ಬೆಂಗಳೂರು ;– ಜುಲೈ 17ರ ವರೆಗೆ ಯಾವುದೇ ಸಭೆ ನಡೆಸದಂತೆ ಒಕ್ಕಲಿಗರ ಸಂಘಕ್ಕೆ ಬೆಂಗಳೂರಿನ ಹೈಕೋರ್ಟ್ ತಾಕೀತು ಮಾಡಿದೆ. ನ್ಯಾಯಮೂರ್ತಿ ಹೆಚ್. ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಪ್ರತಿವಾದಿಗಳಲ್ಲಿ ಒಬ್ಬರಾಗಿರುವ ಕೆಂಚಪ್ಪಗೌಡರ ಪರ ವಕೀಲರು, ಸಂಘದ ಸಭೆ ನಡೆಸುವುದಕ್ಕೆ ಸಂಬಂಧಿಸಿದಂತೆ ಎರಡೂ ಬಣಗಳು ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ನಿರ್ದೇಶನ ನೀಡಬೇಕು. ಇಲ್ಲವಾದಲ್ಲಿ ರೆಸಾರ್ಟ್ ರಾಜಕಾರಣಕ್ಕೆ ದಾರಿ ಮಾಡಿಕೊಡಲಿದೆ ಎಂದು ನ್ಯಾಯಪೀಠಕ್ಕೆ ಕೋರಿದರು. ಪರಿಗಣಿಸಿ ಪೀಠ, ಬಾಲಕೃಷ್ಣ ನೇತೃತ್ವದ ಗುಂಪು 17ರ ವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು. ಹೈಕೋರ್ಟ್ ಮೆಟ್ಟಿಲೇರಿದ ಸದಸ್ಯರನ್ನು ಹೊರತು ಪಡಿಸಿ ಉಳಿದ ಸದಸ್ಯರಿಗೆ ಪೂರ್ವ ನೋಟಿಸ್ ನೀಡಿ ಅವಿಶ್ವಾಸ ನಿರ್ಣಯ ಮಂಡಿಸುವಂತೆ ನಿರ್ದೆಶನ ನೀಡಿ ವಿಚಾರಣೆಯನ್ನು ಮುಂದೂಡಿತು.
Author: Prajatv Kannada
ಬೆಂಗಳೂರು ;- ಕರಾವಳಿ ಕರ್ನಾಟಕ, ಕೊಡಗಿನಲ್ಲಿ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ಬಳಿ ಹೋಗದೇ ಇರುವಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ವಾರವೀಡಿ ಕರಾವಳಿ ಕರ್ನಾಟಕದಲ್ಲಿ ಮಳೆ ಸುರಿದಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕನಿಷ್ಠ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಆದೇಶ ಹೊರಡಿಸಿತ್ತು. ‘ಜುಲೈ 8 ಮತ್ತು 9 ರಂದು ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ’ ಎಂದು ಹವಾಮಾನ ಇಲಾಕೆ ತಿಳಿಸಿದೆ. ಜುಲೈ 9 ರಂದು ಕರ್ನಾಟಕ ಕರಾವಳಿಯಲ್ಲಿ 40-45 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿರುವ ಕೊಡಗಿಗೆ ಶನಿವಾರ ಹಳದಿ ಅಲರ್ಟ್…
ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರು ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿದರು. ಈ ವೇಳೆ ಮಾತನಾಡಿದ ಅವರು, ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ;- ಗ್ಯಾರಂಟಿ ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಬದಲಿಗೆ ಬಿಪಿಎಲ್ ಕಾರ್ಡ್ದಾರರಿಗೆ ಹಣ ನೀಡುವ ಹಿನ್ನಲೆ ಈ ತಿಂಗಳ 10ರ ಸಂಜೆ 05 ಗಂಟೆಗೆ ಹಣ ಹಾಕುವುದಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಮುನಿಯಪ್ಪ ‘ನೇರವಾಗಿ ಅವರವರ ಖಾತೆಗಳಿಗೆ 15 ದಿನಗಳಲ್ಲಿ ಹಣ ಹಾಕುತ್ತೇವೆ. ಒಟ್ಟು 1 ಕೋಟಿ 29 ಲಕ್ಷ ಕಾರ್ಡ್ಗಳಿದ್ದು, 4 ಕೋಟಿ 41 ಲಕ್ಷ ಜನರಿಗೆ 800 ಕೋಟಿ ರೂ.ವರೆಗೂ ಹಣ ಬೇಕಾಗಲಿದೆ. ತೆಲಂಗಾಣ ಛತ್ತಿಸ್ಘಡದವರು ಅಕ್ಕಿ ನೀಡಲು ಒಪ್ಪಿದ್ದು ಸಂಪರ್ಕದಲ್ಲಿದ್ದಾರೆ. ಅವರಿಂದ ನಾವು ಅಕ್ಕಿಯನ್ನು ಖರೀದಿ ಮಾಡಿ ಆದಷ್ಟು ಬೇಗ ವಿತರಣೆ ಮಾಡುತ್ತೇವೆ’ ಎಂದಿದ್ದಾರೆ.
