Author: Prajatv Kannada

ಸೂರ್ಯೋದಯ: 05.59 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಷಾಢ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಪಂಚಮಿ 12:17 AM ತನಕ ನಂತರ ಷಷ್ಠಿ 09:51 PM ತನಕ ನಂತರ ಸಪ್ತಮಿ ನಕ್ಷತ್ರ: ಇವತ್ತು ಪೂರ್ವಾ ಭಾದ್ರ 08:36 PM ತನಕ ನಂತರ ಉತ್ತರಾ ಭಾದ್ರ ಯೋಗ: ಇವತ್ತು ಸೌಭಾಗ್ಯ 05:23 PM ತನಕ ನಂತರ ಶೋಭಾನ ಕರಣ: ಇವತ್ತು ತೈತಲೆ 12:17 AM ತನಕ ನಂತರ ಗರಜ 11:00 AM ತನಕ ನಂತರ ವಣಿಜ 09:51 PM ತನಕ ನಂತರ ವಿಷ್ಟಿ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 01.09 PM to 02.38 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:55 ನಿಂದ ಮ.12:47 ವರೆಗೂ ಮೇಷ ರಾಶಿ; ಅಧಿಕ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಟ್ರಫ್ ಹಾಗೂ ವಾಯುದಿಕ್ಕಿನ ಬದಲಾವಣೆ ಹಿನ್ನಲೆ ಮುಂದಿನ ಮೂರು ದಿನಗಳು ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿಗೆ ಭಾಗಕ್ಕೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇಂದು ಮತ್ತು ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಇರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಪಶ್ಚಿಮ ದಿಕ್ಕಿನಿಂದ ಗಾಳಿ ಬೀಸಲಿದ್ದು, 2-3 ದಿನ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ…

Read More

ಬೆಂಗಳೂರು: ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಟೊಮೆಟೊ ಬೆಲೆದಿನದಿಂದ ದಿನಕ್ಕೆ ದುಬಾರಿತಾಗುತ್ತಿದ್ದು, 15 ದಿನಗಳಿಂದ ಶತಕ ಮೀರಿದೆ.  ಇಂದು ಕೂಡ ಟೊಮೆಟೊ ಬೆಲೆ 120 ರ ಗಡಿದಾಟಿದೆ. ಟೊಮೆಟೊ – 112 ರಿಂದ 123 ರೂ., ಈರುಳ್ಳಿ‌- 26 ರಿಂದ 29 ರೂ., ಹಸಿರು ಮೆಣಸಿನಕಾಯಿ- 60 ರಿಂದ 66 ರೂ., ಬೀಟ್ರೂಟ್- 56 ರಿಂದ 62 ರೂ., ಆಲೂಗಡ್ಡೆ- 36 ರಿಂದ 39 ರೂ., ಬೇಬಿ ಕಾರ್ನ್ – 68 ರಿಂದ 75 ರೂ., ದಪ್ಪ‌ಮೆಣಸಿನ‌ಕಾಯಿ – 51 ರಿಂದ 56 ರೂ., ಹುರುಳಿಕಾಯಿ – 46 ರಿಂದ 51 ರೂ., ಕ್ಯಾರೆಟ್ – 59 ರಿಂದ 65 ರೂ., ಹೂ ಕೂಸು – 17 ರಿಂದ 19 ಒಂದಕ್ಕೆ ರೂ., ನುಗ್ಗೆಕಾಯಿ – 104 ರಿಂದ 114 ರೂ., ದಪ್ಪ ಬದನೆಕಾಯಿ‌- 26 ರಿಂದ 49 ರೂ., ಬೆಳ್ಳುಳ್ಳಿ- 133 ರಿಂದ 147 ರೂ., ಶುಂಠಿ – 86…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಜು.10ರಿಂದ ಆಗಸ್ಟ್​ 9ರವರೆಗೆ ಅಂದರೆ ಬರೋಬ್ಬರಿ ಒಂದು ತಿಂಗಳು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜು.10ರಿಂದ ಆ.9ರವರೆಗೆ ಪ್ರತಿದಿನ 2 ತಾಸು ಮೆಟ್ರೋ ಸಂಚಾರ ಬಂದ್ ಮಾಡಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪತ್ರಿಕೆ ಪ್ರಕಟಣೆ ಹೊರಡಿಸಿದೆ. ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಸಂಬಂಧಿತ ಕಾಮಗಾರಿ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 10 ರಿಂದ ಆಗಸ್ಟ್ 09 ರವರೆಗೆ ಬೈಯಪ್ಪನಹಳ್ಳಿ- ಎಸ್.ವಿ. ರಸ್ತೆ ಹಾಗೂ ಕೃಷ್ಣರಾಜಪುರ- ವೈಟ್‍ಫೀಲ್ಡ್ (ಕಾಡುಗೋಡಿ) ಮಾರ್ಗಗಳ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತ ಮಾಡಲಾಗುತ್ತಿದೆ. ಬೆಳಗ್ಗೆ 2 ಗಂಟೆ ಮಾತ್ರ ಸ್ಥಗಿತ: ಬೆಳಗ್ಗೆ 5.00 ಗಂಟೆಯಿಂದ 7.00 ಗಂಟೆವರೆಗೆ ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಗೂ ಕೃಷ್ಣರಾಜಪುರ ಮತ್ತು ವೈಟ್‍ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆಯ ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸಲಾಗುತ್ತದೆ. ಬೆಳಗ್ಗೆ 7.00 ಗಂಟೆಯ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ…

