Author: Prajatv Kannada

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ (Karnataka Rains ) ಮಳೆಯ ಪರಿಣಾಮವಾಗಿ (Landslide) ಭೂ ಕುಸಿತಗೊಂಡಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿಯಿತು ಬಾವಿ. ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಗೆ ಎಂಬಲ್ಲಿ ಘಟನೆ ನಡೆದಿದೆ.ನೋಡು ನೋಡುತ್ತಿದ್ದಂತೆ ಬಾವಿಯೂ ಸಹ ಪಾತಾಳಕ್ಕೆ ಕುಸಿದಿದೆ. ಅಲ್ಲದೇ ಬಾವಿ ಪಕ್ಕದಲ್ಲಿದ್ದ ಮನೆಯು ಅಪಾಯದಲ್ಲಿದೆ. ಭೂಕುಸಿತದ ಪರಿಣಾಮವಾಗಿ ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಲ್ಲಿ ಬಿರುಕು ಮೂಡಿದ್ದು, ಅಲ್ಲಿನ ಪರಿಸರದ ಜನರು ಆತಂತಕದಲ್ಲಿದ್ದಾರೆ. ತಕ್ಷಣ ಅಗ್ನಿಶಾಮಕ ದಳದಿಂದ ಮನೆ ಮಂದಿಯ ರಕ್ಷಣೆ ಕಾರ್ಯಾಚರಣೆಯಾಗಿದ್ದು, ಮನೆ ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

Read More

ತುಮಕೂರು : ತುಮಕೂರಿನ ಕೆಸರುಮಡು ಗ್ರಾಮದಲ್ಲಿ ಸೋಮವಾರ ನಡೆಯಬೇಕಿದ್ದ ಜಾತ್ರೆಯು ಕರಗಲಮ್ಮ ದೇವಿಯ (Karalagamma Devi) ವೀರಗಲ್ಲು ಇದ್ದ ಪ್ರದೇಶ ಮತ್ತು ಅಲ್ಲಿ ಪೂಜೆ ಮಾಡುವ ವಿಚಾರವಾಗಿ ರದ್ದಾಗಿತ್ತು. ಜಾತ್ರೆ ರದ್ದಾಗಿದ್ದಕ್ಕೆ ಕೆಸರುಮಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಿನ್ನೆ ಎರಡೂ ಕೋಮಿನ ಮುಖ್ಯಸ್ಥರೊಂದಿಗೆ ಎಸ್ಪಿ ರಾಹುಲ್ ಕುಮಾರ್ ಶಹಾಪೂರ್ ವಾಡ್ ಸಂಧಾನ ಸಭೆ ನಡೆಸಿದರು. ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಜಾತ್ರೆಯನ್ನು ಊರಿನವರೆಲ್ಲ ಆರತಿ, ಮೆರವಣಿಗೆ ಮಾಡುವುದರ ಮೂಲಕ ಅದ್ದೂರಿಯಾಗಿ ನೆರವೇರಿಸಿದರು. ಎರಡು ಕೋಮುಗಳ ಸಾಮರಸ್ಯಕ್ಕೆ ಧಕ್ಕೆಯಾಗಿದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ತಹಶಿಲ್ದಾರ್ ಸಿದ್ದೇಶ್ ಅವರು ಜಾತ್ರೆಗೆ ಸ್ಟೇ ನೀಡಿದ್ದರು. ಮಸೀದಿ ಪಕ್ಕದಲ್ಲಿದ್ದ ಕಲ್ಲಿಗೆ ಪೂಜೆ ಸಲ್ಲಿಸಬಾರದೆಂದು ಮುಸ್ಲಿಂ ಮುಖಂಡರು ಸ್ಟೇ ತಂದಿದ್ದರು. ಹೀಗಾಗಿ ಎಸ್ಪಿ, ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಿಂದ ಸಮಸ್ಯೆ ಇಥ್ಯರ್ತ ಮಾಡಿದರು. ಅದೇ ಕಾರಣಕ್ಕೆ ಕರಗಲಮ್ಮ ಜಾತ್ರೆಯು ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಸಲಾಯಿತು. ಸದ್ಯ ಕೆಸರುಮಡು ಗ್ರಾಮದಲ್ಲಿ ಶಾಂತಿ ಸೌಹಾರ್ದತೆಯಿಂದ ಜಾತ್ರೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

