ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಯನ್ನು ಘೋಷಿಸಿರುವ ಸಿದ್ದ ಸರ್ಕಾರ ಹಲವು ವರ್ಷಗಳ ಬೇಡಿಕೆಯೊಂದನ್ನ ಈಡೇರಿಸಿದೆ. ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಸಿದ್ದು ಸರ್ಕಾರ ಈಡೇರಿಸಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಈ ಬಾರಿಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಳವಣಿಗೆ ಇತಿಹಾಸ ಪರಿಚಯಿಸಲು ಮುಂದಾಗಿದ್ದಾರೆ. ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಗ್ರೀನ್…
Author: Prajatv Kannada
ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಯನ್ನು ಘೋಷಿಸಿರುವ ಸಿದ್ದ ಸರ್ಕಾರ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿದ್ದಾರೆ. 2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಬಾರಿ ಚಿತ್ರನಗರಿಯ ಕುರಿತು ಬಜೆಟ್ ನಲ್ಲಿ ಪ್ರಸ್ತಾಪವಾಗಿತ್ತು. ಕಾಂಗ್ರೆಸ್ ಸರಕಾರ ಮೈಸೂರಿನಲ್ಲಿ ಚಿತ್ರನಗರಿ ಮಾಡಲಾಗುವುದು ಎಂದರೆ ಜೆಡಿಎಸ್ ಸರಕಾರ ರಾಮನಗರದಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಬಿಜೆಪಿ ಸರಕಾರವು ಅದನ್ನು ಬೆಂಗಳೂರಿನಲ್ಲೇ ಮಾಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಕಾಂಗ್ರೆಸ್ ಮಾತಿನಂತೆ ಮತ್ತೆ ಚಿತ್ರನಗರಿ ಮೈಸೂರನಲ್ಲಿ ಮಾಡುವುದಾಗಿ ಘೋಷಣೆಯಾಗಿದೆ.
ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇರುತ್ತಾರೆ. ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಆರ್ ಜಿವಿ ಇದೀಗ ನೀಲಿ ತಾರೆ ಮಿಯಾ ಜೊತೆ ಆತ್ಮಿಯವಾಗಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ಇಂಟರ್ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚೆಗೆ ಆರ್‌ಜಿವಿ ಅಮೆರಿಕಾಗೆ ಭೇಟಿ ನೀಡಿದ್ದು ಅಲ್ಲಿ ನೀಲಿ ತಾರೆ ಮಿಯಾ ಮಲ್ಕೋವಾ ಅವರನ್ನ ಭೇಟಿ ಮಾಡಿದ್ದಾರೆ. ಈ ಹಿಂದೆ ಜಿಎಸ್‌ಟಿ ಎಂಬ ಬೋಲ್ಡ್ ಕಿರುಚಿತ್ರವನ್ನು ನೀಡಿದ್ದರು. ಅಂದು ಪರಿಚಯವಾದ ಸ್ನೇಹ ಸಂಬಂಧ ಇಂದಿಗೂ ಆ ಒಡನಾಟವಿದೆ. ಹಾಗಾಗಿ ಪೋರ್ನ್ ಸ್ಟಾರ್ ಮಿಯಾನ ಆರ್‌ಜಿವಿ ಮೀಟ್ ಮಾಡಿ ಖುಷಿಪಟ್ಟಿದ್ದಾರೆ. ಮಿಯಾ ಜೊತೆ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯದಲ್ಲಿ ಶೇರ್ ಮಾಡಿದ್ದು ಫೋಟೋಗೆ ಅನೇಕರು ಕಾಮೆಂಟ್ ಮಾಡಿದ್ದಾರೆ. ಒಂದು ಕಾಲದಲ್ಲಿ ತೆಲುಗು, ಹಿಂದಿ, ಕನ್ನಡ ಚಿತ್ರಗಳಿಗೆ ರಾಮ್ ಗೋಪಾಲ್ ವರ್ಮಾ ನಿರ್ದೇಶನ ಮಾಡುವ ಮೂಲಕ ಸದ್ದು ಮಾಡಿದ್ದರು. ಆರ್ ಜಿವಿ ಜೊತೆ ಕೆಲಸ…
