ಬೆಳಗಾವಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ (Jain Muni’s murder)ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈನ ಸಮುದಾಯದ ಮುಖಂಡರು, ಜೈನ ಮುನಿಗಳು ಸೇರಿ ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಪ್ಲ್ಯಾನ್ ಮಾಡಿದ್ದು, ಹಲಗಾ ಗ್ರಾಮದ 108ನೇ ಸಿದ್ದಸೇನ ಮಹಾರಾಜ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಶ್ರಾವಕ್, ಶ್ರಾವಿಕೆಯರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆಯಿದೆ.
Author: Prajatv Kannada
ಹಾಸನ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒಂದು ವಾರ ಅಲ್ಲ, ಹತ್ತು ದಿನ ತಡೆಯಿರಿ. ಅದಕ್ಕೆ ಎಲ್ಲದಕ್ಕೂ ಅಸೆಂಬ್ಲಿಯೊಳಗೇ ಉತ್ತರ ಕೊಡುತ್ತೇವೆ. ಹೌಸ್ನಲ್ಲಿ ಆಫೀಸರ್ ನೇಮಕ ಆಗಿದೆ ತನಿಖೆ ಮಾಡೋದಕ್ಕೆ. ಎಲ್ಲರಿಗೂ ಅಸೆಂಬ್ಲಿಯೊಳಗೆ ತೃಪ್ತಿದಾಯಕ ಉತ್ತರ ಕೊಟ್ಟಿದ್ದೇವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಹೇಳಿದರು.
ಮೈಸೂರು: ವಿಧವೆಯರು, ಅವಿವಾಹಿತರಿಗೆ ಆನ್‌ಲೈನ್‌ನಲ್ಲಿ (Online Matrimony) ಗಾಳ ಹಾಕಿ ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮಹಿಳೆಯರ ಜೊತೆ ಮದುವೆಯಾಗಿ, ಹಣ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಕಿಲಾಡಿಯನ್ನ ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಒಂದು ಬ್ರೇಸ್‌ಲೈಟ್, ಒಂದು ಉಂಗುರ, 2 ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್‌ಗಳನ್ನ ವಶ ಪಡಿಸಿಕೊಳ್ಳಲಾಗಿದೆ. ಮಹೇಶ್ ಸಿಕ್ಕಿಬಿದ್ದದ್ದು ಹೇಗೆ? ಆರೋಪಿ ಮಹೇಶ್ ಮೈಸೂರಿನ ನಿವಾಸಿ ಹೇಮಲತಾ ಎಂಬವರಿಗೆ ತಾನು ಡಾಕ್ಟರ್ ಎಂದು ಹೇಳಿಕೊಂಡು ಮೋಸ ಮಾಡಿದ್ದ. ಆನ್‌ಲೈನ್ ಮ್ಯಾಟ್ರೋಮೊನಿ ವೇದಿಕೆಯಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆ ಮಾಡಿಕೊಂಡಿದ್ದ. ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ಸಾಲ ಕೊಡಿಸುವಂತೆ ಮಹೇಶ್ ಹೇಮಲತಗೆ ಒತ್ತಾಯ ಹೇರಿದ್ದ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದ್ದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ 15 ಲಕ್ಷ ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದ.…
ಬೆಂಗಳೂರು ;– ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರು ಭಾರೀ ಮಳೆಯ ಕಾರಣ ಸಿಲುಕಿಕೊಂಡಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಕನ್ನಡಿಗರು ಸೇರಿದ್ದಾರೆ. ಸರ್ಕಾರ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿ, “ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ” ಎಂದು ಹೇಳಿದ್ದಾರೆ. ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ. ಮೀ. ದೂರದಲ್ಲಿರುವ ಪಂಚತಾರ್ನಿ ಟೆಂಟ್‌ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಜಾಲಿ ರೈಡ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಇಲ್ಲೊಬ್ಬ ತಡರಾತ್ರಿ ಜಾಲಿ ರೈಡ್ ಮಾಡಲು ಹೋಗಿ ಏನಾದ ಅನ್ನೋದನ್ನ ಹೇಳ್ತೀವಿ ಕೇಳಿ.. ಶನಿವಾರ ತಡರಾತ್ರಿ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರರು ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು ಈ ಘಟನೆ ನಡೆದಿದ್ದು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಜರುಗಿದ್ದು. ತಡರಾತ್ರಿ ಸ್ನೇಹಿತರ ಜೊತೆಗೆ ತಡರಾತ್ರಿ 2 ಗಂಟೆ ಸುಮಾರಿಗೆ ಜಾಲಿ ರೈಡ್ ಹೊರಟಿದ್ದ ಯಶವಂತ ಹಾಗೂ ಟೆಕ್ಕಿ ರಾಮಕುಮಾರ್ ಫ್ಲೈಓವರ್ ಗೆ ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಮೇಲಿಂದ ಬಿದ್ದು ರಾಮಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯಶವಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಹಿರೇಕೋಡಿಯ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. DK Visit: ಇಂದಿರಾ ಕ್ಯಾಂಟೀನ್ಗೆ ಸರ್ಪ್ರೈಸ್ ವಿಸಿಟ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. HDK Pendrive Bomb: ಹೆಚ್‌ಡಿಕೆ ಪೆನ್‌ಡ್ರೈವ್ ಬ್ರಹ್ಮಾಸ್ತ್ರ: ಸೋಮವಾರ ವಿಧಾನಸಭೆಯಲ್ಲಿ ಸ್ಫೋಟವಾಗಲಿದೆಯಾ? ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.…