Read More

ರಾಯಚೂರು: ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ ನೀಡಲಾಗಿದ್ದು, ರಾಯಚೂರಿನ ಕಲ್ಮಲಾ ಜಂಕ್ಷನ್​ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ (Hybrid Annuity) ಮಾದರಿಯ ರಸ್ತೆ ನಿರ್ಮಾಣಕ್ಕೆ 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಜೊತೆಗೆ 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ ನಿರ್ಧರಿಸಲಾಗಿದೆ.

Read More

ದಾವಣಗೆರೆ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಶಿಸ್ತು ಸಮಿತಿ ಅಧ್ಯಕ್ಷರು ಯಾರೆಂದೇ ಗೊತ್ತಿಲ್ಲ. ಅಲ್ಲದೆ, ನಾನು ಯಾವುದೇ ರೀತಿಯಲ್ಲೂ ತಪ್ಪು ಮಾತನಾಡಿಲ್ಲ. ನಮ್ಮೆಲ್ಲ ಕಾರ್ಯಕರ್ತರು ಮಾತನಾಡುತ್ತಿರುವುದನ್ನೇ ಹೇಳಿದ್ದೇನೆ ಅಷ್ಟೆಎಂದರು.  ನನ್ನ ಮಾತುಗಳನ್ನು ಕೇಳಿ, ನಾನು ಹೇಳಿದ್ದನ್ನು ನೋಡಿ ಪಕ್ಷದ ನಾಯಕರೇ ನನಗೆ ಕರೆ ಮಾಡಿ, ನೀವು ಮಾತನಾಡಿದ್ದು ಸರಿಯಾಗಿದೆ ಎನ್ನುತ್ತಿದ್ದಾರೆ ಎಂದು ಹೇಳಿದ(Renukacharya) ರೇಣುಕಾಚಾರ್ಯ, ನಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ (yadiyurappa)ವಿರುದ್ಧ ಮಾತನಾಡಿದವರಿಗೆ ಮಾತ್ರ ಪಕ್ಷದಲ್ಲಿ ರಾಜ ಮರ್ಯಾದೆನಾ ಎಂದು ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದರು. ಪಕ್ಷದಲ್ಲಿ 11 ಮಂದಿಗೆ ನೋಟಿಸ್‌ ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ, ನನಗೆ ನೀಡಿದ್ದ ನೋಟಿಸ್‌ವೊಂದನ್ನು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಇಂಥ ನೋಟಿಸ್‌ಗೆ ಉತ್ತರ ಕೊಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ ಸೇರಲ್ಲ: ಹಿರಿಯರಾದ ಕಾಂಗ್ರೆಸ್‌ ನಾಯಕ, ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರ ಜೊತೆಗೆ ರಾಜಕೀಯ ಹೊರತುಪಡಿಸಿ ಉತ್ತಮ ಒಡನಾಟವಿದೆ. ನಾನು ಈಗಲೂ ನಮ್ಮ ಪಕ್ಷದಲ್ಲೇ ಇದ್ದೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸೇರುವುದಿಲ್ಲ.…

Read More

ಬೆಂಗಳೂರು: ಕೇಂದ್ರ ಸರ್ಕಾರ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ನಲ್ಲಿ ಘೊಷಿಸಲಾಯಿತು. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಮತ್ತು ನಿಟ್ಟಿನಲ್ಲಿ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಹೇಳಿದರು.

