Author: Prajatv Kannada

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಸೋಗಿನಲ್ಲಿ ವಂಚಕನೊಬ್ಬ ಗುಜರಾತ್‌ನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಗೆ ಕರೆ ಮಾಡಿ ಹಣ ಮತ್ತು ವಜ್ರಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಅದೂ ತೇಜಸ್ವಿ ಸೂರ್ಯ ಅವರ ಅಧಿಕತ ಮೊಬೈಲ್ ಸಂಖ್ಯೆ ಬಳಸಿ! ಈ ಬಗ್ಗೆ ನಗರದ ದಕ್ಷಿಣ ವಿಭಾಗದ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಜುಲೈ 1ರಂದು ತೇಜಸ್ವಿ ಸೂರ್ಯ ಅವರ ಅಧಿಕೃತ ಮೊಬೈಲ್‌ ಸಂಖ್ಯೆ ಬಳಸಿ ಗುಜರಾತ್‌ನ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್‌ ಕೋರಟ್‌ ಅವರ ಮೊಬೈಲ್‌ಗೆ ಕರೆ ಮಾಡಿರುವ ವಂಚಕ ಹಣ ಮತ್ತು ವಜ್ರವನ್ನು ಕೊಡುಗೆಯಾಗಿ ನೀಡುವಂತೆ ಕೇಳಿದ್ದಾನೆ. ಇದರಿಂದ ಅನುಮಾನಗೊಂಡ ಪ್ರಶಾಂತ್‌, ಖುದ್ದು ತೇಜಸ್ವಿ ಸೂರ್ಯ ಅವರಿಗೆ ಕರೆ ಮಾಡಿದಾಗ ವಂಚಕನ ಸಂಚು ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚಕನು ತೇಜಸ್ವಿ ಸೂರ್ಯ ಅವರ ಸೋಗಿನಲ್ಲೇ ಪ್ರಶಾಂತ್‌ ಕೋರಟ್‌ ಅವರೊಂದಿಗೆ ಸಂಭಾಷಣೆ ನಡೆಸಿದ್ದ. ವಂಚಕನು ಕೃತ್ಯಕ್ಕೆ ಬಳಸಿರುವ ಮೊಬೈಲ್‌ ಸಂಖ್ಯೆಯಲ್ಲೇ ತೇಜಸ್ವಿ…

Read More

ಹುಬ್ಬಳ್ಳಿ: ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು. ದೇಶದಲ್ಲಿ ಕೊವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ವಿದೇಶಗಳಿಗೂ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ. ಆಸ್ತಿ ದರ ಏರಿಕೆ ಮಾಡಿದ್ದಾರೆ, ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ. ಎನ್​​ಇಪಿಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು ಆದರೆ ಇವತ್ತು ಕೈ ಬಿಟ್ಟಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.

Read More

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟ (ರಾಬಕೊವಿ) ಏಪ್ರಿಲ್‌ನಿಂದ ಪ್ರತಿ ತಿಂಗಳು 40 ಲಕ್ಷ ನಷ್ಟ ಅನುಭವಿಸುತ್ತಿದೆ. ವಿದ್ಯುತ್‌, ಇಂಧನ ಹೊಂದಾಣಿಕೆ ವೆಚ್ಚ ಏರಿಕೆ ಬಿಸಿ ಜತೆ ದುಬಾರಿ ಕಚ್ಚಾ ವಸ್ತುಗಳು ರಾಬಕೊವಿ ನಷ್ಟಕ್ಕೆ ಕಾರಣವಾಗಿದೆ. ಬಳ್ಳಾರಿ ಡೇರಿ, ಕೊಪ್ಪಳ ತಾಲ್ಲೂಕು ಬೂದುಗುಂಪ ಡೇರಿ ಸೇರಿ ತಿಂಗಳಿಗೆ ₹ 25 ಲಕ್ಷ ವಿದ್ಯುತ್‌ ಬರುತಿತ್ತು. ಈಗ ₹ 37 ಲಕ್ಷ ಬರುತ್ತಿದೆ ಎಂದು ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಟಿ. ತಿರುಪತ್ತಪ್ಪ ತಿಳಿಸಿದರು. ಪ್ರತಿ ಲೀಟರ್‌ ಹಾಲಿಗೆ ₹ 1.50 ನಷ್ಟವಾಗುತ್ತಿದೆ. ಅದರಲ್ಲೂ ನೀಲಿ ಪ್ಯಾಕೆಟ್‌ನಿಂದ  ₹2.50ನಷ್ಟ ಆಗುತ್ತಿದೆ. ಶುಭಂ ಗೋಲ್ಡ್‌ ಮತ್ತು ಶುಭಂ ಸೇರಿ ಮಿಕ್ಕ ಪ್ಯಾಕೆಟ್‌ಗಳಿಂದ ನಷ್ಟ ಸ್ವಲ್ಪ ಕಡಿಮೆ ಇದೆ. ಲೀಟರ್‌ಗೆ ಸರಾಸರಿ ₹ 1.50 ನಷ್ಟವಾಗುತ್ತಿದೆ. ಮೊಸರು ಲೀಟರ್‌ಗೆ 50 ಪೈಸೆ ನಷ್ಟವಾಗುತ್ತಿದೆ. ರಾಬಕೊವಿ  ದಿನಕ್ಕೆ 1.70ಲಕ್ಷ ಲೀಟರ್‌ ಹಾಲು ಸಂಗ್ರಹಿಸುತ್ತಿದೆ. ಇದರಲ್ಲಿ 10 ಸಾವಿರ ಲೀಟರ್‌ ಮೊಸರಿಗೆ ಬಳಸುತ್ತಿದೆ. ಒಕ್ಕೂಟದ…

Read More

ಕಲಬುರಗಿ: ಕೆಲಸ ಯಾವುದೇ ಕಂಪನಿ ಬಂದು ಮಾಡಲಿ ಆದ್ರೆ ಕಾಮಗಾರಿ ಮಾನಿಟರ್ ಮಾಡೋ ವೇಳೆ ಕನ್ನಡಿಗರಿಗೆ ಆದ್ಯತೆ ಕೊಡಿ. ಇದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕೊಟ್ಟ ಸೂಚನೆ. ಕಲಬುರಗಿಯ ಡಿಸಿ ಕಚೇರಿಯಲ್ಲಿ ಇವತ್ತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ಕೊಟ್ರು.ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಅಂದ್ರೆ ಪೋಲೀಸ್ ಇಲಾಖೆಯ ಸಭೆ ಹೊರತುಪಡಿಸಿ ಮೊದಲ ಮೀಟಿಂಗ್ ನಡೆಸಿ ಅಭಿವೃದ್ಧಿ ಕಾಮಗಾರಿಗಳ  ಹಂತದ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲಾಧಿಕಾರಿ ಫೌಜಿಯಾ ತರುನಮ್ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

Read More

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಬೇಲೂರು ತಾಲೂಕಿನ, ಲಕ್ಕುಂದ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದೆಲ್ಲಾಲ್ಲಾ ಓಡಾಡಿ ಲಕ್ಷ್ಮಮ್ಮ ಅವರ ಮನೆಯ ಕಾಂಪೌಂಡ್ ಧ್ವಂಸಗೊಳಿಸಿರುವ ಹೆಣ್ಣಾನೆ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಬೇಲೂರು ತಾಲೂಕಿನ ಗ್ರಾಮದ ಸುತ್ತಮುತ್ತ ಕಾಡಾನೆಗಳು ಬೀಡುಬಿಟ್ಟಿವೆ. ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾಡಾನೆಗಳ ಹಿಂಡಿನ ದಾಳಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಲಕ್ಷ್ಮಮ್ಮ ಒತ್ತಾಯ ಮಾಡಿದ್ದಾರೆ.

Read More

ಹುಬ್ಬಳ್ಳಿ: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ(Karnataka Budget 2023)  ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟು ಕೊಂಡು ರೂ.3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಆ ಮೂಲಕ ರಾಜ್ಯದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ್ (Jagadish Shetter)ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಆ ಹಿನ್ನೆಲೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಇವುಗಳ ಜಾರಿಗೆ ರೂ.52 ಸಾವಿರ ಕೋಟಿ ಅಗತ್ಯವಿದ್ದು, ರಾಜ್ಯದ 1 ಕೋಟಿಗೂ ಅಧಿಕ ಜನಸಾಮಾನ್ಯರಿಗೆ ಮಾಸಿಕ 4 ರಿಂದ 5 ಸಾವಿರ ನೀಡಲಾಗುವುದು. ಅಲ್ಲದೇ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಸಹ ಕೈಬಿಡಲಾಗುವುದು. ರೈತರಿಗೆ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ರೂ. 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ದೀರ್ಘಾವಧಿ…

Read More

ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸುದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ  ಚಿಕಿತ್ಸೆ ಫಲಕಾರಿಯಾಗದೆ ನಗರದ ಕಿಮ್ಸ್​​ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಮಟಾ  ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್  ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ಯೋಗೇಶ ನಾಯಕ್ ಪ್ಯಾರಾಗ್ಯೂಟ್ ಎಂಬ ವಿಷಪೂರಿತ ಕೀಟ ನಾಶಕವನ್ನು ಸಿಂಪಡಿಸಿದ್ದರು. ಬಳಿಕ ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ. ನಂತರ ಮನೆಗೆ ಬಂದು ಒಂದು ದಿನದ ನಂತರ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳೀಯ ಖಾಸಗಿ ವೈದ್ಯರನ್ನು ಸಂಪರ್ಕಿಸಿದಾಗ ಆಂಟಿಬಯಾಟಿಕ್ ಕೊಟ್ಟಿದ್ದಾರೆ. ಇದರಿಂದ ಉರಿ ಕಡಿಮೆಯಾಗದ ಕಾರಣ ಮರುದಿನ ಯೋಗೇಶ್ ನಾಯ್ಕ ತನ್ನ ಕಾರಲ್ಲೇ ಹುಬ್ಬಳ್ಳಿಯ ಎಸ್​ಡಿಎಂಗೆ ದಾಖಲಾಗಿದ್ದರು. ಅಲ್ಲಿಯೂ ಚಿಕಿತ್ಸೆ ಸಿಗಲು ಒಂದು ದಿನ ವಿಳಂಬ…

Read More

ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರಾದ ಎ.ಸಿ.ನಿಶಾರಾಣಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಚಾಮರಾಜನಗರ ತಾಲೂಕಿನ ರಂಗಸ್ವಾಮಿ(21) ಶಿಕ್ಷೆಗೊಳಗಾದ ಅಪರಾಧಿ. 20 ವರ್ಷ ಕಠಿಣ ಶಿಕ್ಷೆ ಜೊತೆಗೆ 40 ಸಾವಿರ ರೂ. ದಂಡ ವಿಧಿಸಲಾಗಿದೆ. ಸಂತ್ರಸ್ತ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.

Read More

ಬೆಳಗಾವಿ: ಹೀರೆಕುಡಿ (Hirekudi) ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯನ್ನು (Jain Muni)  ಬರ್ಬರವಾಗಿ ಹತ್ಯೆಗೈದಿದ್ದು, ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಹೀರೆಕುಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಇವರು ಜುಲೈ 6ರಿಂದ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಕುರಿತು ಜುಲೈ 6ರಂದು ಭಕ್ತರು ಆಶ್ರಮದ ಸುತ್ತಮುತ್ತ ಶೋಧ ನಡೆಸಿದ್ದರು. ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಶುಕ್ರವಾರ ಚಿಕ್ಕೋಡಿ (Chikkodi) ಪೊಲೀಸ್ ಠಾಣೆಗೆ ಜೈನಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ಸಂದರ್ಭ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಜೈನಮುನಿ…

Read More

ಚಿತ್ರದುರ್ಗ;- ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವರಿಷ್ಠರಿಗೆ ಬಿಟ್ಟಿದ್ದು ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಲವು ಸಂಗತಿಗಳನ್ನು ನಾನು ಹೇಳಲು ಆಗುವುದಿಲ್ಲ. ನನ್ನ ಬಳಿ ಉತ್ತರವೂ ಇಲ್ಲ. ಬಹಳ ಹುಡುಕಾಡಬೇಕಾದ ಸ್ಥಿತಿಯೂ ಇಲ್ಲ. ಬೇರೆನೋ ವಿಷಯ ಇರಬಹುದೇನೋ ನನಗೆ ಗೊತ್ತಿಲ್ಲ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ರಾಜ್ಯಾಧ್ಯಕ್ಷರ ಆಯ್ಕೆ ಸಂಬಂಧ ವೀಕ್ಷಕರು ಬಂದು ವರದಿ ಪಡೆದುಕೊಂಡು ಹೋಗಿದ್ದಾರೆ. ನಾನು ಗೋವಾ, ತಮಿಳುನಾಡು, ಮಹಾರಾಷ್ಟ್ರ ಉಸ್ತುವಾರಿ ಆಗಿರುವುದರಿಂದ ಇಲ್ಲಿ ಗಮನ ನೀಡಿಲ್ಲ. ವರಿಷ್ಠರು ಏನಾದರೂ ಕೇಳಿದರೆ ಮಾತ್ರ ಹೇಳುತ್ತೇನೆ. ಆದರೆ, ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಮಾಜಿ ಸಚಿವರಾದ ವಿ. ಸೋಮಣ್ಣ, ಆರ್‌. ಅಶೋಕ್‌ ಸೇರಿದಂತೆ ಎಲ್ಲರಿಗೂ ಅಧ್ಯಕ್ಷರಾಗುವ ಅರ್ಹತೆಯಿದೆ. ಆದರೆ, ಸವಾಲಿದೆ. ಸಂಕಷ್ಟ ನಿಭಾ ಯಿಸುವ ಜವಾಬ್ದಾರಿ ಇದಾಗಿದೆ. ಅ ಧಿಕಾರವಲ್ಲ ಎಂದರು.

Read More