ಬೆಂಗಳೂರು: ಕಾಂಗ್ರೆಸ್ 5 ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಲ್ಲಿ 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದಿದ್ದ ಸರ್ಕಾರ. ನಾಳೆಯಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಿದೆ. ಇದಕ್ಕೆ ನಾಳೆ(ಜು.10) ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ 2023-24ನೇ ಸಾಲಿನ ಬಜೆಟ್ ಮಂಡನೆಯನ್ನ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಇನ್ನು ನಾಳೆಯಿಂದ ‘ಅನ್ನಭಾಗ್ಯ’ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿ ಬದಲು ಹಣ ಜಮೆ ಮಾಡಲು ಸಿಎಂ ಚಾಲನೆ ನೀಡಲಿದ್ದಾರೆ
ಬೆಂಗಳೂರು: ಬೆಂಗಳೂರಿನ 2 ಸ್ಥಳಗಳಿಗೆ ಡಿಕೆ ಶಿವಕುಮಾರ್ ಸರ್ಪ್ರೈಸ್ ವಿಸಿಟ್ ಮಾಡಲಿದ್ದು, ರಸ್ತೆಯಲ್ಲಿ ತೆರೆಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿದೆ. ಡಿಕೆಸಿ ವಾಹನ ಬಿಟ್ಟು ಮುಂದೆ ಹೋಗಿದ್ದು, ಬಳಿಕ ತಿರುವು ತೆಗೆದುಕೊಂಡು ಬಂದಿದೆ. ಅಲ್ಲಿಯವರೆಗೆ ಮಾರ್ಗ ಮಧ್ಯೆ ಡಿಕೆ ಶಿವಕುಮಾರ್ ವಾಹನ ನಿಲ್ಲಿಸಿದ್ದಾರೆ. Annabhagya Scheme: ನಾಳೆಯಿಂದ ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಹಣ ಜಮೆ ಹಾಗೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ 2 ಸ್ಥಳಗಳಿಗೆ ಸರ್ಪ್ರೈಸ್ ವಿಸಿಟ್ ನೀಡಲಿದ್ದಾರೆ. ಹೌದು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಕೆಶಿ, ಕನ್ನಹಳ್ಳಿ ಮತ್ತು ಸೀಗೆಹಳ್ಳಿ ಕಸದ ಘಟಕಗಳಿಗೆ ತೆರಳುವ ಸಾಧ್ಯತೆಯಿದೆ. HDK Pendrive Bomb: ಹೆಚ್‌ಡಿಕೆ ಪೆನ್‌ಡ್ರೈವ್ ಬ್ರಹ್ಮಾಸ್ತ್ರ: ಸೋಮವಾರ ವಿಧಾನಸಭೆಯಲ್ಲಿ ಸ್ಫೋಟವಾಗಲಿದೆಯಾ? ಈ ಮಧ್ಯೆ ದಾಸರಹಳ್ಳಿ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಾರ್ವಜನಿಕರೊಟ್ಟಿಗೆ ಆಹಾರದ ರುಚಿ ಬಗ್ಗೆ ಮಾಹಿತಿ ಪಡೆಯುತ್ತಾ ಕೇಸರಿಬಾತ್ ಉಪ್ಪಿಟ್ಟು ಸೇವಿಸಿದ್ದಾರೆ.
ಬೆಂಗಳೂರು ;- ಶೀತ, ಕೆಮ್ಮು, ಗಂಟಲು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಹವಾಮಾನದಿಂದಾಗಿ ಅವರಿಗೆ ನಿನ್ನೆಯೇ ಶೀತ ಕಾಣಿಸಿಕೊಂಡಿದ್ದು, ಅದನ್ನು ಲೆಕ್ಕಿಸದೇ ಸಿಎಂ ಬಜೆಟ್ಅನ್ನು 2.50 ನಿಮಷಗಳ ಕಾಲ ಓದಿ ಮುಗಿಸಿದ್ದರು. ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಜೆಟ್ಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ದ ಸಿದ್ದರಾಮಯ್ಯ ಅವರು ಬಳಿಕ ತಮ್ಮ ನಿವಾಸಕ್ಕೆ ತೆರಳಿದ್ದರು. ರಾತ್ರಿಯಿಂದ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಂಗಳೂರು ;- ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿ ಪೆಟ್ರೋಲ್ ಸುರಿದು ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ವಾರ ಈ ಘಟನೆ ಬೆಳಕಿಗೆ ಬಂದಿತ್ತು, ಆನಂದ್ ಎಂಬಾತನನ್ನು ಕೊಲೆ ಮಾಡಿದ ಆರೋಪಡಿ ಸತೀಶ್, ಪುಟ್ಟ ಹಾಗೂ ದಯಾನಂದ್ ಎಂಬುವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಕಳೆದ ಜುಲೈ 2 ರಂದು ಆನಂದ್ನನ್ನು ಹತ್ಯೆ ಮಾಡಿದ್ದರು. ಚನ್ನನಾಯಕನಪಾಳ್ಯದ ನಿರ್ಜನ ಪ್ರದೇಶದ ಬಯಲಿನಲ್ಲಿ ಶವ ಕಂಡುಬಂದಿದ್ದು, ಬೇರೆಡೆ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿತ್ತು. ಕೃತ್ಯಕ್ಕೂ ಮುನ್ನ ಸ್ಥಳದಲ್ಲಿ ಮದ್ಯಪಾನ ಸೇವಿಸಿರುವುದು, ಕಸದ ರಾಶಿಯ ಮೇಲೆ ಶವ ಇರಿಸಿ ಬೆಂಕಿ ಹಚ್ಚಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿತ್ತು. ಪ್ರಕರಣವನ್ನು ಚುರುಕುಗೊಳಿಸಿದ ಪೊಲೀಸರು 1 ವಾರದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.