Read More

ಬೆಂಗಳೂರು: ಹಿಂದುಳಿದ ವರ್ಗಗಳ ಬಗೆಗಿನ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಮತ್ತು ಬದ್ಧತೆಗೆ ನಾನು ಇಲ್ಲಿಯವರೆಗೆ ಮಂಡಿಸಿರುವ ಬಜೆಟ್‌ಗಳೇ ಸಾಕ್ಷಿ. ಸಾಮಾಜಿಕ ನ್ಯಾಯ ಎನ್ನುವುದು ರಾಜಕೀಯ ಅಸ್ತ್ರ ಅಲ್ಲ. ದಮನಿತರಿಗೆ ಅವಕಾಶ – ಪ್ರಾತಿನಿಧ್ಯಗಳನ್ನು ನೀಡುವ ಜವಾಬ್ದಾರಿ ಎಂದು ನಾನು ತಿಳಿದುಕೊಂಡಿದ್ದೇನೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಅವಶ್ಯಕ ಅನುದಾನ ನೀಡದೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದೇ ನಿರ್ಲಕ್ಷಿಸಿರುವುದು ವಿಷಾದನೀಯ ಬೆಳವಣಿಗೆ. ವೈದ್ಯಕೀಯ, ಇಂಜಿನಿಯರಿಂಗ್‌ ಮತ್ತು ಇತರೆ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಅರಿವು ಎಂಬ ಯೋಜನೆಯ ಮುಖಾಂತರ ವಾರ್ಷಿಕ ಒಂದು ಲಕ್ಷ ರೂ.ಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತಿತ್ತು. ಇದರಿಂದ 11,956 ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ, ಈ ಕಾರ್ಯಕ್ರಮವನ್ನು ಹಿಂದಿನ ಸರ್ಕಾರವು 2020-21ನೇ ಸಾಲಿನಿಂದ ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರವು ಪುನರ್‌ ಚಾಲನೆ ನೀಡಲಿದೆ. ವಿದ್ಯಾಸಿರಿ ಯೋಜನೆಯಡಿ ಸರ್ಕಾರದ ವಸತಿ ನಿಲಯಗಳಲ್ಲಿ ಪ್ರವೇಶ ದೊರಕದ ಹಿಂದುಳಿದ ವರ್ಗಗಳ…

Read More

ಬೆಂಗಳೂರು: ಸಮಾಜದಲ್ಲಿ ಹಲವು ಪೀಳಿಗೆಗಳಿಂದ ತುಳಿತಕ್ಕೊಳಗಾದ, ಅವಕಾಶ ವಂಚಿತರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯುದಯಕ್ಕೆ ನಮ್ಮ ಸರ್ಕಾರದ ಬದ್ಧತೆ ಪ್ರಶ್ನಾತೀತ. ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಿಗೆ ಈ ಹಿಂದೆ, ಅಂದರೆ, 2012-13ನೇ ಸಾಲಿನಲ್ಲಿ ಹಾಗೂ ಅದಕ್ಕೂ ಹಿಂದಿನ ಸಾಲುಗಳಲ್ಲಿ ವೈಜ್ಞಾನಿಕವಾಗಿ ಅನುದಾನ ಹಂಚಿಕೆಯಾಗುತ್ತಿರಲಿಲ್ಲ.  ಈ ನ್ಯೂನತೆಯನ್ನು ಸರಿಪಡಿಸುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯನ್ನಾಧರಿಸಿ, ಅವರ ಅಭಿವೃದ್ಧಿಗೆ ಅನುದಾನ ಹಂಚಿಕೆ ಮಾಡುವ ಹಾಗೂ ನಿರ್ದಿಷ್ಟ ಉದ್ದೇಶಗಳಿಗೇ ಅನುದಾನ ಬಳಕೆಯಾಗುವ ಕುರಿತು ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ, 2013ನ್ನು (SCSP/TSP Act, 2013) ಜಾರಿಗೆ ತಂದ ಶ್ರೇಯ ನಮ್ಮ ಸರ್ಕಾರದ್ದಾಗಿದೆ. ಈ ಯೋಜನೆಯ ಅನುದಾನ ಹಂಚಿಕೆಯಲ್ಲಿ ವ್ಯಾಪಕ ಬದಲಾವಣೆಯಾಗಿದ್ದು, 2013-14ರಲ್ಲಿ 8,988 ಕೋಟಿ ರೂ. ಇದ್ದ ಹಂಚಿಕೆ, 2014-15 ರಲ್ಲಿ 13,043 ಕೋಟಿ ರೂ.…

Read More

ಚಾಮರಾಜನಗರ: ಎಂದಿನಂತೆ ಈ ಬಾರಿಯೂ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ (Malemahadeshwara Hills) ಮೇಲಿರುವ ಮಲೆಮಹದೇಶ್ವರನ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಬಾರಿಯೂ ಮಾದಪ್ಪ ಕೋಟ್ಯಧೀಶನಾಗಿ ದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ತಡರಾತ್ರಿವರೆಗೂ ಹುಂಡಿ ಎಣಿಕೆ ನಡೆದಿದೆ. ಈ ವೇಳೆ ಮಹದೇಶ್ವರನ ಹುಂಡಿಯಲ್ಲಿ 2.47 ಕೋಟಿ ರೂ. ಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ. ಕಳೆದ 36 ದಿನಗಳ ಅವಧಿಯಲ್ಲಿ ಒಟ್ಟು 2,47,15,655 ರೂ. ನಗದು ಸಂಗ್ರಹವಾಗಿದೆ. ನಗದು ಹಣದ ಜೊತೆಗೆ 77 ಗ್ರಾಂ ಚಿನ್ನ (Gold), 2 ಕೆ.ಜಿ 250 ಗ್ರಾಂ ಬೆಳ್ಳಿಯನ್ನು (Silver) ಭಕ್ತರು ಹುಂಡಿಗೆ ಹಾಕುವ ಮೂಲಕ ಮಾದಪ್ಪನಿಗೆ ಸಮರ್ಪಿಸಿದ್ದಾರೆ. ನಗದು ಹಣದ (Money) ಪೈಕಿ 12 ಲಕ್ಷ ರೂ. ನಾಣ್ಯದ ರೂಪದಲ್ಲೇ ಸಂಗ್ರಹವಾಗಿರೋದು ವಿಶೇಷವಾಗಿದೆ.

Read More

ಬೆಂಗಳೂರು: ಮಕ್ಕಳಲ್ಲಿನ ಕಲಿಕಾ ದೋಷಗಳ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಕಾರ್ಯಕ್ರಮ ರೂಪಿಸಲು ನಿರ್ಧಾರ ಮಾಡಲಾಗಿದೆ. ಮರುಸಿಂಚನ ಯೋಜನೆಯಡಿ ಪ್ರೌಢಹಂತದ ಪರೀಕ್ಷೆಗೆ ಸಜ್ಜುಗೊಳಿಸಲು ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಮಾಧ್ಯಮಿಕ, ಪದವಿ ಪೂರ್ವ ಕಾಲೇಜುಗಳಲ್ಲಿ ಲ್ಯಾಬ್​ ಆರಂಭ ಮಾಡಲಾಗುವುದು. ಇನ್ನು 2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು ಎನ್ನಲಾಗಿದೆ. ಮತ್ತು ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ 4 ಲ್ಯಾಬ್​ಗಳ ಸ್ಥಾಪನೆ ಮಾಡಲಾಗುವುದು. ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದರೂ, ಗಂಡು-ಹೆಣ್ಣು, ಮೇಲು-ಕೀಳು ಎಂಬ ತಾರತಮ್ಯ ಸಮಾಜದಲ್ಲಿ ಹಾಸುಹೊಕ್ಕಾಗಿ ಬೆಳೆದಿರುವುದು ಸುಳ್ಳಲ್ಲ. ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಈ ತಾರತಮ್ಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕುಟುಂಬದ ಯಜಮಾನಿಗೆ ಎರಡು ಸಾವಿರ ರೂ.ಗಳ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಿ ನಮ್ಮ ಸರ್ಕಾರ ಮಹಿಳೆಯರನ್ನು ನಿಜವಾದ ಅರ್ಥದಲ್ಲಿ ʻಗೃಹಲಕ್ಷ್ಮಿʼಯಾಗಿಸಿದೆ. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು…

Read More

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಬಿಸಿಯೂಟ ಯೋಜನೆಗೆ 280 ಕೋಟಿ ನೀಡಲು ನಿರ್ಧರಿಸಲಾಗಿದ್ದು, ಈ ಯೋಜನೆ ಇದೀಗ 9 ಮತ್ತು 10ನೇ ತರಗತಿಗೂ ವಿಸ್ತರಣೆಯಾಗಲಿದೆ. ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ…

Read More