ಹುಬ್ಬಳ್ಳಿ ;- ಹಿಟ್ಲರ್ ರೀತಿಯಲ್ಲಿ ಆಡಳಿತ ಮಾಡಲು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಿದ್ದಾರೆ ಎಂದು ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಟ್ಲರ್ ರೀತಿಯಲ್ಲಿ ಆಡಳಿತ ಮಾಡಲು ತೀರ್ಮಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ ಎಂದ ಅವರು, ಆಸ್ತಿಕರ ಏರಿಕೆ ಮಾಡಿದ್ದಾರೆ. ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಇನ್ನು ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಎನ್‍ಇಪಿಗೆ ಮೊದಲು ಒಪ್ಪಿಗೆ ನೀಡಿತ್ತು. ಆದರೆ ಇವತ್ತು ಕೈ ಬಿಟ್ಟಿದ್ದಾರೆ. ಆದ್ದರಿಂದ ಸಂಪೂರ್ಣ ತುಷ್ಟೀಕರಣ ಬಜೆಟ್ ಮಂಡನೆ ಮಾಡಿದ್ದಾರೆ, ಅಭಿವೃದ್ಧಿ ಪೂರ್ವಕವಲ್ಲ ಎಂದರು. ಮೂಲಭೂತ ಸೌಕರ್ಯಗಳು ನೆಲಕಚ್ಚುವ ಬಜೆಟ್ ಆಗಿದ್ದು, ಶಾಸಕರಿಗೆ ಅನುದಾನ ಕೇಳಬೇಡಿ ಎಂದು ನೇರವಾಗಿ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಯಾವಸ್ಥಿತಿಗೆ ಬಂದಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಯುವಶಕ್ತಿಗೆ ನಯಾಪೈಸೆ ಹಣ ಇಟ್ಟಿಲ್ಲ, ಗೃಹಲಕ್ಷ್ಮಿಗೆ ಈಗ ಹಣ ಇಟ್ಟಿದ್ದಾರೆ. ಇನ್ನು ರೈಲ್ವೆ ಯೋಜನೆಗೆ ರಾಜ್ಯದ ಪಾಲಿನ ಅನುದಾನ ಮೀಸಲಿಟ್ಟಿಲ್ಲ. ಇದರ…
ಚಿಕ್ಕಬಳ್ಳಾಪುರ: ಮಾಜಿ ಸಚಿವ ಕೆ. ಸುಧಾಕರ್ ಅವರ ಚಾಲೆಂಜ್ ಅನ್ನು ಶಾಸಕ ಪ್ರದೀಪ್ ಈಶ್ವರ್ ಅವರು ಸ್ವೀಕಾರ ಮಾಡಿ ಮತ್ತೆ ಅವರಿಗೆ ಮತ್ತೊಂದು ಚಾಲೆಂಜ್ ನೀಡಿದ್ದಾರೆ. ಅದು ಏನಂತೀರಾ ನೋಡೋಣ ಬನ್ನಿ.. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಿವೇಶನ ಹಂಚಿಕೆ ಪತ್ರ ವಿಚಾರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಸುಳ್ಳು ಅಭಿಯಾನ ಮಾಡಿದ್ದರು ಹಾಗಾಗಿ ಅವರು ಶ್ರೀ ಭೋಗನಂಧೀಶ್ವರ ದೇವಾಲಯಕ್ಕೆ ಬಂದು ದೀಪ ಹಚ್ಚಲಿ ಅಂತ ಮಾಜಿ ಸಚಿವ ಸುಧಾಕರ್ ಸವಾಲು ಹಾಕಿದರು. ಈ ಸವಾಲಿಗೆ ಪ್ರತಿಕರಿಯೆ ನೀಡಿದ ಶಾಸಕ ಪ್ರದೀಪ್ ಈಶ್ವರ್ ನಾನು ಈ ಸವಾಲನ್ನ ಸ್ವೀಕರಿಸುತ್ತೇನೆ ಹಾಗೆ ಅವರು ಕೂಡ ನನ್ನ ಸವಾಲನ್ನ ಸ್ವೀಕರಿಸಲು ರೆಡಿಯಾಗಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಅಂತ ದೀಪ ಹಚ್ಚುವಂತೆ ಸವಾಲು ಹಾಕಿದ್ದಾರೆ. ಅವರು ದೀಪ ಹಚ್ಚೋದಾದರೆ ನಾನು ಸಹ ದೀಪ ಹಚ್ಚುತ್ತೇನೆ. ದೀಪದಿಂದ ದೀಪವ ಹಚ್ಚಬೇಕು ಮಾನವ ಅಂತ ಸಾಂಗ್ ಹಾಕಿ ದೀಪ ಹಚ್ಚೋಣ ಎಂದು ವ್ಯಂಗ್ಯ ಮಾಡಿದ್ದಾರೆ.