Read More

ಬೆಂಗಳೂರು ;- ಸಂಸದ ತೇಜಸ್ವಿ ಸೂರ್ಯ ಅಧಿಕೃತ ಫೋನ್ ಸಂಖ್ಯೆ ದುರ್ಬಳಕೆ ಮಾಡಿಕೊಂಡ ಆರೋಪದಡಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಜುಲೈ 1 ರಂದು ತೇಜಸ್ವಿ ಸೂರ್ಯ ಅವರ ಅಧಿಕೃತ ಫೋನ್ ಸಂಖ್ಯೆಯಿಂದ ಆರೋಪಿಯು, ಗುಜರಾತ್ ಘಟಕದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕೋರಟ್ ಅವರಿಗೆ ಕರೆ ಮಾಡಿ ಹಣ ಮತ್ತು ವಜ್ರಕ್ಕೆ ಬೇಡಿಕೆಯಿಟ್ಟಿದ್ದರು. ಬಳಿಕ ಪ್ರಶಾಂತ್ ಕೋರಟ್ ಅವರು ಖಚಿತತೆಗಾಗಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಕರೆ ಮಾಡಿದಾಗ ಪ್ರಕರಣ ಬಯಲಾಗಿದೆ. ಈ ಸಂಬಂಧ ತೇಜಸ್ವಿ ಸೂರ್ಯ ಪಿಎ ಜುಲೈ 4 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ.

Read More

ಬೆಂಗಳೂರು: ಕೆಎಂಎಫ್​ನ ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದು, ಇದನ್ನು ರಕ್ಷಿಸಲು ಮತ್ತು ಬೆಳೆಸಲು ಬದ್ಧವಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 14ನೇ ಬಜೆಟ್ ಮಂಡನೆ ಮಾಡಿದ ಅವರು, ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರೈತರ ಉತ್ಪನ್ನಗಳ ಮಾರುಕಟ್ಟೆಯನ್ನು ಸಕ್ರಿಯಗೊಳಿಸಲು ‘ನಂದಿನಿ’ ಮಾದರಿಯಲ್ಲಿ ರೈತರ ಉತ್ಪನ್ನಗಳ ಬ್ರ್ಯಾಂಡಿಂಗ್ ಅನ್ನು ಪ್ರೋತ್ಸಾಹಿಸಲು 10 ಕೋಟಿ ನೀಡಲಾಗುವುದು ಎಂದು ಘೋಷಿಸಿದರು. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಸಂಬಂಧವನ್ನು ಹೊಂದಿದೆ ಮತ್ತು ಈ ಬಾಂಧವ್ಯವನ್ನು ರಕ್ಷಿಸಲು ಮತ್ತು ಬೆಳೆಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು. ರಾಜ್ಯದಲ್ಲಿ 100 ಹೊಸ ಪಶು ಚಿಕಿತ್ಸಾಲಯಗಳನ್ನು ಸ್ಥಾಪಿಸುವುದಾಗಿಯೂ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಗೋವುಗಳನ್ನು ದತ್ತು ಪಡೆಯಲು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆಯನ್ನೂ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸುವ ಯೋಜನೆಯನ್ನು ಸಿದ್ದರಾಮಯ್ಯ ಘೋಷಿಸಿದರು. ಕ್ಷೀರ ಸಮೃದ್ಧಿ ಶಾಕರ ಬ್ಯಾಂಕ್‌ಗೆ ಷೇರು ಬಂಡವಾಳವಾಗಿ 100 ಕೋಟಿ ರೂಪಾಯಿ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದರು. ಈ ಬ್ಯಾಂಕ್ ಹಾಲು ಉತ್ಪಾದಕರಿಗೆ ಸಾಲ…

Read More

ಬೆಂಗಳೂರು ;– ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ ಪೆನ್ ಡ್ರೈವ್ ಬಿಡುಗಡೆ ಮಾಡಲು ಸೋಮವಾರ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ಪೆನ್ ಡ್ರೈವ್ ನಲ್ಲಿರುವ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಪೆನ್ ಡ್ರೈವ್ ಬಿಡುಗಡೆಯಾದ್ರೆ ಪ್ರಭಾವಿ ಸಚಿವರೊಬ್ಬರು ರಾಜೀನಾಮ ನೀಡಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಸದ್ಯ ರಾಜ್ಯ ರಾಜಕಾರಣದಲ್ಲಿ ಪೆನ್ ಡ್ರೈವ್ ಬಾಂಬ್ ಬಗ್ಗೆ ತೀವ್ರ ಚರ್ಚೆ ನಡೆದಿದ್ದು, ಸೋಮವಾರ ಪೆನ್ ಡ್ರೈವ್ ಬಿಡುಗಡೆ ಮಾಡಿ ರಾಜ್ಯ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ರಾಜ್ಯ ಸರ್ಕಾರದ 4 ಇಲಾಖೆಗಳ ವರ್ಗಾವಣೆ ದಂಧೆಯಲ್ಲಿ ಮೂವರು ಪ್ರಭಾವಿಗಳ ಸಂಭಾಷಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿರುವ ಕುಮಾರಸ್ವಾಮಿ. ಪೆನ್‌ಡ್ರೈವ್‌ ನಲ್ಲಿ ಪ್ರಮುಖ ಅಧಿಕಾರಿಗಳ ವಿಚಾರದಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದೆ ಎನ್ನಲಾಗಿದೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಡೆಂಗೀ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಈ ತಿಂಗಳು ಐದು ದಿನಗಳಲ್ಲಿ 172 ಮಂದಿ ಡೆಂಗಿ ಜ್ವರದಿಂದ ಬಳಲಿದ್ದಾರೆ. ಈ ವರ್ಷ ಈಗಾಗಲೇ 41 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 28 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 2,432ಕ್ಕೆ ತಲುಪಿದೆ. ಕಳೆದ ವರ್ಷ 9,620 ಮಂದಿ ಡೆಂಗಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿರುವುದು ದೃಢಪಟ್ಟಿತ್ತು. ಈ ವರ್ಷ ಮರಣ ವರದಿಯಾಗಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 1,759 ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದ್ದು, 804 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ಮೈಸೂರಿನಲ್ಲಿ 211, ವಿಜಯಪುರದಲ್ಲಿ 120, ಚಿತ್ರದುರ್ಗದಲ್ಲಿ 94, ಶಿವಮೊಗ್ಗದಲ್ಲಿ 83, ಧಾರವಾಡ ಹಾಗೂ ಗದಗದಲ್ಲಿ…

Read More

ಬೆಂಗಳೂರು ;- ಸಂಚಾರಿ ನಿಯಮ ಉಲ್ಲಂಘಿಸಿದ ವಾಹನಗಳ ಮೇಲೆ ಶೇ. 50 ರಷ್ಟು ರಿಯಾಯ್ತಿ ನೀಡಿ ರಾಜ್ಯ ಸರ್ಕಾರ ಮತ್ತೆ ಆದೇಶ ಹೊರಡಿಸಿದ್ದು, ಇದರಿಂದ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಳೆದ ಎರಡು ದಿನದಲ್ಲಿ ಬರೋಬ್ಬರಿ 50 ಲಕ್ಷ ದಂಡ ಪಾವತಿಯಾಗಿದೆ. 15,980 ಕೇಸ್​ಗಳು ಕ್ಲಿಯರ್​ ಆಗಿದ್ದು, 50,71,850 ರೂ.ಗಳನ್ನು ವಾಹನ ಸವಾರರು ದಂಡದ ರೂಪದಲ್ಲಿ ಕಟ್ಟಿದ್ದಾರೆ. ಫೆಬ್ರವರಿ ತಿಂಗಳವರೆಗೆ ಟ್ರಾಫಿಕ್​​ ರೂಲ್ಸ್​ ಉಲ್ಲಂಘನೆ ಮಾಡಿದ್ದಕ್ಕೆ ವಿಧಿಸಲಾಗಿರುವ ದಂಡವನ್ನು ಶೇಕಡಾ 50ರಷ್ಟು ರಿಯಾಯಿತಿ ದರದಲ್ಲಿ ಪಾವತಿ ಮಾಡಲು ಈ ವರ್ಷದ ಸೆಪ್ಟೆಂಬರ್​​ವರೆಗೂ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹವಾಗಿತ್ತು. ಮತ್ತೆ ಈಗ ಅದೇ ಮಾದರಿಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಅನುಸರಿಸಲು ಮುಂದಾಗಿದೆ. ಹೀಗಾಗಿಯೇ, ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ.

Read More

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳವಾಗಲಿದೆ. ಲೀಟರ್ ನಂದಿನಿ ಹಾಲಿನ ದರವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ನಿನ್ನೆ ಸಭೆ ನಡೆಸಿರುವ ಹಾಲು ಒಕ್ಕೂಟಗಳು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಜುಲೈ 11 ರಂದು ನಂದಿನಿ ಹಾಲಿನ ದರವನ್ನು ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿ ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ. ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.

Read More