ಚೆನ್ನೈ: ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕ (Coimbatore DIG) ವಿಜಯಕುಮಾರ್ (IPS) ತಮ್ಮ ಅಧಿಕೃತ ನಿವಾಸದಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಸುಮಾರು 6:15ರ ವೇಳೆಗೆ ವಿಜಯಕುಮಾರ್ ರೇಸ್ ಕೋರ್ಸ್ ಬಳಿಯ ರೆಡ್ ಫೀಲ್ಡ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಗನ್‌ಮ್ಯಾನ್‌ನಿಂದ ಪಿಸ್ತೂಲ್ ಅನ್ನು ಪಡೆದು ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಜಯಕುಮಾರ್ (Vijayakumar) ತೀವ್ರ ಖಿನ್ನತೆಗೆ ಒಳಗಾಗಿದ್ದರು ಹಾಗೂ ನಿದ್ರಾಹೀನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರಿಗೆ ಕೌನ್ಸೆಲಿಂಗ್ ಕೂಡಾ ನಡೆಯುತ್ತಿತ್ತು ಹಾಗೂ ಕೆಲ ದಿನಗಳ ಹಿಂದಷ್ಟೇ ಅವರ ಕುಟುಂಬವನ್ನು ಚೆನ್ನೈಯಿಂದ ಕೊಯಮತ್ತೂರಿಗೆ ಕರೆತರಲಾಗಿತ್ತು. 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ಈ ವರ್ಷದ ಜನವರಿಯಲ್ಲಿ ಕೊಯಮತ್ತೂರು ವ್ಯಾಪ್ತಿಯ ಡಿಐಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ಅವರು ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ಧಾರವಾಡ ;– ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣಸ್ತಿವೆ ಎಂದಿದ್ದಾರೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. ಪದೇ ಪದೆ ಭಾರತ ಸರ್ಕಾರದ ಮೇಲೆ ಮಂತ್ರಿಗಳು ಸಚಿವರು ಆರೋಪ ಮಾಡ್ತಿದ್ದಾರೆ. ಜುಲೈ 1ಕ್ಕೆ ನೀಡಿರುವ ಅಕ್ಕಿಯೂ ಕೇಂದ್ರ ಸರ್ಕಾರದ್ದು, ಕರ್ನಾಟಕ ಸೇರಿ 80 ಕೋಟಿ ಜನರಿಗೆ ಅಕ್ಕಿ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು. ಈ ಅಕ್ಕಿಯನ್ನು ಕೇಂದ್ರ ಸರ್ಕಾರದಿಂದ ಕೊಟ್ಟಿದ್ದೇವೆ. ನೀವು ರಾಜ್ಯ ಸರ್ಕಾರ ಅಕ್ಕಿಯನ್ನು ಕೊಟ್ಟಿಲ್ಲ. ಅದನ್ನ ನೀವು ಒಪ್ಪಿ ಕೊಳ್ಳಲೇಬೇಕು. ಎಲ್ಲ ಯೋಜನೆ ಅನಗತ್ಯ ಷರತ್ತು ಹಾಕಲಾಗಿದೆ. ಗ್ಯಾರಂಟಿ ಯೋಜನೆ ಷರತ್ತು ವಿಧಿಸಲಾಗುತ್ತಿದ್ದು, ಆ ಮೂಲಕ ನೀವು ಜನರಿಗೆ ಮೋಸ ಮಾಡಿದ್ದೀರಿ. ಸಿಎಂ ಕಾರ್ಯಾವಧಿ ಶುರುವಾಗುತ್ತಿದ್ದಂತೆ ವರ್ಗಾವಣೆಯಲ್ಲಿ ಅನೇಕ ಕಡೆ ಒಂದೊಂದು ಪೋಸ್ಟಿಗೆ ನಾಲ್ಕು ನಾಲ್ಕು ಪತ್ರ ಕೊಡುತ್ತಿದ್ದಾರೆ ಎಂದು ದೂರಿದರು. ವರ್ಗಾವಣೆ…
ಬೆಂಗಳೂರು ;– ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಿದ್ದಾರೆ. • 4 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ ಸೇರಿದಂತೆ ರಾಮನಗರ, ದಾವಣಗೆರೆ ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವ ಜನರಿಗೆ ಕೌಶಲ್ಯ ತರಬೇತಿಯನ್ನು ಪ್ರಾರಂಭ. • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳ ಸ್ಥಾಪನೆ. • ಬೆಳಗಾವಿ ಸೇರಿದಂತೆ ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕಾರ್ಯಾರಂಭಿಸಲು ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ. ನೆರವು. • ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ…
ಬೆಂಗಳೂರು ; ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲು ಮುಂದಾಗಿದ್ದು, ರಾಜ್ಯ ಸರ್ಕಾರದಿಂದ 100 ಕೋಟಿ ರೂಪಾಯಿ ಷೇರು ಬಂಡವಾಳ ಹೂಡಲಿದೆ. ಆಕಸ್ಮಿಕ ಮರಣ ಹೊಂದುವ ಕುರಿ, ಮೇಕೆ ಸಾಕಾಣಿಕೆದಾರರು ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ. ವಿಮಾ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ʻಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆʼ ಎಂಬ ಧ್ಯೇಯವಾಕ್ಯ ಹೊಂದಿರುವ ʻನಂದಿನಿʼಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಭಾಷಣದ ವೇಳೆ ತಿಳಿಸಿದರು. ಕಳೆದ ಬಾರಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ʻಅನುಗ್ರಹʼ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ,…
ಬೆಂಗಳೂರು ;- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ದೇಶದ್ರೋಹ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕಲಬುರ್ಗಿ ವಿಭಾಗೀಯ ಪೀಠದ ಮುಖ್ಯ ನ್ಯಾಯಾಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠವು ಬೀದರ್ನ ಶಾಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್, ಅನ್ದುಲ್ ಕಲೇಕ್, ಮೊಹಮ್ಮದ್ ಬಿಲಾಲ್ ಇನಾಮ್ದಾರ್, ಮೊಹಮ್ಮದ್ ಮೆಹ್ತಾಬ್ ವಿರುದ್ಧ ದಾಖಲಾಗಿದ್ದ FIRಅನ್ನು ರದ್ದು ಮಾಡಿದೆ. ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 153(ಎ) ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಯಾವುದೇ ಅಂಶಗಳು ಸಹ ಕಂಡು ಬಂದಿಲ್ಲ. ಪ್ರಧಾನಿ ಚಪ್ಪಳಿಯಲ್ಲಿ ಹೊಡೆಯಬೇಕು ಎಂದು ಹೇಳಿರುವುದು ಅವಹೇಳನಕಾರಿಯಲ್ಲ ಬೇಜವಾಬ್ದಾರಿತನದಿಂದ ಕೂಡಿರುವ ಹೇಳಿಕೆ. ಸರ್ಕಾರ ಹೊಸದಾಗಿ ನೀತಿ ಅಥವಾ ಕಾಯ್ದೆಗಳನ್ನು ಜಾರಿಗೆ ತಂದಾಗ ಟೀಕಿಸುವುದು ಸಹಜ. ಆದರೆ, ಮಕ್ಕಳ ನಾಟಕದ ಮೂಲಕ ಹಿಂಸಾಚಾರ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವ ಯಾವುದೇ ಆಂಶಗಳು ಕಂಡು ಬಂದಿಲ್ಲ. ಆರೋಪಿತರ ಪೈಕಿ ಒಬ್ಬರು ನಾಟಕದ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ…
ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರು ಜನವಿರೋಧಿ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಜನ ವಿರೋಧಿ ಬಜೆಟ್ ಆಗಿದ್ದು, ಜನರಿಗೆ ಭಾರ ಹೊರಿಸಿರುವ, ಅಭಿವೃದ್ಧಿ ವಿರೋಧಿ, ಅಭಿವೃದ್ಧಿಗೆ ಮಾರಕವಾಗುವ, ಯಾವುದೆ ಹೊಸ ಭರವಸೆ ಮೂಡಿಸದ, ಜನತೆಗೆ ನಿರಾಶಾದಾಯಕ ಬಜೆಟ್ ಆಗಿದೆ. ರಾಜ್ಯವನ್ನು ಹಿಂದಕ್ಕೆ ತೆಗೆದುಕೊಂಡು ಹೋಗುವ ರಿವರ್ಸ್ ಗೇರ್ ಬಜೆಟ್ ಎಂದು ಟೀಕಿಸಿದರು. ನಾವು ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಗೆ ನಾಲ್ಕು ತಿಂಗಳ ಲೇಖಾನುದಾನ ಪಡೆದಿದ್ದೆವು. ಈಗ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಬಜೆಟ್ ಆಗಿದೆ. ಹಲವಾರು ಅಂಕಿ – ಅಂಶಗಳನ್ನು ಆಧರಿಸಿ ವಾಸ್ತವಾಂಶಕ್ಕೆ ಎಲ್ಲ ಸರ್ಕಾರಗಳು ಬಜೆಟ್ ಮಾಡಲಿವೆ. ಆದರೆ, ಇವರು ಎಲ್ಲವನ್ನೂ 2013ಕ್ಕೆ ಹೋಲಿಕೆ ಮಾಡಿದ್ದಾರೆ. ಇದು ರಿವರ್ಸ್ ಗೇರ್ ಇರುವ ಸರ್ಕಾರ, ನಾವು ಹಿಂದೆ ಹೋಗಬೇಕಾ ಮುಂದೆ ಹೋಗಬೇಕಾ? ಎಂದು ಪ್ರಶ್ನಿಸಿದರು.
ಬೆಂಗಳೂರು ;- ಸ್ವಿಗ್ಗಿ, ಜೊಮೊಟೊ ಒಳಗೊಂಡಂತೆ ಇ – ಕಾರ್ಮಸ್ನ ಅಸಂಘಟಿತ ನೌಕರರಿಗೆ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ. ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಸೇರಿ ಇ-ಕಾರ್ಮಸ್ ಸಂಸ್ಥೆಗಳಲ್ಲಿ ಪೂರ್ಣ ಹಾಗೂ ಅರೆಕಾಲಿಕ ನೌಕರರಾಗಿ ಕೆಲಸ ಮಾಡುತ್ತಿರುವವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು 2 ಲಕ್ಷ ಜೀವವಿಮೆ ಹಾಗೂ 2 ಲಕ್ಷ ಅಪಘಾತ ವಿಮಾ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆರು ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ಒಟ್ಟು 35 ಬೆಡ್ಗಳ ಸಾಮರ್ಥ್ಯದ ಐಸಿಯು ನಿರ್ಮಾಣಕ್ಕೆ 13 ಕೋಟಿ ವೆಚ್ಚದಲ್ಲಿ, ಆರು ಆಸ್ಪತ್ರೆಗಳಲ್ಲಿ 25 ಡಯಾಲಿಸಿಸ್ ಘಟಕ ನಿರ್ಮಾಣಕ್ಕೆ ಐದು ಕೋಟಿ ಮೀಸಲಿರಿಸಿದೆ. ಎರಡು ಆಸ್ಪತ್ರೆಗಳಲ್ಲಿ ಹೊಸ ಲೆವೆಲ್ ನ ಟ್ರಾಮಾ ಕೇರ್ ಸೆಂಟರ್ ಗಳನ್ನ 24 ಕೋಟಿ ರೂ ವೆಚ್ಚದಲ್ಲಿ, ನಾಲ್ಕು ಆಸ್ಪತ್ರೆಗಳಲ್ಲಿ ಮಾಡ್ಯುಲಾರ್ ಆಪರೇಷನ್ ಥಿಯೇಟರ್ ಗಳ ನಿರ್ಮಾಣಕ್ಕೆ 8 ಕೋಟಿ, ರೋಗ ಪತ್ತೆ ಹಚ್ಚುವ ಕೇಂದ್ರಗಳ ಉನ್ನತೀಕರಣಕ್ಕಾಗಿ 35 ಕೋಟಿ ಸೇರಿ ಒಟ್ಟು 85 ಕೋಟಿ ವೆಚ್ಚದಲ್ಲಿ ಸಮಗ್ರ…