾವ ತರಗತಿಗೆ ಯಾವ ಪರೀಕ್ಷೆಯನ್ನ ನಡೆಸಲಾಗುತ್ತಿದೆ. ಇದಕ್ಕೆ ಸಚಿವ ಡಾ ಸುಧಾಕರ್(Dr. Sudhakar) ಉತ್ತರ ನೀಡಿದ್ದು, ಕೆಎಸ್ಓ​ಯು ನಡಿ ವಾರ್ಷಿಕ ಪರೀಕ್ಷೆ ನಡೆಸುವುದನ್ನು ಮುಂದುವರೆಸಿದೆ. ಕೆಲವು ಸೆಮಿಸ್ಟರ್ ಪರೀಕ್ಷೆ ಇದೆ. ದೂರ ಶಿಕ್ಷಣಕ್ಕೂ, ಕಾಲೇಜು ಶಿಕ್ಷಣಕ್ಕೂ ಸಮಾನವಾದ ಸ್ಥಾನ ಮಾನ ಸಿಗಬೇಕು ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.

Read More

ಆನೇಕಲ್:‌ ಮನೆ ಮುಂದೆ ನಿಲ್ಲಿಸಿದ್ದ ಇನೋವಾ  ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ(Miscreants set fire to the car) ಪುಂಡಾಟ ನಡೆಸಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಸಿ ಕೆ ಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದೆ ನೆನ್ನೆ ಮಧ್ಯರಾತ್ರಿ 12:30 ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ  ಇನ್ನು ಸಿಕೆಪಾಳ್ಯ ಮೂಲದ ವೆಂಕಟಸ್ವಾಮಿ ಎಂಬವರಿಗೆ ಸೇರಿದ ಇನೋವಾ ಕಾರು. ಎಂದು ತಿಳಿದು ಬಂದಿದೆ. ಹೌದು ಮಧ್ಯರಾತ್ರಿ ಮೂರು ಜನ ಹೆಲ್ಮೆಟ್ ಧರಿಸಿ ಡಿಯೋ ಬೈಕ್ನಲ್ಲಿ ಬಂದಿದ್ದ ಮೂರು ಜನ ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ವೆಂಕಟಸ್ವಾಮಿ ಎಂಬುವವರು ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಇನ್ನು ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿ ಕಿಡಿ ಹೊತ್ತು ಮತ್ತೊಂದು ಇನ್ನೋವಾ ಕಾರಿಗೂ ಸಹ ಹಾನಿಯಾಗಿದೆ. ಇನ್ನು ಬೆಂಕಿ ಹಚ್ಚುತ್ತಿರುವ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ವೆಂಕಟಸ್ವಾಮಿ ಮಗ ಮುನಿರಾಜು ಇತ್ತೀಚಿಗೆ ಸಣ್ಣ ಪುಟ್ಟ ಸೆಟಲ್ಮೆಂಟ್ ರಿಯಲ್ ಎಸ್ಟೇಟ್ ಉದ್ಯಮದಲ್ಲಿ…

Read More

ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಜೈನ ಮುನಿ (Jain Muni) ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆಯನ್ನು ನಳಿನ್ ಕುಮಾರ್ ಕಟೀಲ್ ಹೊರಡಿಸಿದ್ದು, ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುನಿಗಳ ಹತ್ಯೆ ಮನಸ್ಸಿಗೆ ಅತ್ಯಂತ ಅಘಾತ ತಂದಿದೆ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ. ಸಾಧು, ಸಂತರು ಶಾಂತಿಪ್ರಿಯರು. ದೇಶದ ಒಳಿತು, ಸಂಸ್ಕಾರ, ಸನಾತನ ಧರ್ಮದ ವಿಚಾರ ವಾಗಿ ಮಾರ್ಗದರ್ಶನ ನೀಡುವವರು. ಅಂತಹ ಸಂತರನ್ನು ಹೇಯವಾಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ…

Read More

ಬೆಂಗಳೂರು : ಕರ್ನಾಟಕದ 80 ಯಾತ್ರಾರ್ಥಿಗಳು ಅಮರನಾಥ ಯಾತ್ರೆಗೆ(Amarnath Yatra) ತೆರಳುವ ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್(DK Sivakumar), ಹವಾಮಾನ ವೈಪರೀತ್ಯದಿಂದ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23ಮಂದಿ ಸೇರಿದಂತೆ ಒಟ್ಟು 80 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿರುವ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸಂಕಷ್ಟದಲ್ಲಿ ಸಿಲುಕಿರುವ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಗದಗ ಜಿಲ್ಲೆಯ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ತೆರಳುವ ಸಂದರ್ಭದಲ್ಲಿ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ.

Read More

ಬೆಂಗಳೂರು : ಇತ್ತಿಚೆಗೆ ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ(Shivajinagar Masjid) ಬಾಂಬ್‌ ಇಟ್ಟು ಸ್ಫೋಟಿಸುವ ಸಂಚಿನ ಬೆದರಿಕೆ ಕರೆ ಮಾಡಿ ಆತಂಕ ಸೃಷ್ಟಿಸಿದ್ದ ಸೈಯದ್‌ ಖಾಜಿ ಮಹಮದ್‌ ಅನ್ವರ್‌ ಉಲ್ಲಾ(37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಉಸ್ಮಾನಾಬಾದ್‌(Osmanabad, Maharashtra) ನಿವಾಸಿಯಾದ ಸೈಯದ್‌ ಖಾಜಿ ಅವಿವಾಹಿತನಾಗಿದ್ದು, ದೇಶದ ಹಲವು ನಗರಗಳಲ್ಲಿ ಸುತ್ತಾಟ ನಡೆಸಿ ಭಿಕ್ಷಾಟನೆ ಮಾಡುತ್ತಿದ್ದ. ಮಸೀದಿಗಳ ಬಳಿ ಆಶ್ರಯ ಪಡೆದು ಅಲ್ಲಿಯೇ ಮಲಗುತ್ತಿದ್ದ. ಜು.4ರಂದು ನಗರಕ್ಕೆ ಆಗಮಿಸಿ ಶಿವಾಜಿನಗರ ಮಸೀದಿ ಬಳಿ ತೆರಳಿದ್ದ. ರಾತ್ರಿ ವೇಳೆ ಅಲ್ಲಿಯೇ ಉಳಿದುಕೊಳ್ಳಲು ಕೇಳಿದ್ದ. ಮಸೀದಿಯಲ್ಲಿ ರಾತ್ರಿ ವೇಳೆ ಭದ್ರತಾ ಸಿಬ್ಬಂದಿ ಹೊರತುಪಡಿಸಿ, ಇತರರಿಗೆ ಅವಕಾಶವಿಲ್ಲ ಎಂದು ಹೇಳಿ ಆತನನ್ನು ಅಲ್ಲಿಂದ ಕಳುಹಿಸಲಾಗಿತ್ತು. ಮಸೀದಿ ಶೋಧನೆ ಬಳಿಕ ಹುಸಿ ಬಾಂಬ್‌ ಬೆದರಿಕೆ ಕರೆ ಎಂಬುದು ಖಚಿತಪಟ್ಟಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕರೆ ಬಂದಿದ್ದ ಮೊಬೈಲ್‌ನ ನಂಬರ್‌ ಜಾಡು ಹಿಡಿದು ತನಿಖೆ ಚುರುಕುಗೊಳಿಸಿದರು. ಆಗ ವ್ಯಕ್ತಿಯೊಬ್ಬ ಮಸೀದಿ ಬಳಿ ಬಂದಿದ್ದ ಮಾಹಿತಿ ಸಿಕ್ಕಿತ್ತು. ಮೊಬೈಲ್‌ ಸಂಖ್ಯೆಯ ಜಾಡು…

Read More