ಬೆಂಗಳೂರು: ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರಿಗೆ ಹಠಾತ್ ಹೃದಯಬೇನೆ ಕಾಣಿಸಿಕೊಂಡಾಗ ಯಾವ ರೀತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಬೇಕಿತ್ತು ಎಂದೆಲ್ಲ ಚರ್ಚೆ ಆಯಿತು. ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್ (Karnataka Budget 2023)ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
Author: Prajatv Kannada
ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಸತತ 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆ. ಹೌದು ನಾಡದೇವತೆ ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಅಸ್ತು ಅಂದಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದರು.
ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು. ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ. ಕುಡಿಯುವ ನೀರು…
ಬೆಂಗಳೂರು: ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. 2021-22 ರಲ್ಲಿ ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆಯು ಶೇ.11 ರಷ್ಟು ದಾಖಲಾಗಿತ್ತು. 2022-23ರ ವಲಯವಾರು ಬೆಳವಣಿಗೆಯನ್ನು ಗಮನಿಸಿದರೆ, ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿನ ಬೆಳವಣಿಗೆಯು ಶೇ. 5.5, 5.1 ಮತ್ತು 9.2 ರಷ್ಟು ಬೆಳವಣಿಗೆಯನ್ನು ದಾಖಲಿಸಿರುತ್ತದೆ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅಂದರೆ, 2013-14 ರಿಂದ 2017-18ರವರೆಗೆ ಕೈಗಾರಿಕಾ ವಲಯದಲ್ಲಿ ಶೇ. 8.70 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 9.69 ರಷ್ಟು ಬೆಳವಣಿಗೆ (CAGR) ದಾಖಲಾಗಿರುತ್ತದೆ. ಆದರೆ, 2019-20 ರಿಂದ 2022-23ರ ವರೆಗೆ ಕೈಗಾರಿಕಾ ವಲಯದಲ್ಲಿ ಶೇ. 3.86 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 4.25 ರಷ್ಟು ಬೆಳವಣಿಗೆ (CAGR) ದಾಖಲಾಗಿದ್ದು, ಇದು ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು…
ಬೆಂಗಳೂರು: ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು. ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು. ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10…
ಬೆಂಗಳೂರು: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ. ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ ಬೆಂಗಳೂರು ವೈಟ್ ಟಾಪಿಂಗ್ , ರಸ್ತೆ…
ಬೆಂಗಳೂರು: ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು. 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು
ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು. ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 36,000 ಕೋಟಿ, ನೋಂದಣಿ & ಮುದ್ರಾಂಕ ಇಲಾಖೆಯಿಂದ 25,000 ಕೋಟಿ ಸೇರಿ ಒಟ್ಟು 1,62,000 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನ ಸರ್ಕಾರ ಹೊಂದಿದೆ.
ಬೆಂಗಳೂರು: ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು ಭಾರೀ ಏರಿಸಿದೆ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
ಆನೇಕಲ್: ಟ್ಯೂಶನ್ ಅಭ್ಯಾಸ ಮುಗಿಸಿ ಮನೆಯ ದಾರಿಯಲ್ಲಿ ಶಾಲಾ ವಾಹನದಿಂದ ಇಳಿಯುವಾಗ ಎಂಟು ವರ್ಷದ ಬಾಲಕನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಪರಿಣಾಮ ಹಿಂಬದಿ ಚಕ್ರಕ್ಕೆ ಸಿಲುಕಿ ಪೋಷಕರ ಕಣ್ಣೆದುರಿಗೆ ಸಾವನ್ನಪ್ಪಿರುವ ಘಟನೆ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಪ್ಯಾರಡೈಸ್ ಲೇವೇಟ್ ನಲ್ಲಿ ನಡೆದಿದೆ .ಎಂಟು ವರ್ಷದ ಬಾಲಕ ದಿವಾನ್ ಸಿಂಗ್ ಮೃತಪಟ್ಟ ಬಾಲಕ ಇನ್ನು ಉತ್ತರಾಂಚಲ್ ಮೂಲದ ಚಂದ್ರಚೂಡ ಎಂಬವರು ಸುಮಾರು 50 ವರ್ಷಗಳ ಹಿಂದೆ ಹುಬ್ಬಳ್ಳಿ ಬಂದು ನೆಲೆಸಿ ಕೆಲಸ ನಿಮಿತ್ತ ಆನೇಕಲ್ ಪಟ್ಟಣದ ಮೇಡಹಳ್ಳಿ ಸಮೀಪದ ಶ್ರೀ ಸಾಯಿ ಪ್ಯಾರಡೈಸ್ ನಲ್ಲಿ ಕುಟುಂಬ ಸಮೇತ ವಾಸವಾಗಿದ್ದರು . ಚಂದ್ರ ಚೋಡ್ ಇಬ್ಬರು ಮಕ್ಕಳಿದ್ದು ಒಬ್ಬ ಮಗ ಇದೇ ಮೇಡಹಳ್ಳಿ ಸಮೀಪದ ಎಸ್ ಎಸ್ ವಿ ಖಾಸಗಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂಜೆ ಆರು ಗಂಟೆಗೆ ಟ್ಯೂಶನ್ ಮುಗಿಸಿ ಮನೆಗೆ ಬರುವಾಗ ಇದೇ ಶಾಲೆಯ ವಾಹನದಲ್ಲಿ ಇಳಿಯುತ್ತಿದ್ದಾಗ ವಾಹನ ತರಾತುರಿಯಲ್ಲಿ ಮುಂದೆ ಸಾಗಿತು. ಈ ವೇಳೆ ಚಾಲಕನ…