ಬೆಳಗಾವಿ: ನಾಪತ್ತೆಯಾಗಿದ್ದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ. ಸೀರೆ, ಟವೆಲ್ ಸೇರಿ ಇತರೆ ಬಟ್ಟೆಗಳಿಂದ ಸುತ್ತಿ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಕತ್ತರಿಸಿ ಎಸೆಯಲಾಗಿದೆ. ಈವರೆಗೆ ಮೃತದೇಹದ ಒಟ್ಟು ಐದು ಭಾಗಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತೆಗೆದಿದ್ದಾರೆ. ಬೆಳಗ್ಗೆಯಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ್ದು ಸತತ ಒಂಬತ್ತು ಗಂಟೆಗಳ ಕಾಲ ಬಳಿಕ ಜೈನಮುನಿ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಿಕ್ಕ ಬೆನ್ನಲ್ಲೇ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ನೀಡಿದ್ದಾರೆ.
ಶಿವಮೊಗ್ಗ: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಅವ್ಯವಸ್ಥೆಯ ಆಗರ. ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ಕಟ್ಟಡ ಸೋರುತ್ತಿದೆ. ವಿದ್ಯಾರ್ಥಿಗಳು ಕೊಠಡಿಯೊಳಗೆ ಛತ್ರಿ ಹಿಡಿದು ಪಾಠ ಕೇಳುತ್ತಿದ್ದಾರೆ. ಇದು ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ಅವ್ಯವಸ್ಥೆ. ಮಲೆನಾಡಿನಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಮಳೆ ಎಡಬಿಡದೇ ಸುರಿಯುತ್ತದೆ. ಆದರೆ ಸರ್ಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಶಿಥಿಲಗೊಂಡಿರುವ ಪರಿಣಾಮ ಶಾಲೆಯ ಮಾಳಿಗೆ ಸೋರುತ್ತಿದೆ. ಸೋರುತ್ತಿರುವ ಕೊಠಡಿಯೊಳಗೆ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವಂತಾಗಿದೆ. ಈ ಸರ್ಕಾರಿ ಪ್ರೌಢಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ಸುಮಾರು 125 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವವರು ಎಲ್ಲರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು. ಯಾವ ಸಂದರ್ಭದಲ್ಲಿ ಮೇಲ್ಛಾವಣಿ ಕುಸಿಯುತ್ತದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರೇ, ಶಿಕ್ಷಕರು ಆತಂಕದಲ್ಲೇ ಬೋಧನೆ ಮಾಡುವಂತಾಗಿದೆ. ಪೋಷಕರು ಹಾಗು ಸ್ಥಳೀಯರು ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಹಲವು…
ಬೀದರ್: ಭಾರೀ ಮತ್ತು ಭರಿಸುವ ಎಂಡಿಎಂಎ ಡ್ರಗ್ಸ್‌ನ್ನು ಸಾಗಿಸುತ್ತಿದ್ದ ಇಬ್ಬರನ್ನು ಬೀದರ್ ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರಿಂದ 50 ಲಕ್ಷ ರೂ. ಸೀಜ್ ಮಾಡಿದ್ದಾರೆ. ಡ್ರಗ್ಸ್‌ನ್ನು ಆರೋಪಿಗಳು ಹುಮ್ನಾಬಾದ್‍ನ ರಾಷ್ಟ್ರೀಯ ಹೆದ್ದಾರಿ 65ರ ಮೂಲಕ ಮುಂಬೈನಿಂದ (Mumbai) ಹೈದರಾಬಾದ್‍ಗೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬೀದರ್ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 499 ಗ್ರಾಂ. ಎಂಡಿಎಂಎ, ಒಂದು ಬುಲೆರೋ ಜೀಪ್, 2 ಮೊಬೈಲ್, ಜೊತೆಗೆ ಡ್ರಗ್ಸ್ ತೂಕ ಮಾಡುವ ಯಂತ್ರ ಸೇರಿದಂತೆ ಒಟ್ಟು 55 ಲಕ್ಷ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಎಸ್‍ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಎಎಸ್‍ಪಿ ಮಹೇಶ್ ಮೇಘಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಸಂಬಂಧ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು. ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು…